ಅಥಣಿ: ಬಿಜೆಪಿ ಸಂಸದರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜೈಕಾರ ಹಾಕುವುದು, ಸಂಸತ್ನಲ್ಲಿ ಟೇಬಲ್ ಕುಟ್ಟುವುದು ಹಾಗೂ ಮೋದಿ ಮೋದಿ ಎಂದು ಹೇಳುವುದನ್ನು ಬಿಟ್ಟರೆ ಬೇರ್ಯಾವ ಕೆಲಸವನ್ನೂ ಮಾಡಿಲ್ಲ. ರಾಜ್ಯದ 25 ಬಿಜೆಪಿ ಸಂಸದರು ಬರೀ ಶೋಕೇಸ್ ಪೀಸ್ ಆಗಿದ್ದಾರೆ ಎಂದು ಶಾಸಕ ಲಕ್ಷ್ಮಣ ಸವದಿ ವ್ಯಂಗ್ಯವಾಡಿದರು. ಸುದ್ದಿಗಾರರ ಜತೆ ಮಾತನಾಡಿದ ಅವರು, ಈ ವಿಷಯ ನಾನು ಹೇಳಿದ್ದಲ್ಲ. ಬಿಜೆಪಿ ಸಂಸದರೊಬ್ಬರು ಹಾಗೆಯೇ ಕೂಡಿದಾಗ ಇದನ್ನು ನನ್ನ ಮುಂದೆ ಪ್ರಸ್ತಾವಿಸಿದ್ದಾರೆ. …
Read More »Daily Archives: ಮಾರ್ಚ್ 18, 2024
ಪ್ರಧಾನಿ ಶಿವಮೊಗ್ಗಕ್ಕೆ ಬಂದರೂ ಈಶ್ವರಪ್ಪ ಬರಲಿಲ್ಲ : ಮೋದಿಗೆ ತಟ್ಟಿದ ‘BJP’ ಬಂಡಾಯದ ಬಿಸಿ..!
ಶಿವಮೊಗ್ಗ : ಪ್ರಧಾನಿ ಮೋದಿಯ ಶಿವಮೊಗ್ಗ ಕಾರ್ಯಕ್ರಮಕ್ಕೆ ನಾನು ಬರೋದಿಲ್ಲ ಎಂದು ಕಡ್ಡಿಮುರಿದಂತೆ ಹೇಳಿದ್ದ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಕೊನೆಗೂ ತಮ್ಮ ಹಠ ಸಾಧಿಸಿದ್ದಾರೆ. ಹೇಳಿದಂತೆ ಪ್ರಧಾನಿ ಮೋದಿಯ ಶಿವಮೊಗ್ಗ ಕಾರ್ಯಕ್ರಮಕ್ಕೆ ಗೈರಾಗಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಹಾವೇರಿ- ಗದಗ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ತಮ್ಮ ಪುತ್ರ ಕಾಂತೇಶ್ಗೆ ಅವಕಾಶ ಕೊಡಲಿಲ್ಲ ಎಂದು ಆಕ್ರೋಶಗೊಂಡು ಬಿಜೆಪಿ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ ಆಗಮಿಸಲೇ ಇಲ್ಲ. ಪ್ರಧಾನಿ ನರೇಂದ್ರ ಮೋದಿ …
Read More »ಟಿಕೆಟ್ಗಾಗಿ ಸಿಎಂ ಮನೆಗೆ ವೀಣಾ ಬೆಂಬಲಿಗರ ಮುತ್ತಿಗೆ
ಬೆಂಗಳೂರು, ಮಾ.18- ಬಾಗಲಕೋಟೆ ಲೋಕಸಭಾ ಕ್ಷೇತ್ರಕ್ಕೆ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ವೀಣಾ ಕಾಶಪ್ಪನವರ್ ಅವರಿಗೆ ಟಿಕೆಟ್ ನೀಡಬೇಕು ಎಂದು ಒತ್ತಾಯಿಸಿ ಅವರ ಬೆಂಬಲಿಗರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನೆಗೆ ನುಗ್ಗುವ ಪ್ರಯತ್ನ ನಡೆಸಿದರು. ಬಾಗಲಕೋಟೆಯಿಂದ ಆಗಮಿಸಿದ ಮಹಿಳೆಯರ ತಂಡ ಇಂದು ಬೆಂಗಳೂರಿನಲ್ಲಿ ಹಿರಿಯ ನಾಯಕರನ್ನು ಭೇಟಿ ಮಾಡಲು ಯತ್ನಿಸಿತ್ತು. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನೆಯ ಬಳಿ ಬಿಗಿ ಕಾವಲು ಆಯೋಜಿಸಲಾಗಿದ್ದು, ಸಾಮಾನ್ಯ ಕಾರ್ಯಕರ್ತರನ್ನು ಒಳಗೆ ಬಿಡಲು …
Read More »ಆಜಾನ್ ಸಮಯದಲ್ಲಿ ಹನುಮಂತನ ಭಕ್ತಿಗೀತೆ ಹಾಕಿದ್ದಕ್ಕೆ ಹಲ್ಲೆ
ಬೆಂಗಳೂರು: ಆಜಾನ್ ಸಮಯದಲ್ಲಿ ಹನುಮಂತನ ಭಕ್ತಿಗೀತೆ ಹಾಕಿದ್ದಕ್ಕೆ ಮುಸ್ಲಿಂ ಸಮುದಾಯದ ಯುವಕರಿಂದ ಯುವಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಸಿದ್ದಣ್ಣ ಗಲ್ಲಿ ಜುಮ್ಮಾ ಮಸೀದಿ ರಸ್ತೆಯಲ್ಲಿ ನಡೆದಿದೆ. ಘಟನೆಯ ಸಂಬಂಧ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ಘಟನೆಗೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ. ಬಂಧಿತರಲ್ಲಿ ಸುಲೇಮಾನ್, ಶಾನವಾಜ್, ರೋಹಿತ್, ದ್ಯಾನೀಶ್ ಮತ್ತು ತರುಣ ಎಂದು ಗುರುತಿಸಲಾಗಿದೆ. ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮುಖೇಶ್ ಹಲ್ಲೆಗೊಳಗಾಗಿರುವ ಯುವಕ. ವರ್ಧಮಾನ್ ಟೆಲಿಕಾಮ್’ …
Read More »ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಸುಮಲತಾ ಬಿಜೆಪಿ ಅಭ್ಯರ್ಥಿ?
ನವದೆಹಲಿ: ಮಂಡ್ಯ ಕ್ಷೇತ್ರದ ಸಂಸದೆ ಸುಮಲತಾ ಅಂಬರೀಷ್ ಭಾನುವಾರ ಇಲ್ಲಿ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಆಗಲಿದ್ದಾರೆ. ಸುಮಲತಾ ಅವರನ್ನು ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಕಣಕ್ಕಿಳಿಸಲು ಪಕ್ಷ ಚಿಂತನೆ ನಡೆಸಿದೆ ಎಂಬ ವದಂತಿ ದಟ್ಟವಾಗಿದೆ. ‘ನಡ್ಡಾ ಅವರ ಆಹ್ವಾನದಂತೆ ರಾಜ್ಯ ರಾಜಕೀಯ ಪರಿಸ್ಥಿತಿ ಕುರಿತು ಚರ್ಚಿಸಲು ಆಗಮಿಸಿದ್ದೇನೆ’ ಎಂದು ಸುಮಲತಾ ಸುದ್ದಿಗಾರರಿಗೆ ತಿಳಿಸಿದರು.ಚಿಕ್ಕಬಳ್ಳಾಪುರದಿಂದ ಸ್ಪರ್ಧಿಸುವ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಲು ಅವರು ನಿರಾಕರಿಸಿದರು. ಕ್ಷೇತ್ರದ ಸಂಸದ, ಬಿಜೆಪಿಯ ಬಿ.ಎನ್.ಬಚ್ಚೇಗೌಡ ಸಕ್ರಿಯ …
Read More »ಹಾಸನ, ಕೋಲಾರ, ಮಂಡ್ಯದಲ್ಲಿ ಜೆಡಿಎಸ್ ಸ್ಪರ್ಧಿಸಲಿದೆ : ಎಚ್ ಡಿ ಕುಮಾರಸ್ವಾಮಿ ಘೋಷಣೆ
ಬೆಂಗಳೂರು : ಲೋಕಸಭೆ ಚುನಾವಣೆಗೆ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು ಸದ್ಯ ಬಿಜೆಪಿ ಜೆಡಿಎಸ್ ಗೆ ಮೂರು ಕ್ಷೇತ್ರಗಳನ್ನು ಬಿಟ್ಟುಕೊಟ್ಟಿದ್ದು ಹಾಸನ ಕೋಲಾರ ಹಾಗೂ ಮಂಡ್ಯ ಕ್ಷೇತ್ರಗಳಲ್ಲಿ ಈ ಬಾರಿ ಜೆಡಿಎಸ್ ಸ್ಪರ್ಧಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಸ್ವಾಮಿ ಘೋಷಣೆ ಮಾಡಿದ್ದಾರೆ. ಇಂದು ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ನಡೆದ ಕೋರ್ ಕಮಿಟಿ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವತಂತ್ರವಾಗಿ ಸ್ಪರ್ಧಿಸಿದರು ಹಾಸನ ಮಂಡ್ಯದಲ್ಲಿ ಸುಲಭವಾಗಿ …
Read More »ಎಲೆಕ್ಷನ್ ಟಿಕೆಟ್ಗಾಗಿ ನಡೆಯಿತು ಬೆಟ್ಟಿಂಗ್; ಅರ್ಧ ತಲೆಕೂದಲು ಮೀಸೆ ಬೋಳಿಸಿದ ವ್ಯಕ್ತಿ
ಲೋಕಸಭಾ ಚುನಾವಣೆಗೆ ಶ್ರೀಧರ್ ರೆಡ್ಡಿಗೆ ಪುಟ್ಟಪರ್ತಿಯ ಅಭ್ಯರ್ಥಿಯಾಗಿ ಟಿಕೆಟ್ ನೀಡಿರುವುದನ್ನು ಖಂಡಿಸಿ ಮಹೇಶ್ವರರೆಡ್ಡಿ ಎಂಬ ವ್ಯಕ್ತಿ ತನ್ನ ಅರ್ಧ ತಲೆಕೂದಲು ಹಾಗೂ ಮೀಸೆ ಬೋಳಿಸಿದ್ದಾನೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪುಟ್ಟಪರ್ತಿಯ ಸತ್ಯಮ್ಮ ದೇವಸ್ಥಾನದ ಮುಂಭಾಗದಲ್ಲಿ ಮಹೇಶ್ವರರೆಡ್ಡಿ ಅರ್ಧ ಮೀಸೆ ಬೋಳಿಸಿದ್ದಾರೆ. ಆಂಧ್ರಪ್ರದೇಶ:ಸಾರ್ವತ್ರಿಕ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ಶ್ರೀಸತ್ಯಸಾಯಿ ಜಿಲ್ಲೆಯ ಪುಟ್ಟಪರ್ತಿಯ ವೈಸಿಪಿ ಟಿಕೆಟ್ ಶ್ರೀಧರ್ ರೆಡ್ಡಿಗೆ ಸಿಗುವುದಿಲ್ಲ ಎಂದು ವ್ಯಕ್ತಯೊಬ್ಬರು ಬೆಟ್ಟಿಂಗ್ ಹಾಕಿದ್ದರು. ಇದಲ್ಲದೇ …
Read More »ಮಹಿಳೆಯರ ಸಬಲೀಕರಣದಲ್ಲಿ ಕಾಂಗ್ರೆಸ್ ಪಕ್ಷದ ಕೊಡುಗೆ ಅಪಾರ
ಬೆಳಗಾವಿ : ಮಹಿಳೆಯರ ಸಬಲೀಕರಣಕ್ಕಾಗಿ ಹಾಗೂ ಶ್ರೇಯೋಭಿವೃದ್ಧಿಗಾಗಿ ಸ್ವಾತಂತ್ರ್ಯದ ಪೂರ್ವದಿಂದಲೂ ಕಾಂಗ್ರೆಸ್ ಪಕ್ಷ ತನ್ನದೇ ಕೊಡುಗೆಯನ್ನು ನೀಡುತ್ತಾ ಬಂದಿದೆ. ದೇಶದ ಮಹಿಳೆಯರಿಗೆ ಶಕ್ತಿ ತುಂಬಿರುವ ಪಕ್ಷ ಎಂದರೆ ಅದು ಕಾಂಗ್ರೆಸ್ ಪಕ್ಷ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
Read More »ಚುನಾವಣಾ ಬಾಂಡ್ ವಿಷಯದಲ್ಲಿ ಸುಪ್ರೀಂ ತೆಗೆದುಕೊಂಡ ನಿರ್ಣಯದಿಂದ ಮೋದಿ ಮುಖವಾಡ ಕಳಚಿ ಬಿದ್ದಿದೆ: MB ಪಾಟೀಲ್
ಬೆಂಗಳೂರು: ಚುನಾವಣಾ ಬಾಂಡ್ ವಿಷಯದಲ್ಲಿ ಸುಪ್ರೀಂ ಕೋರ್ಟ್ ತೆಗೆದುಕೊಂಡ ನಿರ್ಣಯದಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೈತಿಕತೆಯ ಮುಖವಾಡ ಕಳಚಿ ಬಿದ್ದಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ವಾಗ್ದಾಳಿ ನಡೆಸಿದರು. ಚುನಾವಣಾ ಬಾಂಡ್ ರೂಪದಲ್ಲಿ ಕಾಂಗ್ರೆಸ್ ಪಕ್ಷಕ್ಕೂ ಒಂದಷ್ಟು ಹಣ ಬಂದಿದೆ. ಆದರೆ, ಅದು ಸಹಜವಾಗಿ ಬಂದಿರುವಂತದ್ದು. ಅದು ಯಾವುದೇ ಇಡಿ, ಸಿಬಿಐ ಇನ್ನಿತರ ಸಂಸ್ಥೆಗಳನ್ನು ಬಳಸಿಕೊಂಡು ಬೆದರಿಕೆ ಹಾಕಿ ವಸೂಲಿ ಮಾಡಿರುವಂತದ್ದಲ್ಲ ಎಂದು ಸಮರ್ಥಿಸಿಕೊಂಡರು .ಚುನಾವಣಾ ಬಾಂಡ್ …
Read More »ಟೀ ಕುಡಿಸಲು ಎಂದು ಕರೆದೊಯ್ದು ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ, ಆರೋಪಿ ಅರೆಸ್ಟ್
ರಾಮನಗರ, ಮಾರ್ಚ್.18: ಹಾಸ್ಟಲ್ನಿಂದ ಕರೆದೊಯ್ದು 15 ವರ್ಷದ ಅಪ್ರಾಪ್ತ ಬಾಲಕಿ ಮೇಲೆ 36 ವರ್ಷದ ವ್ಯಕ್ತಿ ಲೈಂಗಿಕ ಕಿರುಕುಳ ನೀಡಲಾಗಿರುವ ಘಟನೆ ನಡೆದಿದೆ. ಅಣ್ಣ ಎಂದು ಪರಿಚಯಿಸಿಕೊಂಡು ಟೀ ಕುಡಿಸಿಕೊಂಡು ಬರ್ತೇನೆ ಅಂತ ಅಪ್ರಾಪ್ತೆಯನ್ನು ಹಾಸ್ಟೆಲ್ನಿಂದ ಕರೆದುಕೊಂಡು ಹೋಗಿ ಆರೋಪಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎನ್ನಲಾಗುತ್ತಿದೆ. ಚನ್ನಪಟ್ಟಣ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಆರೋಪಿಯನ್ನು ಬಂಧಿಸಲಾಗಿದೆ.ಇನ್ನು ಅಪರಿಚಿತ ವ್ಯಕ್ತಿ ಬಾಲಕಿಯನ್ನು ಕರೆದುಕೊಂಡು ಹೋಗಿ ಎರಡು ತಾಸು ಕಳೆದರೂ …
Read More »