Breaking News

Daily Archives: ಏಪ್ರಿಲ್ 27, 2024

ಬಸ್​​​ ನಿಲ್ಲಿಸಿಲ್ಲವೆಂದು ಚಾಲಕನ ಮೇಲೆ ಮುಸ್ಲಿಂ ಯುವಕರಿಂದ ಹಲ್ಲೆ

ಬೆಳಗಾವಿ, ಏ.25: ಬಸ್ ನಿಲ್ಲಿಸಿಲ್ಲ ಎಂದು ಸರ್ಕಾರಿ ಬಸ್ ನಿರ್ವಾಹಕ ಮತ್ತು ಚಾಲಕನ ಮೇಲೆ ಮುಸ್ಲಿಂ ಯುವಕರ ಗುಂಪೊಂದು ಹಲ್ಲೆ ನಡೆಸಿದ ಘಟನೆಬೈಲಹೊಂಗಲ(Bailhongal) ಬಸ್ ನಿಲ್ದಾಣದಲ್ಲಿ ನಡೆದಿದೆ. ಇನ್ನು ಈ ಬಸ್​ ಬೈಲಹೊಂಗಲದಿಂದ ಧಾರವಾಡಕ್ಕೆ ಹೊರಟ್ಟಿತ್ತು. ಈ ವೇಳೆ ಓಡಿ ಬಂದು ಬಸ್ ಹತ್ತಲು ಮಹಿಳೆ ಯತ್ನಿಸಿದ್ದಾರೆ. ಆಗ ಮಹಿಳೆಗೆ ನಿರ್ವಾಹಕ ಬೈಯ್ದಿದ್ದಾರೆ ಎಂದು ಆರೋಪಿಸಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಬಸ್​ಗಳನ್ನ ಸ್ಥಗಿತಗೊಳಿಸಿ ಪ್ರತಿಭಟನೆ ಇನ್ನು ಈ ವೇಳೆ ಜಗಳ …

Read More »

ಇನ್ಮುಂದೆ ವರ್ಷಕ್ಕೆ ಎರಡು ಬಾರಿ ‘CBSE’ ಬೋರ್ಡ್ ಪರೀಕ್ಷೆ : ಮುಂದಿನ ಶೈಕ್ಷಣಿಕ ವರ್ಷದಿಂದಲೇ ಜಾರಿ ಸಾಧ್ಯತೆ

ನವದೆಹಲಿ: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (CBSE) 2025-26ರ ಶೈಕ್ಷಣಿಕ ವರ್ಷದಿಂದ ವರ್ಷಕ್ಕೆ ಎರಡು ಬಾರಿ ಬೋರ್ಡ್ ಪರೀಕ್ಷೆಗಳನ್ನ ನಡೆಸುವ ಸಾಧ್ಯತೆಯಿದೆ ಎಂದು ಮೂಲಗಳು ಶುಕ್ರವಾರ ತಿಳಿಸಿವೆ. ಈ ಸಂಭಾವ್ಯ ಕ್ರಮವು ಜಾರಿಗೆ ಬಂದರೆ, ಸಿಬಿಎಸ್‌ಇ ಮೌಲ್ಯಮಾಪನಗಳ ಹೆಗ್ಗುರುತಾಗಿರುವ ಸಾಂಪ್ರದಾಯಿಕ ವಾರ್ಷಿಕ ಪರೀಕ್ಷಾ ಸ್ವರೂಪದಿಂದ ಗಮನಾರ್ಹ ನಿರ್ಗಮನವನ್ನು ಸೂಚಿಸುತ್ತದೆ. ದ್ವಿವಾರ್ಷಿಕ ಪರೀಕ್ಷೆಗಳತ್ತ ಸಾಗುವುದರಿಂದ ವಿದ್ಯಾರ್ಥಿಗಳಿಗೆ ವಿಷಯಗಳಲ್ಲಿ ತಮ್ಮ ತಿಳುವಳಿಕೆ ಮತ್ತು ಕಾರ್ಯಕ್ಷಮತೆಯನ್ನ ಪ್ರದರ್ಶಿಸಲು ಹೆಚ್ಚಿನ ಅವಕಾಶಗಳನ್ನ ಒದಗಿಸಬಹುದು. ಅಂತಹ …

Read More »

‘ಸಿ.ಟಿ ರವಿ’ ವಿರುದ್ಧ ‘FIR’ ದಾಖಲು

ಚಿಕ್ಕಮಗಳೂರು: ಈಗಾಗಲೇ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ವಿರುದ್ಧ ಧರ್ಮ ದ್ವೇಷ ಭಾಷಣದ ಕಾರಣ ಚುನಾವಣಾ ಆಯೋಗ ನೀಡಿದಂತ ದೂರಿನ ಹಿನ್ನಲೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಈ ಬೆನ್ನಲ್ಲೇ ದ್ವೇಷ ಭಾಷಣ ಮಾಡಿದಂತ ಬಿಜೆಪಿ ಮುಖಂಡ ಸಿ.ಟಿ ರವಿ ರವಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

Read More »

IT ಅಧಿಕಾರಿಗಳಿಂದ 4.8 ಕೋಟಿ ಜಪ್ತಿ ಕೇಸ್: ಬಿಜೆಪಿ ಅಭ್ಯರ್ಥಿ ‘ಡಾ.ಕೆ.ಸುಧಾಕರ್’ ವಿರುದ್ಧ ‘FIR’ ದಾಖಲು

ಚಿಕ್ಕಬಳ್ಳಾಪುರ: ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಬಿಜೆಪಿ ಮುಖಂಡ, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಾ.ಕೆ ಸುಧಾಕರ್ ಆಪ್ತ, ಬಿಜೆಪಿಯ ಮಾಜಿ ಜಿಲ್ಲಾಧ್ಯಕ್ಷ ಮಾದಾವರ ಗೋವಿಂದಪ್ಪ ಮನೆ ಮೇಲೆ ದಾಳಿ ಮಾಡಿದ್ದರು. ಈ ದಾಳಿಯ ವೇಳೆಯಲ್ಲಿ 4.82 ಕೋಟಿ ಹಣ ಜಪ್ತಿ ಮಾಡಿದ್ದರು. ಈ ಪ್ರಕರಣದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಕೆ ಸುಧಾಕರ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಅಧಿಕಾರಿಗಳು ಹಣವನ್ನು ಜಪ್ತಿ ಮಾಡಿಕೊಂಡ ಬಳಿಕ ಬೆಂಗಳೂರು ಉತ್ತರ ತಾಲೂಕಿನ ಚುನಾವಣಾ ನೋಡೆಲ್ …

Read More »