Breaking News

Daily Archives: ಮೇ 17, 2024

ಇನ್ನುಂದೆ ವಿಧಾನಸೌಧ ಪ್ರವೇಶಕ್ಕೆ ಬೇಕಾಬಿಟ್ಟಿ ಪಾಸ್ʼಗಳನ್ನು ನೀಡುವುದಿಲ್ಲ: ಪರಮೇಶ್ವರ್‌

ಬೆಂಗಳೂರು: ಇನ್ನು ಮುಂದೆ ವಿಧಾನಸೌಧ ಪ್ರವೇಶಕ್ಕೆ ಬೇಕಾಬಿಟ್ಟಿ ಪಾಸ್‌ಗಳನ್ನು ವಿತರಿಸುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್‌ ಹೇಳಿದ್ದಾರೆ. ವಿಧಾನಸೌಧ ದ್ವಾರದ ಮೆಟಲ್ ಡಿಟೆಕ್ಟರ್‌, ನೂತನ ಬ್ಯಾಗೇಜ್‌ಸ್ಕ್ಯಾನರ್‌ ಯಂತ್ರಗಳನ್ನು ಪರಮೇಶ್ವರ್‌ ಪರಿಶೀಲಿಸಿದರು. ವಿಧಾನಸೌಧ ಡಿಸಿಪಿ ನೇತೃತ್ವದಲ್ಲಿ ಭದ್ರತಾ ಕ್ರಮಗಳ ಪರಿಶೀಲನೆ ಹಾಗೂ ಮಾಹಿತಿಯನ್ನು ಪರಮೇಶ್ವರ್ ಪಡೆದರು. ನಂತರ ಮಾತನಾಡಿದ ಅವರು, ವಿಧಾನಸೌಧಕ್ಕೆ ಬರಬೇಕು ಅಂದರೆ ಇನ್ನು ಮುಂದೆ ಕ್ಯೂ ಆರ್ ಕೋಡ್ ಇರುವ ಪಾಸ್‌ಗಳನ್ನು ನೀಡಲಾಗುತ್ತದೆ. ವಿಧಾನಸೌಧದಲ್ಲಿ ಯಾರಾದರೂ ಮೆಟಲ್ ಸಾಧನ ತೆಗೆದುಕೊಂಡು …

Read More »

ಮೇ20ರಂದು ರೇವಣ್ಣ ಭವಿಷ್ಯ ನಿರ್ಧಾರ

ಬೆಂಗಳೂರು: ಮನೆ ಕೆಲಸದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ (Sexual Harassment) ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಹಾಗೂ ಹೊಳೆನರಸೀಪುರ ಶಾಸಕ ಎಚ್​ಡಿ ರೇವಣ್ಣಗೆ (HD Revanna) ನೀಡಿದ್ದ ಮಧ್ಯಂತರ ಜಾಮೀನನ್ನ ಕೋರ್ಟ್​ ಸೋಮವಾರದವರೆಗೆ ಮುಂದುವರಿಸಿದೆ. ಶುಕ್ರವಾರ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ವಿಚಾರಣೆ ಮುಂದುವರಿಸಿದ 42ನೇ ಸೆಷನ್​ ನ್ಯಾಯಾಲಯ ಕೋರ್ಟ್​ ತೀರ್ಪನ್ನು ಸೋಮವಾರಕ್ಕೆ ಕಾಯ್ದಿರಿಸಿ ಆದೇಶ ಹೊರಡಿಸಿದೆ. ಅಲ್ಲಿಯವರೆಗೆ ರೇವಣ್ಣಗೆ ನೀಡಿರುವ ಮಧ್ಯಂತರ ಜಾಮೀನು ಮುಂದುವರಿಯಲಿದೆ ಎಂದು ತಿಳಿಸಿದೆ. …

Read More »

ಧೋನಿ vs ಕೊಹ್ಲಿ; ಚಿನ್ನಸ್ವಾಮಿಯಲ್ಲಿ ಮಹಿ ಕೊನೆಯ ಪಂದ್ಯವೇ?

ಬೆಂಗಳೂರು: ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿ ರೋಚಕ ಹಂತವನ್ನು ತಲುಪಿದ್ದು, ಶನಿವಾರ ನಡೆಯಲಿರುವ ಹೈ ವೋಲ್ಟೇಜ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಚೆನ್ನೈ ಸೂಪರ್ ಕಿಂಗ್ಸ್ ಸವಾಲನ್ನು ಎದುರಿಸಲಿದೆ. ಪ್ಲೇ-ಆಫ್ ಹಂತಕ್ಕೆ ಪ್ರವೇಶಿಸಲು ಇತ್ತಂಡಗಳಿಗೂ ಈ ಪಂದ್ಯ ‘ಮಾಡು ಇಲ್ಲವೇ ಮಡಿ’ ಎನಿಸಿದೆ. ಐಪಿಎಲ್‌ನಲ್ಲಿ ಮಹೇಂದ್ರ ಸಿಂಗ್ ಧೋನಿ ಹಾಗೂ ವಿರಾಟ್ ಕೊಹ್ಲಿ ನಡುವಣ ಹಣಾಹಣಿಗೂ ವೇದಿಕೆ ಸಜ್ಜುಗೊಂಡಿದೆ. ಮೈದಾನದ ಹೊರಗೆ ಧೋನಿ ಹಾಗೂ …

Read More »

ಪ್ರಜ್ವಲ್​ರನ್ನು ಭಾರತಕ್ಕೆ ಕರೆತರುವ ಎಲ್ಲಾ ಪ್ರಯತ್ನಗಳು ನಡೆಯುತ್ತಿವೆ: ಗೃಹ ಸಚಿವ ಡಾ. ಪರಮೇಶ್ವರ್

ಬೆಂಗಳೂರು: ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಿರುವ ಹಾಸನದ ಹಾಲಿ ಸಂಸದ, ಪ್ರಜ್ವಲ್​ ರೇವಣ್ಣಗೆ ಸಂಬಂಧಿಸಿದ ಲೈಂಗಿಕ ಪ್ರಕರಣ ಇದೀಗ ಹಲವು ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಮತ ಚಲಾಯಿಸಿದ ಬಳಿಕ ರಾಜ್ಯ ಬಿಟ್ಟು ವಿದೇಶಕ್ಕೆ ಪರಾರಿಯಾದ ಪ್ರಜ್ವಲ್, ತನ್ನ ವಿರುದ್ಧ ಕೇಳಿಬಂದ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಒಂದು ತಿಂಗಳಾಗುತ್ತಿದ್ದರೂ ಸಹ ಇನ್ನೂ ತವರಿಗೆ ಮರಳಿಲ್ಲ. ಸದ್ಯ ಇದು ಭಾರೀ ಅನುಮಾನಕ್ಕೆ ಕಾರಣವಾಗಿದೆ. ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ …

Read More »

ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ

ಬೆಳಗಾವಿ: ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬೆಳಗಾವಿ, ಚಿಕ್ಕೋಡಿ ಸೇರಿದಂತೆ ರಾಜ್ಯದಲ್ಲಿ 14 ರಿಂದ 17 ಸೀಟುಗಳನ್ನು ಕಾಂಗ್ರೆಸ್ ಗೆಲ್ಲುತ್ತದೆ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಶುಕ್ರವಾರ ಹೇಳಿಕೆ ನೀಡಿದ್ದಾರೆ. ‘ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನ ಗೆಲ್ಲುವ ವಿಶ್ವಾಸ ಇದೆ. ಸಚಿವರ ಮಕ್ಕಳಿಗೆ ಟಿಕೆಟ್‌ ಸಿಕ್ಕಿದ್ದರಿಂದ ಪಕ್ಷಕ್ಕೆ ಅನುಕೂಲವೇ ಆಗಿದೆ. 2019 ರ ಲೋಕಸಭೆ ಚುನಾವಣೆಗೆ ಹೋಲಿಸಿದರೆ ಈ ಬಾರಿ ನಾವು ಹೆಚ್ಚಿನ ಸ್ಥಾನ ಗೆಲ್ಲಲು ಅವಕಾಶ ಇದೆ’ …

Read More »

ಬೂಟು ನೆಕ್ಕುವುದನ್ನು ನಿಲ್ಲಿಸಿ, ಇದು ನಿಮ್ಮನ್ನು ಮೆಗಾಸ್ಟಾರ್‌ ಮಾಡಲ್ಲ;ನಟಿ ರಶ್ಮಿಕಾ ಮಂದಣ್ಣಗೆ ಅಂಜಲಿ ನಿಂಬಾಳ್ಕರ್ ಚಾಟಿ!

ಬೆಂಗಳೂರು, ಮೇ. 17: ಕನ್ನಡ ಸಿನಿಮಾದಿಂದ ಬಾಲಿವುಡ್ ಚಿತ್ರರಂಗದಲ್ಲಿ ಹೆಸರು ಮಾಡುತ್ತಿರುವ ನಟಿ ರಶ್ಮಿಕಾ ಮಂದಣ್ಣ ಅವರು ಹೊಸದಾಗಿ ಉದ್ಘಾಟನೆಗೊಂಡ ಅಟಲ್ ಸೇತು ಸೇತುವೆಯನ್ನು ಶ್ಲಾಘಿಸಿದ್ದಾರೆ. ಇದು ಮುಂಬೈನ ಸಾರಿಗೆ ಪ್ರಯಾಣದಲ್ಲಿ ಗಮನಾರ್ಹ ಬದಲಾವಣೆ ಮಾಡಿದೆ ಎಂದು ಹೇಳಿದ್ದರು. ಇದಕ್ಕೆ ಕಾಂಗ್ರೆಸ್ ನಾಯಕಿ ಅಂಜಲಿ ನಿಂಬಾಳ್ಕರ್ ಕಿಡಿಕಾರಿದ್ದಾರೆ. ಮುಂಬೈನ ಅಟಲ್ ಬಿಹಾರಿ ವಾಜಪೇಯಿ ಸೇವ್ರಿ-ನವ ಶೇವಾ ಅಟಲ್ ಸೇತು ಮತ್ತು ದೇಶದ ಮೂಲಸೌಕರ್ಯ ಅಭಿವೃದ್ಧಿ ಬಗ್ಗೆ ನಟಿ ರಶ್ಮಿಕಾ ಮಂದಣ್ಣ …

Read More »

ಚಿನ್ನಸ್ವಾಮಿ ಕ್ರೀಡಾಂಗಣದಲ್ಲೇ ‘ಬ್ಲ್ಯಾಕ್’ ಟಿಕೇಟ್ ಮಾರಾಟ

ಬೆಂಗಳೂರು : ನಾಳೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಚೆನ್ನೈ ಸೂಪರ್ ಕಿಂಗ್ಸ್ (CSK) ನಡುವೆ ಅತ್ಯಂತ ರೋಚಕವಾದಂತಹ ಪಂದ್ಯ ನಡೆಯಲಿದೆ. ಹೀಗಾಗಿ ಇಂದೇ ಅಭಿಮಾನಿಗಳು ಸ್ಟೇಡಿಯಂನತ್ತ ಆಗಮಿಸಿ ಮುಂಗಡವಾಗಿ ಟಿಕೆಟ್ ಬುಕ್ ಮಾಡುತ್ತಿದ್ದಾರೆ.   ಆದರೆ ಚಿನ್ನಸ್ವಾಮಿ ಕ್ರೀಡಾಂಗಣದವರೇ ಬ್ಲಾಕ್ ನಲ್ಲಿ ಟಿಕೆಟ್ ಮಾರಾಟ ಮಾಡುತ್ತಿದ್ದಾರೆ ಎಂದು ಅಭಿಮಾನಿಗಳು ಇದೀಗ ಗಂಭೀರವಾದಂತಹ ಆರೋಪ ಮಾಡುತ್ತಿದ್ದಾರೆ. ಹೌದು ಬೆಂಗಳೂರಿನಲ್ಲಿ ಐಪಿಎಲ್ ಟಿಕೆಟ್ ಗಾಗಿ …

Read More »

ಹಂತಕ ಗಿರೀಶ್ ಗೂ ಅಂಜಲಿಗೂ 15 ದಿನಗಳ ಮೊದಲೇ ಮದುವೆಯಾಗಿತ್ತು!

ಹುಬ್ಬಳ್ಳಿ: ಮೇ 15ರ ನಸುಕಿನ ಜಾವ ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿ ನಡೆದಿದ್ದ ಅಂಜಲಿ ಅಂಬಿಗೇರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಂತಕ ಗಿರೀಶ್ ಸಾವಂತನನ್ನು ಪೊಲೀಸರು ಬಂಧಿಸಿದ್ದಾರೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ವಿಚಾರಗಳು ಹೊರಬರುತ್ತಿದೆ. ಮೈಸೂರಿನ ಬಾರ್ ಆಯಂಡ್ ರೆಸ್ಟೋರೆಂಟ್‌ನಲ್ಲಿ ಕೆಲಸ ಮಾಡುತ್ತಿದ್ದ ಆರೋಪಿ ಗಿರೀಶ ಸಾವಂತ ಮತ್ತು ಹತ್ಯೆಯಾದ ಅಂಜಲಿ ಅಂಬಿಗೇರ ಪರಸ್ಪರ ಪ್ರೀತಿಸುತ್ತಿದ್ದರು. 15 ದಿನಗಳ ಹಿಂದೆ ದೇವಸ್ಥಾನದಲ್ಲಿ ಮದುವೆಯಾಗಿದ್ದರು ಎನ್ನಲಾಗುತ್ತಿದೆ. ಅಂಜಲಿ ವಾರದ ಮುಂಚೆ …

Read More »

ರೈತರಿಗೆ ಸಕಾಲದಲ್ಲಿ ಹೊಸ ಸಾಲ ಸರಕಾರ ತುರ್ತಾಗಿ ಸ್ಪಂದಿಸಲಿ

ಕಳೆದ ವರ್ಷದ ಮಳೆಗಾಲ ಋತುವಿನಲ್ಲಿ ವರುಣ ಕೈಕೊಟ್ಟಿದ್ದರಿಂದಾಗಿ ರಾಜ್ಯದಲ್ಲಿ ಬರಗಾಲ ಆವರಿಸಿ, ಬೆಳೆ ಹಾನಿಗೊಳಗಾಗಿ ರೈತರು ತೀವ್ರ ಸಂಕಷ್ಟಕ್ಕೀಡಾಗಿದ್ದಾರೆ. ಇದೇ ವೇಳೆ ಹವಾಮಾನ ವೈಪರೀತ್ಯದಿಂದಾಗಿ ಈ ವರ್ಷದ ಬೇಸಗೆಯಲ್ಲಿ ರಾಜ್ಯದ ಬಹುತೇಕ ಎಲ್ಲೆಡೆ ತಾಪಮಾನ ಅಧಿಕವಾಗಿ ಪರಿಸ್ಥಿತಿಯನ್ನು ಮತ್ತಷ್ಟು ಹದಗೆಡುವಂತೆ ಮಾಡಿತ್ತು. ಇನ್ನು ಬರ ಪರಿಹಾರ ವಿಚಾರವಾಗಿ ಕೇಂದ್ರ ಮತ್ತು ರಾಜ್ಯ ಸರಕಾರಗಳ ನಡುವೆ ಹಗ್ಗ ಜಗ್ಗಾಟ ನಡೆದು ಕೊನೆಗೂ ಕೇಂದ್ರ ಸರಕಾರ ಅನುದಾನ ಬಿಡುಗಡೆ ಮಾಡಿದ್ದು ಈಗ ರಾಜ್ಯ …

Read More »

Pen drive ಕೊಡುವೆ, ತನಿಖೆ ನಡೆಸುತ್ತೀರಾ?: ಸಿಎಂಗೆ ಎಚ್‌ಡಿಕೆ ಸವಾಲು

ಮೈಸೂರು: “ನನ್ನ ಬಳಿಯಿರುವ ಭ್ರಷ್ಟಾ ಚಾರದ ಮಾಹಿತಿಯ ಪೆನ್‌ಡ್ರೈವ್‌ ನಿಮಗೆ ಕೊಡುತ್ತೇನೆ. ಅದರ ವಿರುದ್ಧ ಕ್ರಮ ತೆಗೆದು ಕೊಳ್ಳುವ ತಾಕತ್ತು ನಿಮಗಿದೆಯೇ?’- ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಹಾಕಿರುವ ಸವಾಲು.   ಗುರುವಾರ ಸುದ್ದಿಗಾರರ ಜತೆ ಮಾತನಾಡಿದ ಕುಮಾರಸ್ವಾಮಿ, “ನನ್ನ ಬಳಿಯಿರುವ ಪೆನ್‌ಡ್ರೈವ್‌ನಲ್ಲಿ ಅಧಿಕಾರಿಗಳು ಭ್ರಷ್ಟಾಚಾರಕ್ಕೆ ಹಣ ಹೊಂದಿಸಲು ಯಾವ ರೀತಿ ಪರದಾಡುತ್ತಿದ್ದಾರೆ ಎಂಬ ಬಗ್ಗೆ ಮಾಹಿತಿ ಇದೆ. ಆ ಪೆನ್‌ಡ್ರೈವ್‌ ಕೊಟ್ಟರೆ ಈ ಬಗ್ಗೆ …

Read More »