Breaking News

Daily Archives: ಮೇ 16, 2024

ಈ ಬಾರಿ ಹುಟ್ಟುಹಬ್ಬ ಆಚರಿಸಿಕೊಳ್ಳದಿರಲು ಮಾಜಿ ಪ್ರಧಾನಿ H.D. ದೇವೇಗೌಡ ತೀರ್ಮಾನ

ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರು ಮೇ 18ರಂದು 91 ವರ್ಷ ಪೂರೈಸಿ 92ನೇ ವಸಂತಕ್ಕೆ ಕಾಲಿಡಲಿದ್ದು, ಆದರೆ ಈ ಬಾರಿ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳದಿರಲು ತೀರ್ಮಾನಿಸಿದ್ದಾರೆ. ಈ ಕುರಿತಂತೆ ಅವರು ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಅಭಿಮಾನಿಗಳು ಹಾಗೂ ಜಾತ್ಯತೀತ ಜನತಾದಳ ಪಕ್ಷದ ಕಾರ್ಯಕರ್ತರಲ್ಲಿ ನನ್ನ ವಿನಂತಿ. ಇದೇ ತಿಂಗಳ 18 ರಂದು ನಾನು 91 ವರ್ಷ ಪೂರೈಸಿ 92ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿದ್ದು, ಕಾರಣಾಂತರಗಳಿಂದ ನಾನು ಜನ್ಮದಿನ …

Read More »

ಆರೋಪಿಯ ಬಂಧಿಸದಿರುವುದು ಪೊಲೀಸರ ವೈಫಲ್ಯಕ್ಕೆ ಸಾಕ್ಷಿ: ದಿಂಗಾಲೇಶ್ವರ ಸ್ವಾಮೀಜಿ

ಆರೋಪಿಯ ಬಂಧಿಸದಿರುವುದು ಪೊಲೀಸರ ವೈಫಲ್ಯಕ್ಕೆ ಸಾಕ್ಷಿ: ದಿಂಗಾಲೇಶ್ವರ ಸ್ವಾಮೀಜಿ ಹುಬ್ಬಳ್ಳಿ: ಅಂಜಲಿ ಅಂಬಿಗೇರ ಕೊಲೆ ಪ್ರಕರಣದ ಆರೋಪಿಯನ್ನು ಈವರೆಗೂ ಬಂಧಿಸಿಲ್ಲ. ಇದು ಪೊಲೀಸ್ ಇಲಾಖೆಯ ವೈಫಲ್ಯಕ್ಕೆ ಸಾಕ್ಷಿ ಎಂದು ಶಿರಹಟ್ಟಿಯ ಫಕೀರ ದಿಂಗಾಲೇಶ್ವರ ಸ್ಬಾಮೀಜಿ ಹೇಳಿದರು. ಗುರುವಾರ ಅಂಜಲಿ ಅವರ ಕುಟುಂಬದವರಿಗೆ ಸಾಂತ್ವನ ಹೇಳಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರೋಪಿಯ ಬೆದರಿಕೆ ಕುರಿತು ಅಂಜಲಿ ಅವರ ಸಹೋದರಿ ಪೊಲೀಸರ ಗಮನಕ್ಕೆ ತಂದಿದ್ದಳು. ರಕ್ಷಣೆ ನೀಡುವಂತೆ ಕೋರಿದ್ದಳು. ಪೊಲೀಸರು ಆಗಲೇ ಎಚ್ಚೆತ್ತುಕೊಂಡಿದ್ದರೆ …

Read More »

ಯುವಕರ‌ ಬದುಕು‌ ಹಾಳು ಮಾಡಿದ‌ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ: ಈಶ್ವರ್ ಖಂಡ್ರೆ

ಯುವಕರ‌ ಬದುಕು‌ ಹಾಳು ಮಾಡಿದ‌ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ: ಈಶ್ವರ್ ಖಂಡ್ರೆ ಬೀದರ್: ಬಿಜೆಪಿಯವರಿಗೆ ಹೇಳಿಕೊಳ್ಳಲು‌ ಯಾವುದೇ ವಿಷಯವಿಲ್ಲ. ಸರ್ಕಾರಿ ಸೌಮ್ಯದ ಸಂಸ್ಥೆಗಳನ್ನು ಖಾಸಗೀಕರಣ ಮಾಡಿ ಯುವಕರ‌ ಬದುಕು‌ ಹಾಳು ಮಾಡಿದ‌ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ ಎಂದು ಸಚಿವ ಈಶ್ವರ ಖಂಡ್ರೆ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ವಿಧಾನ ಪರಿಷತ್ ನ ಆರು ಸ್ಥಾನಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಲಿದ್ದು, ಬಿಜೆಪಿ‌ ಸ್ವೀಪ್ ಆಗಲಿದೆ. ರಾಜ್ಯದ ಎಲ್ಲೆಡೆ …

Read More »

ಅಂಜಲಿ ಕೊಲೆಗೆ ಪೊಲೀಸರೇ ಕಾರಣ: ಬಸವರಾಜ ಬೊಮ್ಮಾಯಿ

ಗದಗ: ಅಂಜಲಿ ಕೊಲೆ ಬೆದರಿಕೆ ದೂರು ನೀಡಿದ್ದರೂ ಆರೋಪಿಯನ್ನು ಬಂಧಿಸದೇ ಪೊಲೀಸರು ಪರೋಕ್ಷವಾಗಿ ಅಂಜಲಿ ಕೊಲೆಗೆ ಕಾರಣರಾಗಿದ್ದಾರೆ. ರಾಜ್ಯದಲ್ಲಿ ಪೊಲೀಸರನ್ನು ರಾಜಕೀಯ ವಿರೋಧಿಗಳ ದಮನಕ್ಕಾಗಿ ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.   ಗದಗನಲ್ಲಿ‌ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿ ನೇಹಾ ಹಾಗೂ ಅಂಜಲಿ ಹತ್ಯೆ ಪ್ರಕರಣ ಕುರಿತು.ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದರು. ಈ ಪ್ರಕರಣದಲ್ಲಿ ಸಂಪೂರ್ಣವಾಗಿ ಪೊಲೀಸರ ವೈಫಲ್ಯವಿದೆ. ನೇಹಾ ತರನಾಗಿ‌ ಕೊಲೆ …

Read More »

ಹುಬ್ಬಳ್ಳಿ, ಶಿರಸಿಯಲ್ಲಿ ಧಾರಾಕಾರ ಮಳೆ

ಹುಬ್ಬಳ್ಳಿ: ಧಾರವಾಡ, ಉತ್ತರ ಕನ್ನಡ ಮತ್ತು ಬೆಳಗಾವಿ ಜಿಲ್ಲೆಯಲ್ಲಿ ಮಂಗಳವಾರ ಸಂಜೆ ಧಾರಾಕಾರ ಮಳೆಯಾಯಿತು. ಮಳೆಯಿಂದ ಉಂಟಾದ ತಂಪಾದ ವಾತಾವರಣ ಜನರಿಗೆ ಖುಷಿ ಕೊಟ್ಟಿತು. ಧಾರವಾಡ ನಗರ ಸೇರಿ ಜಿಲ್ಲೆಯ ಹುಬ್ಬಳ್ಳಿ ತಾಲ್ಲೂಕಿನ ಕುಸುಗಲ್, ಬ್ಯಾಹಟ್ಟಿ ಸೇರಿ ವಿವಿಧ ಗ್ರಾಮಗಳಲ್ಲಿ ಮಳೆಯಾಗಿದ್ದು, ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗಿದೆ. ಮಳೆಯಿಂದ ಹುಬ್ಬಳ್ಳಿಯ ಸ್ಟೇಷನ್ ರಸ್ತೆ, ಕೊಯಿನ್ ರಸ್ತೆ ಜಲಾವೃತಗೊಂಡಿತು. ಜನರು ಅದರಲ್ಲೇ ಪ್ರಯಾಸಪಟ್ಟು ಸಾಗಿದರು. ಉತ್ತರ ಕನ್ನಡ ಜಿಲ್ಲೆಯ ಶಿರಸಿ, ಕಾರವಾರ, ಅಂಕೋಲಾ, …

Read More »

ಬೆಳೆ ಪರಿಹಾರಕ್ಕೆ ಆಗ್ರಹ: ರೈತರಿಂದ ಗ್ರಾಮ ಲೆಕ್ಕಾಧಿಕಾರಿ ಕಚೇರಿಗೆ ಬೀಗ

ಕಾಗವಾಡ: ಬರ ಪರಿಹಾರಕ್ಕೆ ಆಗ್ರಹಿಸಿ ತಾಲ್ಲೂಕಿನ ಶಿರಗುಪ್ಪಿ ಗ್ರಾಮದ ರೈತರು ಗ್ರಾಮ ಲೆಕ್ಕಾಧಿಕಾರಿ ಕಚೇರಿಗೆ ಬೀಗ ಜಡಿದು ಮಂಗಳವಾರ ಪ್ರತಿಭಟನೆ ನಡೆಸಿದರು. ‘ಗ್ರಾಮದಲ್ಲಿ ಒಂದು ಸಾವಿರಕ್ಕೂ ಅಧಿಕ ರೈತರಿದ್ದೇವೆ. ಕೇವಲ ಶೇ 10% ರಷ್ಟು ರೈತರಿಗೆ ಮಾತ್ರ ಬರ ಪರಿಹಾರ ನೀಡಲಾಗಿದೆ. ಈ ಕುರಿತು ಗ್ರಾಮ ಲೆಕ್ಕಾಧಿಕಾರಿಗಳನ್ನು ವಿಚಾರಿಸಿದರೆ ಹಾರಿಕೆಯ ಉತ್ತರ ನೀಡುತ್ತಿದ್ದಾರೆ’ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು. ‘ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ರೈತರ ಸಮಸ್ಯೆ ಆಲಿಸಿ, ಎಲ್ಲರಿಗೂ …

Read More »

ಬರಪೀಡಿತ ಪ್ರದೇಶ ಘೋಷಣೆಗೆ ಮನವಿ’

ಮೂಡಲಗಿ: ಮೂಡಲಗಿ ತಾಲ್ಲೂಕಿನ ಹೊಸಯರಗುದ್ರಿ ಗ್ರಾಮವನ್ನು ‘ಬರಪೀಡಿತ ಪ್ರದೇಶ’ ಎಂದು ಸರ್ಕಾರವು ಘೋಷಿಸಬೇಕು ಎಂದು ರೈತರು ಮಂಗಳವಾರ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು. ರಾಜ್ಯದ ಹಲವು ತಾಲ್ಲೂಕುಗಳ ಗ್ರಾಮಗಳ ರೈತರಿಗೆ ಬರಪೀಡಿತ ಪ್ರದೇಶವೆಂದು ಘೋಷಿಸಿ ಬರಪರಿಹಾರವನ್ನು ರೈತರ ಖಾತೆಗಳಿಗೆ ಜಮಾ ಮಾಡಿದೆ. ಆದರೆ ಮೂಡಲಗಿ ತಾಲ್ಲೂಕಿನಲ್ಲಿ ಬರಗಾಲ ಇದ್ದರೂ ಕೇವಲ 13 ಗ್ರಾಮಗಳನ್ನು ಬರಪೀಡಿತ ಪ್ರದೇಶ ಎಂದು ಘೋಷಿಸಿದೆ. ಹೊಸಯರಗುದ್ರಿ ಬರಗಾಲ ತಾಂಡವಾಡುತ್ತಿದ್ದರೂ ಬರಪಿಡಿತ ಎಂದು ಗುರುತಿಸಿಲ್ಲ. ಬರಪೀಡಿತ ಬಗ್ಗೆ ಸಮೀಕ್ಷೆ …

Read More »

ಬೆಳಗಾವಿ: ಒಂದೂವರೆ ತಿಂಗಳಲ್ಲೇ 10 ಬಾಲ್ಯವಿವಾಹ!

ಬೆಳಗಾವಿ: ಸರ್ಕಾರದ ಕಠಿಣ ಕ್ರಮದ ಎಚ್ಚರಿಕೆ ಮತ್ತು ಜಾಗೃತಿ ಮಧ್ಯೆಯೂ ಜಿಲ್ಲೆಯಲ್ಲಿ ಒಂದೂವರೆ ತಿಂಗಳಲ್ಲೇ 10 ಬಾಲ್ಯವಿವಾಹ ನಡೆದಿವೆ. ಜಾತ್ರೆ, ಉತ್ಸವಗಳ ಸಂದರ್ಭದಲ್ಲಿ ಗ್ರಾಮಗಳಲ್ಲಿ ಸಾಮೂಹಿಕ ವಿವಾಹ ಸಮಾರಂಭಗಳು ನಡೆಯುತ್ತಿದ್ದು, ಅಲ್ಲಿ ಬಾಲ್ಯ ವಿವಾಹಗಳು ನಡೆಯುವ ಸಾಧ್ಯತೆ ಹೆಚ್ಚಿವೆ ಎಂದು ಅಧಿಕಾರಿಗಳು ಕಣ್ಣಿಟ್ಟಿದ್ದಾರೆ. 2022-23ನೇ ಸಾಲಿನಲ್ಲಿ 16 ಮತ್ತು 2023-24ರಲ್ಲಿ 23 ಬಾಲ್ಯವಿವಾಹ ನೆರವೇರಿದ್ದವು. ಆದರೆ, ಈ ಸಲ ಒಂದೂವರೆ ತಿಂಗಳಲ್ಲೇ (2024ರ ಏಪ್ರಿಲ್‌ 1ರಿಂದ ಮೇ 13ರವರೆಗೆ) 10 ಬಾಲ್ಯವಿವಾಹ …

Read More »

ಮೋದಿ ವಿರುದ್ಧ ಕಣಕ್ಕಿಳಿದಿದ್ದವನ ನಾಮಪತ್ರ ರಿಜೆಕ್ಟ್!!

ವಾರಣಾಸಿ: ವಾರಣಾಸಿ ಲೋಕಸಭಾ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ವಿರುದ್ಧ ಸ್ಪರ್ಧೆಗಿಳಿದಿದ್ದ ಹಾಸ್ಯನಟ ಶ್ಯಾಮ್ ರಂಗೀಲಾ (Shyam Rangeela) ಸೇರಿದಂತೆ 33 ಅಭ್ಯರ್ಥಿಗಳ ನಾಮಪತ್ರಗಳನ್ನು ಚುನಾವಣಾ ಆಯೋಗ ತಿರಸ್ಕರಿಸಿದೆ. ಉತ್ತರ ಪ್ರದೇಶದ ವಾರಣಾಸಿ ಕ್ಷೇತ್ರಕ್ಕೆ 40 ಅಭ್ಯರ್ಥಿಗಳು ನಾಮಪತ್ರಗಳನ್ನು ಸಲ್ಲಿಸಿದ್ದರು. ಅದರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅನುಕರಿಸುವ ವೀಡಿಯೊಗಳಿಗೆ ಹೆಸರುವಾಸಿಯಾಗಿರುವ ಹಾಸ್ಯನಟ ಶ್ಯಾಮ್ ರಂಗೀಲಾ ಅವರು ಮೇ 14ರಂದು ವಾರಣಾಸಿ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಸಿದ್ದರು. …

Read More »

ರಾಜ್ಯ ಸರ್ಕಾರದ ಕೈ ಸೇರಿದ ಗುಪ್ತಚರ ವರದಿ; ಮೈತ್ರಿಗೆ ಶಾಕ್-‌ ಕಾಂಗ್ರೆಸ್‌ ಗೆಲ್ಲುವ ಸ್ಥಾನಗಳೆಷ್ಟು?

ರಾಜ್ಯ ಸರ್ಕಾರದ ಕೈ ಸೇರಿದ ಗುಪ್ತಚರ ವರದಿ; ಮೈತ್ರಿಗೆ ಶಾಕ್-‌ ಕಾಂಗ್ರೆಸ್‌ ಗೆಲ್ಲುವ ಸ್ಥಾನಗಳೆಷ್ಟು? ಬೆಂಗಳೂರು, ಮೇ 16: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡ ಬಿಜೆಪಿ ಹಾಗೂ ಜೆಡಿಎಸ್‌ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಹೆಚ್ಚು ಸ್ಥಾನಗಳನ್ನ ಗೆಲ್ಲುವ ನಿಟ್ಟಿನಲ್ಲಿ ಮೈತ್ರಿಯಾಗಿ ಲೋಕಸಭಾ ಚುನಾವಣೆಯನ್ನ ಎದುರಿಸಿದ್ದು, ಇದೀಗ ಸೋಲು ಗೆಲುವಿನ ಲೆಕ್ಕಾಚಾರದಲ್ಲಿದ್ದಾರೆ.   ಲೋಕಸಭಾ ಚುನಾವಣೆಯಲ್ಲಿ ಪ್ರತಿ ಬಾರಿಯೂ ಮೋದಿ ಅಲೆ ವರ್ಕ್‌ ಆಗುತ್ತೆ ಎನ್ನುವ ನಿರೀಕ್ಷೆ ಬಿಜೆಪಿಯಲ್ಲಿತ್ತು. …

Read More »