Breaking News

Daily Archives: ಮಾರ್ಚ್ 19, 2024

ರಾಯ ಬಾಗ ನಲ್ಲಿ ಜರುಗಿದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಣಾ ಸಭೆ

ಮುಂಬರುವ ಚಿಕ್ಕೋಡಿ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಇಂದು ರಾಯಬಾಗ ಪಟ್ಟಣದಲ್ಲಿ ಜರುಗಿದ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಣಾ ಸಭೆಯನ್ನು ಸಚಿವ ಸತೀಶ್ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದರು. ಚಿಕ್ಕೋಡಿ ಲೋಕಸಭೆ ಕ್ಷೇತ್ರವನ್ನು ಮತ್ತೆ ಕಾಂಗ್ರೆಸ್ ಪಕ್ಷದ ಮಡಿಲಿಗೆ ತೆಗೆದುಕೊಳ್ಳಲು ಇದು ಸುವರ್ಣಾವಕಾಶ ಇದ್ದು ಯಾರೇ ಅಭ್ಯರ್ಥಿಯಾಗಿ ಆಯ್ಕೆ ಯಾದರೂ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಟೊಂಕು ಕಟ್ಟಿ ಕೆಲಸ ಮಾಡಬೇಕು. ಬೂತ್ ಮಟ್ಟದಲ್ಲಿ ಕಾಂಗ್ರೆಸ್ ಪಂಚ ಗ್ಯಾರಂಟಿಗಳ …

Read More »

ಮೋದಿಗೆ ಬೈಯಲು ಹೈಕಮಾಂಡ್ ಆರ್ಡರ್ ಆಗಿದೆ”: ಸಂತೋಷ್ ಲಾಡ್ ಹೇಳಿದ್ದಾಗಿ ಪ್ರಲ್ಹಾದ್ ಜೋಶಿ ಹೇಳಿಕೆ

ಹುಬ್ಬಳ್ಳಿ, ಮಾ.19: ಪ್ರಧಾನಿನರೇಂದ್ರ ಮೋದಿ(Narendra Modi) ಹಾಗೂ ತಮ್ಮ ವಿರುದ್ಧ ನಿತಂತರವಾಗಿ ಟೀಕಿಸುತ್ತಿರುವ ಸಚಿವ ಸಂತೋಷ್ ಲಾಡ್ (Santosh Lad) ಅವರಿಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಟಾಂಗ್ ಕೊಟ್ಟಿರುವ ವಿಡಿಯೋ ವೈರಲ್ (Viral Video) ಆಗುತ್ತಿದೆ. ಮೋದಿ ಅವರಿಗೆ ಯಾಕೆ ಬೈಯುತ್ತಿದ್ದೀಯಾ ಎಂದು ಕೇಳಿದಾಗ, ಸಚಿವ ಸ್ಥಾನ ಉಳಿಸಿಕೊಳ್ಳಲು ಬೈಯುತ್ತಿದ್ದೇವೆ ಎಂದು ಸಂತೋಷ್ ಲಾಡ್ ಹೇಳಿದ್ದಾಗಿ ಜೋಶಿ ಹೇಳುವುದನ್ನು ವಿಡಿಯೋದಲ್ಲಿ ಕಾಣಬಹುದು. ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಪ್ರಲ್ಹಾದ್ ಜೋಶಿ, ವಿಮಾನದಲ್ಲಿ ನಾನು ಮತ್ತು ಸಂತೋಷ್ ಲಾಡ್ ಒಟ್ಟಿಗೆ …

Read More »

ವಿಜಯಪುರದಲ್ಲಿ ದಾಖಲೆ ಇಲ್ಲದೆ ಸಾಗಿಸ್ತಿದ್ದ 2 ಕೋಟಿ ಅಧಿಕ ನಗದು ಜಪ್ತಿ; ಇಬ್ಬರು ವಶಕ್ಕೆ

ವಿಜಯಪುರ, ಮಾ.19:ಲೋಕಸಭಾ ಚುನಾವಣೆನೀತಿ ಸಂಹಿತೆಹಿನ್ನೆಲೆ ಚೆಕ್​ಪೋಸ್ಟ್​ ನಿರ್ಮಿಸಿ ಚುನಾವಣೆಯಲ್ಲಿ ಅಕ್ರಮ ನಡೆಯದಂತೆ ಕ್ರಮಕೈಗೊಳ್ಳಲಾಗಿದೆ. ಅದರಂತೆ ಇಂದು(ಮಾ.19)​ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 2 ಕೋಟಿ 93 ಲಕ್ಷ 50 ಸಾವಿರ ನಗದನ್ನು ವಿಜಯಪುರ(Vijayapura) ನಗರದ ಸಿಂದಗಿ ಬೈಪಾಸ್ ಬಳಿ ಜಿಲ್ಲಾ ಸಿಇಎನ್ ಪೊಲೀಸರು ತಪಾಸಣೆ ನಡೆಸಿ ಜಪ್ತಿ ಮಾಡಿದ್ದಾರೆ. ಜೊತೆಗೆ ಹಣದ ಸಮೇತ ಸಾಂಗ್ಲಿ ಮೂಲದ ಬಾಲಾಜಿ ನಿಕ್ಕಂ ಮತ್ತು ಸಚಿನ್ ಎಂಬುವವರನ್ನು ವಶಕ್ಕೆ ಪಡೆಯಲಾಗಿದೆ.   ಹೈದ್ರಾಬಾದ್‌ದಿಂದ ಹುಬ್ಬಳ್ಳಿಗೆ MH …

Read More »

ಹಾನಗಲ್​ನಲ್ಲಿ ತಾನೇ ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವತಿಯನ್ನೇ ಹತ್ಯೆಗೈದ ಯುವಕ

ಹಾವೇರಿ, ಮಾ.19: ಜಿಲ್ಲೆಯ ಹಾನಗಲ್​(Hangal)ಹೊರವಲಯದಲ್ಲಿತಾನೇ ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವತಿಯನ್ನ ಯುವಕನೊಬ್ಬ ಹತ್ಯೆಗೈದ ಘಟನೆ ನಡೆದಿದೆ. ಮೂಡೂರು ಗ್ರಾಮದ ದೀಪಾ ಮಂಜಪ್ಪ ಗೊಂದಿ(21) ಮೃತ ರ್ದುದೈವಿ. ಆರೋಪಿ ಮಾಲತೇಶ್ ಎಂಬಾತ ಮೊದಲು ವಿಷ ಕೊಟ್ಟು ಬಳಿಕ ದೀಪಾಳನ್ನು ನೇಣುಹಾಕಿದ್ದಾನೆ. ವಿಷಯ ತಿಳಿದ ಕೋಡಲೇ ಅರಳೇಶ್ವರ ಗ್ರಾಮದ ಆರೋಪಿ ಮಾಲತೇಶ್​ನನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆ ನಡೆದು ಐದು ದಿನಗಳ ನಂತರ ಕೊಲೆ ಪ್ರಕರಣ ಬಯಲು   ಮುಂದಿನ ತಿಂಗಳ ಏಪ್ರಿಲ್​ 12ರಂದು ದೀಪಾ …

Read More »

ಯಾವ ಕುರಿಯನ್ನು ಎಲ್ಲಿ ನಿಲ್ಲಿಸಬೇಕು, ಹೇಗೆ ಬಲಿ ಕೊಡಬೇಕು ಬಿಜೆಪಿ ನಾಯಕರು ಶಿಸ್ತುಬದ್ಧವಾಗಿ ಪ್ಲ್ಯಾನ್ ಮಾಡಿದ್ದಾರೆ: ಸವದಿ

ಬೆಂಗಳೂರು: ಬಿಜೆಪಿ ತೊರೆದು ಕಾಂಗ್ರೆಸ್ ಗೆ ಬಂದು ಪುನಃ ಬಿಜೆಪಿಗೆ ವಾಪಸ್ಸು ಹೋದ ಜಗದೀಶ್ ಶೆಟ್ಟರ್ (Jagadish Shettar) ಅವರಿಗೆ ತಾನು ಮಾಡಿದ ಪ್ರಮಾದಕ್ಕೆ ಪಾಠ ಕಲಿಸುವ ಯೋಜನೆ ಬಿಜೆಪಿ ನಾಯಕರಿಗಿದೆಯೇ? ಅಥಣಿ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಹೇಳುವ ಪ್ರಕಾರ ಶೆಟ್ಟರ್ ಅವರನ್ನು ಹರಕೆಯ ಕುರಿ ಮಾಡಲು ಬೆಳಗಾವಿ ಲೋಕಸಭಾ ಕ್ಷೇತ್ರದಿಂದ (Belagavi Lok Sabha seat) ಕಣಕ್ಕಿಳಿಸುವ ಹುನ್ನಾರ ನಡೆದಿದೆ. ಇಂದು ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಸವದಿ, ಶೆಟ್ಟರ್ ಅವರಿಗೆ ಉದ್ದೇಶಪೂರ್ವಕವಾಗಿ …

Read More »

ಅವಳಿ ಗಂಡು ಶಿಶುಗಳ ಸಾವು

ನಡು ರಾತ್ರಿಯ ಸಮಯದಲ್ಲಿ ಅಂತ್ಯಸಂಸ್ಕಾರ ನಡೆಸಲು ಮಹಿಳೆಯ ಸಂಬಂಧಿಕರಿಗೆ ಅಸಹಾಯಕತೆ ಎದುರಾದಾಗ ಸಮಾಜಸೇವಕ ನಿತ್ಯಾನಂದ ಒಳಕಾಡುವರು ನೆರವಿಗೆ ಬಂದು, ತಮ್ಮ ಮನೆಯಲ್ಲಿಯೇ ಶೀತಲೀಕೃತ ಶವ ರಕ್ಷಣಾ ಯಂತ್ರದಲ್ಲಿ ಅವಳಿ ಶಿಶುಗಳ ಕಳೇಬರವನ್ನು ಒಂದು ರಾತ್ರಿ ರಕ್ಷಿಸಿಟ್ಟು, ಮರುದಿನ ಬೆಳಿಗ್ಗೆ ಇಂದ್ರಾಳಿಯ ರುದ್ರ ಭೂಮಿಯಲ್ಲಿ ಗೌರಯುತವಾಗಿ ಅಂತ್ಯಸಂಸ್ಕಾರ ನೆರವೇರಿಸಿದರು.   ಅವಳಿ ಗಂಡು ಶಿಶುಗಳ ಅಂತ್ಯಸಂಸ್ಕಾರ ನಡೆಸಲು, ಮನೆ ಮಂದಿಗೆ ಅಸಹಾಯಕ ಪರಿಸ್ಥಿತಿ ಎದುರಾದಾಗ, ಸಮಾಜಸೇವಕ ನಿತ್ಯಾನಂದ ಒಳಕಾಡುವರು, ನೆರವಿಗೆ ಬಂದು …

Read More »

21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

ಕೊಪ್ಪಳ : ಮುಂದಿನ ರಾಜಕೀಯ ನಿರ್ಧಾರಕ್ಕೆ ಗುರುವಾರ ಮಾ 21 ರಂದು ನಿರ್ಧಾರ ಮಾಡುತ್ತೇನೆ. ಅಂದು ಬೆಂಬಲಿಗರ ಸಭೆ ಕರೆದಿರುವೆ. ಬೆಂಬಲುಗರ ಸಭೆಯ ನಂತರ ಮುಂದಿನ ರಾಜಕೀಯ ನಡೆಯ ಬಗ್ಗೆ ನಿರ್ಧಾರ ಮಾಡುತ್ತೇನೆ ಸಂಸದ ಸಂಗಣ್ಣ ಕರಡಿ ಹೇಳಿದ್ದಾರೆ. ಕೊಪ್ಪಳದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಂಸದ ಸಂಗಣ್ಣ ಕರಡಿ ಕೊಪ್ಪಳ ಲೋಕಸಭಾ ಕ್ಷೇತ್ರದ ಟಿಕೆಟ್ ಡಾ ಬಸವರಾಜ ಅವರಿಗೆ ಘೋಷಣೆಯಾಗಿದೆ.ಅವರಿಗೆ ಶುಭ ಕೋರುತ್ತೇನೆ. ನನಗೆ 8 ವಿಧಾನ ಸಭಾ ಕ್ಷೇತ್ರದ …

Read More »

ಬಿಜೆಪಿ ಐದು ಅಭ್ಯರ್ಥಿಗಳ ಹೆಸರು ಇಂದೇ ಫೈನಲ್‌ – ಪಟ್ಟಿಯಲ್ಲಿರೋ ಹೆಸರು ಹೀಗಿದೆ!

ಬೆಂಗಳೂರು : ಲೋಕಸಭಾ ಚುನಾವಣೆಯಲ್ಲಿ‌ (Lokasabha Election 2024) ಬಿಜೆಪಿಯು (BJP) ಅಭ್ಯರ್ಥಿಗಳ ಹೆಸರನ್ನು ಬಾಕಿ ಉಳಿಸಿಕೊಂಡಿರುವ ಕ್ಷೇತ್ರಗಳಿಗೆ ಅಂತಿಮ ಪಟ್ಟಿ ಸಿದ್ದವಾಗಿದೆ. ಉತ್ತರ ಕನ್ನಡ, ಬೆಳಗಾವಿ, ರಾಯಚೂರು, ಚಿತ್ರದುರ್ಗ ಮತ್ತು ಚಿಕ್ಕಬಳ್ಳಾಪುರ ಕ್ಷೇತ್ರಗಳಿಗೆ ಇಂದು ಅಭ್ಯರ್ಥಿಗಳ ಹೆಸರು ಘೋಷಣೆಯಾಗಲಿದ್ದು, ದೆಹಲಿ ವರಿಷ್ಠರ ಭೇಟಿಗೆ ಮಾಜಿ ಸಿಎಂ ಯಡಿಯೂರಪ್ಪ (B S Yediyurappa) ದೌಡಾಯಿಸಿದ್ದಾರೆ. ಉತ್ತರ ಕನ್ನಡ – ಅನಂತ ಕುಮಾರ್‌, ಬೆಳಗಾವಿ – ಜಗದೀಶ್‌ ಶೆಟ್ಟರ್‌, ರಾಯಚೂರು – …

Read More »

ಜೆಡಿಎಸ್ ಅಭ್ಯರ್ಥಿಗಳ ಘೋಷಣೆ ಇನ್ನಷ್ಟು ವಿಳಂಬ

ಬೆಂಗಳೂರು: ಒಂದೆಡೆ ಮೈತ್ರಿ ಪಕ್ಷಗಳ ನಡುವೆ ಸೀಟು ಹಂಚಿಕೆ ವಿಳಂಬ, ಇನ್ನೊಂದೆಡೆ ಮಾಜಿ ಸಿಎಂ ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲಾಗುವ ಹಿನ್ನೆಲೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳ ೋಷಣೆ ಮತ್ತಷ್ಟು ವಿಳಂಬವಾಗಲಿದೆ.   ಮಂಡ್ಯ, ಹಾಸನ, ಕೋಲಾರ ಈ ಮೂರು ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಿಸುವುದಾಗಿ ಕುಮಾರಸ್ವಾಮಿ ಹೇಳಿದ್ದರೂ ಕೋಲಾರ ವಿಚಾರದಲ್ಲಿ ಇನ್ನೂ ಅನಿಶ್ಚಿತತೆ ಮುಂದುವರಿದಿದೆ.   ಈ ಕುರಿತು ಪ್ರತಿಕ್ರಿಯಿಸಿರುವ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ, ಜೆಡಿಎಸ್‌ಗೆ ಮೂರು ಕ್ಷೇತ್ರ ಕೊಡುತ್ತೇವೆ ಎಂದು ಹೇಳಿದ್ದಾರೆ. …

Read More »

ಪತ್ನಿಗೆ ಅಶ್ಲೀಲ ವಿಡಿಯೋ ಕಳುಹಿಸಿದ ಪತಿಗೆ ಜೈಲು ಶಿಕ್ಷೆ

ಬೆಂಗಳೂರು, ಮಾರ್ಚ್​ 19: ಪತ್ನಿಗೆ ಇಮೇಲ್ ಮೂಲಕ ಅಶ್ಲೀಲ ವೀಡಿಯೋ ಕಳುಹಿಸಿದ 30ರ ಹರೆಯದ ವ್ಯಕ್ತಿಯೊಬ್ಬನನ್ನು ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ (IT Act) ಅಪರಾಧಿ ಎಂದು ಸ್ಥಳೀಯ ನ್ಯಾಯಾಲಯ ತೀರ್ಪು ನೀಡಿದ್ದು, ಒಂದು ತಿಂಗಳ ಜೈಲು ಶಿಕ್ಷೆ ಮತ್ತು 45,000 ರೂ. ದಂಡ ವಿಧಿಸಿದೆ. ರಾಜಾಜಿನಗರದ (Rajajinagar) ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿರುವ ಆರೋಪಿಯ ವಿರುದ್ಧ ಸಿಐಡಿ ಪೊಲೀಸರು (CID Police) ದೋಷಾರೋಪ ಹೊರಿಸಿದ್ದರು. ಶಿಕ್ಷೆಗೊಳಗಾದ ವ್ಯಕ್ತಿಯ ಪತ್ನಿ ವಿದೇಶದಲ್ಲಿ …

Read More »