Breaking News

Daily Archives: ಮೇ 21, 2024

ಜಾಮೀನು ಸಿಕ್ಕರೂ H.D ರೇವಣ್ಣಗೆ ತಪ್ಪದ ಸಂಕಷ್ಟ

ಬೆಂಗಳೂರು : ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹೆಚ್.ಡಿ ರೇವಣ್ಣಗೆ ಜಾಮೀನು ಮಂಜೂರು ಆಗಿದೆ. ಜಾಮೀನು ಸಿಕ್ಕರೂ ರೇವಣ್ಣಗೆ ಸಂಕಷ್ಟ ತಪ್ಪಿಲ್ಲ, ಎಸ್ ಐ ಟಿ ಹೈಕೋರ್ಟ್ ಮೆಟ್ಟಿಲೇರಿದೆ. ಹೌದು. ಜಾಮೀನು ಪಡೆದಿದ್ದ ಹೆಚ್ ಡಿ ರೇವಣ್ಣಗೆ ವಿಶೇಷ ತನಿಖಾ ತಂಡ ( ಎಸ್ ಐ ಟಿ) ಶಾಕ್ ನೀಡಿದೆ. ಜನಪ್ರತಿನಿಧಿಗಳ ನ್ಯಾಯಾಲಯದ ಜಾಮೀನು ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗಿದೆ. ರೇವಣ್ಣ ಜಾಮೀನು ಆದೇಶ ವಜಾ …

Read More »

ಲೋಕಸಭೆ ಚುನಾವಣೆ ನಂತರ ಸಚಿವ ಸಂಪುಟ ಪುನಾರಚನೆ: ಸಿಎಂ

ಬೆಂಗಳೂರು: ಲೋಕಸಭೆ ಚುನಾವಣೆ ನಂತರ ಸಚಿವ ಸಂಪುಟ ಪುನಾರಚನೆಯ ಕುರಿತು ಎದ್ದಿರುವ ಊಹಾಪೋಹಗಳಿಗೆ ಸಿಎಂ ಸಿದ್ದರಾಮಯ್ಯ ಸೋಮವಾರ ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರಿನ ಪ್ರೆಸ್ ಕ್ಲಬ್ ಆಯೋಜಿಸಿದ್ದ ‘ಮೀಟ್ ದಿ ಪ್ರೆಸ್’ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ‘ಲೋಕಸಭೆ ಚುನಾವಣೆ ನಂತರ ಯಾವುದೇ ಸಚಿವ ಸಂಪುಟ ಪುನಾರಚನೆ ಸುದ್ದಿಗಳಲ್ಲಿ ಹುರುಳಿಲ್ಲ. ಆ ಬಗ್ಗೆ ನಾವಿನ್ನೂ ಯೋಚಿಸಿಲ್ಲ ಎಂದರು. ಸಚಿವ ಸಂಪುಟ ಪುನಾರಚನೆ ಮಾಡುವ ಯೋಚನೆ ಸದ್ಯಕ್ಕಿಲ್ಲ. ಯಾವುದೇ ಕಾರಣಕ್ಕೂ ನಾವು ಯಾವುದೇ ಗ್ಯಾರಂಟಿ …

Read More »

ಮೂಲ ಸೌಕರ್ಯ ಕಲ್ಪಿಸದ ಲೇಔಟ್‌ ಡೆವಲಪರ್‌ಗಳಿಗೆ ನೋಟೀಸ್: ಡಿಸಿಎಂ

ಬೆಂಗಳೂರು: ಯಲಹಂಕ ವಲಯದ ಗೇಟೆಡ್ ಕಮ್ಯುನಿಟಿ ವಿಲ್ಲಾಗಳಲ್ಲಿ ಹಠಾತ್ ಪ್ರವಾಹ ಸಂಭವಿಸಿದ ಒಂದು ದಿನದ ನಂತರ, ಉಪಮುಖ್ಯಮಂತ್ರಿ ಮತ್ತು ಬೆಂಗಳೂರು ಅಭಿವೃದ್ಧಿ ಸಚಿವ ಡಿಕೆ ಶಿವಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು. ಸೂಕ್ತ ಮೂಲಸೌಕರ್ಯ ಕಲ್ಪಿಸದ ಖಾಸಗಿ ಲೇಔಟ್‌ಗಳ ಡೆವಲಪರ್‌ಗಳಿಗೆ ನೋಟಿಸ್ ಜಾರಿ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು. ನಗರದ ರಾಜಕಾಲುವೆಗಳನ್ನು ಪರಿಶೀಲಿಸಿದ ನಂತರ ಮಾತನಾಡಿದ ಉಪಮುಖ್ಯಮಂತ್ರಿ, ‘ಖಾಸಗಿ ಬಡಾವಣೆಗಳಲ್ಲಿ ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದ ಕಾರಣ ಮನೆಗಳಿಗೆ …

Read More »

ಕೊಯ್ನಾ ಅಣೆಕಟ್ಟೆಯಿಂದ ನೀರು ಬಿಡಲು ಮಹಾರಾಷ್ಟ್ರ ಮುಖ್ಯಮಂತ್ರಿ ಒಪ್ಪಿಗೆ

ಬೆಳಗಾವಿ: ಕೊಯ್ನಾ ಅಣೆಕಟ್ಟೆಯಿಂದ ಕೃಷ್ಣಾ ನದಿಗೆ ನೀರು ಬಿಡಲು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಒಪ್ಪಿಗೆ ನೀಡಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಪತ್ರ ಬರೆದಿದ್ದರು.ಇದಾದ ಕೆಲವೇ ದಿನಗಳಲ್ಲಿ ಕರ್ನಾಟಕಕ್ಕೆ ನೀರು ಬಿಡಲು ಶಿಂಧೆ ಸಮ್ಮತಿ ನೀಡಿದ್ದಾರೆ.   ಮಹಾರಾಷ್ಟ್ರದ ಜಲಸಂಪನ್ಮೂಲ ಇಲಾಖೆ ಅಧಿಕಾರಿಗಳು ಶೀಘ್ರದಲ್ಲೇ ಕೃಷ್ಣಾ ನದಿಗೆ ನೀರು ಬಿಡಲಿದ್ದಾರೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಇದಲ್ಲದೆ, ಸೋಮವಾರ ರಾಯಬಾಗ ತಾಲೂಕಿಗೆ …

Read More »

ಸಾಲ ತೀರಿಸದ್ದಕ್ಕೆ ಪತ್ನಿ-ಪುತ್ರನ ಗೃಹಬಂಧನ; ಮನನೊಂದ ರೈತ ಆತ್ಮಹತ್ಯೆ

ಬೆಳಗಾವಿ: ಹುಕ್ಕೇರಿ ತಾಲೂಕಿನ ಇಸ್ಲಾಂಪುರ ಗ್ರಾಮದಲ್ಲಿ ರೈತನೋರ್ವ ವಿಷಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಭೀಕರ ಬರಕ್ಕೆ ಬೆಳೆ ಕೈಕೊಟ್ಟಿದ್ದು ಜೀವನ ನಡೆಸಲು ಸಾಲ ಮಾಡಿದ್ದರು. ಸಾಲ ಮರುಪಾವತಿ ವಿಳಂಬವಾಗಿದ್ದಕ್ಕೆ ಸಾಲ ನೀಡಿದ್ದ ಮಹಿಳೆ ರೈತನ ಪತ್ನಿ, ಪುತ್ರನಿಗೆ ಗೃಹಬಂಧನ ಮಾಡಿದ್ದಾಳೆ. ಪತ್ನಿ-ಪುತ್ರನನ್ನು ಗೃಹಬಂಧನದಲ್ಲಿ ಇಟ್ಟಿದ್ದಕ್ಕೆ ಮನನೊಂದ ರೈತ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಜು ಖೋತಗಿ‌ ಎಂಬ ರೈತ ಇಸ್ಲಾಂಪುರ ಗ್ರಾಮದ ಸಿದ್ದವ್ವ ಬಯ್ಯನವರ ಎಂಬ ಮಹಿಳೆ ಬಳಿ ಐದು ತಿಂಗಳ ಹಿಂದೆ …

Read More »

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ

ಮಂಗಳೂರು: ನಮ್ಮ ಸರಕಾರ ಬಂದು ಒಂದು ವರ್ಷವಾಗಿದೆ..ನಾವು ಏನೇನು ಮಾಡಿದ್ದೇವೆ ಅಂತ ಜನರಿಗೆ ತಿಳಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದರು. ದ.ಕ ಜಿಲ್ಲೆಯ ಬೆಳ್ತಂಗಡಿಯ ಗುರುವಾಯನಕೆರೆಯಲ್ಲಿ ನಡೆಯಲಿರುವ ಮಾಜಿ ಶಾಸಕ ವಸಂತ ಬಂಗೇರ ಅವರ ಉತ್ತರ ಕ್ರಿಯೆಯಲ್ಲಿ ಭಾಗಿಯಾಗುವುದಕ್ಕೆ ಆಗಮಿಸಿರುವ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ನೀರಾವರಿಗೆ 16000 ಕೋಟಿ ರೂ ಇತ್ತು ಈ ವರ್ಷ 18 ಸಾವಿರ ಕೋಟಿ ಇಟ್ಟಿದ್ದೇವೆ. ಏನು ಮಾಡಿಲ್ಲ ಅಂತ ಅಂದ್ರೆ ಏನು ಹೇಳುವುದು? ಗ್ಯಾರೆಂಟಿಯನ್ನು …

Read More »

ಡ್ರೈವಿಂಗ್‌ ಲೈಸೆನ್ಸ್‌; ಜೂನ್‌ 1ರಿಂದ ಹೊಸ ರೂಲ್ಸ್‌!

ಇನ್ನು ಮುಂದೆ ಚಾಲನಾ ಪರವಾನಗಿ ಪಡೆಯಲು ಸರ್ಕಾರಿ ಪ್ರಾದೇಶಿಕ ಸಾರಿಗೆ ಕಚೇರಿಗೆ (RTO) ಹೋಗಬೇಕಿಲ್ಲ. ಬದಲಾಗಿ ಖಾಸಗಿ ಸಂಸ್ಥೆಗಳಿಂದಲೂ ಚಾಲನಾ ಪರವಾನಗಿ (Driving Licence New Rules) ಪಡೆಯಬಹುದಾಗಿದೆ. ಸರ್ಕಾರವು ಚಾಲನಾ ಪರವಾನಗಿ ಪಡೆಯುವ ನಿಯಮವನ್ನು (New Rules) ಬದಲಾಯಿಸಿದ್ದು, ಜೂನ್ 1ರಿಂದ ಇದು ಜಾರಿಗೆ ಬರಲಿದೆ. ಮೊದಲು ಇದು ಆಯ್ದ ನಗರಗಳಲ್ಲಿ ಮಾತ್ರ ಪ್ರಾಯೋಗಿಕವಾಗಿ ಜಾರಿಯಾಗಲಿದೆ. ಪರಿಸರ ಮಾಲಿನ್ಯ ತಡೆಯುವ ಉದ್ದೇಶದಿಂದ ಸುಮಾರು 9,00,000 ಹಳೆಯ ಸರ್ಕಾರಿ ವಾಹನಗಳನ್ನು …

Read More »

ಅಂಜಲಿ ಪ್ರಕರಣದಲ್ಲಿ ಮತ್ತೋರ್ವ ಪೊಲೀಸ್ ಅಧಿಕಾರಿ ಅಮಾನತು

ಹುಬ್ಬಳ್ಳಿ: ಅಂಜಲಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಮತ್ತೊಬ್ಬ ಪೊಲೀಸ್ ಅಧಿಕಾರಿ ತಲೆದಂಡವಾಗಿದೆ. ಅಂಜಲಿ ಮತ್ತು ನೇಹಾ ಹತ್ಯೆ ಸೇರಿದಂತೆ ವಿವಿಧ ಪ್ರಕರಣದಲ್ಲಿ ಕರ್ತವ್ಯ ಲೋಪ ಹಿನ್ನೆಲೆ, ದಕ್ಷಿಣ ಉಪ ವಿಭಾಗದ ಎಸಿಪಿ ವಿಜಯ್ ಕುಮಾರ್ ತಳವಾರ್ ಅವರನ್ನು ಅಮಾನತು ಮಾಡಲಾಗಿದೆ. ಹುಬ್ಬಳ್ಳಿಯಲ್ಲಿಂದು ಗೃಹಸಚಿವ ಜಿ.ಪರಮೇಶ್ವರ್ ಸುದ್ದಿಗೋಷ್ಠಿ ನಡೆಸಿದ್ದು, ಈ ವೇಳೆ ಮಾತನಾಡಿದ್ದ ಅವರು, ಯಾರೇ ತಪ್ಪು ಮಾಡಿದ್ದರೂ ಯಾವುದೇ ಜಾತಿ ಮತ ನೋಡದೇ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಭರವಸೆ ನೀಡಿದ್ದರು. …

Read More »

ಮೊಟ್ಟೆಗಿಂತ ಹೆಚ್ಚು ಪ್ರೋಟೀನ್ ಬೇಕೇ.? ಹಾಗಿದ್ರೆ, ಈ ‘ಬೇಳೆಕಾಳು’ ಸೇವಿಸಿ,

ದೇಹವನ್ನ ಆರೋಗ್ಯಕರವಾಗಿ ಮತ್ತು ಫಿಟ್ ಆಗಿರಿಸಲು ವಿಟಮಿನ್’ಗಳು, ಖನಿಜಾಂಶಗಳು ಮತ್ತು ಪ್ರೋಟೀನ್’ಗಳು ಅತ್ಯಗತ್ಯ. ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನ ಹೆಚ್ಚಿಸಲು ಪ್ರೋಟೀನ್ ಸಹಾಯ ಮಾಡುತ್ತದೆ. ಆದಾಗ್ಯೂ, ಪ್ರೋಟೀನ್ ಜೊತೆಗೆ ಜೀವಸತ್ವಗಳು ದೇಹದ ಬೆಳವಣಿಗೆಯಿಂದ ರೋಗನಿರೋಧಕ ಶಕ್ತಿಯನ್ನ ಹೆಚ್ಚಿಸಲು ಬಹಳ ಸಹಾಯಕವಾಗಿವೆ. ಮೊಟ್ಟೆಗಳು ಪ್ರೋಟೀನ್‌’ನ ಮೂಲಗಳಲ್ಲಿ ಒಂದಾಗಿದೆ ಎಂದು ವೈದ್ಯರು ಸೂಚಿಸುತ್ತಾರೆ, ಮಕ್ಕಳಿಂದ ವಯಸ್ಕರವರೆಗೂ ಪ್ರತಿಯೊಬ್ಬರೂ ದಿನಕ್ಕೆ ಕನಿಷ್ಠ 1 ಮೊಟ್ಟೆಯನ್ನ ತಿನ್ನಬೇಕು. ಆದಾಗ್ಯೂ, ಧಾನ್ಯಗಳು (ದ್ವಿದಳ ಧಾನ್ಯಗಳು) ಮೊಟ್ಟೆಗಳಿಗಿಂತ ಹೆಚ್ಚಿನ ಪ್ರೋಟೀನ್ …

Read More »

ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

ಬಿಜೆಪಿ ಬಿಜೆಪಿಯಲ್ಲಿ ಹಾಲಿ ಸದಸ್ಯ ಎನ್‌.ರವಿಕುಮಾರ್‌ ಅವರನ್ನು ಮತ್ತೊಂದು ಅವಧಿಗೆ ಆಯ್ಕೆಗೊಳಿಸಬೇಕೆಂಬುದು ಪಕ್ಷದ ವಲಯದಲ್ಲಿ ದೃಢಪಟ್ಟಿದೆ. ಇನ್ನುಳಿದ ಎರಡು ಸ್ಥಾನಗಳನ್ನು ಯಾರಿಗೆ ಕೊಡಬೇಕೆಂಬ ಬಗ್ಗೆ ಪ್ರಾದೇಶಿಕ ಹಾಗೂ ಜಾತಿವಾರು ಚರ್ಚೆ ನಡೆಸಬೇಕಿದೆ. ಇನ್ನೆರಡು ದಿನದಲ್ಲಿ ಈ ಸಂಬಂಧ ಸಭೆ ಸೇರಿ ಸಾಧ್ಯತೆಗಳ ಬಗ್ಗೆ ಪರಿಶೀಲನೆ ನಡೆಸಲು ಬಿಜೆಪಿ ನಿರ್ಧರಿಸಿದೆ. ಮೂರರ ಪೈಕಿ ಒಂದು ಸ್ಥಾನವನ್ನು ಮಾಜಿ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಅವರಿಗೆ ನೀಡಬೇಕೆಂಬ ವಾದ ಕರಾವಳಿ ಭಾಗದ ಶಾಸಕರಿಂದ ಕೇಳಿ …

Read More »