Breaking News

Monthly Archives: ಏಪ್ರಿಲ್ 2024

ಅಕ್ರಮ ಆಸ್ತಿ ಗಳಿಕೆ ಕೇಸ್ ದಾಖಲೆ ಒದಗಿಸಲು ಡಿಸಿಎಂ ಡಿಕೆಶಿಗೆ ಲೋಕಾಯುಕ್ತ ನೋಟಿಸ್

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಲೋಕಾಯುಕ್ತ ಸಂಸ್ಥೆಯಿಂದ ನೋಟಿಸ್ ನೀಡಲಾಗಿದೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ದಾಖಲೆ ಒದಗಿಸಲು ನೋಟಿಸ್ ನೀಡಲಾಗಿದೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಿಬಿಐ ತನಿಖೆಯನ್ನು ಸರ್ಕಾರ ರದ್ದು ಮಾಡಿದ್ದು, ಲೋಕಾಯುಕ್ತ ತನಿಖೆಗೆ ಆದೇಶಿಸಿತ್ತು. ಲೋಕಾಯುಕ್ತ ಸಂಸ್ಥೆಯಲ್ಲಿ ಡಿಸಿಎಂ ಡಿಕೆ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಸಿಬಿಐಗೆ ನೀಡಿರುವ ದಾಖಲೆ ಮತ್ತು ಮಾಹಿತಿ ಒದಗಿಸುವಂತೆ ಲೋಕಾಯುಕ್ತ ಪೊಲೀಸರು ಡಿಸಿಎಂ ಡಿಕೆಶಿಗೆ ನೋಟಿಸ್ ನೀಡಿದ್ದಾರೆ.

Read More »

‘ಆರೋಗ್ಯ ಚಿಂತನ ಮಾಲಿಕೆ’ 12 ಕೃತಿಗಳ ಬಿಡುಗಡೆ

ಬೆಂಗಳೂರು: ವಸಂತ ಪ್ರಕಾಶನ ವತಿಯಿಂದ ಡಾ. ವಸುಂಧರಾ ಭೂಪತಿ ಅವರ ಸಂಪಾದಕತ್ವದಲ್ಲಿ ಮೂಡಿಬಂದಿರುವ ‘ಆರೋಗ್ಯ ಚಿಂತನ ಮಾಲಿಕೆ’ ಯ 4ನೇ ಕಂತಿನ 12 ಕೃತಿಗಳ ಲೋಕಾರ್ಪಣೆ ಮತ್ತು ಪದ್ಮಶ್ರೀ ಪುರಸ್ಕೃತ ಡಾ. ಸಿ.ಆರ್. ಚಂದ್ರಶೇಖರ್ ಅವರ ಅಭಿನಂದನಾ ಸಮಾರಂಭ ಏ. 13ರಂದು ಆಯೋಜಿಸಲಾಗಿದೆ.   ನಗರದ ಕರ್ನಾಟಕ ಚಿತ್ರಕಲಾ ಪರಿಷತ್ತು ಆವರಣದಲ್ಲಿ ಅಂದು ಬೆಳಗ್ಗೆ 10.30ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ ಸಾಹಿತಿ ಡಾ. ಕೆ. ಮರುಳಸಿದ್ದಪ್ಪ ಕೃತಿಗಳ ಲೋಕಾರ್ಪಣೆ ಮಾಡಲಿದ್ದಾರೆ. ಲೇಖಕಿಯರಾದ …

Read More »

ದೇಶದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದಕ್ಕೆ ಚಾನ್ಸೇ ಇಲ್ಲ

ಹಾವೇರಿ : ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯ ರಾಜಕಾರಣದಲ್ಲಿ ಎಲ್ಲಾ ಪಕ್ಷದ ನಾಯಕರುಗಳು ಅಭ್ಯರ್ಥಿಗಳು ಪರಸ್ಪರ ಟೀಕೆ ವಾಗ್ದಾಳಿ ನಡೆಸುವುದು ಸಹಜ ಇದೀಗ ರಾಜ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಡೆಸಿದ್ದು ದೇಶದಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಬರುವುದು ಚಾನ್ಸೇ ಇಲ್ಲ ಎಂದು ಭವಿಷ್ಯ ನಡೆದಿದ್ದಾರೆ.   ಹಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 543 ಸ್ಥಾನಗಳ ಪೈಕಿ ಕಾಂಗ್ರೆಸ್ ಸ್ಪರ್ಧಿಸಿರುವುದು 200 ಕ್ಷೇತ್ರಗಳಲ್ಲಿ ಕಾಂಗ್ರೆಸ್ ನವರ ಗ್ಯಾರಂಟಿಯನ್ನು …

Read More »

ಎಂಪಿ ಚುನಾವಣೆ ಫಲಿತಾಂಶ ಬಳಿಕ ಕಾಂಗ್ರೆಸ್ ಧೂಳಿಪಟ; ವಿಜಯೇಂದ್ರ

ಹಾವೇರಿ : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಇಂದು ಹಾವೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಆಗಿರುವ ಬಸವರಾಜ್ ಬೊಮ್ಮಾಯಿ ಪರ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಲೋಕಸಭೆ ಚುನಾವಣೆ ಬಳಿಕ ಕಾಂಗ್ರೆಸ್ ಧೂಳಿಪಟವಾಗುತ್ತದೆ ಎಂದು ಭವಿಷ್ಯ ನುಡಿದರು ರಾಜ್ಯದಲ್ಲಿ ಮುಂದೆ ಚುನಾವಣೆ ನಡೆದರೆ ಬಿಜೆಪಿಗೆ ಸ್ಪಷ್ಟ ಬಹುಮತ ಬರಬೇಕು. ಬಿಜೆಪಿಗೆ ಸ್ಪಷ್ಟ ಬಹುಮತ ಬರುವವರೆಗೂ ಮನೆಯಲ್ಲಿ ಕೂರುವುದಿಲ್ಲ ಎಂದು ಹಾವೇರಿಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ …

Read More »

ತೋಟದಲ್ಲಿ ಬಾಡೂಟ ವ್ಯವಸ್ಥೆ: ಶಾಮಿಯಾನ, ಕುರ್ಚಿ ತೆಗೆಸಿದ ಅಧಿಕಾರಿಗಳು

ರಾಮನಗರ: ತಾಲ್ಲೂಕಿನ ಬಿಡದಿ ಹೋಬಳಿಯ ಕೇತಗಾನಹಳ್ಳಿಯಲ್ಲಿರುವ ಜೆಡಿಎಸ್ ಅಧ್ಯಕ್ಷ ಹಾಗೂ ಮಂಡ್ಯ ಕ್ಷೇತ್ರದ ಅಭ್ಯರ್ಥಿ ಎಚ್‌.ಡಿ. ಕುಮಾರಸ್ವಾಮಿ ಅವರ ತೋಟದ ಮನೆಯಲ್ಲಿ ರಾಜಕೀಯ ಮುಖಂಡರಿಗೆ ಬಾಡೂಟ ವ್ಯವಸ್ಥೆ ಮಾಡಲಾಗಿದೆ ಎಂಬ ಆರೋಪದ ಮೇಲೆ, ಚುನಾವಣಾ ಅಧಿಕಾರಿಗಳ ತಂಡ ಬುಧವಾರ ತೋಟಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು.   ಮಾಗಡಿ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ, ಕ್ಷಿಪ್ರ ಕಾರ್ಯಪಡೆ ತಂಡ (ಎಫ್‌ಎಸ್‌ಟಿ) ಹಾಗೂ ವಿಡಿಯೊ ಪರಿವೀಕ್ಷಣಾ ತಂಡ (ವಿಡಿಯೊ ಪರಿವೀಕ್ಷಣಾ ತಂಡ) ಸ್ಥಳಕ್ಕೆ …

Read More »

ವಿದ್ಯಾರ್ಥಿಗಳು ಮರುಮೌಲ್ಯಮಾಪನ ಹಾಗೂ ಮರು ಅಂಕ ಎಣಿಕೆಗೆ ಅರ್ಜಿ ಸಲ್ಲಿಸಲು ಈ ವೆಬ್ ಗೆ ಲಾಗಿನ್ ಆಗಿ.!

ಬೆಂಗಳೂರು : ದ್ವಿತೀಯ ಪಿಯುಸಿ ಬರೆದ ವಿದ್ಯಾರ್ಥಿಗಳು ಮರುಮೌಲ್ಯಮಾಪನ ಹಾಗೂ ಮರು ಅಂಕ ಎಣಿಕೆಗೆ ಅರ್ಜಿ ಸಲ್ಲಿಸಲು ಇಂದಿನಿಂದಲೇ ಅವಕಾಶ ನೀಡಲಾಗಿದೆ. ಉತ್ತರ ಪತ್ರಿಕೆ ಸ್ಕ್ಯಾನ್ಡ್​​​ ಪ್ರತಿಯನ್ನು ಪಡೆಯಲು ಏಪ್ರಿಲ್​ 16ರ ತನಕ ಅರ್ಜಿ ಸಲ್ಲಿಸಬಹುದು. ಉತ್ತರ ಪತ್ರಿಕೆ ಸ್ಕ್ಯಾನ್ಡ್​​ ಪ್ರತಿಯನ್ನು ಡೌನ್​ಲೋಡ್ ಮಾಡಿಕೊಳ್ಳಲು ಏಪ್ರಿಲ್​ 19ರ ತನಕ, ಮತ್ತು ಮರು ಮೌಲ್ಯಮಾಪನ ಹಾಗೂ ಮರು ಎಣಿಕೆಗೆ ಏಪ್ರಿಲ್​ 14 ರಿಂದ 20ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಪರೀಕ್ಷೆ-2ಕ್ಕೆ ಅರ್ಜಿ ಸಲ್ಲಿಸುವವರು …

Read More »

ಅಬಕಾರಿ ಇಲಾಖೆಯಿಂದ ಒಟ್ಟು 50 ಲಕ್ಷ ಮೌಲ್ಯದ ವಸ್ತುಗಳ ಜಪ್ತಿ

ಕೊಪ್ಪಳ: ಲೋಕಸಭಾ ಚುನಾವಣೆ ಸಂಬಂಧ ನೀತಿ ಸಂಹಿತೆ ಜಾರಿಯಾದ ಮಾ. 16 ರಿಂದ ಏ. 09 ರವರೆಗೆ ಜಿಲ್ಲಾ ಅಬಕಾರಿ ಇಲಾಖೆಯಿಂದ ಒಟ್ಟು 50,61,464 ರೂ. ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ ಎಂದು ಅಬಕಾರಿ ಉಪ ಆಯುಕ್ತ ಬಿ.ಆರ್.ಹಿರೇಮಠ್ ಅವರು ತಿಳಿಸಿದ್ದಾರೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾ. 16 ರಿಂದ ಏ.09 ರವರೆಗೆ ಜಿಲ್ಲಾ ಅಬಕಾರಿ ಇಲಾಖೆಯಿಂದ ಒಟ್ಟು 196 ದಾಳಿಗಳನ್ನು ನಡೆಸಲಾಗಿದ್ದು, 147 ಪ್ರಕರಣಗಳನ್ನು ದಾಖಲಿಸಲಾಗಿದೆ. ಈ ಪ್ರಕರಣಗಳಿಗೆ ಸಂಬಂಧಿಸಿದಂತೆ …

Read More »

ಬಾಡಿಗೆ ಮನೆ ಪ್ರವೇಶ ಮಾಡಿದ ಶೆಟ್ಟರ್

ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಮಾತು ಕೊಟ್ಟಂತೆ ಬೆಳಗಾವಿಯಲ್ಲಿ ಮನೆ ಮಾಡಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ ವ್ಯಾಪ್ತಿಯ ಕುಮಾರಸ್ವಾಮಿ ಬಡಾವಣೆಯಲ್ಲಿ ಎರಡು ಮಹಡಿಯ ಮನೆಯನ್ನು ಬಾಡಿಗೆ ಪಡೆದಿರುವ ಜಗದೀಶ್ ಶೆಟ್ಟರ್ ಯುಗಾದಿ ಹಬ್ಬದ ದಿನವೇ ಗೃಹಪ್ರವೇಶ ಮಾಡಿದ್ದಾರೆ. ಹೊಸ ಮನೆಯಲ್ಲಿ ಜಗದೀಶ್ ಶೆಟ್ಟರ್ ಕುಟುಂಬದ ಸದಸ್ಯರು ವಿಶೇಷ ಪೂಜೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಜಗದೀಶ ಶೆಟ್ಟರ್ ಅವರ ಪತ್ನಿ ಶಿಲ್ಪಾ ಶೆಟ್ಟರ್, ಸಂಸದೆ ಮಂಗಲ ಅಂಗಡಿ, ಸೊಸೆ …

Read More »

ಅವಳಿ ಜವಳಿಗೆ ಪಿಸಿಎಂಸಿಯಲ್ಲಿ ಅವಳಿ ಅಂಕ ವ್ಯತ್ಯಾಸ!

ಸಾಗರ: ನಗರದ ಸರ್ಕಾರಿ ಜ್ಯೂನಿಯರ್ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡಿರುವ ಅವಳಿ ಜವಳಿ ಹೆಣ್ಣು ಮಕ್ಕಳಿಬ್ಬರು ಈ ಬಾರಿ ನಡೆದ ಪಿಯುಸಿ ಪರೀಕ್ಷೆಯಲ್ಲಿ ಪಿಸಿಎಂಸಿ ವಿಷಯದಲ್ಲಿ ಅವಳಿ ಅಂಕಗಳ ವ್ಯತ್ಯಾಸದೊಂದಿಗೆ ಉತ್ತಮ ಸಾಧನೆ ಮಾಡಿರುವ ಫಲಿತಾಂಶ ಬುಧವಾರ ಲಭ್ಯವಾಗಿದೆ.

Read More »

ಹೆಬ್ಬಾಳ್ಕರ್ ಪಂಚಮಸಾಲಿ ಹೌದೊ ಅಲ್ಲವೋ ಎನ್ನುವ ಗೊಂದಲ ವಿಚಾರ ಇಡೀ ಜಗತ್ತಿಗೆ ಗೊತ್ತಿದೆ.:ಬಸವ ಜಯ ಮೃತ್ಯುಂಜಯ ಸ್ವಾಮೀಜಿ

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರಿಂದಲೇ ಸಮಾಜದವರು ಅವರನ್ನು ನಮ್ಮವರು ಎಂದು ಒಪ್ಪಿಕೊಂಡಿದ್ದೇವೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಸ್ಪಷ್ಟನೆ ನೀಡಿದರು. ನಗರದಲ್ಲಿ ಬುಧವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು ಚುನಾವಣೆಯ ಸಂದರ್ಭದಲ್ಲಿ ಯಾರೂ ಸಹ ವಿಷಯಾಂತರ ಮಾಡಬಾರದು. ನಮ್ಮವರು ಎನ್ನುವ ಕಾರಣಕ್ಕೆ ಮೀಸಲಾತಿ ಹೋರಾಟದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಪಾಲ್ಗೊಂಡಿದ್ದರು ಎಂದು ಸಮರ್ಥಿಸಿಕೊಂಡರು. ಯಾರೊ ಒಬ್ಬರು ಏನೇನೋ ಮಾತನಾಡುತ್ತಾರೆ …

Read More »