Breaking News

Daily Archives: ಮಾರ್ಚ್ 20, 2024

ಗ್ಯಾಸ್ ಸಿಲಿಂಡ‌ರ್ ಸ್ಫೋಟಗೊಂಡು ಓರ್ವ ಮಹಿಳೆ ಮೃತ್ಯು. ನಾಲ್ವರಿಗೆ ಗಾಯ

ಧಾರವಾಡ : ಸಿಲಿಂಡ‌ರ್ ಸ್ಫೋಟಗೊಂಡು ಓರ್ವ ಮಹಿಳೆ ಮೃತಪಟ್ಟು, ನಾಲ್ವರು ಗಾಯಗೊಂಡ ಘಟನೆ ತಾಲೂಕಿನ ಕಲ್ಲೆ ನಡೆದಿದೆ. ಮಹಾದೇವಿ ವಗೆಣ್ಣವರ (30) ಎಂಬ ಮಹಿಳೆಯೇ ಈ ಘಟನೆಯಲ್ಲಿ ಸಾವನ್ನಪ್ಪಿದ ದುರ್ದೈವಿ. ಉಳಿದಂತೆ ಸುರೇಶ ವಗೆಣ್ಣವರ, ಶ್ರೀಧರ ವಗೆಣ್ಣವರ, ಚಿನ್ನಪ್ಪ ವಗೆಣ್ಣವರ ಹಾಗೂ ಗಂಗವ್ವ ವಗೆಣ್ಣವರ ಎಂಬುವರು ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಧಾರವಾಡ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಿಗ್ಗೆ ಗ್ಯಾಸ್ ಲಿಕೇಜ್ ಆಗಿತ್ತು. ಏಕಾಏಕಿ ಸ್ಪಾರ್ಕ್ ಆಗಿ ಸಿಲಿಂಡ‌ರ್ ಸ್ಫೋಟಗೊಂಡಿದೆ. ಇದರಿಂದ ಮನೆ ತುಂಬ …

Read More »

ವೀಣಾ ಬದಲು ಸಂಯುಕ್ತಾಗೆ ಕೈ ಟಿಕೆಟ್. ರೊಚ್ಚಿಗೆದ್ದ ಕಾಶಪ್ಪನವರ ಬೆಂಬಲಿಗರು

ಬಾಗಲಕೋಟೆ : ಪ್ರಸ್ತುತ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ನಿಂದ ವೀಣಾ ಕಾಶಪ್ಪನವರ ಅವರಿಗೆ ಕಾಂಗ್ರೆಸ್ ಟಿಕೆಟ್ ಕೈ ತಪ್ಪುವ ಭೀತಿ ಎದುರಾದ ಬೆನ್ನಲ್ಲೆ, ವೀಣಾ ಬೆಂಬಲಿಗರು ಆಕ್ರೋಶಗೊಂಡಿದ್ದಾರೆ. ಬುಧವಾರ ಏಕಾಏಕಿ ಕಾಂಗ್ರೆಸ್ ಕಚೇರಿಗೆ ನುಗ್ಗಿ ಪ್ರತಿಭಟನೆ ನಡೆಸಲು ಮುಂದಾದರು.   ಕಾಂಗ್ರೆಸ್ ಕಚೇರಿಗೆ ನುಗ್ಗಲು ಯತ್ನಿಸಿದ ಕಾಂಗ್ರೆಸ್ ಕಾರ್ಯಕರ್ತರು, ಕಾಶಪ್ಪನವರ ಬೆಂಬಲಿಗರನ್ನು ಪೊಲೀಸರು, ತಡೆದರು. ಈ ವೇಳೆ ಪೊಲೀಸರು ಮತ್ತು ಕಾಶಪ್ಪನವರ ಬೆಂಬಲಿಗರ ಮಧ್ಯೆ ವಾಗ್ವಾದವೂ ನಡೆಯಿತು. ಗೋ ಬ್ಯಾಕ್ ಸಂಯುಕ್ತಾ …

Read More »

ನೀತಿ ಸಂಹಿತೆ ಉಲ್ಲಂಘನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮನೆ ಮೇಲೆ ಚುನಾವಣಾಧಿಕಾರಿ ದಾಳಿ

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮನೆ ಮೇಲೆ ಚುನಾವಣಾಧಿಕಾರಿಗಳ ದಾಳಿ. ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲು. ಬುಧವಾರ ಬೆಳಿಗ್ಗೆ ತಮ್ಮ ನಿವಾಸದಲ್ಲಿ ಸಚಿವರು ಸುಮಾರು 500 ಜನ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರ ಸಭೆ ನಡೆಸುತ್ತಿದ್ದರು. ಇದರ ಸುದ್ದಿ ತಿಳಿದ ಕೂಡಲೆ ಜಿಲ್ಲಾ ಚುನಾವಣಾಧಿಕಾರಿ ನಿತೇಶ ಪಾಟೀಲ ನೇತೃತ್ವದಲ್ಲಿ ದಾಳಿ ನಡೆಸಿದ ಅಧಿಕಾರಿಗಳು ಸಭೆ ನಡೆಸುತ್ತಿರುವದನ್ನು ಚಿತ್ರೀಕರಿಸಿಕೊಂಡು ಅಂಗನವಾಡಿ ಹಾಗೂ ಆಶಾ …

Read More »

ನವ ವಧುವಿನಂತೆ ಕಂಗೊಳಿಸುತ್ತಿರುವ ರಶ್ಮಿಕಾ

ಮುಂಬೈ: 2021 ರಲ್ಲಿ ಬಿಡುಗಡೆಯಾದ ‘ಪುಷ್ಪ: ದಿ ರೈಸ್’ ಮ್ಯಾಜಿಕ್ ಮೂರು ವರ್ಷಗಳ ನಂತರವೂ ಮುಂದುವರಿಯುತ್ತಿದೆ. ಇಷ್ಟರಲ್ಲಿಯೇ ತಿಳಿಯಲಿದೆ ಜನರು ಯಾವ ಪರಿ ಸಿನಿಮಾ ಇಷ್ಟಪಟ್ಟಿದ್ದಾರೆಂದು. ಇದರಲ್ಲಿ ಅಲ್ಲು ಅರ್ಜುನ್‌ ಪಾತ್ರದ ಬಗ್ಗೆಯೂ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗಿತ್ತು. ರಶ್ಮಿಕಾ ಮಂದಣ್ಣ ನಾಯಕಿ ಪಾತ್ರದಲ್ಲಿ ನಟಿಸಿದ್ದರು. ಅವರ ನಟನೆಯೂ ಜನಮನ ಗೆದ್ದಿತ್ತು. ಇದೀಗ ಪುಷ್ಪ ಮುಂದಿನ ಸೀಕ್ವೆಲ್‌ಗಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಸದ್ಯ ಈ ಚಿತ್ರದ ಪೋಸ್ಟರ್ ಮತ್ತು ಟೀಸರ್ ಅಭಿಮಾನಿಗಳ ಕುತೂಹಲವನ್ನು …

Read More »

ಸಿದ್ದರಾಮಯ್ಯ 5 ವರ್ಷ ಸಿಎಂ ಆಗಿರೋದು ಡೌಟ್- ಸಿ.ಟಿ.ರವಿ

ಬೆಂಗಳೂರು: ನಾನೇ ಸ್ಟ್ರಾಂಗ್ ಎನ್ನುವ ಸಿದ್ದರಾಮಯ್ಯನವರೇ ನಿಮ್ಮ ಪರಿಸ್ಥಿತಿ ಏನಿದೆ; 5 ವರ್ಷ ಸಿಎಂ ಆಗಿರುವ ಖಾತರಿಯೇ ನಿಮಗಿಲ್ಲ ಎಂದು ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯದ ಮಾಜಿ ಸಚಿವ ಸಿ.ಟಿ.ರವಿ ಅವರು ತಿಳಿಸಿದರು. ನಗರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನೇ 5 ವರ್ಷ ಸಿಎಂ, ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಎಂದು ಹೇಳಿಸಿಕೊಳ್ಳುವ ಸ್ಥಿತಿ ಅವರದು. ದುರ್ಬಲ …

Read More »

ನಾನು ಗೆಲ್ಲೋದು ಖಚಿತ, ವಿಜಯೇಂದ್ರ ರಾಜ್ಯಾಧ್ಯಕ್ಷರ ಹುದ್ದೆ ಕಳೆದುಕೊಳ್ಳುತ್ತಾರೆ.- ಕೆ.ಎಸ್ ಈಶ್ವರಪ್ಪ

ಶಿವಮೊಗ್ಗ: ಲೋಕಸಭಾ ಚುನಾವಣೆಯ ಫಲಿತಾಂಶದ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷರ ಪಟ್ಟವನ್ನು ಬಿ.ವೈ ವಿಜಯೇಂದ್ರ ಕಳೆದುಕೊಳ್ಳಲಿದ್ದಾರೆ ಎಂಬುದಾಗಿ ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಭವಿಷ್ಯ ನುಡಿದಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಲೋಕಸಭಾ ಚುನಾವಣೆಯಲ್ಲಿ ನಾನು ಗೆಲ್ಲುತ್ತೇನೆ. ಇದು ಇಡೀ ರಾಜ್ಯದಲ್ಲೇ ಚರ್ಚೆಯಾಗಲಿದೆ. ನನ್ನ ಪುತ್ರನನ್ನು ಎಂಎಲ್ಸಿ ಮಾಡ್ತೀವಿ ಅಂದಿದ್ದರು, ನನ್ನ ರಾಜ್ಯಪಾಲರನ್ನಾಗಿ ಮಾಡ್ತೀವಿ ಅಂದಿದ್ದರು. ಆದ್ರೇ ನನಗೆ ಯಾವುದು ಬೇಡ ಎಂದರು. ಲೋಕಸಭಾ ಚುನಾವಣೆ ಮುಗಿದು ಫಲಿತಾಂಶ ಘೋಷಣೆಯಾದ ಬಳಿಕ …

Read More »

ಶೋಭಾ ಕರಂದ್ಲಾಜೆ ವಿರುದ್ಧ ಚುನಾವಣಾ ಆಯೋಗಕ್ಕೆ ಡಿಎಂಕೆ ದೂರು!

ಚೆನ್ನೈ: ಬಿಜೆಪಿ ನಾಯಕಿ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಬುಧವಾರ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಇತ್ತೀಚೆಗೆ ಬೆಂಗಳೂರಿನ ಕುಂದಲಹಳ್ಳಿ ಬಳಿಯ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್​ ಸ್ಫೋಟಕ್ಕೆ ತಮಿಳುನಾಡು ಕಾರಣ ಎಂದು ಮಂಗಳವಾರ ಹೇಳಿದ್ದರು.     ತಮಿಳುನಾಡು ಕರ್ನಾಟಕದ ಜನರ ಮಧ್ಯೆ ಕೋಮು ದ್ವೇಷದ ಭಾಷಣ ಮಾಡಿದ್ದಾರೆ. ಆದರೆ ಇಲ್ಲಿಯವರೆಗೆ ರಾಷ್ಟ್ರೀಯ ತನಿಖಾ ದಳ ಯಾರನ್ನೂ ಬಂಧನ ಮಾಡಿಲ್ಲ. …

Read More »

ಬಣ್ಣ ಹಚ್ಚಿದ ಜಾನಪದ ಗಾಯಕ ಮಾಳು ನಿಪನಾಳ

ಕರಟಕ ದಮನಕ (Karataka Damanka) ಚಿತ್ರದ ಹಿತ್ಲಕ ಕರಿಬ್ಯಾಡ ಮಾವ ಹಾಡೂ ಹಿಟ್ ಆಗಿದೆ. ಸಿನಿಮಾ ಬರೋ ಮೊದ್ಲು, ಸಿನಿಮಾ ಬಂದ್ಮೇಲೆ ಹೀಗೆ ಎರಡೂ ಟೈಮ್‌ನಲ್ಲೂ ಈ ಹಾಡು ಹಿಟ್ (Song Hit) ಆಗಿ ವೈರಲ್ ಆಗಿದೆ. ಶಾಲೆಯ ಬಸ್‌ಗಳಲ್ಲೂ ಈ ಹಾಡು ಉತ್ತರ ಕರ್ನಾಟಕದಲ್ಲಿ ಕೇಳಿ ಬರುತ್ತದೆ. ಟ್ರ್ಯಾಕ್ಟರ್‌ನಲ್ಲಿ ಇದು ಕಾಮನ್ ಅನ್ನೋಮಟ್ಟಿಗೆ ಹಿಟ್ ಆಗಿದೆ. ಆದರೆ ಈಗ ವಿಷಯ ಇಲ್ಲ ಬಿಡಿ. ಈ ಹಾಡನ್ನ ಹಾಡಿರೋ ಉತ್ತರ …

Read More »

ಲೋಕಸಭೆ ಚುನಾವಣಾ ನೀತಿ ಸಂಹಿತೆ ಜಾರಿ : ರಾಜಕಾರಣಿಗಳಿಗೆ ಸರ್ಕಾರಿ ವಾಹನ ನೀಡದಂತೆ ಸೂಚನೆ

ಬೆಂಗಳೂರು : ಲೋಕಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಈಗಾಗಲೇ ನೀತಿ ಸಂಹಿತೆ ಜಾರಿಯಾಗಿದೆ. ಈ ಹಿನ್ನೆಲೆಯಲ್ಲಿ ರಾಜಕಾರಣಿಗಳಿಗೆ ಸರ್ಕಾರಿ ವಾಹನ ನೀಡದಂತೆ ಸೂಚನೆ ನೀಡಲಾಗಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಬಗ್ಗೆ ಆದೇಶ ಹೊರಡಿಸಿದ್ದು, ಸರ್ಕಾರಿ ವಾಹನಗಳ ಬಳಕೆ ಕುರಿತಂತೆ ಚುನಾವಣಾ ಆಯೋಗ ರೂಪಿಸಿರುವ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚನೆ ನೀಡಲಾಗಿದೆ.   ಸರ್ಕಾರಿ ವಾಹನಗಳನ್ನು ರಾಜಕಾರಣಿಗಳು ಹಾಗೂ ರಾಜಕೀಯ ಪಕ್ಷಗಳು ಯಾವುದೇ ಕಾರ್ಯಕ್ಕೂ ಬಳಸಬಾರದು. …

Read More »

ಮೊದಲ ಹಂತದ ಲೋಕಸಭೆ ಚುನಾವಣೆಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ

ನವದೆಹಲಿ: ಪ್ರಜಾಪ್ರಭುತ್ವದ ಹಬ್ಬವೆಂದೇ ಹೇಳಲಾಗುವ ಲೋಕಸಭೆ ಚುನಾವಣೆ ಇಂದಿನಿಂದ ಆರಂಭವಾಗಲಿದೆ, ಮೊದಲ ಹಂತದಲ್ಲಿ ಏಪ್ರಿಲ್ 19ರಂದು 21 ರಾಜ್ಯಗಳ 102 ಲೋಕಸಭಾ ಕ್ಷೇತ್ರಗಳಿಗೆ ಬುಧವಾರದಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಮೊದಲ ಹಂತದಲ್ಲಿ ಅಂಡಮಾನ್ ಮತ್ತು ನಿಕೋಬಾರ್, ಅರುಣಾಚಲ ಪ್ರದೇಶ, ಆಂಧ್ರಪ್ರದೇಶ, ದೆಹಲಿ, ಹಿಮಾಚಲ ಪ್ರದೇಶ, ಗೋವಾ, ಗುಜರಾತ್, ಕೇರಳ, ತಮಿಳುನಾಡು, ಪಂಜಾಬ್, ತೆಲಂಗಾಣ, ಉತ್ತರಾಖಂಡ ಸೇರಿ ವಿವಿಧ ರಾಜ್ಯಗಳ 102 ಕ್ಷೇತ್ರಗಳಿಗೆ ಚುನಾವಣಾ ಪ್ರಕ್ರಿಯೆ ಇಂದಿನಿಂದ ಆರಂಭವಾಗಲಿದೆ. ಮಾರ್ಚ್ 27ರವರೆಗೆ ನಾಮಪತ್ರ …

Read More »