Breaking News

Daily Archives: ಮೇ 5, 2024

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ

ಹುಣಸೂರು: ಶಾಸಕ ಎಚ್‌.ಡಿ.ರೇವಣ್ಣನ ಕಡೆಯವರು ಅಪಹರಿಸಿದ್ದಾರೆ ಎನ್ನಲಾಗಿದ್ದ ಮಹಿಳೆಯನ್ನು ಎಸ್‌ಐಟಿ ತಂಡ ಪತ್ತೆ ಮಾಡಿದೆ. ಪ್ರಕರಣದ ಬೆನ್ನತ್ತಿದ ಎಸ್‌ಐಟಿ ತಂಡ ಆಕೆಗೆ ಎಚ್‌.ಡಿ.ರೇವಣ್ಣನವರ ಬಳಿ ಈ ಹಿಂದೆ ಆಪ್ತ ಕಾರ್ಯದರ್ಶಿಯಾಗಿದ್ದ ಹುಣಸೂರು ತಾಲೂಕಿನ ಕಾಳೇನ ಹಳ್ಳಿಯ ರಾಜಗೋಪಾಲರ ತೋಟದ ಮನೆಯಲ್ಲಿ ಆಶ್ರಯ ಕಲ್ಪಿಸಲಾಗಿದೆ ಎಂಬ ಸುಳಿವಿನಂತೆ, ಶುಕ್ರವಾರ ಮಧ್ಯರಾತ್ರಿ 20 ಮಂದಿಯ ಪೊಲೀಸರ ತಂಡ ಭೇಟಿ ನೀಡಿ ಪರಿಶೀಲಿಸಿತು.ಆದರೆ ಆಕೆಯ ಸುಳಿವು ಸಿಕ್ಕಿರಲಿಲ್ಲ. ಶನಿವಾರವೂ ತೋಟದಲ್ಲಿ ಬೆಳ್ಳಂ ಬೆಳಗ್ಗೆ ತೀವ್ರ …

Read More »

ಅರಣ್ಯದಲ್ಲಿ ಅರೆಬೆಂದ ಮಹಿಳೆ ಶವ

ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ಹೋಬಳಿಯ ನಾರಸಿಂಹನಹಳ್ಳಿ ಗ್ರಾಮದ ಸಮೀಪದ ಅರಣ್ಯದಲ್ಲಿ ಕೊಳೆತ ಸ್ಥಿತಿಯಲ್ಲಿ ದೊರೆತಿದ್ದ ಅರೆಬೆಂದ ಮಹಿಳೆ ಶವದ ಗುರುತು ಪತ್ತೆಯಾಗಿದೆ. ಶವವನ್ನು ದೊಡ್ಡಬಳ್ಳಾಪುರದ ಕರೇನಹಳ್ಳಿ ನಿವಾಸಿ ವೀಣಾ (22) ಅವರದ್ದು ಎಂದು ಗುರುತಿಸಲಾಗಿದೆ.ಮಹಿಳೆಯ ಗಂಡ ರವಿಚಂದ್ರ ತಾನೇ ಕೊಲೆ ಮಾಡಿರುವುದಾಗಿ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಬೇರೆ ಮಹಿಳೆಯೊಂದಿಗೆ ರವಿಚಂದ್ರ ಅಕ್ರಮ ಸಂಬಂಧ ಹೊಂದಿದ್ದಾನೆ ಎಂಬ ಅನುಮಾನದೊಂದಿಗೆ ಪತ್ನಿ ವೀಣಾ ಸದಾ ಜಗಳ ತೆಗೆಯುತ್ತಿದ್ದಳು. ಇದರಿಂದ ಬೇಸತ್ತ …

Read More »

6 ವರ್ಷದ ಮಗುವನ್ನು ನಾಲಾಕ್ಕೆಸೆದ ತಾಯಿ: ಮುಂದುವರಿದ ಮಗುವಿನ ಶೋಧ ಕಾರ್ಯಾಚರಣೆ

ದಾಂಡೇಲಿ: ಗಂಡ-ಹೆಂಡತಿಯ ಜಗಳದಿಂದಾಗಿ 6 ವರ್ಷದ ಗಂಡು ಮಗುವೊಂದನ್ನು ನಾಲಾಕ್ಕೆ ಬಿಸಾಕಿದ ಅಮಾನವೀಯ ಘಟನೆ ಮೇ.4ರ ಶನಿವಾರ ರಾತ್ರಿ ದಾಂಡೇಲಿ ತಾಲೂಕಿನ ಹಾಲಮಡ್ಡಿ ಎಂಬಲ್ಲಿ ನಡೆದಿದೆ. ಹಾಲಮಡ್ಡಿಯ ಬಾಡಿಗೆ ಮನೆಯೊಂದರಲ್ಲಿ ವಾಸವಿರುವ ರವಿಕುಮಾರ್ ಶೆಳ್ಳೆ ಮತ್ತು ಸಾವಿತ್ರಿ ದಂಪತಿಗಳು ಪರಸ್ಪರ ಜಗಳ‌ ಮಾಡಿಕೊಂಡಿದ್ದಾರೆ.ಜಗಳದಿಂದ ಮಾನಸಿಕವಾಗಿ‌ ನೊಂದ ಸಾವಿತ್ರಿ 6 ವರ್ಷದ ಮಗು ವಿನೋದ್ ನನ್ನು ಅಲ್ಲೆ ಹತ್ತಿರದಲ್ಲಿರುವ ದೊಡ್ಡ ನಾಲಾಕ್ಕೆ ಎಸೆದು ಬಂದಿದ್ದಾಳೆ. ಸ್ವಲ್ಪ ಹೊತ್ತಿನ‌ ಬಳಿಕ ಈ ಘಟನೆಯಿಂದ ಮಾನಸಿಕವಾಗಿ …

Read More »

ದುಬೈನ ಅಪಾರ್ಟ್ ಮೆಂಟ್ ನಲ್ಲಿ ‘ಪ್ರಜ್ವಲ್ ರೇವಣ್ಣ’ ವಾಸ್ತವ್ಯ!

ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ವಿದೇಶಕ್ಕೆ ಹಾರಿರುವ ಪ್ರಜ್ವಲ್ ರೇವಣ್ಣ ಅವರು ಸದ್ಯ ದುಬೈನ ಅಪಾರ್ಟ್ ಮೆಂಟ್ ನಲ್ಲಿ ವಾಸ್ತವ್ಯ ಹೂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಸದ್ಯ ದುಬೈನಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಅಪಾರ್ಟ್ಮೆಂಟ್ ಒಂದರಲ್ಲಿ ವಾಸ್ತವ ಹೂಡಿದ್ದಾರೆ.ದುಬೈನಲ್ಲಿ ಕೇರಳ ಮೂಲದ ವ್ಯಕ್ತಿಯ ಅಪಾರ್ಟ್ಮೆಂಟ್ ನಲ್ಲಿ ಪ್ರಜ್ವಲ್ ರೇವಣ್ಣ ವಾಸ್ತವ್ಯ ಹೂಡಿದ್ದಾರೆ ಎಂದು ತಿಳಿದುಬಂದಿದೆ.ರಾತ್ರಿ ಬೆಂಗಳೂರಿಗೆ ಬಂದು ನಾಳೆ ಎಸ್‌ಐಟಿ ಮುಂದೆ ಹಾಜರಾಗುವ ಸಾಧ್ಯತೆ ಇದೆ ಎನ್ನಲಾಗಿದೆ.   …

Read More »