ಬೆಂಗಳೂರು, ಮಾರ್ಚ್ 14: ಲೋಕಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸುತ್ತಿರುವ ಕೇಸರಿ ಪಡೆ ಈಗಾಗಲೇ ಗೆಲ್ಲುವ ಕುದುರೆಯನ್ನ ಕಣಕ್ಕಿಳಿಸಿದೆ. ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಫೈಕಿ ಬಿಜೆಪಿ ಹೈಕಮಾಂಡ್ 20 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನ ಬಿಡುಗಡೆ ಮಾಡಿದ್ದು, ಹಲವು ಜಾತಿ ಲೆಕ್ಕಾಚಾರದಿಂದ ಬಿಜೆಪಿ ಟಿಕೆಟ್ ಘೋಷಿಸಿದೆ.ಬಿಜೆಪಿ ಲೋಕಸಭೆ ಟಿಕೆಟ್ ಪಟ್ಟಿಯಲ್ಲಿ ಉತ್ತರ ಕರ್ನಾಟಕದ ಬಹುತೇಕ ಕ್ಷೇತ್ರಗಳಲ್ಲಿ ಲಿಂಗಾಯತರು ನಿರ್ಣಾಯಕರಾಗಿರುವ ಕಾರಣ ಬಿಜೆಪಿಯ ಪ್ರಕಟಿತ ಪಟ್ಟಿಯಲ್ಲಿ ಲಿಂಗಾಯತ ಸಮುದಾಯದವರಿಗೆ ಸಿಂಹಪಾಲು ಸಿಕ್ಕಿದ್ದು, …
Read More »Daily Archives: ಮಾರ್ಚ್ 14, 2024
ಕರ್ನಾಟಕದಲ್ಲಿ ಕಾಂಗ್ರೆಸ್ 20ಕ್ಕೂ ಹೆಚ್ಚು ಲೋಕಸಭಾ ಸ್ಥಾನಗಳನ್ನು ಗೆಲ್ಲಲಿದೆ: ಡಿ.ಕೆ. ಶಿ.
ಕಲಬುರಗಿ: ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ 20ಕ್ಕೂ ಹೆಚ್ಚು ಲೋಕಸಭಾ ಸ್ಥಾನಗಳನ್ನು ಗೆಲ್ಲಲಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬುಧವಾರ ಹೇಳಿದ್ದಾರೆ. ಕಲಬುರಗಿಯಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 20ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ.ಬಿಜೆಪಿ 10ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಬದಲಾಯಿಸುತ್ತಿದೆ. ಏಕೆಂದರೆ, ಅವರ ಸಂಸದರು ಯಾವುದೇ ಕೆಲಸ ಮಾಡಿಲ್ಲ ಎಂದರು. ಬೆಂಗಳೂರಿನ ನೀರಿನ ಸಮಸ್ಯೆ ಕುರಿತು ಮಾತನಾಡಿದ ಅವರು, ‘ನಮ್ಮ ಸರ್ಕಾರ …
Read More »ಹಾಲಿ ಶಾಸಕರಾಗಿದ್ದರೂ ಲೋಕಸಭಾ ಟಿಕೆಟ್
ಲೋಕಸಭಾ ಚುನಾವಣೆಗೆ ಬಿಜೆಪಿಯ ಎರಡನೇ ಪಟ್ಟಿ ಪ್ರಕಟವಾಗಿದೆ. ಕೆ.ಎಸ್.ಈಶ್ವರಪ್ಪ ಪುತ್ರ ಕೆ.ಇ.ಕಾಂತೇಶ್ಗೆ ಹಾವೇರಿ ಟಿಕೆಟ್ ಕೈತಪ್ಪಿದೆ. ಕೆ.ಎಸ್.ಈಶ್ವರಪ್ಪ ಪುತ್ರ ಕೆ.ಇ.ಕಾಂತೇಶ್ಗೆ ಹಾವೇರಿ ಟಿಕೆಟ್ ಕೊಡಿಸುವ ಭರವಸೆಯಲ್ಲಿದ್ದರು. ಆದರೆ ಹಾಲಿ ಶಾಸಕರಾಗಿರುವ ಬಸವರಾಜ್ ಬೊಮ್ಮಾಯಿಗೆ ಹಾವೇರಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ನೀಡಿರುವುದು ಸಾಕಷ್ಟು ಅಚ್ಚರಿಗೆ ಕಾರಣವಾಗಿದೆ. ಬೆಂಗಳೂರು, ಮಾರ್ಚ್ 13: ಲೋಕಸಭಾ ಚುನಾವಣೆಗೆ ಬಿಜೆಪಿಯ ಎರಡನೇ ಪಟ್ಟಿ ಪ್ರಕಟವಾಗಿದೆ. ಕೆ.ಎಸ್.ಈಶ್ವರಪ್ಪ ಪುತ್ರ ಕೆ.ಇ.ಕಾಂತೇಶ್ಗೆ ಹಾವೇರಿ ಟಿಕೆಟ್ ಕೈತಪ್ಪಿದೆ. ಕೆ.ಎಸ್.ಈಶ್ವರಪ್ಪ ಪುತ್ರ ಕೆ.ಇ.ಕಾಂತೇಶ್ಗೆ …
Read More »ಚುನಾವಣೆಗೂ ಮುನ್ನ ಮಲ್ಲಿಕಾರ್ಜುನ ಖರ್ಗೆ ತವರು ಜಿಲ್ಲೆಗೆ 1.4 ಸಾವಿರ ಕೋಟಿ ರೂ.ಕೊಡುಗೆ!
ಕಲಬುರಗಿ, ಮಾರ್ಚ್ 14: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ತವರ ಜಿಲ್ಲೆ ಕಲಬುರಗಿಯಲ್ಲಿ ಈ ಬಾರಿಯೂ ಕಾಂಗ್ರೆಸ್ ಅನ್ನು ಕಟ್ಟಿಹಾಕಲು ಬಿಜೆಪಿ ಪಣ ತೊಟ್ಟಿದೆ. ಹಾಲಿ ಸಂಸದ ಉಮೇಶ್ ಜಾಧವ್ ಅವರನ್ನು ಮತ್ತೆ ಕಣಕ್ಕಿಳಿಸಿದೆ. ಇದೆ ವೇಳೆ ಮತ್ತೆ ಕಲಬುರಗಿಯನ್ನು ಗೆಲ್ಲುವ ವಿಶ್ವಾಸದಲ್ಲಿರುವ ಕಾಂಗ್ರೆಸ್ ಹಲವು ಅಭಿವೃದ್ಧಿ ಕೆಲಸಗಳಿಗೆ ಕೈ ಹಾಕಿದೆ.ಇದೇ ಕಾರಣಕ್ಕೆ ಕಲಬುರಗಿಯಲ್ಲಿ ಸಾವಿರಾರು ಕೋಟಿ ರೂಪಾಯಿಯ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಾಗಿದೆ.ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ …
Read More »ಆನೆಗೊಂದಿ :ತಡರಾತ್ರಿ ರಾಮಾಯಣದ ಪ್ರಸಂಗಗಳ ಕಥನ
ಆನೆಗೊಂದಿ (ಗಂಗಾವತಿ): ವಿಶಾಲವಾದ ಇಲ್ಲಿನ ಮೈದಾನದಲ್ಲಿ ಬೆಟ್ಟಕ್ಕೆ ಅಂಟಿಕೊಂಡಂತೆಯೇ ನಿರ್ಮಾಣವಾಗಿರುವ ಭವ್ಯ ಶ್ರೀರಂಗದೇವರಾಯಲು ವೇದಿಕೆಯಲ್ಲಿ ಸೋಮವಾರ ತಡರಾತ್ರಿ ರಾಮಾಯಣದ ಪ್ರಸಂಗಗಳ ಕಥನ ಅನಾವರಣಗೊಂಡಿತು. ಹನುಮ ಜನಿಸಿದ ನಾಡು ಎಂದೇ ಖ್ಯಾತಿ ಪಡೆದಿರುವ ತಾಲ್ಲೂಕಿನ ಅಂಜನಾದ್ರಿ ಪ್ರದೇಶ ಐತಿಹಾಸಿಕವಾಗಿ ಪ್ರಾಮುಖ್ಯತೆ ಪಡೆದುಕೊಂಡಿದೆ.ಪಂಪಾ ಸರೋವರ, ಕಿಷ್ಕಿಂಧೆ, ಋಷಿಮುಖ ಪರ್ವತ ಹೀಗೆ ರಾಮಾಯಣಕ್ಕೆ ಸಂಬಂಧಿಸಿದ ಪ್ರಸಂಗಗಳನ್ನು ಸಂಗೀತ ನಿರ್ದೇಶಕ ಹಂಸಲೇಖ ಅವರು ಕಲಾವಿದರೊಂದಿಗೆ ಹಾಡುಗಳ ಮೂಲಕ ಪ್ರಸ್ತುತಪಡಿಸಿದರು. ಸೀತೆಯನ್ನು ಹುಡುಕಿಕೊಂಡು ರಾಮ ಹಾಗೂ ಲಕ್ಷ್ಮಣ ಇಲ್ಲಿನ …
Read More »ಹಳೇಬೀಡು: ಹೊಯ್ಸಳರ ಇತಿಹಾಸ ತಿಳಿಸುವ ಚಿತ್ರಗಳು
ಹಳೇಬೀಡು: ಶಾಲೆ ಮಕ್ಕಳಿಗೆ ಆಕರ್ಷಣೀಯ ಆಗಿರಬೇಕು. ಸರ್ಕಾರಿ ಶಾಲೆ ಖಾಸಗಿ ಹೈಟೆಕ್ ಶಾಲೆಗಿಂತ ಕಡಿಮೆ ಇಲ್ಲ ಎಂಬುದು ಪೋಷಕರಿಗೆ ಮನವರಿಕೆ ಆಗಬೇಕೆಂಬ ಉದ್ದೇಶದಿಂದ ಚಿತ್ರಕಲಾ ಶಿಕ್ಷಕರು ಅಪರೂಪದ ಕಾರ್ಯ ಮಾಡಿದ್ದಾರೆ. ಇದರಿಂದಾಗಿ ಹಳೇಬೀಡಿನ ಕರ್ನಾಟಕ ಪಬ್ಲಿಕ್ ಶಾಲೆಯ ಪ್ರಾಥಮಿಕ ವಿಭಾಗದ ಕಟ್ಟಡ ಬಣ್ಣದ ಚಿತ್ರಗಳಿಂದ ಕಂಗೊಳಿಸುತ್ತಿದೆ. ಶಾಲೆಯ ಚಿತ್ರಕಲಾ ಶಿಕ್ಷಕ ಎ.ಎಸ್.ಶಂಕರೇಗೌಡ ಅವರ ಆಸಕ್ತಿಗೆ ಸಹೋದ್ಯೋಗಿಗಳು ಪ್ರೋತ್ಸಾಹಿಸಿದ್ದರಿಂದ ಶಾಲೆಯ ಗೋಡೆಗಳು ಚಿತ್ರಗಳಿಂದ ಅಲಂಕೃತಗೊಂಡಿವೆ. ಗೋಡೆಗಳಲ್ಲಿ ಮೂಡಿರುವ ಚಿತ್ರಗಳು ಅಂದ ಹೆಚ್ಚಿಸಿರುವುದಲ್ಲದೇ ನೋಡಿದವರಿಗೆ ಜಾಗೃತಿ …
Read More »ಯಡಿಯೂರಪ್ಪ ನಮಗೆ ಮೋಸ ಮಾಡಿದ್ದಾರೆ: ಈಶ್ವರಪ್ಪ
ಶಿವಮೊಗ್ಗ: ಯಡಿಯೂರಪ್ಪ (BS Yediyurappa) ನಮಗೆ ಮೋಸ ಮಾಡಿದ್ದಾರೆಂದು ಬೇಸರವಿದೆ, ಮಾರ್ಚ್ 15ರ ನಂತರ ನನ್ನ ಅಭಿಪ್ರಾಯ ತಿಳಿಸುತ್ತೇನೆ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ (KS Eshwarappa) ಕಿಡಿಕಾರಿದರು. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆ.ಇ.ಕಾಂತೇಶ್ಗೆ ಹಾವೇರಿ (Haveri) ಬಿಜೆಪಿ (BJP) ಟಿಕೆಟ್ ಕೊಡಿಸುತ್ತೇನೆಂದು ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದರು.ಈ ಹಿನ್ನೆಲೆಯಲ್ಲಿ ಹಾವೇರಿ ಭಾಗದಲ್ಲಿ ಕಾಂತೇಶ್ ಓಡಾಡಿ ಜನರ ವಿಶ್ವಾಸ ಗಳಿಸಿದ್ದ. ವಿವಿಧ ಮಠಾಧೀಶರು ನನ್ನ ಮಗ ಕಾಂತೇಶ್ …
Read More »ಪಕ್ಷಾಂತರ, ಹೊಂದಾಣಿಕೆ ರಾಜಕಾರಣ ಮಾಡಲ್ಲ: ಎ.ನಾರಾಯಣಸ್ವಾಮಿ
ಚಿತ್ರದುರ್ಗ: ‘ರಾಜ್ಯದಲ್ಲಿ ಬಿಜೆಪಿ ಕಟ್ಟುವ ಪ್ರಯತ್ನದಲ್ಲಿ ನನ್ನ ಬೆವರ ಹನಿಯೂ ಇದೆ. ಪಕ್ಷಾಂತರ, ಓಲೈಕೆ ಹಾಗೂ ಹೊಂದಾಣಿಕೆ ರಾಜಕಾರಣವನ್ನು ಎಂದಿಗೂ ಮಾಡುವುದಿಲ್ಲ’ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಖಾತೆ ಸಚಿವ ಎ.ನಾರಾಯಣಸ್ವಾಮಿ ತಿಳಿಸಿದರು. ಟಿಕೆಟ್ ಕೈತಪ್ಪಿದ ಬಿಜೆಪಿ ಸಂಸದರನ್ನು ಕಾಂಗ್ರೆಸ್ ಆಹ್ವಾನಿಸುತ್ತಿದೆ’ ಎಂಬ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಅಸಮಾಧಾನಗೊಂಡು ಹೀಗೆ ಪ್ರತಿಕ್ರಿಯಿಸಿದರು. ‘ಪ್ರಧಾನಿ ನರೇಂದ್ರ ಮೋದಿ ಅವರನ್ನು ಒಳಗೊಂಡ ಸಂಸದೀಯ ಮಂಡಳಿ ಸಮಿತಿಯು ಯಾರಿಗೆ ಟಿಕೆಟ್ …
Read More »ಮೂರು ಕ್ಷೇತ್ರಗಳಲ್ಲಿ ಜೆಡಿಎಸ್ ಸ್ಪರ್ಧೆ: ಕುಮಾರಸ್ವಾಮಿ
ಹಾಸನ: ‘ರಾಜ್ಯದ ಹಾಸನ, ಮಂಡ್ಯ, ಕೋಲಾರ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಲಿದ್ದೇವೆ. ಇನ್ನೂ 2-3 ಕ್ಷೇತ್ರ ಕೇಳಿದ್ದರೆ ಕೊಡುತ್ತಿದ್ದರು’ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಸ್ಪಷ್ಟಪಡಿಸಿದರು. ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಮಾ.21 ರಂದು ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಿದ್ದೇನೆ. ನಾನು ಈ ಬಾರಿ ಚುನಾವಣೆಗೆ ನಿಲ್ಲುವುದಿಲ್ಲ. ಒಂದೇ ಕುಟುಂಬದ ಅನೇಕರು ರಾಜಕೀಯದಲ್ಲಿದ್ದಾರೆ. ಆದರೆ ದೇವೇಗೌಡರ ಕುಟುಂಬದ ಬಗ್ಗೆ ಮಾತ್ರ ಚರ್ಚೆಯಾಗುತ್ತಿದೆ’ ಎಂದರು. ‘ಡಾ.ಸಿ.ಎನ್. ಮಂಜುನಾಥ್ ಅವರನ್ನು ಅಭ್ಯರ್ಥಿ …
Read More »ಲೋಕಸಭಾ ಚುನಾವಣೆಗೆ ಖರ್ಚು ಮಾಡಲು ನಮ್ಮ ಬಳಿ ಹಣವಿಲ್ಲ
ನವದೆಹಲಿ: ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರವು ಪಕ್ಷದ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದ್ದರಿಂದ ಕಾಂಗ್ರೆಸ್ ಪಕ್ಷವು ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಸುಳಿವು ನೀಡಿದ್ದಾರೆ. ನೀವು ನಮ್ಮ ಪಕ್ಷದ ಹಣವನ್ನು ದೇಣಿಗೆಯಾಗಿ ನೀಡಿದ್ದೀರಿ, ಅವರು ಅದನ್ನು ಸ್ಥಗಿತಗೊಳಿಸಿದ್ದಾರೆ ಮತ್ತು ಖರ್ಚು ಮಾಡಲು ನಮ್ಮ ಬಳಿ ಹಣವಿಲ್ಲ… ಆದರೆ, ಅವರು (ಬಿಜೆಪಿ) ತಮಗೆ ದೊರೆತ ಚುನಾವಣಾ ಬಾಂಡ್ಗಳ ಬಗ್ಗೆ ಬಹಿರಂಗಪಡಿಸುತ್ತಿಲ್ಲ, ಏಕೆಂದರೆ ಅವರ ಕಳ್ಳತನ ಹೊರಬರುತ್ತದೆ, ಅವರ …
Read More »