ಹುಬ್ಬಳ್ಳಿಯಲ್ಲಿ ಹಾಡುಹಗಲೇ ಕಾರ್ಪೊರೇಟರ್ ಪುತ್ರಿಯ ಭೀಕರ ಕೊಲೆ : ಆರೋಪಿಯ ಬಂಧನ ಹುಬ್ಬಳ್ಳಿ : ಇಂದು ಹುಬ್ಬಳ್ಳಿ ನಗರದಲ್ಲಿ ಹಾಡು ಹಗಲೇ ಕಾರ್ಪೊರೇಟರ್ ಪುತ್ರಿ ಯನ್ನು ಭೀಕರವಾಗಿ ಕೊಲೆ ಮಾಡಿದ್ದು,ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿ ನೇಹ ಹಿರೇಮಠ ಎನ್ನುವ ಯುವತಿಯನ್ನು ಚಾಕುವಿನಿಂದ ಇರಿದು ಭೀಕರವಾಗಿ ಕೊಲೆಗೈಯಲಾಗಿದೆ. ಹುಬ್ಬಳ್ಳಿ ಧಾರವಾಡ ಪಾಲಿಕೆ ಸದಸ್ಯ ನಿರಂಜನ್ ಹಿರೇಮಠ ಪುತ್ರಿ ನೇಹ ಎಂದು ಹೇಳಲಾಗುತ್ತಿದೆ.ಇದರಿಂದ ಹುಬ್ಬಳ್ಳಿ ಜನತೆ ಬೆಚ್ಚಿಬಿದ್ದಿದ್ದಾರೆ ಹಾಡು ಹಗಲೇ ಕಾಲೇಜಿನಲ್ಲಿ …
Read More »Monthly Archives: ಏಪ್ರಿಲ್ 2024
ಬೆಂಗಳೂರು ಗ್ರಾಮಾಂತರ, ಮಂಡ್ಯದಲ್ಲಿ ವರ್ಷದ ಮೊದಲ ಮಳೆ
ಗುರುವಾರ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ವ್ಯಾಪಕ ಮಳೆಯಾಗುತ್ತಿದೆ. ಉತ್ತರ ಮತ್ತು ಮಧ್ಯ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಆಲಿಕಲ್ಲು ಸಹಿತ ಮಳೆಯಾಗುತ್ತಿದೆ. ಆದರೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಇನ್ನೂ ಮಳೆ ದರ್ಶನ ನೀಡಿಲ್ಲ. ಗುರುವಾರ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯಲ್ಲಿ ತಿಳಿಸಿತ್ತು. ಅದರಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವರ್ಷದ ಮೊದಲ ಮಳೆ ದಾಖಲಾಗಿದೆ. ಗುರುವಾರ …
Read More »ಬೆಂಗಳೂರಿನ ಸಾರಕ್ಕಿ ಪಾರ್ಕ್ ನಲ್ಲಿ ಡಬಲ್ ಮರ್ಡರ್
ಬೆಂಗಳೂರು: ರಾಜಧಾನಿ ಬೆಂಗಳೂರಿನ ಜನನಿಬಿಡ ಪಾರ್ಕ್ ಒಂದರಲ್ಲಿ ಹಾಡಹಗಲೇ ಜೋಡಿ ಕೊಲೆ ನಡೆದಿದೆ. ಬೆಂಗಳೂರಿನ ಸಾರಕ್ಕಿ ಬಳಿಯಿರುವ ಪಾರ್ಕ್ ನಲ್ಲಿ ಸುರೇಶ್ ಹಾಗೂ ಅನುಷಾ ಎಂಬುವವರನ್ನು ಬರ್ಬರವಾಗಿ ಹತ್ಯೆಗೈದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಇಂದು ಸಂಜೆ 4:15ರ ಸುಮಾರಿಗೆ ಸುರೇಶ್ ಹಾಗೂ ಅನುಷಾ ಎಂಬುವವರ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ ಮಾಡಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಜೆ.ಪಿ.ನಗರ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
Read More »ಕನಕಗಿರಿಯಲ್ಲಿ ಕರಡಿ ದಾಳಿಗೆ ವೃದ್ಧ ಬಲಿ
ಕನಕಗಿರಿ (ಕೊಪ್ಪಳ ಜಿಲ್ಲೆ): ತಾಲ್ಲೂಕಿನ ರಾಂಪುರ ಗ್ರಾಮದ ಕೆರೆ ಪರಿಸರದಲ್ಲಿ ಗುರುವಾರ ವೃದ್ದರೊಬ್ಬರ ಮೇಲೆ ಕರಡಿ ದಾಳಿ ಮಾಡಿದ್ದು ಅವರು ಮೃತಪಟ್ಟಿದ್ದಾರೆ. ಹುಡೇಜಾಲಿ ಗ್ರಾಮದ ಚೆನ್ನಪ್ಪ ಮಡಿವಾಳ (74) ಮೃತಪಟ್ಟವರು. ಕರಡಿ ವೃದ್ದನ ಕುತ್ತಿಗೆಗೆ ಬಾಯಿ ಹಾಕಿದ್ದರಿಂದ ದೇಹವೆಲ್ಲ ರಕ್ತಸಿಕ್ತವಾಗಿತ್ತುತೀವ್ರ ಗಾಯಗೊಂಡಿದ್ದ ಚೆನ್ನಪ್ಪ ಅವರನ್ನು ಕೊಪ್ಪಳದ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಿದ್ದು ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಡಿಸೆಂಬರ್ನಲ್ಲಿ ಗ್ರಾಮದ ಆಂಜನೇಯ ದೇವಸ್ಥಾನಕ್ಕೆ ರಾತ್ರಿ ವೇಳೆಯಲ್ಲಿ ಬಂದು ಭಕ್ತರು ಮೂರ್ತಿಗೆ ಹಾಕಿದ್ದ ಎಣ್ಣೆ ನೆಕ್ಕಿತ್ತು.
Read More »ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ
ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಸಿದೆ. ಚಿಕ್ಕೋಡಿ ಅಭಿವೃದ್ಧಿಯೆಡೆಗೆ ಮೊದಲ ಹೆಜ್ಜೆಯಿದು! ಈ ಸುದೀರ್ಘ ಪಯಣದಲ್ಲಿ ನಿಮ್ಮ ಬೆಂಬಲ ಸದಾ ನನ್ನೊಂದಿಗಿರಲಿ. ಈ ವೇಳೆ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಸತೀಶ ಜಾರಕಿಹೊಳಿ ರವರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಶ್ರೀಮತಿ ಲಕ್ಷ್ಮೀ ಹೆಬ್ಬಾಳ್ಕರ್, ಮಾಜಿ ಡಿಸಿಎಂ ಹಾಗೂ ಅಥಣಿ ಶಾಸಕರಾದ ಶ್ರೀ ಲಕ್ಷ್ಮಣ ಸವದಿ, ಹಿರಿಯರು ಹಾಗೂ ವಿಧಾನ ಪರಿಷತ್ …
Read More »ನೀರಿಲ್ಲದಿದ್ದರೇನು..? ಬಿಯರ್ ಇದೆಯಲ್ಲ.. : ಬೆಂಗಳೂರಲ್ಲಿ ಬಿಯರ್ಗೆ ಫುಲ್ ಡಿಮ್ಯಾಂಡ್!
ಬೆಂಗಳೂರು : ರಾಜ್ಯದಲ್ಲಿ ಬಿಸಿಲಿನ ತಾಪಮಾನ ದಿನದಿಂದ ಹೆಚ್ಚಾಗುತ್ತಿದ್ದು, ಬಿಯರ್ಗೂ ಬೇಡಿಕೆ ಹೆಚ್ಚಾಗಿದೆ. ಮದ್ಯಪ್ರಿಯರು ಹಾಟ್ ಡ್ರಿಂಕ್ಸ್ ಗುಡ್ಬೈ ಹೇಳಿ ಕೋಲ್ಡ್ ಬಿಯರ್ ಸೇವನೆಗೆ ಮುಂದಾಗಿದ್ದಾರೆ. ರಾಜ್ಯದಲ್ಲಿ ಕಳೆದ 15 ದಿನಗಳಲ್ಲಿ ಬರೋಬ್ಬರಿ 23.5 ಲಕ್ಷ ಕಾರ್ಟನ್ ಬಾಕ್ಸ್ ಬಿಯರ್ ಮಾರಾಟವಾಗಿದೆ.ಕಳೆದ ವರ್ಷಕ್ಕಿಂತ ಈ ವರ್ಷ ಬಿಯರ್ ಮಾರಾಟದಲ್ಲಿ ಏರಿಕೆಯಾಗಿದ್ದು, ದಾಖಲೆ ಬರೆದಿದೆ. ಈ ವರ್ಷ ಶೇ.61ರಷ್ಟು ಮಾರಾಟ ಹೆಚ್ಚಾಗಿದೆ. ಕಳೆದ ಏಪ್ರಿಲ್ನಲ್ಲಿ 38.6 ಲಕ್ಷ ಬಾಕ್ಸ್ ಬಿಯರ್ ಮಾರಾಟವಾಗಿತ್ತು. …
Read More »ಬಸ್ ಎಲ್ಲಾ ಫುಲ್ಲು..ವೋಟ್ ಹಾಕಲು ಊರಿಗೆ ಹೋಗೋದು ಹೇಗಪ್ಪಾ.!
ಬೆಂಗಳೂರು: ಲೋಕಸಭೆ ಚುನಾವಣೆ ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ನಡೆಯಲಿದೆ. ಏಪ್ರಿಲ್ 26 ರಂದು ಕರ್ನಾಟಕದ ಬಹುತೇಕ ಕಡೆ ಮತ್ತು ಕೇರಳದಲ್ಲಿ ಚುನಾವಣೆ ನಡೆಯಲಿದೆ. ಇದೀಗ ಚುನಾವಣೆ ಸಂದರ್ಭದಲ್ಲಿ ಮತದಾನ ಮಾಡಲು ರಾಜಧಾನಿ ಬೆಂಗಳೂರಿನಿಂದ ತಮ್ಮ ತಮ್ಮ ಊರಿನ ಕಡೆ ತೆರಳುವವರ ಸಂಖ್ಯೆ ಹೆಚ್ಚಾಗಿದೆ.ಹೀಗಾಗಿ ಬಸ್ ಗಳು, ರೈಲುಗಳು ಎಲ್ಲವೂ ಫುಲ್ ರಶ್!.. ಯಾವ ಬಸ್, ರೈಲು ನೋಡಿದರೂ ಸೋಲ್ಡ್ ಔಟ್ ಎಂದು ತೋರಿಸುತ್ತಿವೆ. ಬೆಂಗಳೂರಿನಿಂದ ರಾಜ್ಯದ ವಿವಿಧ ಭಾಗಗಳಿಗೆ ಹೊರಡುವ ಕೆಎಸ್ …
Read More »ಬೆಂಗಳೂರಿನಲ್ಲಿ ಕೃತಕ ನೀರಿನ ಕೊರತೆ: ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಬೆಲ್ಲದ್ ಆರೋಪ
ಹುಬ್ಬಳ್ಳಿ, ಏಪ್ರಿಲ್ 18: ಬೆಂಗಳೂರಿನಲ್ಲಿ ನೀರಿಗೆ ಹಾಹಾಕಾರ ಸೃಷ್ಟಿಯಾಗಿದೆ. ಇದೇ ವಿಚಾರವಾಗಿ ರಾಜಕೀಯ ಪಕ್ಷಗಳು ಕೆಸರೆರಚಾಟ ಮುಂದುವರೆಸಿವೆ. ಇದೀಗ ಬೆಂಗಳೂರಿನಲ್ಲಿ ಕೃತಕ ನೀರಿನ ಕೊರತೆ ಸೃಷ್ಟಿ ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ ನಡೆಯುತ್ತಿದೆ ಎಂದು ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ಆರೋಪಿಸಿದರು. ಹುಬ್ಬಳ್ಳಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಕೃತಕ ನೀರಿನ ಅಭಾವ ಸೃಷ್ಟಿಸಿ ದುಬಾರಿ ಬೆಲೆಗೆ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡುತ್ತಿದ್ದಾರೆ. ಇದು ಕಾಂಗ್ರೆಸ್ ಸರ್ಕಾರ …
Read More »ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
ಕಲಬುರಗಿ: ರಾಜ್ಯದಲ್ಲಿರುವ ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ ಎರಡು ಸಾವಿರ ಬರ ಪರಿಹಾರ ನೀಡಿದೆ ಎಂದು ಬಿಜೆಪಿ ರಾಜ್ಯಾಧಕ್ಷ ಬಿ.ವೈ.ವಿಜಯೇಂದ್ರ ಆರೋಪ ಮಾಡಿದರು. ನಗರದ ಜಿಲ್ಲಾ ಚುನಾವಣಾ ಕಚೇರಿ ಮುಂಭಾಗದಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಉಮೇಶ ಜಾಧವ್ ನಾಮಪತ್ರ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ಹಿಂದೆ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಬರಗಾಲದಲ್ಲಿ 18-20 ಸಾವಿರ ರೂ.ಪರಿಹಾರ ನೀಡಲಾಗಿದೆ. ಆದರೆ, ಈಗಿನ ಸಿದ್ದರಾಮಯ್ಯ ಸರ್ಕಾರ ಕೇವಲ ಎರಡು ಸಾವಿರ ರೂಪಾಯಿಗಳನ್ನು ಭಿಕ್ಷುಕರಂತೆ ರೈತರಿಗೆ …
Read More »ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ
ಹೊಸದಿಲ್ಲಿ: 2024ರ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನವು ಎ. 19ರಂದು(ಶುಕ್ರವಾರ) ನಡೆಯಲಿದ್ದು, ಬುಧವಾರ ಸಂಜೆ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದೆ. ಒಟ್ಟು 21 ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ 102 ಲೋಕಸಭೆ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಜತೆಗೆ, ಅರುಣಾಚಲ ಮತ್ತು ಸಿಕ್ಕಿಂ ರಾಜ್ಯಗಳ ವಿಧಾನಸಭೆಗೂ ಮತದಾನ ನಡೆಯಲಿದೆ. ಮೊದಲ ಹಂತದಲ್ಲಿ 8 ಕೇಂದ್ರ ಸಚಿವರು, ಇಬ್ಬರು ಮಾಜಿ ಮುಖ್ಯಮಂತ್ರಿಗಳು, ಒಬ್ಬರು ಮಾಜಿ ರಾಜ್ಯಪಾಲರ ಅದೃಷ್ಟ ಪರೀಕ್ಷೆ ನಡೆಯಲಿದೆ. ಮೊದಲ …
Read More »