Breaking News

Daily Archives: ಏಪ್ರಿಲ್ 23, 2024

ಏಪ್ರಿಲ್‌ 26ರಂದು ಮೈಸೂರು ಅರಮನೆ ವೀಕ್ಷಣೆಗೆ ಪ್ಲ್ಯಾನ್‌ ಮಾಡಿದ್ದೀರಾ? ಮತ ಹಾಕದೇ ಬಂದರೆ ನೋ ಎಂಟ್ರಿ!

2024: ಮತ ಹಾಕದೆ ಮೈಸೂರು ಅರಮನೆ ನೋಡಲು ಬಂದವರಿಗೆ ನೋ ಎಂಟ್ರಿ ಬೋರ್ಡ್‌ ಅನ್ನು ನೇತುಹಾಕಲಾಗುವುದು. ಏ. 26ರ ಮತದಾನದ ದಿನಕ್ಕೆ ಮಾತ್ರ ಈ ನಿರ್ಬಂಧ ಅನ್ವಯವಾಗಲಿದೆ. 14 ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಮತದಾರರಿಗೆ ಇದು ಅನ್ವಯವಾಗಲಿದೆ. ಮತ ಹಾಕದೆ ಅರಮನೆ ನೋಡಲು ಬಂದರೆ ಪ್ರವೇಶ ನಿರಾಕರಿಸಲು ಚಿಂತನೆ ನಡೆಸಲಾಗಿದೆ.ಇಂದು ಸಂಜೆಯೊಳಗೆ ಅಧಿಕೃತ ಆದೇಶ ಹೊರಬೀಳಲಿದೆ ಎಂದು ಮೈಸೂರು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಹೇಳಿದ್ದಾರೆ.

Read More »

ಮತದಾನಕ್ಕೆ ಮೂರೇ ದಿನ ಬಾಕಿ: ಬೆಂಗಳೂರಿನಲ್ಲಿ ನಾಳೆ ಸಂಜೆಯಿಂದ ನಿಷೇಧಾಜ್ಞೆ

ಲೋಕಸಭಾ ಚುನಾವಣೆ ಮತದಾನಕ್ಕೆ ಮೂರೇ ದಿನ ಬಾಕಿ: ಬೆಂಗಳೂರಿನಲ್ಲಿ ನಾಳೆ ಸಂಜೆಯಿಂದ ನಿಷೇಧಾಜ್ಞೆ ಜಾರಿ ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮೊದಲ ಹಂತದ ಮತದಾನಕ್ಕೆ ಕೇವಲ ಮೂರು ದಿನ ಮಾತ್ರ ಬಾಕಿ ಇದ್ದು, ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಟ್ಟೆಚ್ಚರ ಕೈಗೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿ ನಡೆಸಿದ ಪೊಲೀಸ್ ಆಯುಕ್ತ ಬಿ.ದಯಾನಂದ್, ಸಿಲಿಕಾನ್ ಸಿಟಿಯಲ್ಲಿ ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ, ಬೆಂಗಳೂರು ಸೆಂಟ್ರಲ್ ಹಾಗೂ ಬೆಂಗಳೂರು ಗ್ರಾಮಾಂತರ ಒಟ್ಟು 5 ಲೋಕಸಭಾ …

Read More »

ಮಹಿಳೆ ಮೇಲೆ ಹಲ್ಲೆ ಪ್ರಕರಣ ; ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಸಿಹಿ ತಿನ್ನಿಸಿ ಸ್ವಾಗತ

ಬೆಳಗಾವಿ : ಕಳೆದ ಡಿಸೆಂಬರ್ ನಲ್ಲಿ ಬೆಳಗಾವಿ ಹೊರವಲಯದ ಹೊಸ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ್ದ ಪ್ರಕರಣದ ಆರೋಪಿಗಳು ಸಧ್ಯ ಹಿಂಡಲಗಾ ಕಾರಾಗೃಹದಿಂದ ಬಿಡುಗಡೆ ಆಗಿದ್ದು ಇವರಿಗೆ ಹೂ ಹಾರ ಹಾಕಿ ಅದ್ದೂರಿ ಸ್ವಾಗತ ನೀಡಿರುವ ವೀಡಿಯೋ ವೈರಲ್ ಆಗಿವೆ. ನಾಲ್ಕು ತಿಂಗಳ ನಂತರ ನಂತರ ಕೋರ್ಟ್ ಆರೋಪಿಗಳಿಗೆ ಜಾಮೀನು ನೀಡಿದೆ. 14 ಜನ ಆರೋಪಿಗಳು ಬೆಳಗಾವಿ ಹಿಂಡಲಗಾ ಕಾರಾಗೃಹದಲ್ಲಿ ಇಡಲಾಗಿತ್ತು. ಬೇಲ್ ಸಿಗುತ್ತಿದ್ದಂತೆ ಕಾರಾಗೃಹದಿಂದ ಹೊರಬಂದ …

Read More »

ಬಿಜೆಪಿ ಶಾಸಕ ಮಹಿಳೆ ಜೊತೆ ಇದ್ದ ಅಶ್ಲೀಲ ಪೋಟೋ ವೈರಲ್ ?

ಬೆಳಗಾವಿ : ರಾಜ್ಯದಲ್ಲಿ ಸಧ್ಯ ಚುನಾವಣಾ ಕಾವು ಜೋರಾಗಿದ್ದು ಈ ಹಂತದಲ್ಲೇ ಬಿಜೆಪಿ ಶಾಸಕ ಮಹಿಳೆ ಜೊತೆ ಇದ್ದ ಅಶ್ಲೀಲ ಪೋಟೋ ವೈರಲ್ ಆಗಿವೆ. ಸೋಶಿಯಲ್ ಮೀಡಿಯಾದಲ್ಲಿ ಈ ಅಶ್ಲೀಲ ಪೋಟೋ ಹರಿದಾಡುತ್ತಿವೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಸಂಜೀವ್ ಮಠಂದೂರು ಅವರು ಮಹಿಳೆ ಜೊತೆ ಇದ್ದ ಅಸಭ್ಯ ಪೋಟೋ ಸಧ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ಆದರೆ ಇದಕ್ಕೆ ಶಾಸಕರು ಪೊಲೀಸ್ ಠಾಣೆಯಲ್ಲಿ …

Read More »

ಕುಡಿಯುವ ನೀರಿಗಾಗಿ ಹಲ್ಲೆ ; ಐಪಿಎಸ್ ಅಧಿಕಾರಿ ಸೇರಿ 14 ಜನರ ಮೇಲೆ ಪ್ರಕರಣ ದಾಖಲು

ಬೆಳಗಾವಿ : ಅಥಣಿ ತಾಲೂಕಿನ ಐಗಳಿ ಗ್ರಾಮದಲ್ಲಿ ಸಾರ್ವಜನಿಕ ಬಾವಿಯ ಕುಡಿಯುವ ನೀರು ಬಳಕೆ ಮಾಡಿರುವ ಕುರಿತಂತೆ ಹಲ್ಲೆ, ಬೇದರಿಕೆಯ ಆರೋಪದ ಮೇಲೆ ಐಪಿಎಸ್ ಅಧಿಕಾರಿ ರವೀಂದ್ರ ಗಡಾದಿ ಸೇರಿದಂತೆ 14 ಜನರ ಮೇಲೆ ಐಗಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಐಗಳಿ ಗ್ರಾಮದ ಸೈದಪ್ಪಾ ಗಡಾದಿ ಕುಟುಂಬದವರು ಸಾರ್ವಜನಿಕರ ಬಾವಿಯ ನೀರನ್ನು ಬಳಕೆ ಮಾಡುತ್ತಿದ್ದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಐಪಿಎಸ್ ಅಧಿಕಾರಿ ರವೀಂದ್ರ ಗಡಾದಿ ಸೇರಿದಂತೆ 14 ಜನರು …

Read More »

ಕಾಂಗ್ರೆಸ್ ಆಡಳಿತದಲ್ಲಿ ಹನುಮಾನ್ ಚಾಲೀಸಾ ಕೇಳುವುದೂ ಅಪರಾಧವಾಗಿತ್ತು:ಮೋದಿ

ಜೈಪುರ(ಮಾ.23): ಲೋಕಸಭೆ ಚುನಾವಣೆಗೂ ಮುನ್ನ ನಾಯಕರು ದೇಶಾದ್ಯಂತ ನಿರಂತರವಾಗಿ ಪ್ರವಾಸ ಮಾಡುತ್ತಿದ್ದರೆ, ಪ್ರಧಾನಿ ಮೋದಿ ಅವರು ವಿವಿಧ ರಾಜ್ಯಗಳಲ್ಲಿ ನಿರಂತರವಾಗಿ ಪ್ರವಾಸ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಮಂಗಳವಾರ ರಾಜಸ್ಥಾನ ಪ್ರವಾಸಕ್ಕೆ ಆಗಮಿಸಿದ್ದಾರೆ. ರಾಜಸ್ಥಾನದಲ್ಲಿ ಎರಡನೇ ಹಂತದ ಚುನಾವಣೆಯ ಪ್ರಚಾರ ಏಪ್ರಿಲ್ 24 ರ ಬುಧವಾರ ಸಂಜೆ 6 ಗಂಟೆಗೆ ಕೊನೆಗೊಳ್ಳಲಿದೆ. ಈ ಕಾರಣಕ್ಕಾಗಿ ಪ್ರಧಾನಿ ಮೋದಿ ಇಂದು ರಾಜಸ್ಥಾನದ ಟೋಂಕ್-ಸವಾಯಿ ಮಾಧೋಪುರ ತಲುಪಿದ್ದಾರೆ. ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ …

Read More »

ಕಾಂಗ್ರೆಸ್‌ ಚೊಂಬು ವರ್ಸಸ್‌ ಬಿಜೆಪಿ ಚಿಪ್ಪು ಕದನ

ಬೆಂಗಳೂರು: ಕಾಂಗ್ರೆಸಿನ “ಚೊಂಬು’ ಜಾಹೀರಾತಿಗೆ ವಿರುದ್ಧವಾಗಿ ಬಿಜೆಪಿ ಸಾಮಾಜಿಕ ಜಾಲತಾಣದಲ್ಲಿ “ಖಾಲಿ ಚಿಪ್ಪು’ ಅಭಿಯಾನ ಪ್ರಾರಂಭಿಸಿದ್ದು, ಜಾಹೀರಾತು ಸಮರ ಮುಂದುವರಿಸಿದೆ. “ಕನ್ನಡಿಗರ ಕೈಗೆ ಚಿಪ್ಪು ನೀಡಿದ ಕಾಂಗ್ರೆಸ್‌’ ಎಂಬ ಶೀರ್ಷಿಕೆಯೊಂದಿಗೆ ರಾಜ್ಯದಲ್ಲಿ ಕಾಂಗ್ರೆಸ್‌ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಜನರಿಗೆ ಮಾಡಿದೆ ಎನ್ನಲಾದ ಅನ್ಯಾಯವನ್ನು ಎಳೆಎಳೆಯಾಗಿ ಬಿಡಿಸಿಡಲಾಗಿದೆ.ಕಿಸಾನ್‌ ಸಮ್ಮಾನ್‌ ಯೋಜನೆಯಲ್ಲಿ 4,000 ರೂ. ಕಡಿತ ಮಾಡಿ ರೈತರಿಗೆ ಚಿಪ್ಪು, ದಲಿತರ 11,000 ಕೋಟಿ ರೂ. ದುರ್ಬಳಕೆ ಮಾಡಿ ತಳ ಸಮುದಾಯದ ಕೈಗೆ …

Read More »

ಇಂದು, ನಾಳೆ ಬೆಂಗಳೂರಿನಲ್ಲಿ ಅಮಿತ್‌ ಶಾ, ಯೋಗಿ ರೋಡ್‌ ಶೋ

ಬೆಂಗಳೂರು: ಮೊದಲನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯಕ್ಕೆ ದಿನಗಣನೆ ಪ್ರಾರಂಭವಾಗಿದ್ದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಇಂದು ಮತ್ತು ನಾಳೆ ಬೆಂಗಳೂರಿನಲ್ಲಿ ಭರ್ಜರಿ ರೋಡ್‌ ಶೋ ನಡೆಸಲಿದ್ದಾರೆ. ಅಮಿತ್‌ ಶಾ ಅವರ ಕರ್ನಾಟಕ ಪ್ರವಾಸ ಒಂದು ದಿನ ಮೊಟಕುಗೊಂಡಿದ್ದು, ಮಂಗಳವಾರ ಸಂಜೆ ಬೆಂಗಳೂರಿಗೆ ಆಗಮಿಸಿ ಅಂದೇ ಕೊಚ್ಚಿಗೆ ತೆರಳಲಿದ್ದಾರೆ. ಪೂರ್ವ ನಿಯೋಜಿತ ಕಾರ್ಯಕ್ರಮಗಳ ಸರಣಿ ಹಿನ್ನೆಲೆಯಲ್ಲಿ ತುಮಕೂರಿನಲ್ಲಿ ನಡೆಯುವ ಹಿಂದುಳಿದ …

Read More »

ಕಲಬುರಗಿ: ಪಕ್ಷೇತರರಾಗಿ ಸ್ಪರ್ಧೆಗಿಳಿದ ದಂಪತಿ

ಕಲಬುರಗಿ: ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಗಳಾಗಿ ಪತಿ ಹಾಗೂ ಪತ್ನಿ ಪಕ್ಷೇತರರಾಗಿ ಕಣದಲ್ಲಿದ್ದು, ವಿಭಿನ್ನ ವಿಚಾರಗಳನ್ನು ಹೇಳುತ್ತಾ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಕಲಬುರಗಿ ತಾಲ್ಲೂಕಿನ ಕೇರೂರ ಗ್ರಾಮದ ರಮೇಶ ಭೀಮಸಿಂಗ್ ಚವ್ಹಾಣ (39) ಹಾಗೂ ಅವರ ಪತ್ನಿ ಜ್ಯೋತಿ ರಮೇಶ ಚವ್ಹಾಣ (33) ಚುನಾವಣಾ ಕಣದಲ್ಲಿದ್ದಾರೆ.ನಾಮಪತ್ರ ವಾಪಸ್ ಪಡೆಯಲು ಸೋಮವಾರ ಕೊನೆಯ ದಿನವಾಗಿದ್ದರೂ ಇಬ್ಬರೂ ಕಣದಲ್ಲಿ ಉಳಿಯುವ ನಿರ್ಧಾರ ಮಾಡಿದ್ದಾರೆ. ‌   ಮಾಹಿತಿ ಹಕ್ಕು ಕಾರ್ಯಕರ್ತರಾಗಿರುವ ರಮೇಶ …

Read More »

ನೇಹಾ ಹತ್ಯೆ ಪ್ರಕರಣದ ತನಿಖೆ ಸಿಐಡಿಗೆ, 12 ದಿನದೊಳಗೆ ತನಿಖೆಯ ವರದಿ ಸಲ್ಲಿಸುವಂತೆ ಸೂಚನೆ : ಜಿ.ಪರಮೇಶ್ವರ್

ತುಮಕೂರು: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಕಾರ್ಪೋರೆಟರ್ ಪುತ್ರಿ‌ ನೇಹಾ ಹಿರೇಮಠ ಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿಂದು ಮಾತನಾಡಿದ ಅವರು, “ಸಿಐಡಿ ತಂಡ ಹುಬ್ಬಳ್ಳಿಗೆ ಹೋಗಿ ಸ್ಥಳೀಯ ಪೋಲೀಸರು ಈವರೆಗೂ ನಡೆಸಿರುವ ತನಿಖೆಯ ಮಾಹಿತಿಯನ್ನು ಸಂಗ್ರಹಿಸಲಿದ್ದಾರೆ.ಕೊಲೆಯ ಹಿಂದೆ ಇನ್ನು ನಾಲ್ವರು ಇದ್ದಾರೆ ಎಂದು ಯುವತಿಯ ತಂದೆ ಆರೋಪಿಸಿದ್ದಾರೆ. ಇದನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, 12 ದಿನದೊಳಗೆ ಪ್ರಕರಣದ ತನಿಖೆಯ ವರದಿ …

Read More »