Breaking News

Monthly Archives: ಏಪ್ರಿಲ್ 2024

ಲಕ್ಷಣ ಸವದಿ ಅವರ ಬೆಳಗಾವಿ ನಿವಾಸಕ್ಕೆ ರಣದೀಪ್ ಸುರ್ಜೆವಾಲಾ ಭೇಟಿ

ಬೆಳಗಾವಿ : ಲಕ್ಷಣ ಸವದಿ ಅವರ ಬೆಳಗಾವಿ ನಿವಾಸಕ್ಕೆ ಎಐಸಿಸಿ ಕಾರ್ಯದರ್ಶಿ ಹಾಗೂ ಕರ್ನಾಟಕ ಉಸ್ತುವಾರಿ ರಣದೀಪ್ ಸುರ್ಜೆವಾಲಾ ಭೇಟಿ ನೀಡಿ ಮಹತ್ವದ ಮಾತುಕತೆ ನಡೆಸಿದ್ದಾರೆ. ಗುರುವಾರ ಬೆಳಗಾವಿಯ ಸದಾಶಿವನಗರದಲ್ಲಿರುವ ಸವದಿ ಮನೆಗೆ ಭೇಟಿ ನೀಡಿದ ಸುರ್ಜೆವಾಲಾ ನಾಯಕರೊಂದಿಗೆ ಮಾತುಕತೆ ನಡೆಸಿದ್ದಾರೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಬೆಳಗಾವಿ ಹಾಗೂ ಚಿಕ್ಕೋಡಿ ಲೋಕಸಭಾ ಚುನಾವಣೆ ಕುರಿತು ಮಹತ್ವದ ಮಾತುಕತೆ ನಡೆಸಿರುವ ಉಭಯ …

Read More »

ಯುವತಿಯನ್ನು ಅಪಹರಿಸಿ, ಸಾಮೂಹಿಕ ಅತ್ಯಾಚಾರ!

ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯವೊಂದು ನಡೆದಿದ್ದು, ಯುವತಿಯನ್ನ ಅಪಹರಿಸಿ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ನಡೆದಿದೆ. 23 ವರ್ಷದ ಯುವತಿಯನ್ನು ಕಿಡ್ನ್ಯಾಪ್ ಮಾಡಿ ಅತ್ಯಾಚಾರ ಎಸಗಿರುವ ಘಟನೆ ಹೈಗ್ರೌಂಡ್ಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Read More »

ನಾಡಗೀತೆ ಕಡ್ಡಾಯ ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು: ದಿವಂಗತ ಮೈಸೂರು ಅನಂತಸ್ವಾಮಿ ಸಂಯೋಜಿಸಿದ ಧಾಟಿಯಲ್ಲಿ ನಾಡಗೀತೆ ಹಾಡುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ ವಜಾಗೊಳಿಸಿದೆ. ಅಲ್ಲದೆ, ರಾಜ್ಯ ಸರ್ಕಾರಕ್ಕೆ ನಾಡಗೀತೆಯನ್ನು ಇಂತಹುದೇ ಧಾಟಿಯಲ್ಲಿ ಹಾಡುವಂತೆ ಕಡ್ಡಾಯಗೊಳಿಸುವ ಅಧಿಕಾರವಿದೆ ಎಂದು ನ್ಯಾಯಾಲಯ ಹೇಳಿದೆ. ಗಾಯಕ ಕಿಕ್ಕೇರಿ ಕೃಷ್ಣಮೂರ್ತಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರೈಸಿ ಕಾಯ್ದಿರಿಸಿದ್ದ ಮಹತ್ವದ ತೀರ್ಪನ್ನು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ಪ್ರಕಟಿಸಿತು. ಶಿಕ್ಷಣ ಕಾಯಿದೆಯಡಿ ಅವಕಾಶ: ನಾಡಗೀತೆಗೆ ಮೈಸೂರು …

Read More »

ಬೆಂಗಳೂರು: ಹೊತ್ತಿ ಉರಿದ ಯಾರ್ಡ್, ಗಾರ್ಮೆಂಟ್ಸ್ ಕಾರ್ಖಾನೆ

ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಬಳಿಯ ಸಿಂಗಸಂದ್ರದ ಕಂಟ್ರಿ ರಸ್ತೆಯಲ್ಲಿ ಮಂಗಳವಾರ ತಡರಾತ್ರಿ ಬೆಂಕಿ ಅವಘಡ ಸಂಭವಿಸಿದ್ದು, ಸೆಂಟ್ರಿಂಗ್ ಮರಗಳ ಯಾರ್ಡ್ ಹಾಗೂ ಗಾರ್ಮೆಂಟ್ಸ್ ಕಾರ್ಖಾನೆ ಬೆಂಕಿಯಿಂದ ಹೊತ್ತಿ ಉರಿಯಿತು. ಅವಘಡದಿಂದಾಗಿ ₹ 2 ಕೋಟಿ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ. ಸೆಂಟ್ರಿಂಗ್ ಮರಗಳ ಯಾರ್ಡ್‌ನಲ್ಲಿ ಕಾಣಿಸಿಕೊಂಡ ಬೆಂಕಿ, ಕೆಲವೇ ನಿಮಿಷಗಳಲ್ಲಿ ಹೆಚ್ಚಾಗಿತ್ತು. ಸೆಂಟ್ರಿಂಗ್ ಮರಗಳಿಗೆ ಬೆಂಕಿ ತಗುಲಿದ್ದರಿಂದ, ಧಗ ಧಗ ಉರಿಯಲಾರಂಭಿಸಿತ್ತು. ಇದೇ ಜಾಗಕ್ಕೆ ಹೊಂದಿಕೊಂಡಿದ್ದ ಗ್ಯಾರೇಜ್‌ ಹಾಗೂ ಸಮೀಪದಲ್ಲಿದ್ದ …

Read More »

ಬುಧವಾರದಂದು ಪ್ರಧಾನಿಗಳು ಆಗಮಿಸುವ ಸ್ಥಳವನ್ನು ಪರಿಶೀಲಿಸಿದ : ಬಾಲಚಂದ್ರ & ರಮೇಶ್ ಜಾರಕಿಹೊಳಿ

ಬೆಳಗಾವಿ- ಪ್ರಧಾನಿ ನರೇಂದ್ರ ಮೋದಿಯವರು ಬೆಳಗಾವಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರ ಪ್ರಚಾರಾರ್ಥವಾಗಿ ಬೆಳಗಾವಿಗೆ ಬರುವ ದಿ.೨೮ ರಂದು ಆಗಮಿಸಲಿದ್ದು, ಈ ಬೃಹತ್ ಸಾರ್ವಜನಿಕ ಸಭೆಗೆ ಸುಮಾರು ಒಂದು ಲಕ್ಷ ಕಾರ್ಯಕರ್ತರು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಅರಭಾವಿ ಶಾಸಕ, ಬೆಳಗಾವಿ ಜಿಲ್ಲಾ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಬುಧವಾರದಂದು ಪ್ರಧಾನಿಗಳು ಆಗಮಿಸುವ ಸ್ಥಳವನ್ನು ಪರಿಶೀಲಿಸಿ ಮಾತನಾಡಿದ ಅವರು, ಮೋದಿ ಅವರು ಜಗದೀಶ್ …

Read More »

ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

ಬೇಸಗೆ ಝಳದಲ್ಲಿ ಬೇಯುತ್ತಿರುವ ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ಲೋಕಸಭೆ ಚುನಾವಣೆಯ ಕಾವೂ ಹೆಚ್ಚಿದ್ದು, ರಾಜಧಾನಿಯ ಗದ್ದುಗೆ ಹಿಡಿಯಲು ನಡೆಯುತ್ತಿರುವ ಗುದ್ದಾಟವೂ ಬಿರುಸಾಗಿಯೇ ಇದೆ. ಕಳೆದೆರಡು ಲೋಕಸಭೆ ಚುನಾವಣೆಗಳಲ್ಲಿ ಎಲ್ಲ 7 ಕ್ಷೇತ್ರಗಳಲ್ಲಿಯೂ ವಿಜಯ ಪತಾಕೆ ಹಾರಿಸಿದ್ದ ಬಿಜೆಪಿ ಈ ಬಾರಿಯೂ ಗೆಲುವಿನ ನಗೆ ಬೀರುವ ಹುಮ್ಮಸ್ಸಿನಲ್ಲಿದೆ. ಇತ್ತ ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ್ದರೂ ಕಳೆದ 10 ವರ್ಷಗಳಿಂದಲೂ ಲೋಕಸಭೆಯ ಒಂದೂ ಸ್ಥಾನವನ್ನೂ ಗೆಲ್ಲಲಾಗದ ಆಮ್‌ ಆದ್ಮಿ ಪಕ್ಷ ಈ …

Read More »

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಕೆಸಿಇಟಿ -2024ರ ಪರೀಕ್ಷೆಯಲ್ಲಿ ಆಗಿರುವ ಪಠ್ಯಂತರ ಪ್ರಶ್ನೆಗಳಿಗೆ ಸಂಬಂಧಿಸಿದಂತೆ ಎ. 27ರ ಒಳಗೆ ಸೂಕ್ತ ಪರಿಹಾರ ಘೋಷಿಸದಿದ್ದರೆ ರಾಜ್ಯಾದ್ಯಂತ ಹೋರಾಟಕ್ಕೆ ಕರೆ ಜತೆಗೆ ಕೆಇಎಗೆ ಮುತ್ತಿಗೆ ಹಾಗೂ ಕೋರ್ಟ್‌ ಮೊರೆ ಹೋಗಲು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ ನಿರ್ಧರಿಸಿದೆ.   ಮಲ್ಲೇಶ್ವರದ ಕರ್ನಾಟಕ ರಾಜ್ಯ ಸೌಹಾರ್ದ ಸಹಕಾರಿ ಸಂಘದ ಆವರಣದಲ್ಲಿ ಎಬಿವಿಪಿ ನೇತೃತ್ವದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಸಮಾಲೋಚನ ಸಭೆಯಲ್ಲಿ ತೆಗೆದುಕೊಂಡಿರುವ ನಿರ್ಧಾರದ ಬಗ್ಗೆ …

Read More »

ಯುವ ಮತದಾರರ ಚುನಾವಣೆ ಉತ್ಸಾಹ

ಯುವ ಮತದಾರರ ಚುನಾವಣೆ ಉತ್ಸಾಹ ಉಡುಪಿ: ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಯುವ ಮತದಾರರ ಪಾತ್ರವೂ ಮಹತ್ವದ್ದಾಗಿದೆ. ಕ್ಷೇತ್ರದಲ್ಲಿ ಈ ವರ್ಷ 29 ಸಾವಿರಕ್ಕೂ ಅಧಿಕ ಯುವ ಮತದಾರರಿದ್ದಾರೆ.ಹೊರ ಜಿಲ್ಲೆ, ವಿದೇಶಗಳಲ್ಲಿಯೂ ಹೆಚ್ಚಿನ ಸಂಖ್ಯೆಯಲ್ಲಿ ಕ್ಷೇತ್ರದ ಯುವ ಜನತೆ ನೆಲೆಸಿದ್ದಾರೆ.   ಇದರಲ್ಲಿ ಶೇ. 20-30ರಷ್ಟು ಪಕ್ಷಗಳ ಜತೆಗೆ ಗುರುತಿಸಿಕೊಂಡು ಪ್ರಚಾರ ಪ್ರಕ್ರಿಯೆಯಲ್ಲಿ ತೊಡಗಿಸಿ ಕೊಂಡಿದ್ದಾರೆ. ಉಳಿದವರು ಮತದಾರರಾಗಿ ಮಗುಮ್ಮಾಗಿದ್ದಾರೆ. ಇನ್ನು ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಪಕ್ಷದ ಅಭ್ಯರ್ಥಿ …

Read More »

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ರಾಮನಗರ: ಇತ್ತೀಚೆಗೆ ಮೈಸೂರಿನಲ್ಲಿ ಆಯೋಜಿಸಿದ್ದ ಒಕ್ಕಲಿಗರ ಸಭೆಯಲ್ಲಿ “ಸಿಎಂ ಬದಲಾವಣೆ’ ಸುಳಿವು ನೀಡಿದ್ದ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರು ಈಗ ಮತ್ತೆ ಸಿಎಂ ಹುದ್ದೆ ಕುರಿತು ಹೇಳಿಕೆ ನೀಡುವ ಮೂಲಕ ಚರ್ಚೆ ಮುಂದುವರಿಸಿದ್ದಾರೆ. “ನಾನು ಸಿಎಂ ಆಗುತ್ತೇನೆ ಎಂಬ ಭಾವನೆ ಇಟ್ಟು ಕೊಂಡು ನೀವು ನನ್ನನ್ನು ಗೆಲ್ಲಿಸಿದ್ದೀರಿ, ಆ ನಂಬಿಕೆಗೆ ಮೋಸ ಆಗುವುದಿಲ್ಲ’ ಎಂದು ಹೇಳುವ ಮೂಲಕ ಕುತೂಹಲ ಮೂಡಿಸಿದ್ದಾರೆ. ಮಂಗಳವಾರ ಹಾರೋ ಹಳ್ಳಿಯಲ್ಲಿ ಬೆಂಗಳೂರು ಗ್ರಾಮಾಂತರ …

Read More »

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಬೆಂಗಳೂರು/ಹೊಸದಿಲ್ಲಿ: ಪೋಕ್ಸೋ ಪ್ರಕರಣದಲ್ಲಿ ಆರೋಪಿಯಾಗಿರುವ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಮತ್ತೆ ಜೈಲು ಪಾಲಾಗಲಿದ್ದಾರೆ. ಕರ್ನಾಟಕ ಹೈಕೋರ್ಟ್‌ ನೀಡಿದ್ದ ಜಾಮೀನು ಆದೇಶವನ್ನು ಅಮಾನತುಗೊಳಿಸಿದ ಸುಪ್ರೀಂ ಕೋರ್ಟ್‌, ಒಂದು ವಾರದೊಳಗೆ ಶರಣಾಗುವಂತೆ ಶರಣರಿಗೆ ಸೂಚಿಸಿದೆ. ಕಳೆದ ವರ್ಷ ನ. 8ರಂದು ಕರ್ನಾಟಕ ಹೈಕೋರ್ಟ್‌ ಶರಣರಿಗೆ ಜಾಮೀನು ನೀಡಿತ್ತು. ಈಗ ಈ ಆದೇಶವನ್ನು 4 ತಿಂಗಳ ಕಾಲ ಅಮಾನತಿನಲ್ಲಿಟ್ಟಿರುವ ಸುಪ್ರೀಂ ಕೋರ್ಟ್‌, 4 ತಿಂಗಳೊಳಗೆ ಪ್ರಮುಖ ಸಾಕ್ಷ್ಯಗಳ ವಿಚಾರಣೆ ನಡೆಸಬೇಕು …

Read More »