Breaking News

Daily Archives: ಏಪ್ರಿಲ್ 2, 2024

ದೇವೇಗೌಡ, ಕುಮಾರಸ್ವಾಮಿ ಕಣ್ಣೀರಿಗೆ ಮರುಳಾಗಬೇಡಿ: ಸಿಎಂ

ಮೈಸೂರು : ಮೈಸೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಜನರ ಧ್ವನಿ, ಸಂವಿಧಾನ ರಕ್ಷಣೆಯ ಧ್ವನಿ, ರಾಜ್ಯದ ಪರವಾದ ಧ್ವನಿ, ಸಾಮಾಜಿಕ ನ್ಯಾಯದ ಧ್ವನಿ, ಇವರು ನಮ್ಮ-ನಿಮ್ಮಲ್ಲರ ಧ್ವನಿಯಾಗಿ ಪಾರ್ಲಿಮೆಂಟಿಗೆ ಹೋಗ್ತಾರೆ. ಒಗ್ಗಟ್ಟಾಗಿ ಕೆಲಸ ಮಾಡಿ ಗೆಲ್ಲಿಸಿ ಕಳಿಸೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ. ಚಾಮರಾಜ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು.‌ ನಮ್ಮ ಅಭ್ಯರ್ಥಿ ಎಂ.ಲಕ್ಷ್ಮಣ್ ಸಾಮಾನ್ಯ ಒಕ್ಕಲಿಗ ಕುಟುಂಬದಿಂದ …

Read More »

ನನಗೆ ಆಗದವರು ದ್ವೇಷದಿಂದ ನನ್ನ ಹೇಳಿಕೆಯನ್ನು ತಿರುಚಿದ್ದಾರೆ: ಶಿವಶಂಕರಪ್ಪ

ದಾವಣಗೆರೆ : ಸಂಸದ ಜಿಎಂ ಸಿದ್ದೇಶ್ವರ ಅವರ ಪತ್ನಿ ಗಾಯತ್ರಿ ಸಿದ್ದೇಶ್ವರ ಅಡುಗೆ ಮಾಡಲಿಕ್ಕೆ ಲಾಯಕ್ಕು ಎಂದು ಹೇಳಿಕೆ ನೀಡಿದ್ದ ಕಾಂಗ್ರೆಸ್ ಶಾಸಕ ಶಾಮನವರು ಶಿವಶಂಕರಪ್ಪ ಅವರು ಇದೀಗ ಚುನಾವಣೆ ಆಯೋಗಕ್ಕೆ ಪತ್ರ ಬರೆಯುವ ಮೂಲಕ ಸ್ಪಷ್ಟನೆ ನೀಡಿದ್ದು, ನನಗೆ ಆಗದವರು ದ್ವೇಷದಿಂದ ಹೇಳಿಕೆಗಳನ್ನು ತಿರುವು ಸೃಷ್ಟಿಸಿದ್ದಾರೆ ಎಂದು ಪತ್ರದಲ್ಲಿ ಆರೋಪಿಸಿದ್ದಾರೆ ಎಂದು ತಿಳಿದುಬಂದಿದೆ.

Read More »

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ನಿಶ್ಚಿತ – ಜಿ.ಟಿ.ಡಿ.

ರಾಜ್ಯದಲ್ಲಿ ಕೆಲವೇ ದಿನಗಳಲ್ಲಿ ಮುಖ್ಯಮಂತ್ರಿಗಳ ಬದಲಾವಣೆ ಆಗಲಿದೆ ಎಂಬುದು ಜಗಜ್ಜಾಹೀರಾಗಿರುವ ವಿಚಾರ. ಇದರಲ್ಲಿ ಎರಡು ಅನುಮಾನವಿಲ್ಲ. ಹೀಗಾಗಿಯೇ ಸಿಎಂ ಸಿದ್ಧರಾಮಯ್ಯ ಆತಂಕಕ್ಕೊಳಗಾಗಿದ್ದಾರೆ‌. ಪ್ರಚಾರದ ವೇದಿಕೆಯಲ್ಲಿ ನನಗೆ ವರುಣಾ ವಿಧಾನಸಭಾ ಕ್ಷೇತ್ರದಿಂದ 60 ಸಾವಿರ ಲೀಡ್ ಕೊಡಬೇಕು. ಆಗ ಮಾತ್ರ ನಾನು ಗಟ್ಟಿಯಾಗಿ ನಿಲ್ಲಬಹುದು‌ ಎಂದಿದ್ದಾರೆ ಎಂದು ಜೆಡಿಎಸ್‌‌ನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡ ತಿಳಿಸಿದ್ದಾರೆ.

Read More »

ಬಾಲ್ಯವಿವಾಹದಿಂದ ಐವರು ಬಾಲಕಿಯರ ರಕ್ಷಣೆ

ಕೊಪ್ಪಳ: ತಾಲ್ಲೂಕಿನ ಜಿನ್ನಾಪುರ ತಾಂಡದ ದೇವಸ್ಥಾನದಲ್ಲಿ ನಿಗದಿಯಾಗಿದ್ದ ಐದು ಜನ ಬಾಲಕಿಯರ ಬಾಲ್ಯ ವಿವಾಹವನ್ನು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ತಡೆದಿದ್ದಾರೆ. ಅವರ ಪೋಷಣೆ ಮತ್ತು ರಕ್ಷಣೆಗಾಗಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ಹಾಜರುಪಡಿಸಲಾಗಿದೆ. ಏ. 4ರಂದು ಜಿನ್ನಾಪುರ ತಾಂಡಾದಲ್ಲಿ ಮರಿಯಮ್ಮದೇವಿ ದೇವಸ್ಥಾನದ ಜಾತ್ರಾ ಮಹೋತ್ಸವದಲ್ಲಿ ವಿವಾಹ ನಿಶ್ಚಯಿಸಲಾಗಿತ್ತು. ಈ ಬಗ್ಗೆ ಮಕ್ಕಳ ಸಹಾಯವಾಣಿ 1098/112 ಕರೆ ಬಂದ ಹಿನ್ನೆಲೆಯಲ್ಲಿ ಜಿನ್ನಾಪುರ ತಾಂಡಾಕ್ಕೆ ಅಂಗನವಾಡಿ ಮೇಲ್ವಿಚಾರಕಿ ಮಂಜುಳಾ, ಜಿಲ್ಲಾ …

Read More »

ಸುಳ್ಳುಗಳ ‘ಎಲೆಕ್ಟ್ರೊಲ್ ಬಾಂಡ್’ ಸರದಾರ ಅಮಿತ್ ಷಾ

ಬೆಂಗಳೂರು : ಸುಳ್ಳುಗಳ ಸರದಾರ ಎಲೆಕ್ಟ್ರೊಲ್ ಬಾಂಡ್ ಸರದಾರ ಅಮಿತ್ ಷಾ. ಕೇಂದ್ರ ಸಚಿವ ಅಮಿತ್ ಶಾ ಹಸಿ ಸುಳ್ಳುಗಳನ್ನು ಹರಿಬಿಟ್ಟಿದ್ದಾರೆ ಎಂದು ಕೆಪಿಸಿಸಿ ಕಚೇರಿಯಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸಿದರು. ಅಮಿತ್ ಶಾ ಸೂರ್ಯನಿಗೆ ಟಾರ್ಚ್ ಹಿಡಿಯುವ ಕೆಲಸ ಮಾಡಿದ್ದಾರೆ.

Read More »

ರೈತರಿಗೆ ಕರೆಂಟ್ ಬರೆ

ಅಥಣಿ : ಕೃಷ್ಣಾ ನದಿ ಪಾತ್ರದಲ್ಲಿ ಸಧ್ಯ ರೈತರು ಸಂಕಷ್ಟ ಪಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಬಿಸಿಲಿನಿಂದ ಕಬ್ಬು ಬೆಳೆ ರಕ್ಷಿಸುವ ಅವಸರದಲ್ಲಿದ್ದ ರೈತರಿಗೆ ಈಗ ಕೇವಲ ಒಂದು ಗಂಟೆ ವಿದ್ಯುತ್ ನೀಡುವ ಮೂಲಕ ಜಿಲ್ಲಾಡಳಿತ ಮತ್ತೊಂದು ಬರೆ ನೀಡಿದೆ. ಹೌದು ಕಳೆದ ನಾಲ್ಕು ದಿನಗಳಿಂದ ಕೃಷ್ಣಾ ನದಿ ಪಾತ್ರದಲ್ಲಿ ಕೇವಲ ಒಂದು ಗಂಟೆ ಮಾತ್ರ ವಿದ್ಯುತ್ ನೀಡಲಾಗುತ್ತಿದೆ. ಮುಂದೆ ಕುಡಿಯುವ ನೀರಿನ ಸಮಸ್ಯೆ ಕಾರಣ ನೀಡಿ ಸಧ್ಯ ವಿದ್ಯುತ್ ಕಡಿತ …

Read More »

ಧುಪದಾಳ ಜಲಾಶಯಕ್ಕೆ ಸಚಿವ ಸತೀಶ ಜಾರಕಿಹೊಳಿ ಭೇಟಿ

ಬೆಳಗಾವಿ: ಗೋಕಾಕ ತಾಲೂಕಿನ ಧುಪದಾಳ ಗ್ರಾಮದಲ್ಲಿ ಘಟಪ್ರಭಾ ಹಾಗೂ ಹಿರಣ್ಯಕೇಶಿ‌ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಜಲಾಶಯಕ್ಕೆ ಸಚಿವ ಸತೀಶ ಜಾರಕಿಹೊಳಿ ಭೇಟಿ ನೀಡಿ ನೀರಿನ‌ ಸಂಗ್ರಹದ ಸಾಮರ್ಥ್ಯವನ್ನು ಪರಿಶೀಲಿಸಿದರು.  ಇದೇ ವೇಳೆ  ನೀರಿನ ಸಂಗ್ರಹ ಹೆಚ್ಚಿಗೆ ಮಾಡಲು ಯೋಜನೆ ರೂಪಿಸಲು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಸಚಿವರು ಶೀಘ್ರದಲ್ಲೇ ಕಾಮಗಾರಿ ಪ್ರಾರಂಭಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ವೇಳೆ ಮಾತನಾಡಿದ ಸಚಿವ ಸತೀಶ ಜಾರಕಿಹೊಳಿ ಅವರು, ಈ  ಜಲಾಶಯ   ಸಾಮರ್ಥ್ಯವನ್ನು ಹೆಚ್ಚಿಸುವುದರಿಂದ …

Read More »

ಪ್ರಿಯಾಂಕಾ ಪರ ಹೆಬ್ಬಾಳ್ಕರ್ ಭರ್ಜರಿ ಪ್ರಚಾರ

ರಾಯಭಾಗ : ಜಾರಕಿಹೊಳಿ ಕುಟುಂಬಕ್ಕೆ ರಾಜಕಾರಣ ಹೊಸದಲ್ಲ. ಪ್ರಿಯಾಂಕಾ ಜಾರಕಿಹೊಳಿ ಮುಗ್ದ ಹೆಣ್ಣುಮಗಳು, ಆದರೆ ತುಂಬಾ ಬುದ್ದಿವಂತೆ. ಈ ಯುವ ನಾಯಕಿಯನ್ನು ಗೆಲ್ಲಿಸುವ ಮೂಲಕ ಚಿಕ್ಕೋಡಿ ಕ್ಷೇತ್ರದ ಅಭಿವೃದ್ಧಿಗೆ ಸಹಕರಿಸಿ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಚಿಕ್ಕೋಡಿ ಲೋಕಸಭಾ ವ್ಯಾಪ್ತಿಯ ರಾಯಭಾಗದಲ್ಲಿ ಸೋಮವಾರ ಪ್ರಿಯಾಂಕಾ  ಜಾರಕಿಹೊಳಿ ಪರ ಪ್ರಚಾರದ ಸಭೆಯಲ್ಲಿ ಮಾತನಾಡಿದ ಸಚಿವರು,  ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಬಡವರ ಹಸಿವನ್ನ …

Read More »

Dr. C.N. Manjunath: ಬಾವಾನನ್ನು ಗೆಲ್ಲಿಸಲು HDK ಪಣ

ಬೆಂಗಳೂರು: ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಬೆಂಗಳೂರು ಗ್ರಾಮಾಂತರ (Bengaluru Rural) ಲೋಕಸಭಾ ಕ್ಷೇತ್ರವನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದು , ಈ ಬಾರಿ ಇಲ್ಲಿ ಡಾ. ಮಂಜುನಾಥ್‌ (Dr. Manjunath) ಅವರನ್ನು ಗೆಲ್ಲಿಸಲೇಬೇಕೆಂದು ಪಣ ತೊಟ್ಟಿದ್ದಾರೆ. ಹೌದು. 2019ರ ಚುನಾವಣೆಯಲ್ಲಿ ಡಿಕೆ ಸುರೇಶ್‌ (DK Suresh) ಒಬ್ಬರೇ ಕರ್ನಾಟಕದಿಂದ ಕಾಂಗ್ರೆಸ್‌ (Congress) ಸಂಸದರಾಗಿ ಆಯ್ಕೆ ಆಗಿದ್ದರು. ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ನಡೆದ ಪರಿಣಾಮ ಡಿಕೆ ಸುರೇಶ್‌ 2.06 ಲಕ್ಷ ಮತಗಳಿಂದ ಬಿಜೆಪಿ …

Read More »

ಗೀತಾ ಆಯ್ಕೆಯಲ್ಲಿ ಒಳ ಒಪ್ಪಂದ ರಾಜಕಾರಣ ನಡೆದಿಲ್ಲ: ಭಂಡಾರಿ ಸ್ಪಷ್ಟನೆ

ಶಿವಮೊಗ್ಗ: ‘ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ನಿಂದ ಸ್ಪರ್ಧಿಸಿರುವ ಗೀತಾ ಶಿವರಾಜಕುಮಾರ್ ಡಮ್ಮಿ ಅಭ್ಯರ್ಥಿ ಅಲ್ಲ, ಅವರನ್ನು ಆಯ್ಕೆ ಮಾಡುವಲ್ಲಿ ಯಾವುದೇ ಒಳ ಒಪ್ಪಂದ ರಾಜಕಾರಣ ಕಾಂಗ್ರೆಸ್ ಮಾಡಿಲ್ಲ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷರೂ ಆದ ಶಿವಮೊಗ್ಗ ಕ್ಷೇತ್ರದ ಚುನಾವಣಾ ಉಸ್ತುವಾರಿ ಮಂಜುನಾಥ ಭಂಡಾರಿ ಸ್ಪಷ್ಟಪಡಿಸಿದರು. ನಗರದಲ್ಲಿ ಸೋಮವಾರ ಸುದ್ದಿ ಗೋಷ್ಟಿಯಲ್ಲಿ ಮಾತನಾಡಿದ ಮಂಜುನಾಥ ಭಂಡಾರಿ, ‘2014 ರ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ನಾನು ಕಾಂಗ್ರೆಸ್ ಅಭ್ಯರ್ಥಿಯಾಗಿದ್ದೆನು. ಗೀತಾ ಶಿವರಾಜಕುಮಾರ್ ಜೆಡಿಎಸ್ ಅಭ್ಯರ್ಥಿಯಾಗಿದ್ದರು. ಆಗ …

Read More »