ಹುಬ್ಬಳ್ಳಿ: ‘ಲೋಕಸಭೆಗೆ ಸ್ಪರ್ಧಿಸಲು ಟಿಕೆಟ್ ಸಿಗದೇ ಬಂಡಾಯವೆದ್ದಿರುವವರ ಜೊತೆ ಮಾತುಕತೆ ನಡೆಯುತ್ತಿದೆ. ಒಂದೆರಡು ದಿನಗಳಲ್ಲಿ ಎಲ್ಲವೂ ಸರಿ ಹೋಗುತ್ತದೆ’ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಹೇಳಿದರು. ಇಲ್ಲಿನ ವಿಮಾನ ನಿಲ್ದಾಣದಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ಈಶ್ವರಪ್ಪ ಸೇರಿದಂತೆ ಬಂಡಾಯ ಎದ್ದಿರುವವರ ಜೊತೆಗೆ ಮಾತುಕತೆ ನಡೆದಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ‘ಲೋಕಸಭೆ ಚುನಾವಣೆಗೆ ದಿನಾಂಕವೂ ಘೋಷಣೆಯಾಗಿದೆ. ದೇಶದಾದ್ಯಂತ ಬಿಜೆಪಿ ಪರ ಅಲೆ ಇದೆ. …
Read More »Daily Archives: ಮಾರ್ಚ್ 16, 2024
543 ಕ್ಷೇತ್ರಗಳಲ್ಲೂ ಇಂಡಿಯಾ ಮಿತ್ರಕೂಟ ಸ್ಪರ್ಧೆ : ಖರ್ಗೆ
ಬೆಂಗಳೂರು,ಮಾ.16- ಇಂಡಿಯಾ ರಾಜಕೀಯ ಮೈತ್ರಿಕೂಟದ ನಡುವೆ ಯಾವುದೇ ಗೊಂದಲಗಳಿಲ್ಲ. ಕ್ಷೇತ್ರಗಳ ಹಂಚಿಕೆ ಬಗ್ಗೆ ಚರ್ಚೆ ನಡೆಯುತ್ತಿದ್ದು, ಬಹುತೇಕ ಮಾ.17 ಅಥವಾ 18 ರಂದು ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂಡಿಯಾ ಮೈತ್ರಿಕೂಟ ಲೋಕಸಭೆಯ 543 ಕ್ಷೇತ್ರಗಳಲ್ಲೂ ಸ್ಪರ್ಧೆ ಮಾಡಲಿದೆ. ಕೆಲವು ಕಡೆ ನಮಗೆ ಬೇಕಾದ ಕ್ಷೇತ್ರವನ್ನು ಅವರು ಕೇಳುತ್ತಾರೆ. ಅವರಿಗೆ ಬೇಕಾದ ಕ್ಷೇತ್ರಗಳನ್ನು ನಾವು ಕೇಳುತ್ತಿದ್ದೇವೆ. ಹೀಗಾಗಿ …
Read More »ದೇವಸ್ಥಾನ, ಮಠ, ಧಾರ್ಮಿಕ ಸಂಸ್ಥೆಗಳಲ್ಲಿ ರಾಜಕೀಯ ಚಟುವಟಿಕೆ ನಿರ್ಬಂಧ
ಸಾರ್ವತ್ರಿಕ ಲೋಕಸಭಾ ಚುನಾವಣೆ-2024ರ ಅಂಗವಾಗಿ ಶಾಂತಿಯುತ ಹಾಗೂ ಮುಕ್ತ ರೀತಿಯಾಗಿ ನಡೆಸುವ ನಿಟ್ಟಿನಲ್ಲಿ ಜಿಲ್ಲೆಯ ಹಿಂದೂ ಧಾರ್ಮಿಕ ಸಂಸ್ಥೆ ಮತ್ತು ಧರ್ಮದಾಯ ದತ್ತಿ ಇಲಾಖೆಗೆ ಒಳಪಡುವ ಎಲ್ಲಾ ದೇವಸ್ಥಾನ, ಮಠ, ಧಾರ್ಮಿಕ ಸಂಸ್ಥೆಗಳು ಹಾಗೂ ಧಾರ್ಮಿಕ ಸ್ಥಳಗಲ್ಲಿ ರಾಜಕೀಯ ಚಟುವಟಿಕೆಗಳನ್ನು ನಿರ್ಬಂಧಿಸಲಾಗಿದೆ ಎಂದು ಹಿಂದೂ ಧಾರ್ಮಿಕ ಸಂಸ್ಥೆ ಮತ್ತು ಧರ್ಮದಾಯ ದತ್ತಿ ಇಲಾಖೆಯ ಸಹಾಯಕ ಆಯುಕ್ತರಾದ ಹೆಚ್.ಗಂಗಾಧರ್ ಅವರು ತಿಳಿಸಿದ್ದಾರೆ. ಹಿಂದೂ ಧಾರ್ಮಿಕ ಸಂಸ್ಥೆ ಮತ್ತು ಧರ್ಮದಾಯ ದತ್ತಿ …
Read More »ರೈತನ ಬಾಳು ಬೆಳಗಿದ ‘ಕೃಷಿ ಹೊಂಡ’
ಸವದತ್ತಿ: ಈ ಹಿಂದೆ ನೀರಿನ ಕೊರತೆಯಿಂದ ಕೃಷಿ ಕಾಯಕದಲ್ಲಿ ಹಿನ್ನಡೆ ಅನುಭವಿಸುತ್ತಿದ್ದ ತಾಲ್ಲೂಕಿನ ಗೊಂತಮಾರದ ರೈತ ಬಸವರಾಜ ನೇಕಾರ, ಈಗ ಕೃಷಿ ಹೊಂಡದ ನೆರವಿನಿಂದ ಸಮೃದ್ಧವಾಗಿ ಕೃಷಿ ಮಾಡುತ್ತಿದ್ದಾರೆ. ಹೊಂಡದಲ್ಲಿ ಸಂಗ್ರಹವಾದ ಮಳೆ ನೀರನ್ನು ಬೇಡಿಕೆಯನುಸಾರ ವಿವಿಧ ಬೆಳೆಗಳಿಗೆ ಉಣಿಸಿ ಉತ್ತಮ ಆದಾಯ ಗಳಿಸುತ್ತಿದ್ದಾರೆ. 13 ಎಕರೆ ಜಮೀನು ಹೊಂದಿರುವ ಬಸವರಾಜ ಓದಿದ್ದು 9ನೇ ತರಗತಿಯಷ್ಟೇ. ಆದರೆ, ಕೃಷಿಯಲ್ಲಿ ಏನನ್ನಾದರೂ ಸಾಧಿಸುವ ತವಕ ಅವರಲ್ಲಿತ್ತು. ಮಳೆಗಾಲದಲ್ಲೇನೂ ಹೆಚ್ಚಿನ ಸಮಸ್ಯೆಯಾಗುತ್ತಿರಲಿಲ್ಲ. …
Read More »ನೀರಿಗಾಗಿ ಉಮರಾಣಿ ಗ್ರಾಮಸ್ಥರು ಹೈರಾಣ
ಚಿಕ್ಕೋಡಿ: ತಾಲ್ಲೂಕಿನ ಉಮರಾಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಉಮರಾಣಿ ಹಾಗೂ ಇಟ್ನಾಳ್ ಗ್ರಾಮಗಳಲ್ಲಿ, ಬೇಸಿಗೆ ಆರಂಭದಿಂದಲೇ ಕುಡಿಯುವ ನೀರಿಗೆ ಪರದಾಡುವ ಸ್ಥಿತಿ ಬಂದಿದೆ. ದಿನ ಬೆಳಗಾದರೆ ಮಹಿಳೆಯರು ಕೊಡಗಳನ್ನು ಹೊತ್ತು ಅಲೆಯುವುದು ಅನಿವಾರ್ಯವಾಗಿದೆ. ಉಮರಾಣಿ ಗ್ರಾಮದಲ್ಲಿ 6,000 ಜನಸಂಖ್ಯೆ ಇದೆ. 12 ಜನ ಗ್ರಾಮ ಪಂಚಾಯಿತಿ ಸದಸ್ಯರಿದ್ದಾರೆ. ಗ್ರಾಮದ ತೋಟಪಟ್ಟಿ ವಸತಿಗಳಲ್ಲಿ ಕಳೆದ 10 ದಿನಗಳಿಂದ 4 ಟ್ಯಾಂಕರ್‌ನಿಂದ ಸರದಿಯಂತೆ ನೀರು ಪೂರೈಸಲಾಗುತ್ತಿದೆ. ಪರಿಶಿಷ್ಟ ಜಾತಿ ಕಾಲೊನಿ, ಬಾಗೇವಾಡಿ ತೋಟ, …
Read More »ಬೆಳಗಾವಿ: ಡಿಸಿಪಿ ಹೆಸರಲ್ಲೇ ನಕಲಿ ಫೇಸ್‌ಬುಕ್ ಖಾತೆ
ಬೆಳಗಾವಿ: ಬೆಳಗಾವಿಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ರೋಹನ್ ಜಗದೀಶ ಅವರ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆದು, ಅವರ ಸ್ನೇಹಿತರಿಗೆ ಮೆಸೇಜ್ ಮಾಡಿ ಹಣ ಕೇಳಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ‘ರೋಹನ್ ಜಗದೀಶ ಐಪಿಎಸ್’ ಹೆಸರಲ್ಲಿ ರೋಹನ್ ಅವರ ಭಾವಚಿತ್ರಗಳನ್ನು ಬಳಸಿ, ವೈಯಕ್ತಿಕ ಮಾಹಿತಿ ಮೂಲಕ ಫೇಸ್‌ಬುಕ್ ಖಾತೆ ತೆರೆಯಲಾಗಿದೆ. ಇದರ ಮೂಲಕ ಮೆಸೆಂಜರ್‌ನಲ್ಲಿ ಸಂದೇಶ ರವಾಣಿಸಿ ಹಣದ ನೆರವು ನೀಡುವಂತೆ ಕೇಳಿದ್ದಾರೆ. ಬೆಳಗಾವಿ ಸಿಇಎನ್ …
Read More »ಕಾಡಿನ ಕೂಸು’ಗಳಿಗೂ ತಪ್ಪದ ನೀರಿನ ಬವಣೆ
ಖಾನಾಪುರ: ಈಚಿನ ವರ್ಷಗಳಿಗೆ ಹೋಲಿಸಿದರೆ ಈ ವರ್ಷ ತಾಲ್ಲೂಕಿನಲ್ಲಿ ಕಡಿಮೆ ಪ್ರಮಾಣದ ಮಳೆಯಾಗಿದೆ. ಕಾರಣ ಬಹುತೇಕ ಕಡೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ. ಪ್ರಮುಖ ಜಲಮೂಲಗಳಾದ ಮಲಪ್ರಭಾ, ಪಾಂಡರಿ ನದಿಗಳು, ಕೆರೆಗಳು ಮತ್ತು ಹಳ್ಳಕೊಳ್ಳಗಳು ಸಂಪೂರ್ಣ ಬತ್ತಿವೆ. ಇದು ಸದ್ಯದ ಬರದ ಪರಿಸ್ಥಿತಿಗೆ ಜ್ವಲಂತ ಸಾಕ್ಷಿ. ತಾಲ್ಲೂಕಿನ ಪ್ರಮುಖ ಜಲಮೂಲಗಳು ಬತ್ತಿರುವ ಕಾರಣ ಕುಡಿಯುವ ನೀರಿಗಾಗಿ ಕೊಳವೆಬಾವಿಗಳನ್ನು ಅವಲಂಬಿಸಬೇಕಾಗಿದೆ. ದಟ್ಟ ಅರಣ್ಯವನ್ನು ಸುತ್ತುವರಿದ ತಾಲ್ಲೂಕಿನ ಪಶ್ಚಿಮ ಭಾಗದ ಕರ್ನಾಟಕ- ಗೋವಾ ಗಡಿಯಲ್ಲಿರುವ …
Read More »ಬೆಳಗಾವಿ: ಮೃಣಾಲ್ ವಿರುದ್ಧ ಪಂಚಮಸಾಲಿ ಅಸ್ತ್ರ?
ಬೆಳಗಾವಿ: ಕಾಂಗ್ರೆಸ್‌ನಿಂದ ಬೆಳಗಾವಿ ಕ್ಷೇತ್ರಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರ ಪುತ್ರ ಮೃಣಾಲ್‌ಗೆ ಟಿಕೆಟ್ ಖಾತ್ರಿಯಾಗಿದ್ದು, ಅಧಿಕೃತ ಘೋಷಣೆ ಬಾಕಿ ಇದೆ. ಮೃಣಾಲ್ ಹೆಸರು ಅಂತಿಮ ಆಗುತ್ತಿದ್ದಂತೆಯೇ ಬಿಜೆಪಿ ನಾಯಕರು ‘ಜಾತಿ’ ಲೆಕ್ಕಾಚಾರದಲ್ಲಿ ತೊಡಗಿದ್ದಾರೆ. ಪಂಚಮಸಾಲಿ ಸಮುದಾಯಕ್ಕೆ ಸೇರಿದ ಮೃಣಾಲ್ ವಿರುದ್ಧ ಪಂಚಮಸಾಲಿ ಅಭ್ಯರ್ಥಿಯನ್ನೇ ನಿಲ್ಲಿಸಬೇಕು ಎಂಬುದು ಒಂದು ಗುಂಪಿನ ಬೇಡಿಕೆ. ಇದಕ್ಕೆ ಪೂರಕವಾಗಿ ಮಾಜಿ ಸಚಿವ ಮುರುಗೇಶ್ ನಿರಾಣಿ ಪ್ರಬಲ ಆಕಾಂಕ್ಷಿ ಆಗಿದ್ದಾರೆ. …
Read More »12 ರಾಜ್ಯಗಳಲ್ಲಿ ಪುರುಷರಿಗಿಂತ ಮಹಿಳಾ ಮತದಾರರೇ ಅಧಿಕ: ಚುನಾವಣಾ ಆಯೋಗ
ನವದೆಹಲಿ: ದೇಶದ 12 ರಾಜ್ಯಗಳಲ್ಲಿ ಪುರುಷರಿಗಿಂತ ಮಹಿಳಾ ಮತದಾರರೇ ಹೆಚ್ಚಿದ್ದಾರೆ ಎಂದು ಚುನಾವಣಾ ಆಯೋಗ ಶನಿವಾರ ತಿಳಿಸಿದೆ. ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳ ಚುನಾವಣೆ ಕುರಿತು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್, ದೇಶದಲ್ಲಿ ಒಟ್ಟು 47.1 ಕೋಟಿ ಮಹಿಳೆಯರು ಮತದಾರರ ಪಟ್ಟಿಯಲ್ಲಿ ನೋಂದಾಯಿಸಿಕೊಂಡಿದ್ದಾರೆ ಎಂದು ಮಾಹಿತಿ ನೀಡಿದರು. ‘ದೇಶದಲ್ಲಿ ಲಿಂಗಾನುಪಾತದ ಪ್ರಮಾಣ 1000 ಪುರುಷರಿಗೆ 948 ಮಹಿಳೆಯರಿದ್ದಾರೆ. ಲಿಂಗಾನುಪಾತವು 1000ಕ್ಕಿಂತ ಹೆಚ್ಚಿರುವ 12 ರಾಜ್ಯಗಳಿವೆ. ಅಂದರೆ ಈ …
Read More »ಮತ್ತೊಮ್ಮೆ ಸ್ವಪಕ್ಷೀಯರ ವಿರುದ್ಧ ಅಸಮಾಧಾನ ಹೊರಹಾಕಿದ ಬಿ. ಶಿವರಾಂ
ಬೇಲೂರು: ‘ಎಲ್ಲ ಚುನಾವಣೆಯಲ್ಲೂ ಪಕ್ಷದ ಕಾರ್ಯಕ್ರಮಕ್ಕೆ ಬರದೇ ಇರುವ ಇನ್ನೊಂದು ಗುಂಪು ಕಲೆಕ್ಷನ್‌ಗೆ ಕಾಯುತ್ತಾ ಇರುತ್ತದೆ. ಅವರು ಕಲೆಕ್ಷನ್‌ಗೆ ಹೊರತು ಕಾಂಗ್ರೆಸ್ ಪಕ್ಷಕ್ಕೆ ಕೆಲಸ ಮಾಡಲು ಅಲ್ಲ. ಇಷ್ಟೊತ್ತಿಗೆ ಅವನು ಸರಿಯಿಲ್ಲ, ಇವನು ಸರಿಯಲ್ಲ. ನಾವು ನಿಮಗೆ ಕೆಲಸ ಮಾಡ್ತೀವಿ ಎಂದು ರೇವಣ್ಣ ಅವರ ಹತ್ತಿರ ಮಾತನಾಡಿಕೊಂಡು ಬಂದಿರುತ್ತಾರೆ’ ಎಂದು ಕಾಂಗ್ರೆಸ್ ಮುಖಂಡ ಬಿ. ಶಿವರಾಂ ಹೇಳಿರುವುದು ಪಕ್ಷದ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಇಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಮಾಜಿ …
Read More »