Breaking News

Monthly Archives: ಮಾರ್ಚ್ 2024

ಸರ್ಕಾರಿ FSL ವರದಿ ಬಂದಿಲ್ಲ, ಖಾಸಗಿ ವರದಿ ಒಪ್ಪಲ್ಲ; ಬಿಜೆಪಿಗೆ ಪರಮೇಶ್ವರ್‌ ತಿರುಗೇಟು

ಬೆಂಗಳೂರು: ರಾಜ್ಯಸಭಾ ಚುನಾವಣೆಯ (Rajya sabha Election) ಫಲಿತಾಂಶ ಪ್ರಕಟವಾದ ಫೆ. 27ರಂದು ವಿಜಯೋತ್ಸವದ ವೇಳೆ ವಿಧಾನಸೌಧದಲ್ಲಿ ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಲಾಗಿದೆ ಎಂಬ ವಿದ್ಯಮಾನಕ್ಕೆ ಸಂಬಂಧಿಸಿ ಬಿಜೆಪಿ ಬಿಡುಗಡೆ ಮಾಡಿದ ಖಾಸಗಿ ಎಫ್‌ಎಸ್‌ಎಲ್‌ ವರದಿಯ (FSL Report) ಬಗ್ಗೆ ರಾಜ್ಯ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿದೆ.   ಕಾಂಗ್ರೆಸ್‌ನ ವಿಜಯೀ ಅಭ್ಯರ್ಥಿ ನಾಸಿರ್‌ ಹುಸೇನ್‌ (Nasir Husein) ಅವರ ವಿಜಯೋತ್ಸವದ ಸಂದರ್ಭದಲ್ಲಿ ವಿಧಾನಸೌಧದ (Vidhana Soudha) ಒಳಗೇ ಪಾಕಿಸ್ತಾನ್‌ ಜಿಂದಾಬಾದ್‌ (Pakistan …

Read More »

ಮೂವರು ವಿದ್ಯಾರ್ಥಿನಿಯರ ಮೇಲೆ ಆಯಸಿಡ್ ದಾಳಿ!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಸರಕಾರಿ ಕಾಲೇಜಿನಲ್ಲಿ ಮೂವರು ಹೆಣ್ಮಕ್ಕಳ ಮೇಲೆ ದುಷ್ಟನೊಬ್ಬ ಆಯಸಿಡ್ (Acid attack) ಎರಚಿದ್ದಾನೆ. ಅಲೀನಾ ಸಿಬಿ, ಅರ್ಚನಾ, ಅಮೃತ ಎಂಬ ವಿದ್ಯಾರ್ಥಿನಿಯರ ಮೇಲೆ ದಾಳಿ ಮಾಡಿದ್ದಾನೆ. ಈ ಮೂವರು ವಿದ್ಯಾರ್ಥಿನಿಯರು ಸರ್ಕಾರಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದರು. ಮುಖಕ್ಕೆ ಮಾಸ್ಕ್ ಹಾಗೂ ತಲೆಗೆ ಹ್ಯಾಟ್ ಹಾಕಿದ್ದ ಕಿರಾತಕ ಏಕಾಏಕಿ ವಿದ್ಯಾರ್ಥಿನಿಯರ ಮೇಲೆ ಆಯಸಿಡ್ ಹಾಕಿದ್ದಾನೆ. ಆಯಸಿಡ್ ಮುಖಕ್ಕೆ ಬೀಳುತ್ತಿದ್ದ ವಿದ್ಯಾರ್ಥಿನಿಯರು ಕಿರುಚಾಡಿದ್ದಾರೆ. ಆಯಸಿಡ್ ದಾಳಿಗೆ …

Read More »

ರಾಮೇಶ್ವರಂ ಕೆಫೆ ಸ್ಫೋಟದ ಹಿಂದೆ ಶಾರಿಕ್‌?; ತೀವ್ರ ವಿಚಾರಣೆ, ಯಾರೀ ಕರ್ನಲ್‌!?

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ (Rameshwaram Cafe) ಬಾಂಬ್‌ ಸ್ಫೋಟ (Blast in Bengaluru) ಸಂಭವಿಸಿ 70 ಗಂಟೆಗಳೇ ಕಳೆದಿವೆ. ರಾಜ್ಯ ಪೊಲೀಸರ ಹಲವಾರು ತಂಡಗಳು ಸಿಸಿಟಿವಿ ಫೂಟೇಜ್‌ ಸೇರಿದಂತೆ ಎಲ್ಲ ದಿಕ್ಕುಗಳಲ್ಲೂ ತನಿಖೆ ನಡೆಯುತ್ತಿದೆ. ಈ ನಡುವೆ ರಾಜ್ಯ ಸರ್ಕಾರ (Karnataka Government) ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ (National Investigation Agency) ವಹಿಸಿದೆ.   ಇದರ ನಡುವೆ ಮಾರ್ಚ್‌ 1ರಂದು ಮಧ್ಯಾಹ್ನ 12.55ರ ಹೊತ್ತಿಗೆ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ …

Read More »

ಇನ್ಮುಂದೆ ‘ಆರೋಗ್ಯ ಇಲಾಖೆ’ಯ ಖರೀದಿ ಪಕ್ರಿಯೆ ‘ಇ-ಪ್ರೊಕ್ಯೂರ್ಮೆಂಟ್’ ಮೂಲಕ ನಿರ್ವಹಣೆ ಕಡ್ಡಾಯ – ರಾಜ್ಯ ಸರ್ಕಾರ

ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಅಧೀನ ಸಂಸ್ಥೆಗಳಲ್ಲಿ ಖರೀದಿ ಪ್ರಕ್ರಿಯೆಯನ್ನು ಇ-ಪ್ರೊಕ್ಯೂರ್ಮೆಂಟ್ ಅಥವಾ ಜೆಂ ಪೋರ್ಟಲ್ ಗಳ ಮೂಲಕ ನಿರ್ವಹಣೆ ಮಾಡುವುದನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, ಅದರಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಅಧೀನ ಸಂಸ್ಥೆಯ ರೂ. ಒಂದು ಲಕ್ಷಕ್ಕಿಂತ ಹೆಚ್ಚಿನ ಮೌಲ್ಯದ ಖರೀದಿ ಪ್ರಕ್ರಿಯೆಯನ್ನು e-procurement ಅಥವಾ GeM …

Read More »

ಬರಿದಾಗುತ್ತಿದೆ ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳ ಜೀವನಾಡಿ ಹಿಡಕಲ್ ಜಲಾಶಯ

ಬೆಳಗಾವಿ, ಮಾರ್ಚ್​​ 03: ಭೀಕರ ಬರಗಾಲದಿಂದ (Drought) ರಾಜ್ಯದ ಜಲಾಶಯಗಳು ಭಣಗುಡುತ್ತಿವೆ. ಅಂತರ್ಜಲ ಪಾತಾಳಕ್ಕೆ ಕುಸಿದಿದೆ. ಬೇಸಿಗೆ ಆರಂಭದಲ್ಲೇ ಜಲಕ್ಷಾಮದ ಬಿಸಿ ರಾಜ್ಯಕ್ಕೆ ತಟ್ಟಿದೆ. ಹನಿ ನೀರಿಗೂ ಪರದಾಡುವಂತೆ ಪರಿಸ್ಥಿತಿ ಎದುರಾಗಿದೆ. ಇನ್ನು ಬೆಳಗಾವಿ (Belagavi) ಮತ್ತು ಬಾಗಲಕೋಟೆ (Bagalkote) ಜಿಲ್ಲೆಗಳಿಗೆ ಜೀವನಾಡಿಯಾಗಿರುವ ಹುಕ್ಕೇರಿ ತಾಲೂಕಿನ ಹಿಡಕಲ್ ಜಲಾಶಯ (Hidkal Dam) ಬರಿದಾಗುತ್ತಿದೆ. ಬೆಳಗಾವಿ ಜಿಲ್ಲೆಯಲ್ಲಿ ಕುಡಿಯುವ ನೀರಿಗಾಗಿ ಜನ ಪರಿತಪ್ಪಿಸುತ್ತಿದ್ದಾರೆ. ಬೆಳಗಾವಿಯ ಮತ್ತು ಬಾಗಲಕೋಟೆ ಜಿಲ್ಲೆ ಜೀವನಾಡಿ ಆಗಿರುವ ಹಿಡಕಲ್ …

Read More »

ಬಿಜೆಪಿ ಸಂಸದ ರಮೇಶ್ ಜಿಗಜಿಣಗಿ ಆರೋಗ್ಯದಲ್ಲಿ ಮತ್ತೆ ಏರುಪೇರು

ವಿಜಯಪುರ,: ವಿಜಯಪುರ ಬಿಜೆಪಿ ಸಂಸದ ರಮೇಶ್ ಜಿಗಜಿಣಗಿ (BJP MP ramesh jigajinagi) ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದೆ. ಈ ಹಿನ್ನೆಲೆಯಲ್ಲಿ ಅವರನ್ನು ನಿನ್ನೆ (ಮಾರ್ಚ್​ 2) ತಡ ರಾತ್ರಿ ಬೆಳಗಾವಿಯ ಕೆಎಲ್‌ಇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐಸಿಯುವಿನಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ತಿಳಿದುಬಂದಿದೆ. ಕಳೆದ ಜನವರಿ 28ರಂದು ಸಹ ವಿಜಯಪುರದಿಂದ ಬಾಗಲಕೋಟೆ ಮಾರ್ಗವಾಗಿ ಸಂಚರಿಸುತ್ತಿದ್ದ ವೇಳೆ ದಿಢೀರ್ ಉಸಿರಾಟ ಸಮಸ್ಯೆಯಾಗಿತ್ತು. ಕೂಡಲೇ ಅವರನ್ನು ಬಾಗಲಕೋಟೆ ‌ಕುಮಾರೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಮತ್ತೆ ರಮೇಶ್ …

Read More »

ಲೋಕಸಭೆ ಚುನಾವಣೆ 2024: ಮಾ. 4, 5 ರಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಬೆಳಗಾವಿ ಜಿಲ್ಲೆ ಪ್ರವಾಸ

ಬೆಳಗಾವಿ, ಮಾರ್ಚ್​ 03: ಲೋಕಸಭೆ ಚುನಾವಣೆಗೆ (Lok Sabha Election) ಎರಡು ತಿಂಗಳು ಬಾಕಿ ಉಳಿದಿದೆ. ಭಾರತೀಯ ಜನತಾ ಪಾರ್ಟಿ (BJP) ಮೂರನೇ ಬಾರಿಗೆ ಅಧಿಕಾರದ ಗದ್ದುಗೆ ಏರಲು ಸಾಕಷ್ಟು ಪ್ರಯತ್ನ ಮಾಡುತ್ತಿದೆ. ಅದು ಕೂಡ ಈ ಸಲ 400ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಅಭೂತಪೂರ್ವ ಗೆಲವು ಸಾಧಿಸಲು ರಣತಂತ್ರ ಹೆಣೆಯುತ್ತಿದೆ. ಬಿಜೆಪಿ ಈಗಾಗಲೆ 195 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಆದರೆ ಈ ಪಟ್ಟಿಯಲ್ಲಿ ಕಾರ್ನಾಟಕದ ಯಾವೊಬ್ಬ …

Read More »

ಹೊಟ್ಟೆ ತುಂಬ ಊಟ ಮಾಡ್ತೀವಿ; ಹೆಬ್ಬಾಳ್ಕರ್‌ ಗಲ್ಲ ಸವರಿ ಗ್ಯಾರಂಟಿಗೆ ಜೈ ಎಂದ ಅಜ್ಜಿ

ಬೆಳಗಾವಿ: “ನಾವು ಮಕ್ಕಳು ಮರಿ ಎಲ್ಲಾ ಈಗ ಹೊಟ್ಟೆ ತುಂಬಾ ಊಟ ಮಾಡುತ್ತೀವಿ. ಸರ್ಕಾರದ ಗ್ಯಾರಂಟಿಯಿಂದ (Congress Guarantee) ನಮಗೆ ಸಾಕಷ್ಟು ಅನುಕೂಲವಾಗಿದೆ”-ಹೀಗೆಂದು ವೃದ್ದರೊಬ್ಬರು (Old woman Happy) ಹೇಳಿದಾಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ (Lakshmi Hebbalkar) ಅವರು ವಸ್ತುಶಃ ಗದ್ಗಗಿತರಾದರು.   ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಮ್ಮ ಸ್ವಕ್ಷೇತ್ರದಲ್ಲಿ …

Read More »

ಮಾರ್ಚ್‌ 10ರೊಳಗೆ ಕಾಂಗ್ರೆಸ್‌ ಮೊದಲ ಪಟ್ಟಿ; ಯಾರಿಗೆಲ್ಲ ಟಿಕೆಟ್‌?ಉತ್ತರ ಕನ್ನಡ – ಅಂಜಲಿ ನಿಂಬಾಳ್ಕರ್

ಬೆಂಗಳೂರು: ಭಾರತೀಯ ಜನತಾ ಪಕ್ಷ ಲೋಕಸಭಾ ಚುನಾವಣೆಯಲ್ಲಿ (Parliament Election 2024) ಸ್ಪರ್ಧಿಸಲಿರುವ 195 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು (BJP Candidates first list) ಶನಿವಾರ ಬಿಡುಗಡೆ ಮಾಡಿದೆಯಾದರೂ ಅದರಲ್ಲಿ ಕರ್ನಾಟಕದ ಒಂದೇ ಒಂದು ಕ್ಷೇತ್ರವೂ ಇಲ್ಲ. ಇತ್ತ ಕಾಂಗ್ರೆಸ್‌ ಪಕ್ಷ ಕೂಡಾ ಪಟ್ಟಿ ಬಿಡುಗಡೆಗೆ ಶತಪ್ರಯತ್ನಗಳನ್ನು ನಡೆಸುತ್ತಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗಿಂತ ಮೊದಲು ಟಿಕೆಟ್‌ ಬಿಡುಗಡೆ ಮಾಡಿ ಮುನ್ನಡೆ ಸಾಧಿಸಿದ್ದ ಕಾಂಗ್ರೆಸ್‌ ಈ ಬಾರಿಯೂ ಅದೇ ಪ್ರಯತ್ನದಲ್ಲಿದೆ. ಮೂಲಗಳ …

Read More »

ಶ್ರೀರಾಮ ಬಿಜೆಪಿಯವರ ಆಸ್ತಿಯಲ್ಲ; ಪರಮೇಶ್ವರ್

ಬೆಂಗಳೂರು: ಶ್ರೀರಾಮ ಎಲ್ಲರಿಗೂ ಶ್ರೀರಾಮ. ಬಿಜೆಪಿಯವರು ಎಲ್ಲದರೂ ಖರೀದಿಸಿದ್ದಾರೆಯೇ. ಶ್ರೀರಾಮ ಈ ದೇಶದ ಸಂಸ್ಕೃತಿ, ಪರಂಪರೆಯ ಆಸ್ತಿ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ, ಬಿಜೆಪಿ ವಿರುದ್ಧ ಗುಡುಗಿದ್ದಾರೆ. ಭಾನುವಾರ ಸದಾಶಿವನಗರದ ನಿವಾಸದ ಬಳಿ ಸುದ್ದಿಗಾರರ ಜತೆ ಮಾತನಾಡಿದ ಡಾ. ಜಿ. ಪರಮೇಶ್ವರ ಅವರು, ಆಯೋಧ್ಯದಲ್ಲಿ ಶ್ರೀರಾಮ ಮಂದಿರ ಉದ್ಘಾಟನೆ ಬಳಿಕ ರಾಮನ ಹೆಸರು ಟಾರ್ಗೆಟ್ ಆಗುತ್ತಿದೆ ಎಂದು ಬಿಜೆಪಿಯವರ ಆರೋಪದ ಕುರಿತು ಪ್ರತಿಕ್ರಿಯಿಸಿದರು. ನಾವು ಪದೇ ಪದೆ …

Read More »