ಅಥಣಿ : ಅಥಣಿ ತಾಲೂಕಿನ ಪೂರ್ವ ಭಾಗದ ಸು. 12 ಹಳ್ಳಿಗಳ ರೈತರ ಜಮೀನುಗಳಿಗೆ ನೀರಾವರಿ ಸೌಲಭ್ಯ ಒದಗಿಸಲಾಗುವ ಅಮ್ಮಾಜೇಶ್ವರಿ ಕೊಟ್ಟಲಗಿ ಏತ ನೀರಾವರಿ ಯೋಜನೆಯ ಶಂಕು ಸ್ಥಾಪನೆ ಸಮಾರಂಭಕ್ಕೆ ಇದೇ ಮಾರ್ಚ್ 6 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಸೇರಿದಂತೆ ಅನೇಕ ಸಚಿವರು ಮತ್ತು ಶಾಸಕರು ಆಗಮಿಸಲಿದ್ದಾರೆ. ಪಕ್ಷದ ಎಲ್ಲಾ ಮುಖಂಡರು ಮತ್ತು ಕಾರ್ಯಕರ್ತರು ಒಗ್ಗಟ್ಟಿನಿಂದ ಶ್ರಮಿಸುವ ಮೂಲಕ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು …
Read More »Monthly Archives: ಮಾರ್ಚ್ 2024
ಶ್ರೀ ಪ್ರಶಾಂತ ಅಪರಾಜ ಅವರ ಅಕಾಲಿಕ ನಿಧನದ ಸುದ್ದಿ ತಿಳಿದು ತೀವ್ರ ಬೇಸರವಾಗಿದೆ.:ಸತೀಶ್ ಜಾರಕಿಹೊಳಿ
ಬೆಳಗಾವಿ : ಕಾಗವಾಡ ಯುವ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಪ್ರಶಾಂತ ಅಪರಾಜ ಅಕಾಲಿಕ ಮರಣ ಹೊಂದಿದ್ದು ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಕಂಬನಿ ಮಿಡಿದ್ದಾರೆ. ಈ ಕುರಿತು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಪೋಸ್ಟ್ ಮಾಡಿದ್ದು. ಬೆಳಗಾವಿ ಜಿಲ್ಲೆಯ ಕಾಗವಾಡ ಯುವ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಶ್ರೀ ಪ್ರಶಾಂತ ಅಪರಾಜ ಅವರ ಅಕಾಲಿಕ ನಿಧನದ ಸುದ್ದಿ ತಿಳಿದು ತೀವ್ರ ಬೇಸರವಾಗಿದೆ.ಅವರ ಕುಟುಂಬಕ್ಕೆ ದು:ಖ ಭರಿಸುವ …
Read More »ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ರಾಜೀನಾಮೆ.!
ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ತಮ್ಮ ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ಸೋಮವಾರ ರಾಜೀನಾಮೆ ನೀಡಿದ್ದು, ಅವರ ರಾಜೀನಾಮೆಯನ್ನು ರಾಜ್ಯಸಭಾ ಅಧ್ಯಕ್ಷರು ಅಂಗೀಕರಿಸಿದ್ದಾರೆ. ಹಿಮಾಚಲ ಪ್ರದೇಶದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದ ಜೆ.ಪಿ ನಡ್ಡಾ ಅವರ ಅವಧಿಯು ಏಪ್ರಿಲ್‌ನಲ್ಲಿ ಕೊನೆಗೊಳ್ಳಲಿದೆ. ಆದರೆ ಇತ್ತೀಚೆಗೆ ನಡೆದ ರಾಜ್ಯಸಭೆ ಚುನಾವಣೆಯಲ್ಲಿ ನಡ್ಡಾ ಅವರು ಗುಜರಾತ್‌ನಿಂದ ಸಂಸತ್ತಿನ ಮೇಲ್ಮನೆಗೆ ಅವಿರೋಧವಾಗಿ ಆಯ್ಕೆಯಾಗಿದ್ದರು. ಈ ಹಿನ್ನೆಲೆಯಲ್ಲಿ ಇಂದು ಅವರು ಹಿಮಾಚಲ ಪ್ರದೇಶದಿಂದ ಆಯ್ಕೆಯಾಗಿದ್ದ ರಾಜ್ಯಸಭಾ ಸ್ಥಾನಕ್ಕೆ …
Read More »ಗುತ್ತಿಗೆದಾರರ ಸಮಾವೇಶದಲ್ಲಿ ರಾಜಕೀಯ ನಿವೃತ್ತಿ ಬಗ್ಗೆ ಮಾತನಾಡಿದ ಸಿಎಂ
ಬೆಂಗಳೂರು, ಮಾರ್ಚ್ 4: ಬೆಂಗಳೂರಿನಲ್ಲಿ (Bengaluru) ನಡೆದ ಗುತ್ತಿಗೆದಾರರ ಸಮಾವೇಶದಲ್ಲಿ (Contractor’s Convention) ಭಾಗವಹಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ (Siddaramaiah) ರಾಜಕೀಯ ನಿವೃತ್ತಿ ಬಗ್ಗೆ ಮಾತನಾಡಿದ್ದಾರೆ. ಹಾಗೆಂದ ಮಾತ್ರಕ್ಕೆ ಸಿದ್ದರಾಮಯ್ಯ ಅವರು ರಾಜಕೀಯದಿಂದ ನಿವೃತ್ತರಾಗುತ್ತಾರೆ ಎಂದುಕೊಳ್ಳಬೇಡಿ. ಅವರು ಹಾಗೆ ಹೇಳಲು ಕಾರಣವಿದೆ! ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಸಿಎಂ, ಗುತ್ತಿಗೆದಾರರಿಂದ ಐದು ಪೈಸೆ ಕಮಿಷನ್ ಪಡೆದಿರುವುದು ಸಾಬೀತಾದರೂ ರಾಜಕೀಯ ನಿವೃತ್ತಿ ಘೋಷಿಸುವೆ. 2013ರಿಂದ 2018ರವರೆಗೆ ಮೊದಲ ಬಾರಿಗೆ ಮುಖ್ಯಮಂತ್ರಿ ಆಗಿದ್ದೆ. 2023ರ …
Read More »ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಬೆಳಗಾವಿ ಜಿಲ್ಲೆ ಪ್ರವಾಸ
ಬೆಳಗಾವಿ, : ಲೋಕಸಭೆ ಚುನಾವಣೆಗೆ (Lok Sabha Election) ಎರಡು ತಿಂಗಳು ಬಾಕಿ ಉಳಿದಿದೆ. ಭಾರತೀಯ ಜನತಾ ಪಾರ್ಟಿ (BJP) ಮೂರನೇ ಬಾರಿಗೆ ಅಧಿಕಾರದ ಗದ್ದುಗೆ ಏರಲು ಸಾಕಷ್ಟು ಪ್ರಯತ್ನ ಮಾಡುತ್ತಿದೆ. ಅದು ಕೂಡ ಈ ಸಲ 400ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಅಭೂತಪೂರ್ವ ಗೆಲವು ಸಾಧಿಸಲು ರಣತಂತ್ರ ಹೆಣೆಯುತ್ತಿದೆ. ಬಿಜೆಪಿ ಈಗಾಗಲೆ 195 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಆದರೆ ಈ ಪಟ್ಟಿಯಲ್ಲಿ ಕಾರ್ನಾಟಕದ ಯಾವೊಬ್ಬ ಅಭ್ಯರ್ಥಿಯ …
Read More »ಲೋಕಸಭೆ ಚುನಾವಣೆಗೆ ಅಭ್ಯರ್ಥಿ ಆಯ್ಕೆಗೆ ಮುಂದುವರಿದ ಕಸರತ್ತು: ನಾಳೆ ರಂಗೇರಲಿದೆ ಬಿಜೆಪಿ, ಕಾಂಗ್ರೆಸ್ ಸಭೆ
ಬೆಂಗಳೂರು, ಮಾರ್ಚ್ 4: ಲೋಕಸಭೆ ಚುನಾವಣೆಗೆ (Lok Sabha Elections) ಅಭ್ಯರ್ಥಿಗಳ ಆಯ್ಕೆ ಸಂಬಂಧಪಟ್ಟ ಬಿಜೆಪಿ (BJP) ಮತ್ತು ಕಾಂಗ್ರೆಸ್ (Congress) ಸತತ ಸಭೆಗಳನ್ನು ನಡೆಸುತ್ತಿವೆ. ಅಭ್ಯರ್ಥಿ ಆಯ್ಕೆ ಸಂಬಂಧ ಕಾಂಗ್ರೆಸ್ ಪಕ್ಷವು ಮಂಗಳವಾರ ಬೆಂಗಳೂರಿನಲ್ಲಿ ಸಭೆ ಹಮ್ಮಿಕೊಂಡಿದ್ದರೆ, ಅತ್ತ ಕಿತ್ತೂರು ಕರ್ನಾಟಕದ ನಾಲ್ಕು ಕ್ಷೇತ್ರಗಳ ಮೇಲೆ ಕಣ್ಣಿಟ್ಟಿರುವ ಬಿಜೆಪಿ, ಆ ಭಾಗದಲ್ಲಿ ಸಭೆ ನಡೆಸಲಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರೇ ಖುದ್ದು ಸಭೆಯಲ್ಲಿ ಭಾಗವಹಿಸಲಿದ್ದಾರೆ. ಕಿತ್ತೂರು ಕರ್ನಾಟಕದ …
Read More »ಏಪ್ರಿಲ್ 5ಕ್ಕೆ ಬರ್ತಿದೆ ಶರಣ್ ನಟನೆಯ ಹಾರರ್ ಸಿನಿಮಾ
ಛೂ ಮಂತರ್’ ಸಿನಿಮಾ ರಿಲೀಸ್ಗೆ ಒಂದು ತಿಂಗಳು ಬಾಕಿ ಇದೆ. ಹೀಗಾಗಿ, ಚಿತ್ರಕ್ಕೆ ಭರ್ಜರಿ ಪ್ರಚಾರ ನೀಡುವ ಕೆಲಸವನ್ನು ತಂಡ ಮಾಡುತ್ತಿದೆ. ಟೀಸರ್ ನೋಡಿದವರಿಗೆ ಸಿನಿಮಾದ ಗುಣಮಟ್ಟದ ಬಗ್ಗೆ ನಿರೀಕ್ಷೆ ಮೂಡುವಂತಾಗಿದೆ. ಶೀಘ್ರವೇ ಈ ಸಿನಿಮಾದ ಟ್ರೇಲರ್ ರಿಲೀಸ್ ಆಗಲಿದೆ. ನಟ ಶರಣ್ (Sharan) ಅವರು ಸ್ಯಾಂಡಲ್ವುಡ್ನಲ್ಲಿ ಬೇಡಿಕೆ ಸೃಷ್ಟಿಸಿಕೊಂಡಿದ್ದಾರೆ. ಅವರ ನಟನೆಯ ‘ಅವಾತರ ಪುರುಷ 2’ ಸಿನಿಮಾ ಮಾರ್ಚ್ 22ರಂದು ರಿಲೀಸ್ ಆಗಲಿದೆ ಎಂದು ಘೋಷಣೆ ಆಗಿದೆ. ಈ ಚಿತ್ರದಲ್ಲಿ ಮಾಟ …
Read More »ಬೆಳಗಾವಿಯಲ್ಲೂ ಗುಳೆ ಹೋಗುವವರ ಸಂಖ್ಯೆ ದುಪ್ಪಟ್ಟಾಗಿದೆ. ಕೆಲಸ ಹುಡುಕಿಕೊಂಡು ನಿತ್ಯ ಸಾವಿರಾರು ಜನರು ಗೋವಾ, ಉಡುಪಿ, ಮಂಗಳೂರು ಕಡೆಗೆ ವಲಸೆ
ಬೆಳಗಾವಿಯಲ್ಲೂ ಇದೇ ಸ್ಥಿತಿ: ಜಿಲ್ಲೆಯ 506 ಗ್ರಾಪಂ ವ್ಯಾಪ್ರಿಯ 640ಕ್ಕೂ ಅಧಿಕ ಹಳ್ಳಿಗಳಲ್ಲಿ ರೈತರು, ಕೂಲಿಕಾರರಿಗೆ ನರೇಗಾ ಯೋಜನೆ ಆಶ್ರಯವಾಗಿತ್ತು. ಆದರೆ, ನಾಲ್ಕೈದು ತಿಂಗಳಿನಿಂದ ಸಮಯಕ್ಕೆ ಸರಿಯಾಗಿ ಕೂಲಿ ಪಾವತಿಯಾಗದಿರುವ ಹಿನ್ನೆಲೆಯಲ್ಲಿ ಜನರು ಬೆಂಗಳೂರು, ಹೈದರಾಬಾದ್, ಬೆಳಗಾವಿ, ಮಹಾರಾಷ್ಟ್ರದ ಪುಣೆ, ಮುಂಬೈ, ಕೊಲ್ಲಾಪುರ, ಗೋವಾ ರಾಜ್ಯದ ವಾಸ್ಕೋ, ಪಣಜಿ ಸೇರಿ ಇತರ ನಗರ ಪ್ರದೇಶಗಳಿಗೆ ಗುಳೆ ಹೋಗುತ್ತಿದ್ದಾರೆ. ಈಗಾಗಲೇ ಹಿಂಗಾರು ಹಂಗಾಮಿನ ಜೋಳ, ಕಡಲೆ, ಸೂರ್ಯಕಾಂತಿ ಸುಗ್ಗಿ ಮುಗಿದಿದೆ. ಕಬ್ಬು ಕಟಾವು …
Read More »ಭೀಕರ ಬರದ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕದ ಜಿಲ್ಲೆಗಳಿಂದ ಗುಳೆ ಹೋಗುವವರ ಸಂಖ್ಯೆ ದುಪ್ಪಟ್ಟಾಗಿದೆ.
ಈ ವರ್ಷ ಭೀಕರ ಬರದ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕದ ಜಿಲ್ಲೆಗಳಿಂದ ಗುಳೆ ಹೋಗುವವರ ಸಂಖ್ಯೆ ದುಪ್ಪಟ್ಟಾಗಿದೆ. ಕೆಲಸ ಹುಡುಕಿಕೊಂಡು ನಿತ್ಯ ಸಾವಿರಾರು ಜನರು ಗೋವಾ, ಉಡುಪಿ, ಮಂಗಳೂರು ಕಡೆಗೆ ವಲಸೆ ಹೋಗುತ್ತಿದ್ದಾರೆ. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಾಗಲಕೋಟೆ ವಿಭಾಗವೊಂದರಿಂದಲೇ ಪ್ರತಿ ದಿನ ಮಂಗಳೂರಿಗೆ 22 ಬಸ್ಗಳನ್ನು ಬಿಡಲಾಗುತ್ತಿದೆ. ಮಂಗಳೂರು ವಿಭಾಗದಿಂದ 20 ಬಸ್ಗಳು ಸಂಚರಿಸುತ್ತವೆ. ಬಾಗಲಕೋಟೆಯಿಂದ ಗೋವಾಕ್ಕೆ ಪ್ರತಿದಿನ 18 ಬಸ್ ಓಡಾಡುತ್ತಿವೆ. ಹೀಗಾಗಿ ಕೂಲಿ ಕೆಲಸ ಹುಡುಕಿಕೊಂಡು …
Read More »ಭಾರತದ ಮೊದಲ ನೀರೊಳಗಿನ ಮೆಟ್ರೋ ಉದ್ಘಾಟನೆಗೆ ದಿನಾಂಕ ಫಿಕ್ಸ್;
ಕೋಲ್ಕತ್ತಾ: ಮಾರ್ಚ್ 6ರಂದು ಕೋಲ್ಕತ್ತಾದಲ್ಲಿ ನಿರ್ಮಿಸಲಾದ ಭಾರತದ ಮೊದಲ ನದಿಯೊಳಗಿನ ಮೆಟ್ರೋ ಸುರಂಗವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದು, ಹೂಗ್ಲಿ ನದಿಯ ಅಡಿಯಲ್ಲಿ ನಿರ್ಮಿಸಲಾದ ಸುರಂಗವು ಕೋಲ್ಕತ್ತಾ ಮೆಟ್ರೋದ ಪೂರ್ವ-ಪಶ್ಚಿಮ ಮೆಟ್ರೋ ಕಾರಿಡಾರ್‌ನ ಭಾಗವಾಗಿದೆ. ಇದು ಹೌರಾ ಮೈದಾನದಿಂದ ಎಸ್‌ಪ್ಲೇನೇಡ್‌ಗೆ ಸಂಪರ್ಕಿಸುತ್ತದೆ ಎಂದು ವರದಿಯಾಗಿದೆ. ಅದೇ ದಿನ ಕೋಲ್ಕತ್ತಾ ಮೆಟ್ರೋದ ಕವಿ ಸುಭಾಷ್-ಹೇಮಂತ ಮುಖೋಪಾಧ್ಯಾಯ ಮತ್ತು ತಾರಾತಲಾ-ಮಜೆರ್ಹತ್ ವಿಭಾಗಗಳನ್ನು ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ. ಈ ವಿಭಾಗಗಳು ರಸ್ತೆ ದಟ್ಟಣೆಯನ್ನು ನಿವಾರಿಸಲು ಮತ್ತು …
Read More »