Breaking News

Daily Archives: ಏಪ್ರಿಲ್ 22, 2024

ನೇಹಾ ಹತ್ಯೆ: ಸಿಐಡಿ ತನಿಖೆ ಆರಂಭ

ಬೆಂಗಳೂರು: ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ (23) ಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಸಿಐಡಿಯ ಎಸ್ಪಿ ವೆಂಕಟೇಶ್ ನೇತೃತ್ವದಲ್ಲಿ ತನಿಖೆ ಆರಂಭವಾಗಿದೆ. ಹುಬ್ಬಳ್ಳಿಯ ಬಿವಿಬಿ ಕಾಲೇಜು ಕ್ಯಾಂಪಸ್‌ನಲ್ಲಿ ನೇಹಾ ಹಿರೇಮಠ ಅವರನ್ನು ಏಪ್ರಿಲ್ 18ರಂದು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಆರೋಪಿ ಫಯಾಜ್‌ ಬಾಬಾಸಾಹೇಬ ಖೊಂಡಾನಾಯಕ್‌ನನ್ನು ಹುಬ್ಬಳ್ಳಿ ವಿದ್ಯಾನಗರ ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಇದೀಗ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ. ‘ವಿದ್ಯಾರ್ಥಿನಿ …

Read More »

ಉಗರಖೋಡ ಪಂಚಾಯ್ತಿಯಲ್ಲಿ ಅಧ್ಯಕ್ಷ- ಸದಸ್ಯನ ಹೊಡೆದಾಟ!

ಚನ್ನಮ್ಮನ ಕಿತ್ತೂರು: ಗ್ರಾಮ ಪಂಚಾಯ್ತಿ ವಾರ್ಡಿನ ಜನರಿಗೆ ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಸದಸ್ಯನೊಬ್ಬ ಕೊರೆಸಿದ ಕೊಳವೆ ಬಾವಿ ಬಿಲ್ ಮಂಜೂರು ಮಾಡುವಂತೆ ನಡೆದ ಮಾತಿನ ನಡುವೆ ನಡೆದ ಚಕಮಕಿಯು ಪಂಚಾಯ್ತಿ ಅಧ್ಯಕ್ಷ ಮತ್ತು ಸದಸ್ಯನ ನಡುವೆ ಹೊಡೆದಾಟದೊಂದಿಗೆ ಮುಕ್ತಾಯ ಕಂಡಿದೆ. ತಾಲ್ಲೂಕಿನ ಉಗರಖೋಡ ಗ್ರಾಮ ಪಂಚಾಯ್ತಿ ವಾರ್ಡಿನಲ್ಲಿ ಸದಸ್ಯ ನಿಂಗರಾಜ ಅಂಬಡಗಟ್ಟಿ ಎಂಬುವರು ಕೊಳವೆ ಬಾವಿ ಕೊರೆಸಿದ್ದರು. ಅದರ ಬಿಲ್ ಮಂಜೂರು ಮಾಡುವಂತೆ ಒತ್ತಾಯಿಸುತ್ತಿದ್ದರು. ಪಿಡಿಪ ಎಲ್ಲರ ಸದಸ್ಯರ ಸಭೆ …

Read More »

ಹೃದಯಾಘಾತ: ನರೇಗಾ ಕಾರ್ಮಿಕ ಸಾವು

ಬೈಲಹೊಂಗಲ: ತಾಲ್ಲೂಕಿನ ವಕ್ಕುಂದ ಗ್ರಾಮದಲ್ಲಿ ನರೇಗಾ ಕೆಲಸ ಮಾಡುತ್ತಿದ್ದ ಕಾರ್ಮಿಕ ಸೋಮವಾರ ತೀವ್ರ ಹೃದಯಾಘಾತದಿಂದ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮಲ್ಲೇಶ ಲಕ್ಷ್ಮಣ ಸಂಬರಗಿ (55) ಮೃತರು. ನರೇಗಾ ಯೋಜನೆಯಡಿ ಹಳ್ಳ ಹೂಳೆತ್ತುವ ಕಾಮಗಾರಿ ನಡೆದಿತ್ತು. ಎಂದಿನಂತೆ ಸೋಮವಾರ ಕೂಡ ಮಣ್ಣು ಅಗೆಯುವ ಕೆಲಸ ಮಾಡುತ್ತಿದ್ದರು. ಇದ್ದಕ್ಕಿದ್ದಂತೆ ಕುಸಿದು ಬಿದ್ದರು. ಜತೆಯಲ್ಲಿದ್ದ ಕಾರ್ಮಿಕರು ಅವರ ಎದೆ ತಿಕ್ಕಿ, ಗಾಳಿಬೀಸಿ, ನೀರು ಕುಡಿಸಿ ಉಪಚರಿಸಲು ಯತ್ನಿಸಿದರು. ಅಷ್ಟರೊಳಗೆ ಅವರು ಉಸಿರು ನಿಲ್ಲಿಸಿದ್ದರು. ವೈದ್ಯರು ಸ್ಥಳಕ್ಕೆ ಬಂದು …

Read More »

ಬೆಳಗಾವಿ | ನೇಹಾ ಕೊಲೆ ಖಂಡಿಸಿ ಪ್ರತಿಭಟನೆ, ಲವ್ ಜಿಹಾದ್‌ ನಿಷೇಧ ಕಾನೂನಿಗೆ ಆಗ್ರಹ

ಬೆಳಗಾವಿ: ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಖಂಡಿಸಿ ಇಲ್ಲಿನ ಜಾಗ್ರತ ಮಹಿಳಾ ವೇದಿಕೆ ನೇತೃತ್ವದಲ್ಲಿ ನಗರದಲ್ಲಿ ಸೋಮವಾರ ಬೃಹತ್‌ ಪ್ರತಿಭಟನೆ ನಡೆಯಿತು. ನೇತೃತ್ವ ವಹಿಸಿದ್ದ ಮಹಿಳಾ ಹೋರಾಟಗಾರರು, ಮಠಾಧೀಶರು ಆರೋಪಿ ಫಯಾಜ್‌ಗೆ ಗಲ್ಲು ಶಿಕ್ಷೆ ವಿಧಿಸಬೇಕು, ಲವ್‌ ಜಿಹಾದ್‌ ಪ್ರತಿಬಂಧಕ ಕಾನೂನು ರೂಪಿಸಬೇಕು ಎಂದು ಆಗ್ರಹಿಸಿದರು. ಇಲ್ಲಿನ ಮಾರುತಿ ಗಲ್ಲಿಯ ಮಾರುತಿ ಮಂದಿರದಿಂದ ಪ್ರತಿಭಟನಾ ಮೆರವಣಿಗೆ ಆರಂಭವಾಯಿತು. ರಾಮದೇವ ಗಲ್ಲಿ, ಶನಿವಾರ ಕೂಟ್‌ನಿಂದ ಕಾಕತಿವೇಸ್‌ನಲ್ಲಿ ಸಾಗಿದ ಪ್ರತಿಭಟನಾಕಾರರು, ರಾಣಿ ಚನ್ನಮ್ಮ ವೃತ್ತದಲ್ಲಿ …

Read More »

ಬರಿದಾದ ಕೃಷ್ಣೆ ಒಡಲು: ನೀರಿನಿಂದ ಹೊರಬಿದ್ದ ಮೀನುಗಾರರ ಬದುಕು

ಬರಿದಾದ ಕೃಷ್ಣೆ ಒಡಲು: ನೀರಿನಿಂದ ಹೊರಬಿದ್ದ ಮೀನುಗಾರರ ಬದುಕು ಚಿಕ್ಕೋಡಿ: ಭೀಕರ ಬರದಿಂದ ಕೃಷ್ಣಾ ಹಾಗೂ ಅದರ ಉಪನದಿಗಳಲ್ಲಿ ನೀರಿನ ಪ್ರಮಾಣ ಕುಸಿದಿದೆ. ನದಿ ದಡದಲ್ಲಿ ಎಲ್ಲಿ ನೋಡಿದರೂ ಸತ್ತ ಮೀನುಗಳ ರಾಶಿ ಕಾಣುತ್ತದೆ. ಬರದಿಂದ ಜಲಚರಗಳ ಮಾರಣಹೋಮವೇ ಆಗಿದೆ. ಮೀನುಗಾರಿಕೆ ನೆಚ್ಚಿಕೊಂಡ ನದಿ ತೀರದ ಗ್ರಾಮಸ್ಥರ ಬದುಕಿಗೂ ಬರೆ ಬಿದ್ದಿದೆ. ಇನ್ನೊಂದೆಡೆ ಮೀನಿನ ಆಹಾರ ‍ಪ್ರಿಯರಿಗೆ ಕೊರತೆ ಉಂಟಾಗಿದೆ. ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯಲ್ಲಿ ಹರಿಯುವ ಕೃಷ್ಣಾ ಮಳೆಗಾಲದಲ್ಲಿ ಸಮುದ್ರದಂತೆ …

Read More »

ಬಿಸಿಯೂಟ ಸೇವನೆಗೆ ಮಕ್ಕಳ ‘ಬರ’

ಬೆಳಗಾವಿ: ಸಪ್ತ ನದಿಗಳು ಹರಿಯುವ ಬೆಳಗಾವಿ ಜಿಲ್ಲೆ ಈ ಬಾರಿ ಬರದಿಂದ ತತ್ತರಿಸಿದೆ. 15 ತಾಲ್ಲೂಕುಗಳನ್ನು ‘ಬರಪೀಡಿತ’ವೆಂದು ಘೋಷಿಸಿದ್ದು, ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಬೇಸಿಗೆ ರಜೆಯಲ್ಲೂ ಬಿಸಿಯೂಟ ನೀಡಲಾಗುತ್ತಿದೆ. ಆದರೆ, ಸೇವನೆಗೆ ನಿರೀಕ್ಷೆಯಂತೆ ಮಕ್ಕಳೇ ಬರುತ್ತಿಲ್ಲ. ಬರಪೀಡಿತ ತಾಲ್ಲೂಕುಗಳಲ್ಲಿ ಮಕ್ಕಳಿಗೆ ಪೌಷ್ಟಿಕಾಂಶ ಕೊರತೆ ಕಾಡದಿರಲೆಂದು ಪ್ರಧಾನಮಂತ್ರಿ ಪೋಷಣ್ ಶಕ್ತಿ-‌ನಿರ್ಮಾಣ ಯೋಜನೆಯಡಿ ಬೇಸಿಗೆ ರಜೆಯಲ್ಲೂ(ಏ.11ರಿಂದ ಮೇ 28ರವರೆಗೆ 41 ದಿನ) ಬಿಸಿಯೂಟ ಕೊಡಲಾಗುತ್ತಿದೆ. 1ರಿಂದ 10ನೇ ತರಗತಿಯಲ್ಲಿ ಓದುತ್ತಿರುವ 3,17,997 ಮಕ್ಕಳು …

Read More »

ನೇಹಾ ಹಾಗೂ ಫಯಾಜ್ ಪ್ರೀತಿ ಮಾಡಿದ್ದು ಸತ್ಯ.! ಸಚಿವ ಆರ್.ಬಿ. ತಿಮ್ಮಾಪುರ

ಬಾಗಲಕೋಟೆ: ನೇಹಾ ಹಿರೇಮಠ ಹತ್ಯೆ ಪ್ರಕರಣ ಇಡೀ ರಾಜ್ಯವನ್ನು ಬೆಚ್ಚಿಬೀಳಿಸಿದ್ದು, ಸದ್ಯ ಈ ಪ್ರಕರಣ ಇದೀಗ ರಾಜಕೀಯ ತಿರುವು ಪಡೆದುಕೊಳ್ಳುತ್ತಿದೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬಾಗಲಕೋಟೆಯಲ್ಲಿ ಸಚಿವ ಆರ್.ಬಿ. ತಿಮ್ಮಾಪುರ ಮಾತನಾಡಿದ್ದು, ಇದೇ ರೀತಿ ನಮ್ಮ ಸಹೋದರಿಗೆ ಆದ್ರೆ ನಾವು ಸುಮ್ಮನಿರ್ತೀವಾ? ಅವನು ಯಾವನೇ ಆಗಿರಲಿ ಶಿಕ್ಷೆಯಾಗಬೇಕು ಎಂದರು. ಮಾತು ಮುಂದುವರಿಸಿದ ಸಚಿವರು, ನಮ್ಮ ನಾಡಿನಲ್ಲಿ ಕಾನೂನಿದೆ. ಇವರು ಅಧಿಕಾರದಲ್ಲಿ ಇದ್ದಾಗ ಇಂತ ಎಷ್ಟೋ ಪ್ರಕರಣ ಆಗಿವೆ. ಗುಜರಾತ್​ನಲ್ಲಿ ಒಂದೇ …

Read More »

ಕಾಂಗ್ರೆಸ್‌ ಗೆದ್ದರೆ ನಿಮ್ಮ ಮಂಗಳಸೂತ್ರ ಕಿತ್ತು ಮುಸ್ಲಿಮರಿಗೆ ಕೊಡುತ್ತೆ:ಮೋದಿ

ಜೈಪುರ (ಏ.22): ‘ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಸಂಪತ್ತಿನ ಸಮಾನ ಹಂಚಿಕೆ ಮಾಡಲಿದೆ’ ಎಂಬ ಆ ಪಕ್ಷದ ಭರವಸೆ ಹಾಗೂ ಅದರ ನಾಯಕ ರಾಹುಲ್‌ ಗಾಂಧಿ ಏ.7ರಂದು ನೀಡಿದ್ದ ಹೇಳಿಕೆಯನ್ನು ಪ್ರಧಾನಿ ನರೇಂದ್ರ ಮೋದಿ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ. ‘ಶ್ರಮದಿಂದ ಗಳಿಸಿದ ಸಂಪತ್ತನ್ನು ಕಿತ್ತುಕೊಳ್ಳುವ ಅಧಿಕಾರ ಯಾರಿಗಾದರೂ ಇದೆಯೇ? ಆದರೂ ಇದನ್ನು ಕಾಂಗ್ರೆಸ್‌ ಮಾಡಲಿದೆ. ತಾಯಂದಿರು ಶ್ರಮದಿಂದ ಗಳಿಸಿ ಮಾಡಿಸಿಕೊಂಡಿರುವ ಚಿನ್ನದ ತಾಳಿ ಕಿತ್ತುಕೊಳ್ಳಲಾಗುತ್ತದೆ ಹಾಗೂ ಅದನ್ನು ‘ದೇಶದ ಸಂಪತ್ತಿನ ಮೇಲೆ ಮೊದಲ …

Read More »

ನೇಹಾ ಕೊಲೆ ಆರೋಪಿ ಬಂಧಿಸಿದ ತಂಡಕ್ಕೆ ಪೊಲೀಸ್ ಆಯುಕ್ತರಿಂದ ಸನ್ಮಾನ

ಹುಬ್ಬಳ್ಳಿ : ಇತ್ತೀಚೆಗೆ ನಡೆದ 23 ವರ್ಷದ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ್ ಕೊಲೆ ಪ್ರಕರಣದ ಆರೋಪಿಗಳನ್ನು ಯಶಸ್ವಿಯಾಗಿ ಬಂಧಿಸಿದ ಪೊಲೀಸ್ ತಂಡದ ಕಾರ್ಯವನ್ನು ಧಾರವಾಡ ನಗರ ಪೊಲೀಸ್ ಕಮಿಷನರ್ ರೇಣುಕಾ ಸುಕುಮಾರ್ ಶ್ಲಾಘಿಸಿದ್ದಾರೆ. ಕೊಲೆ ನಡೆದ ಒಂದು ಗಂಟೆಯೊಳಗೆ ಆರೋಪಿ ಫಯಾಜ್ ನನ್ನು ಬಂಧಿಸಿದ ತಂಡದ ಎಲ್ಲಾ ಪೊಲೀಸರಿಗೂ ಶ್ಲಾಘನಾ ಪತ್ರಗಳ ಜೊತೆಗೆ 25,000 ರೂ.ನಗದು ಬಹುಮಾನ ನೀಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಏಪ್ರಿಲ್ 18 ರಂದು ಬಿವಿಬಿ ಕಾಲೇಜು ಕ್ಯಾಂಪಸ್‌ನಲ್ಲಿ …

Read More »

ನೀತಿ ಸಂಹಿತೆ ಉಲ್ಲಂಘನೆ; 406.73 ಕೋಟಿ ರೂ. ಮೌಲ್ಯದ ವಸ್ತು ವಶ

ಬೆಂಗಳೂರು: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯನ್ನು ಗಂಭೀರವಾಗಿ ಪರಿಗಣಿಸಿರುವ ಚುನಾವಣಾ ಆಯೋಗ ಭಾನುವಾರ 3.27 ಕೋಟಿ ರೂ.ನಗದು ಸೇರಿದಂತೆ ಈವರೆಗೆ ಒಟ್ಟು 406.73 ಕೋಟಿ ರೂ. ವಸ್ತುಗಳನ್ನು ವಶಕ್ಕೆ ಪಡೆದಿದೆ. ಚುನಾವಣಾ ನೀತಿ ಸಂಹಿತೆ ಜಾರಿಯಾದಂದಿನಿಂದ ಈವರೆಗೆ 78.75 ಕೋಟಿ ರೂ.ನಗದು, 177.39 ಕೋಟಿ ಮೌಲ್ಯದ ಮದ್ಯ, 11.24 ಕೊಟಿ ಬೆಲೆಯ ಡ್ರಗ್ಸ್, 57.67 ಕೋಟಿ ಬೆಲೆಯ ಚಿನ್ನ, 1.18 ಕೋಟಿ ಮೌಲ್ಯದ ಬೆಳ್ಳಿ, 0.09 ಕೋಟಿ ರೂ. ಬೆಲೆಯ ವಜ್ರ, …

Read More »