ರಾಮದುರ್ಗ: ಈ ಬಾರಿ ಮಳೆ ಪ್ರಮಾಣ ಕಡಿಮೆಯಾಗಿರುವ ಕಾರಣ ಮಲಪ್ರಭಾ ನದಿ ಬತ್ತಿದೆ. ಅಂತರ್ಜಲ ಮಟ್ಟ ಕಡಿಮೆಯಾಗಿ ಕೊಳವೆ ಬಾವಿಯಲ್ಲಿ ನೀರು ಆಳಕ್ಕೆ ಇಳಿದಿದೆ. ಇದರಿಂದ ತಾಲ್ಲೂಕಿನ ಕೆಲವು ಕಡೆಗಳಲ್ಲಿ ಈಗಾಗಲೇ ಕುಡಿಯುವ ನೀರಿಗೆ ಸಮಸ್ಯೆ ಎದುರಾಗಿದೆ. ಏಪ್ರಿಲ್ ಕೊನೆಯ ವಾರಕ್ಕೆ ಸಮಸ್ಯೆ ಇನ್ನೂ ಬಿಗಡಾಯಿಸುವ ಸಾಧ್ಯತೆ ಇದೆ. ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಮೂಲವಾದ ಮಲಪ್ರಭೆ ಪೂರ್ಣ ಬತ್ತಿರುವ ಹಿನ್ನೆಲೆಯಲ್ಲಿ ಯೋಜನೆ ಸ್ಥಗಿತಗೊಂಡಿದೆ. ಈ ಯೋಜನೆಯಡಿ ಒಳಪಡುವ ಒಟ್ಟು …
Read More »Daily Archives: ಮಾರ್ಚ್ 23, 2024
ರಸ್ತೆಗೆ ಬಂದ ಒಂಟಿಸಲಗ
ಖಾನಾಪುರ (ಬೆಳಗಾವಿ ಜಿಲ್ಲೆ): ತಾಲ್ಲೂಕಿನ ನಂದಗಡ- ಬೀಡಿ ರಸ್ತೆಯ (ಬೆಳಗಾವಿ- ತಾಳಗುಪ್ಪ ರಾಜ್ಯ ಹೆದ್ದಾರಿ) ಬೇಕವಾಡ ಕ್ರಾಸ್ ಬಳಿ ಶನಿವಾರ ಮಧ್ಯಾಹ್ನ ಒಂಟಿಸಲಗ ಕಾಣಿಸಿಕೊಂಡಿತು. ಆನೆ ಜುಂಜವಾಡ- ಬೇಕವಾಡ ಮಧ್ಯದಲ್ಲಿ ರಸ್ತೆ ದಾಟಿ ಜುಂಜವಾಡ ಗ್ರಾಮದ ಹೊರವಲಯದ ಕಬ್ಬಿನ ಗದ್ದೆಗಳಲ್ಲಿ ನುಗ್ಗಿದೆ. ಆನೆ ಕಂಡು ಜನ ಅದರ ಫೋಟೊ, ವಿಡಿಯೊ ಮಾಡಿಕೊಳ್ಳಲು ಮುಂದಾದರು. ಇದರಿಂದ ಸ್ಥಳದಲ್ಲಿ ಜನಜಂಗುಳಿ ಏರ್ಪಟ್ಟಿತು. ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಜನರನ್ನು ನಿಯಂತ್ರಿಸಿದರು. ಆನೆಯನ್ನು …
Read More »ಚಂದ್ರಗ್ರಹಣ 2024: ಹೋಳಿಯಲ್ಲಿ ಚಂದ್ರಗ್ರಹಣದ ನೆರಳು, ಎಲ್ಲಾ ರಾಶಿಗಳ ಮೇಲೆ ಯಾವ ಪರಿಣಾಮ ಬೀರುತ್ತದೆ?
ಬೆಂಗಳೂರು: 2024 ರ ಮೊದಲ ಚಂದ್ರಗ್ರಹಣವು ಮಾರ್ಚ್ 25 ರಂದು ಸಂಭವಿಸಲಿದೆ. ಈ ಬಾರಿ ಚಂದ್ರಗ್ರಹಣ ಮತ್ತು ಹೋಳಿ ಎರಡೂ ಒಟ್ಟಿಗೆ ಸಂಭವಿಸಲಿದೆ. ಅಂದರೆ ಹೋಳಿಯು ಚಂದ್ರಗ್ರಹಣದ ನೆರಳಿನಲ್ಲಿ ಇರುತ್ತದೆ. ವೈದಿಕ ಜ್ಯೋತಿಷ್ಯದ ಪ್ರಕಾರ, 100 ವರ್ಷಗಳ ನಂತರ ಹೋಳಿಯಲ್ಲಿ ಮತ್ತೆ ಚಂದ್ರಗ್ರಹಣ ಸಂಭವಿಸುತ್ತದೆ. ಮಾರ್ಚ್ 25 ರಂದು, ಚಂದ್ರಗ್ರಹಣವು ಬೆಳಗ್ಗೆ 10:23 ಕ್ಕೆ ಪ್ರಾರಂಭವಾಗಿ ಮಧ್ಯಾಹ್ನ 03:02 ರವರೆಗೆ ಇರುತ್ತದೆ. ಇದಕ್ಕೂ ಮುನ್ನ 1924ರಲ್ಲಿ ಹೋಳಿ ಮತ್ತು ಚಂದ್ರಗ್ರಹಣ ಒಟ್ಟೊಟ್ಟಿಗೆ …
Read More »ಒಂದು ಕೆಜಿ ಕೋಳಿಗೆ 300 ರೂ..!
ಬೆಂಗಳೂರು,ಮಾ.23- ನೀರಿನ ಕೊರತೆ ಕುಕ್ಕುಟೋದ್ಯಮದ ಮೇಲೂ ಪ್ರಭಾವ ಬೀರಿರುವುದರಿಂದ ಕೋಳಿ ದರ ದುಪ್ಪಾಟ್ಟಾಗಿದೆ. ಹೀಗಾಗಿ ಚಿಕನ್ ಪ್ರಿಯರು ದುಬಾರಿ ಬೆಲೆ ನೀಡಿ ಚಿಕನ್ ಖರೀದಿಸುವುದು ಅನಿವಾರ್ಯವಾಗಿದೆ. ಮಳೆ ಕೊರತೆಯಿಂದ ಕೋಳಿ ಆಹಾರಗಳಾದ ಸೋಯಾ, ಮೈಸ್ ಮತ್ತಿತರ ಫಸಲುಗಳ ಪ್ರಮಾಣ ಕುಸಿತಗೊಂಡಿರುವುದರಿಂದ ಕೋಳಿ ದರ ಏರಿಕೆಯಾಗಿದೆ. ಒಂದು ಕೆ.ಜಿಗೆ 100 ರಿಂದ 150ರೂ ಇದ್ದ ಕೋಳಿ ಬೆಲೆ ಇದೀಗ 300 ರೂ.ಗಳಿಗೆ ಏರಿಕೆಯಾಗಿದೆ. ಬೆಲೆ ಹೆಚ್ಚಳದ ಬಗ್ಗೆ ತಿಳಿಯದೆ ಚಿಕನ್ ಕೊಳ್ಳಲು …
Read More »ವೀಣಾಗೆ ಕೈತಪ್ಪಿದ ಟಿಕೆಟ್! ಸಂಯುಕ್ತಾ ಪಾಟೀಲ ಕೊಟ್ಟ ಪ್ರತಿಕ್ರಿಯೆ ಹೀಗಿದೆ
ಬಾಗಲಕೋಟೆ: ಲೋಕಸಭಾ ಚುನಾವಣೆ 2024ರ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಬಾಗಲಕೋಟೆ ಕ್ಷೇತಕ್ಕೆ ‘ಕೈ’ ಅಭ್ಯರ್ಥಿಯಾಗಿ ಯಾರು ಹೊರಹೊಮ್ಮಲ್ಲಿದ್ದಾರೆ ಎಂಬ ಪ್ರಶ್ನೆ ಕಳೆದ ಕೆಲವು ದಿನಗಳಿಂದ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಯಾಗುತ್ತಿತ್ತು. ಈ ಮಧ್ಯೆ ಟಿಕೆಟ್ ಸ್ಪರ್ಧೆಯಲ್ಲಿದ್ದ ಶಾಸಕ ವಿಜಯಾನಂದ ಪತ್ನಿ ವೀಣಾ ಕಾಶಪ್ಪನವರ ಮತ್ತು ಸಚಿವ ಶಿವಾನಂದ ಪಾಟೀಲ ಪುತ್ರಿ ಸಂಯುಕ್ತಾ ಪಾಟೀಲ ಮಧ್ಯೆ ಭಾರೀ ಹಣಾಹಣಿ ಇತ್ತು. ಆದ್ರೆ, ಕಾಂಗ್ರೆಸ್ ತನ್ನ ಮೂರನೇ ಪಟ್ಟಿ ಬಿಡುಗಡೆಗೊಳಿಸಿದ ಬೆನ್ನಲ್ಲೇ ಸಂಯುಕ್ತಾಗೆ …
Read More »ಬರ ಪರಿಹಾರ’ ನೀಡದ ಕೇಂದ್ರ ಸರ್ಕಾರದ ವಿರುದ್ಧ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ‘ರಾಜ್ಯ ಸರ್ಕಾರ’.!
ನವದೆಹಲಿ : ‘ಬರ ಪರಿಹಾರ’ ನೀಡದ ಕೇಂದ್ರ ಸರ್ಕಾರದ ವಿರುದ್ಧ ‘ರಾಜ್ಯ ಸರ್ಕಾರ’ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ. ಈ ಬಗ್ಗೆ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಬರ ಪರಿಹಾರ ನೀಡದ ಕೇಂದ್ರ ಸರ್ಕಾರದ ವಿರುದ್ಧ ನಾವು ಕಾನೂನು ಸಮರಕ್ಕೆ ಮುಂದಾಗಿದ್ದೇವೆ ಎಂದು ಹೇಳಿದರು. ಕೇಂದ್ರ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಆರ್ಟಿಕಲ್ 32 ರಡಿ ಕೇಂದ್ರದ ವಿರುದ್ಧ ರಿಟ್ ಅರ್ಜಿ ಸಲ್ಲಿಸಿದ್ದೇವೆ ಎಂದು …
Read More »ಬಿಜೆಪಿಯನ್ನು ದ್ವೇಷಿಸಬೇಡಿ : ಕಾರ್ಯಕರ್ತರಿಗೆ ಕೇಜ್ರಿವಾಲ್ ಮನವಿ
ನವದೆಹಲಿ,ಮಾ.23- ನನ್ನ ಬಂಧನದ ಉದ್ದೇಶದಿಂದ ನೀವು ಬಿಜೆಪಿ ಸದಸ್ಯರನ್ನು ದ್ವೇಷಿಸಬೇಡಿ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಆಮ್ ಆದ್ಮಿ ಪಕ್ಷದ ಕಾರ್ಯಕರ್ತರಿಗೆ ಮನವಿ ಮಾಡಿಕೊಂಡಿದ್ದಾರೆ. ಜೈಲಿನಲ್ಲಿದ್ದುಕೊಂಡೇ ದೆಹಲಿ ಜನರಿಗೆ ಅರವಿಂದ್ ಕೇಜ್ರಿವಾಲ್ ಅವರು ಬರೆದಿರುವ ಭಾವನಾತ್ಮಕ ಪತ್ರವನ್ನು ಅವರ ಪತ್ನಿ ಸುನೀತಾ ಕೇಜ್ರಿವಾಲ್ ಬಹಿರಂಗಪಡಿಸಿದ್ದಾರೆ. ಪತ್ರದಲ್ಲಿ ಕೇಜ್ರಿವಾಲ್ ಯಾವುದೇ ಜೈಲು ನನ್ನನ್ನು ಒಳಗೆ ಇಡಲು ಸಾಧ್ಯವಿಲ್ಲ ಮತ್ತು ನಾನು ಹೊರಗೆ ಬಂದು ನನ್ನ ಭರವಸೆಗಳನ್ನು ಈಡೇರಿಸುತ್ತೇನೆ ಎಂದು ಹೇಳಿಕೊಂಡಿದ್ದಾರೆ.ಸಮಾಜ …
Read More »ಮನೆಗೆ ನುಗ್ಗಿದ ದರೋಡೆಕೋರರನ್ನು ಅಟ್ಟಾಡಿಸಿ ಹೊಡೆದ ತಾಯಿ-ಮಗಳು
ಹೈದರಾಬಾದ್‌ನಲ್ಲಿ (Hyderabad) ಅಚ್ಚರಿಯ ಘಟನೆಯೊಂದು ನಡೆದಿದೆ. ಕಳೆದ ಒಂದೆರಡು ದಿನಗಳಿಂದ ತೆಲುಗು ಜನರು ತಾಯಿ ಮತ್ತು ಮಗಳ ಧೈರ್ಯವನ್ನು ಮೆಚ್ಚಿ ಕೊಂಡಾಡುತ್ತಿದ್ದಾರೆ. ಅಷ್ಟಕ್ಕೂ ಆ ತಾಯಿ ಮಗಳು ಮಾಡಿದ (Robbery case) ಸಾಹಸ ಅಂತಿದ್ದಲ್ಲ. ಹೌದು.. ಹೈದರಾಬಾದ್‌ನಲ್ಲಿ ಇಬ್ಬರು ದರೋಡೆಕೋರರನ್ನು ತಾಯಿ ಮತ್ತು ಮಗಳು ಮಟ್ಟ ಹಾಕಿದ ಘಟನೆ ನಡೆದಿದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ದರೋಡೆಕೋರರನ್ನು ಧೈರ್ಯದಿಂದ ಹೊಡೆದೋಡಿಸಿದ ವಿಡಿಯೋ ವೈರಲ್ ಆದ ಬೆನ್ನಲ್ಲೇ …
Read More »ಈ ಬಾರಿ ಪಿಯುಸಿ ವಿದ್ಯಾರ್ಥಿಗಳಿಗೆ ಎರಡು ವರ್ಷಕ್ಕೆ 10 ಕೋಟಿಗೂ ಅಧಿಕ ಮೌಲ್ಯದ ಶೈಕ್ಷಣಿಕ ವಿದ್ಯಾರ್ಥಿ ವೇತನ ಘೋಷಿಸಿದ;ಆಳ್ವಾಸ
ಬೆಳಗಾವಿ: ಮೂಡಿಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಈ ಬಾರಿ ಪಿಯುಸಿ ವಿದ್ಯಾರ್ಥಿಗಳಿಗೆ ಎರಡು ವರ್ಷಕ್ಕೆ 10 ಕೋಟಿಗೂ ಅಧಿಕ ಮೌಲ್ಯದ ಶೈಕ್ಷಣಿಕ ವಿದ್ಯಾರ್ಥಿ ವೇತನ ಘೋಷಿಸಿದ್ದು ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಇದರ ಲಾಭ ಪಡೆಯಬೇಕೆಂದು ಆಳ್ವಾಸ್ ಸಂಸ್ಥೆಯ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರಸಾದ ಶೆಟ್ಟಿ ತಿಳಿಸಿದರು. ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಇವರು. 10ನೇ ತರಗತಿಯಲ್ಲಿ ಸಿಬಿಎಸ್ಸಿ (ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ), ಐಸಿಎಸ್ಇ (ಭಾರತೀಯ ಪ್ರೌಢಶಿಕ್ಷಣದ ಪ್ರಮಾಣ ಪತ್ರ) …
Read More »ಶಾಸಕರನ್ನು ಹಿಡಿತದಲ್ಲಿಟ್ಟುಕೊಳ್ಳಲಾಗದ ದುರ್ಬಲ ಸಿಎಂ ಸಿದ್ದರಾಮಯ್ಯ
ಶಾಸಕರನ್ನು ಹಿಡಿತದಲ್ಲಿಟ್ಟುಕೊಳ್ಳಲಾಗದ ದುರ್ಬಲ ಸಿಎಂ ಸಿದ್ದರಾಮಯ್ಯ ಬೆಂಗಳೂರು,ಮಾ.23- ಶಾಸಕರನ್ನು ಹಿಡಿತದಲ್ಲಿ ಇಟ್ಟುಕೊಳ್ಳಲಾಗದೆ, 90ಕ್ಕೂ ಹೆಚ್ಚು ಶಾಸಕರಿಗೆ ಸಂಪುಟ ದರ್ಜೆ ಸ್ಥಾನಮಾನ, ಗೂಟದ ಕಾರು ನೀಡಿ ಅವರನ್ನು ಸಮಾಧಾನಪಡಿಸಬೇಕಾದ ದಯನೀಯ ಸ್ಥಿತಿ ನಿಮ್ಮದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ತಿರುಗೇಟು ನೀಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‍ನಲ್ಲಿ ಟ್ವೀಟ್ ಮಾಡಿರುವ ಅವರು, ತಾವು ಎಷ್ಟು ದುರ್ಬಲ ಮುಖ್ಯಮಂತ್ರಿ ಎಂದರೆ ಶಾಸಕರನ್ನು ಹಿಡಿತದಲ್ಲಿಡದೆ ಅವರಿಗೆ ಸಂಪುಟ ದರ್ಜೆಯ ಸ್ಥಾನಮಾನ …
Read More »