Breaking News

Monthly Archives: ಏಪ್ರಿಲ್ 2024

ಇವಿಎಂ ಮತಗಳ ಜತೆಗೆ ವಿವಿಪ್ಯಾಟ್​ ಚೀಟಿ ಎಣಿಕೆಗೆ ಕೋರಿದ್ದ ಅರ್ಜಿಗಳು ವಜಾ! ಸುಪ್ರೀಂಕೋರ್ಟ್​ ತೀರ್ಪು

ನವದೆಹಲಿ: ಎಲೆಕ್ಟ್ರಾನಿಕ್​ ವೋಟಿಂಗ್​ ಮೆಷಿನ್​ (ಇವಿಎಂ) ಮತಗಳ ಜೊತೆಗೆ ವಿವಿಪ್ಯಾಟ್​ ಚೀಟಿಯನ್ನು ಎಣಿಕೆ ಮಾಡುವಂತೆ ಕೋರಿ, ಸಲ್ಲಿಕೆಯಾಗಿದ್ದ ಅರ್ಜಿಗಳನ್ನು ಸುಪ್ರಿಂಕೋರ್ಟ್​ ಇಂದು (ಏಪ್ರಿಲ್​ 26) ವಜಾಗೊಳಿಸಿದೆ. ದೇಶದೆಲ್ಲೆಡೆ ಇಂದು ಎರಡನೇ ಹಂತದ ಹಾಗೂ ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ನಡೆಯುತ್ತಿದೆ. ಇದರ ನಡುವೆ ಸುಪ್ರೀಂಕೋರ್ಟ್​ ಈ ಮಹತ್ವದ ತೀರ್ಪನ್ನು ನೀಡಿದೆ. ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರನ್ನೊಳಗೊಂಡ ದ್ವಿಸದಸ್ಯ ಪೀಠವು ಸರ್ವಾನುಮತದಿಂದ ಈ ತೀರ್ಪನ್ನು ಪ್ರಕಟಿಸಿದೆ. ಸಮತೋಲಿತ …

Read More »

ರಾಜ್ಯದ ಈ ಊರಲ್ಲಿ ಒಂದೇ ಕುಟುಂಬದ 85 ಮಂದಿ ಏಕಕಾಲದಲ್ಲಿ ಮತದಾನ ! ಎಲ್ಲಿ ಗೊತ್ತಾ?

ರಾಜ್ಯದ ಈ ಊರಲ್ಲಿ ಒಂದೇ ಕುಟುಂಬದ 85 ಮಂದಿ ಏಕಕಾಲದಲ್ಲಿ ಮತದಾನ ! ಎಲ್ಲಿ ಗೊತ್ತಾ? ಚಿಕ್ಕಬಳ್ಳಾಪುರು: ಒಂದೇ ಕುಟುಂಬದ 85 ಮಂದಿ ಏಕಕಾಲದಲ್ಲಿ ಮತದಾನ ಮಾಡಿರುವ ಘಟನೆ . ಚಿಕ್ಕಬಳ್ಳಾಪುರ ನಗರದ ಮತಗಟ್ಟೆ ಸಂಖ್ಯೆ 161ರಲ್ಲಿ ವಾರ್ಡ್ ನಂಬರ್ 19ರಲ್ಲಿ ನಡೆದಿದೆ. ಇಲ್ಲಿನ ಬಾದಾಮ್ ಫ್ಯಾಮಿಲಿಯಿಂದ ಒಂದೇ ಸಮಯದಲ್ಲಿ ಮತದಾನ ನಡೆದಿದೆ. ತಾಯಿ-ಮಗಳು-ಮೊಮ್ಮಗಳು ಸೇರಿದಂತೆ ಒಂದೇ ಕುಟುಂಬದ 85 ಮಂದಿ ಮತ ಹಾಕಿ ಎಲ್ಲರ ಗಮನ ಸೆಳೆದಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ …

Read More »

ಮತದಾನ ಮೊದಲು ನಂತರ ಮದುವೆ: ಓಡಿ ಬಂದು ಮತ ಹಾಕಿದ ವರ-ವಧು

ಚಾಮರಾಜನಗರ ಏಪ್ರಿಲ್ 26: ದಾಂಪತ್ಯ ಜೀವನಕ್ಕೆ ಕಾಲಿಡುವ ಮುನ್ನ ವರನೊಬ್ಬ ಓಡಿ ಬಂದು ಮತ ಚಲಾಯಿಸಿದ ಘಟನೆ ಚಾಮರಾಜನಗರ ತಾಲೂಕಿನ ಸಂತೇಮರಳ್ಳಿಯಲ್ಲಿ ನಡೆದಿದೆ. ತಾಳಿ ಕಟ್ಟುವ ಶುಭ ಗಳಿಗೆಗೂ ಮುನ್ನ ವರ ಚೇತನ್ ಮತಗಟ್ಟೆಗೆ ಬಂದು ತಮ್ಮ ಹಕ್ಕು ಚಲಾಯಿಸಿದರು. ಬೆಳಿಗ್ಗೆ ಒಂಬತ್ತು ಗಂಟೆಗೆ ತಾಳಿ ಕಟ್ಟುವ ಶುಭ ಮುಹೂರ್ತವಿತ್ತು.   ಹೀಗಾಗಿ ಇದಕ್ಕೂ ಮುನ್ನ ಮತಗಟ್ಟೆಗೆ ಓಡೋಡಿ ಬಂದ ವರ ಚೇತನ್ ಮತ ಹಾಕಿದರು. ಈ ವೇಳೆ ವರನ …

Read More »

ಬೆಂ.ಗ್ರಾದಲ್ಲಿ ಕಾಂಗ್ರೆಸ್​ನಿಂದ ಗ್ಯಾರಂಟಿ ಕಾರ್ಡ್​​ ಹಂಚಿಕೆ ಆರೋಪ; BJP-JDS ಕಾರ್ಯಕರ್ತರ ಮೇಲೆ ಹಲ್ಲೆ!

ರಾಮನಗರ: ಬೆಂಗಳೂರು ಗ್ರಾಮಾಂತರದ (Bengaluru Rural) ರಾಮನಗರದಲ್ಲಿ (Ramanagara) ಕಾಂಗ್ರೆಸ್ ಕಾರ್ಯಕರ್ತರು, ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಬೆಂಬಲಿಗರು ತಮ್ಮ ಸರ್ಕಾರದ ಗ್ಯಾರಂಟಿ ಯೋಜನೆಯ ಕಾರ್ಡ್ ಹಂಚಿಕೆ ಮಾಡ್ತಿದ್ದಾರೆ ಎಂದು ಜೆಡಿಎಸ್ ಕಾರ್ಯಕರ್ತರು ಆರೋಪಿಸಿದ್ದಾರೆ.   ಐದು ಯೋಜನೆಯನ್ನ ಕಾರ್ಡ್ ನಲ್ಲಿ (Gift Card) ಪ್ರಿಂಟ್ ಮಾಡಿಸಿ ಬೆಳ್ಳಿ ಬಟ್ಟಲು, ಕುಕ್ಕುಮ್ಮ ಹಾಗು ಅಕ್ಷತೆ ಗಿಫ್ಟ್ ಹಂಚಿಕೆ ಮಾಡ್ತಿದ್ದ ವೇಳೆ ಜೆಡಿಎಸ್ ಕಾರ್ಯಕರ್ತರು ಕ್ಲಾಸ್ ತೆಗೆದುಕೊಂಡಿದ್ದಾರೆ. ರಾಮನಗರದ ನೆಲಮಲೆ …

Read More »

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ. ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ರಾಮನಗರ: ಪಾರದರ್ಶಕ, ಮುಕ್ತ ಚುನಾವಣೆ ನಡೆಸುವಲ್ಲಿ ಚುನಾವಣಾ ಆಯೋಗ ಸಂಪೂರ್ಣ ವಿಫಲವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ, ಕುಮಾರಸ್ವಾಮಿ ಕಿಡಿ ಕಾರಿದ್ದಾರೆ. ರಾಮನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಗಿಫ್ಟ್ ಕಾರ್ಡ್ ಗಳನ್ನು ಹಂಚುತ್ತಿರುವ ಕುರಿತು ಪ್ರತಿಕ್ರಿಯೆ ನೀಡಿದ ಅವರು ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮತದಾರರಿಗೆ ಗಿಫ್ಟ್ ಕಾರ್ಡುಗಳನ್ನು ಹಂಚುತ್ತಿದೆ ಈ ಮೂಲಕ ಪಾರದರ್ಶಕ, ಮುಕ್ತ ಚುನಾವಣೆ ನಡೆಸುವಲ್ಲಿ ಚುನಾವಣಾ ಆಯೋಗ ಸಂಪೂರ್ಣ ವಿಫಲವಾಗಿದೆ ಎಂದು ಕಿಡಿ ಕಾರಿದ …

Read More »

ಬಹುಭಾಷಾ ನಟ ಪ್ರಕಾಶ್ ರೈ ಮತ ಚಲಾಯಿಸಿದ್ದು ಯಾರಿಗೆ ಗೊತ್ತಾ?

ಲೋಕಸಭೆ ಚುನಾವಣೆ 2024 ರ ಎರಡನೇ ಹಂತದಲ್ಲಿ ಇಂದು ಶುಕ್ರವಾರ (ಏಪ್ರಿಲ್ 26) ಆರಂಭವಾಗಿದೆ. 13 ರಾಜ್ಯಗಳ 88 ಸ್ಥಾನಗಳಿಗೆ ಮತದಾನ ನಡೆಯುತ್ತಿದ್ದು, ಕರ್ನಾಟಕದಲ್ಲೂ ಇದರ ಬಿಸಿ ಏರುತ್ತಿದೆ. ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಮತದಾನ ಆರಂಭವಾಗಿದ್ದು, ಬಹುಭಾಷಾ ನಟ ಪ್ರಕಾಶ್‌ ರೈ ತಮ್ಮ ಅತ್ಯ ಅಮೂಲ್ಯ ಮತವನ್ನು ಚಲಾಯಿಸಿದರು. ಮತವನ್ನು ಚಲಾಯಿಸಿದ ಪ್ರಕಾಶ್ ರೈ ಎಲ್ಲರೂ ಮತವನ್ನು ಚಲಾಯಿಸುವಂತೆ ಮನವಿ ಮಾಡಿದ್ದಾರೆ. ಈ ಕುರಿತಾದ ವಿಡಿಯೋವನ್ನು ಪ್ರಕಾಶ್‌ ತಮ್ಮ …

Read More »

ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಜೀವ ಉಳಿಸಿ ದೇವರಾದ ವೋಟ್ ಮಾಡಲು ಬಂದ ಡಾಕ್ಟರ್

ಬೆಂಗಳೂರು: ಮತದಾನ ಮಾಡಲು ಬಂದಿದ್ದ ಮತದಾರರೊಬ್ಬರಿಗೆ ಹೃದಯಾಘಾತವಾಗಿದ್ದು (Cardiac arrest), ಈ ವೇಳೆ ಅಲ್ಲಿಯೇ ಇದ್ದ ವೈದ್ಯರು (Doctor) ಮಹಿಳೆಯ ಪ್ರಾಣ ಉಳಿಸಿದ್ದಾರೆ. ಜೆಪಿ ನಗರ 8ನೇ ಹಂತದ ಜಂಬೂ ಸವಾರಿ ದಿಣ್ಣೆ ಬಳಿ ಘಟನೆ ನಡೆದಿದೆ. ನಾರಾಯಣ ಆರೋಗ್ಯ ಕೇಂದ್ರದ ಮೂತ್ರಪಿಂಡ ತಜ್ಞ ಡಾ.ಗಣೇಶ್ ಶ್ರೀನಿವಾಸ ಪ್ರಸಾದ್ (Dr Ganesh Srinivas Prasad) ಅವರು ಸ್ಥಳದಲ್ಲಿ ಮಹಿಳೆಗೆ ಪ್ರಥಮ ಚಿಕಿತ್ಸೆ (CPR) ನೀಡಿ ಜೀವ ಉಳಿಸಿದ್ದಾರೆ. ನಂತರ ಮಹಿಳೆಯನ್ನು …

Read More »

ಉತ್ತರ ಪತ್ರಿಕೆಗಳಲ್ಲಿ ‘ಜೈ ಶ್ರೀ ರಾಮ್’ ಎಂದು ಬರೆದಿದ್ದ ವಿದ್ಯಾರ್ಥಿಗಳನ್ನು ಪಾಸ್‌ ಮಾಡಿದ ಇಬ್ಬರು ಶಿಕ್ಷಕರ ಅಮಾನತು

ನವದೆಹಲಿ: ಪರೀಕ್ಷಾರ್ಥಿಗಳಿಗೆ ಅವರ ಉತ್ತರಗಳ ಗುಣಮಟ್ಟದ ಆಧಾರದ ಮೇಲೆ ಅಂಕಗಳನ್ನು ನೀಡಲಾಗುತ್ತದೆ. ಆದಾಗ್ಯೂ, ಉತ್ತರ ಪ್ರದೇಶದ ಜೌನ್ಪುರ ಪಟ್ಟಣದ ರಾಜ್ಯ ವಿಶ್ವವಿದ್ಯಾಲಯವಾದ ವೀರ್ ಬಹದ್ದೂರ್ ಸಿಂಗ್ ಪೂರ್ವಾಂಚಲ್ ವಿಶ್ವವಿದ್ಯಾಲಯದಲ್ಲಿ, ಪರೀಕ್ಷಕರು ತಮ್ಮ ಉತ್ತರ ಪುಸ್ತಕಗಳಲ್ಲಿ ‘ಜೈ ಶ್ರೀ ರಾಮ್’ ಮತ್ತು ಅನೇಕ ಭಾರತೀಯ ಕ್ರಿಕೆಟಿಗರ ಹೆಸರುಗಳನ್ನು ಬರೆದಿದ್ದಾರೆ ಎಂದು ಹೇಳಲಾದ ಹಲವಾರು ವಿದ್ಯಾರ್ಥಿಗಳಿಗೆ ಅಂಕಗಳನ್ನು ನೀಡಿದ್ದು ಪಾಸ್‌ ಕೂಡ ಮಾಡಿದ್ದಾರೆ. ವೀರ್ ಬಹದ್ದೂರ್ ಸಿಂಗ್ ಪೂರ್ವಾಂಚಲ್ ವಿಶ್ವವಿದ್ಯಾಲಯದ ಮಾಜಿ ವಿದ್ಯಾರ್ಥಿ …

Read More »

ಮತದಾನ ಮಾಡಿದವ್ರಿಗೆ ಫ್ರೀ ಮಸಾಲೆ ದೋಸೆ ,

ಲೋಕಸಭೆ ಚುನಾವಣೆಯ ಎರಡನೇ ಹಂತದಲ್ಲಿ ಶುಕ್ರವಾರ 13 ರಾಜ್ಯಗಳ 88 ಸ್ಥಾನಗಳಿಗೆ ಮತದಾನ ಬಿರುಸಿನದ ಸಾಗಿದೆ. ಎರಡನೇ ಹಂತದಲ್ಲಿ ಕೇರಳದ ವಯನಾಡ್ ಲೋಕಸಭಾ ಕ್ಷೇತ್ರವೂ ಸೇರಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸತತ ಎರಡನೇ ಬಾರಿಗೆ ಸ್ಪರ್ಧಿಸುತ್ತಿದ್ದಾರೆ.ಕೇರಳದ ಎಲ್ಲಾ 20 ಸ್ಥಾನಗಳ ಹೊರತಾಗಿ, ಕರ್ನಾಟಕದ 28 ಸ್ಥಾನಗಳಲ್ಲಿ 14, ರಾಜಸ್ಥಾನದ 13 ಸ್ಥಾನಗಳು, ಮಹಾರಾಷ್ಟ್ರ ಮತ್ತು ಉತ್ತರ ಪ್ರದೇಶದ ತಲಾ ಎಂಟು ಸ್ಥಾನಗಳು, ಮಧ್ಯಪ್ರದೇಶದ ಆರು ಸ್ಥಾನಗಳು, ಅಸ್ಸಾಂ …

Read More »

ನೇಹಾ ಹತ್ಯೆ ಪ್ರಕರಣದ ಆರೋಪಿಗೆ ಘೋರ ಶಿಕ್ಷೆ : ಸಿಎಂ

ಬೀದರ್ : ಹುಬ್ಬಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣದ ಆರೋಪಿಗೆ ಘೋರ ಶಿಕ್ಷೆ ಕೊಡಿಸುವ ಪ್ರಯತ್ನ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೇಹಾ ಹತ್ಯೆ ಪ್ರಕರಣವನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ.ಪ್ರಕರಣದ ತನಿಖೆಯನ್ನು ಸಿಐಡಿಗೆ ನೀಡಲಾಗಿದೆ. ಈಗ ಬಿಜೆಪಿ ನಾಯಕರು ಸಿಬಿಐ ತನಿಖೆಗೆ ನೀಡಬೇಕು ಅಂತ ಹೇಳುತ್ತಿದ್ದಾರೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಯಾವುದೇ ಪ್ರಕರಣವನ್ನು ಸಿಬಿಐಗೆ ವಹಿಸಿದ್ದರಾ? ನೇಹಾ ಹತ್ಯೆ ಪ್ರಕರಣದಲ್ಲಿ ಬಿಜೆಪಿಯವರು ಅನಗತ್ಯ …

Read More »