Breaking News

Daily Archives: ಮೇ 22, 2024

ದರೋಡೆಕೋರರನ್ನು ಸಿನಿಮೀಯ ರೀತಿಯಲ್ಲಿ ಬೆನ್ನಟ್ಟಿ ಹಿಡಿದ ಲೇಡಿ ಪಿಎಸ್‌ಐ

ಧಾರವಾಡ: ಬೈಕ್ ನಲ್ಲಿ ಹೊರಟಿದ್ದ ವ್ಯಕ್ತಿಯನ್ನು ದೋಚಿ ಪರಾರಿಯಾದ ಇಬ್ಬರು ದರೋಡೆಕೋರರನ್ನು ಸಿನಿಮೀಯ ರೀತಿಯಲ್ಲಿ ಬೆನ್ನಟ್ಟಿ‌ ಹಿಡಿದ ಘಟನೆ ನಡೆದಿದೆ. ಧಾರವಾಡ ಗ್ರಾಮೀಣ ಠಾಣೆಯ ಪಿಎಸ್‌ಐ ರೇಣುಕಾ ಐರಾಣಿ ನೇತೃತ್ವದಲ್ಲಿ ಬಂಧಿಸಲಾಗಿದ್ದು, ಈ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ‌. ಅಳ್ನಾವರ ರಸ್ತೆಯ ಮಂಡಿಹಾಳ ಗ್ರಾಮದ ಹತ್ತಿರ 4 ಜನ ದರೋಡೆಕೋರರು ಬೈಕ್ ನಲ್ಲಿ ಹೋಗುತ್ತಿದ್ದವನನ್ನ ನಿಲ್ಲಿಸಿ, ಅವನಿಂದ ಮೊಬೈಲ್, ಹಣದ ಪರ್ಸ್ ದೋಚಿಕೊಂಡು ಹೊರಟಿದ್ದಾರೆ‌. ಈ ಬಗ್ಗೆ ಸ್ಥಳೀಯರು ಕೂಡಲೇ ಮಹಿಳಾ ಪಿಎಸ್‌ಐ …

Read More »

ಬೆಳಗಾವಿ: ಬೀರೇಶ್ವರ, ಕರೆಮ್ಮ ಜಾತ್ರೆಯಲ್ಲಿ ಪ್ರಸಾದ ಸೇವಿಸಿ 46 ಭಕ್ತರು ಅಸ್ವಸ್ಥ, ಐವರ ಸ್ಥಿತಿ ಗಂಭೀರ

ಬೀರೇಶ್ವರ, ಕರೆಮ್ಮ ಜಾತ್ರೆಯಲ್ಲಿ ಪ್ರಸಾದ ಸೇವಿಸಿದ್ದ 46 ಜನ ಭಕ್ತರು ಅಸ್ವಸ್ಥಗೊಂಡಿದ್ದು ಐವರ ಸ್ಥಿತಿ ಗಂಭೀರವಾಗಿದೆ. ತೀವ್ರ ಅಸ್ವಸ್ಥಗೊಂಡ ಐವರನ್ನ ಧಾರವಾಡ ಜಿಲ್ಲಾಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಆಸ್ಪತ್ರೆಗೆ ಸ್ಥಳೀಯ ಶಾಸಕ ಭೇಟಿ ನೀಡಿ ಅಗತ್ಯ ಚಿಕಿತ್ಸೆ ನೀಡುವಂತೆ ಸೂಚಿಸಿದ್ದಾರೆ.

Read More »

ಚಾಕೊಲೇಟ್ ಗ್ಯಾಂಗ್​ ಬೆನ್ನಲ್ಲೇ ಆಯಕ್ಟೀವ್ ಆಯ್ತು ಜ್ಯೂಸ್ ಗ್ಯಾಂಗ್:

ಬೆಳಗಾವಿ, ಮೇ 22: ರಾಜ್ಯದಲ್ಲಿ ಕಳ್ಳತನದ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇತ್ತೀಚೆಗೆ ರೈಲಿನಲ್ಲಿ ಚಾಕೊಲೇಟ್ ಗ್ಯಾಂಗ್ ​​ಭಾರಿ ಸದ್ದು ಮಾಡಿತ್ತು. ಕಳೆದ ಕೆಲ ತಿಂಗಳ ಹಿಂದೆ ರೈಲಿನಲ್ಲಿ ಮತ್ತು ಬರುವ ಚಾಕಲೇಟ್​​ ನೀಡಿ ನಗನಾಣ್ಯವನ್ನು ಗ್ಯಾಂಗ್ ದೋಚಿತ್ತು. ಇದೀಗ ಆ ಗ್ಯಾಂಗ್ ಬಳಿಕ ಬಸ್​ನಲ್ಲಿ ಜ್ಯೂಸ್ ಗ್ಯಾಂಗ್(Juice gang)ಆಯಕ್ಟೀವ್ ಆಗಿದೆ. ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ (KSRTC) ಬಸ್​​ನಲ್ಲಿಯೇ ಜ್ಯೂಸ್ ಹಾಗೂ ಬಾಳೆ ಹಣ್ಣು ಕೊಟ್ಟು ನಗನಾಣ್ಯ ದೋಚಿ ಪರಾರಿಯಾಗಿರುವಂತಹ ಘಟನೆ ಹುಬ್ಬಳ್ಳಿಯಿಂದ ಬೆಳಗಾವಿಗೆ ಬರುತ್ತಿದ್ದ ಬಸ್ ನಲ್ಲಿ …

Read More »

ರೈತ ಹೋರಾಟಗಾರ್ತಿ ಜಯಶ್ರೀ ಗುರವನ್ನವರ ನಿಧನ

ರೈತ ಹೋರಾಟಗಾರ್ತಿ ಜಯಶ್ರೀ ಗುರವನ್ನವರ ನಿಧನ ಬೆಳಗಾವಿ:ಜಿಲ್ಲೆಯ ಪ್ರಮುಖ ರೈತ ಹಾಗೂ ಸಾಮಾಜಿಕ ಹೋರಾಟಗಾರ್ತಿ ಜಯಶ್ರೀ ಗುರವಣ್ಣವರ ನಿಧನ ಹೊಂದಿದ್ದಾರೆ. ಅನಾರೋಗ್ಯ ನಿಮಿತ್ತ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಅಸುನೀಗಿದ್ದಾರೆ ಎಂದು ಕುಟುಂಬ ಮೂಲ ಸ್ಪಷ್ಟಪಡಿಸಿದೆ. ಕಬ್ಬಿನ ಬೆಲೆ, ಬೆಳೆಗಳಿಗೆ ಬೆಂಬಲ ಬೆಲೆ, ರೈತರ ಹೊಲಗಳಿಗೆ ರಸ್ತೆ, ನರೇಗಾ ಯೋಜನೆಯ ಸಮರ್ಪಕ ಅನುಷ್ಠಾನ, ಕಾರ್ಮಿಕರ ಬದುಕು ಭವನೆಗಳ ಬಗೆಗೆ ಜಯಶ್ರೀ ತೀವ್ರ ಹೋರಾಟ ನಡೆಸಿ ಗಮನ …

Read More »

ಸಾರ್ವಜನಿಕರೇ ಮಳೆಗಾಲದಲ್ಲಿ ಹರಡಲಿದೆ ಈ ರೋಗಗಳು,ಇರಲಿ ಎಚ್ಚರ..!

ಬೆಂಗಳೂರು : ರಾಜ್ಯಾದ್ಯಂತ ಮಳೆ ಶುರುವಾಗಿದ್ದು, ಬಿಸಿಲಿನ ಬೇಗೆಗೆ ತಂಪೆರೆದಿದೆ. ಈ ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿವಹಿಸಬೇಕು ಎಂದು ಸರ್ಕಾರ ಪ್ರಕಟಣೆ ಹೊರಡಿಸುವ ಮೂಲಕ ಎಚ್ಚರಿಕೆ ನೀಡಿದೆ. ಮಳೆಗಾಲದಲ್ಲಿ ಹರಡುವ ರೋಗಗಳು 1) ಕಾಲರಾ 2) ಮಲೇರಿಯಾ 3) ಡೆಂಗ್ಯೂ 4) ಚಿಕುನ್ ಗುನ್ಯಾ 5) ವಿಷಮಶೀತ ಜ್ವರ 6) ಕಾಮಾಲೆ ಮನೆಯ ಸುತ್ತ ನಿಲ್ಲುವ ನೀರಿನಿಂದ ಸೊಳ್ಳೆಗಳು ಉತ್ಪತ್ತಿಯಾಗುತ್ತದೆ. ಇದರಿಂದ ಅನೇಕ ರೋಗಗಳು ಕಾಣಿಸಿಕೊಳ್ಳುತ್ತವೆ. ಮಲೇರಿಯಾ, ಡೆಂಗ್ಯೂ, …

Read More »

ಮಹಿಳೆ ಅಪಹರಣ ಕೇಸ್: ಎಸ್‌ಐಟಿ ಪೊಲೀಸರಿಂದ ‘ಭವಾನಿ ರೇವಣ್ಣ ಕಾರು ಚಾಲಕ’ನಿಗೆ ಸಮನ್ಸ್ ಜಾರಿ

ಬೆಂಗಳೂರು: ಸಂತ್ರಸ್ತ ಮಹಿಳೆ ಕಿಡ್ನ್ಯಾಪ್ ಕೇಸಲ್ಲಿ ಜೈಲು ಸೇರಿ, ಮಾಜಿ ಸಚಿವ ಹೆಚ್.ಡಿ ರೇವಣ್ಣ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಈ ಬೆನ್ನಲ್ಲೇ ಅವರ ಪತ್ನಿ ಭವಾನಿ ರೇವಣ್ಣ ಕಾರು ಚಾಲಕನಿಗೆ ಎಸ್‌ಐಟಿ ಅಧಿಕಾರಿಗಳು ಸಮನ್ಸ್ ಜಾರಿಗೊಳಿಸಿದ್ದಾರೆ. ಸಂತ್ರಸ್ತ ಮಹಿಳೆ ಕಿಡ್ನ್ಯಾಪ್ ಕೇಸಿಗೆ ಸಂಬಂಧಿಸಿದಂತೆ ಎಸ್‌ಐಟಿ ಪೊಲೀಸರಿಂದ ಈಗಾಗಲೇ ಎರಡು ಬಾರಿ ವಿಚಾರಣೆಗೆ ಹಾಜರಾಗುವಂತೆ ಭವಾನಿ ರೇವಣ್ಣ ಅವರ ಕಾರು ಚಾಲಕ ಅಜಿತ್ ಗೆ ಸಮನ್ಸ್ ನೀಡಲಾಗಿತ್ತು.

Read More »

ಕಾಂಗ್ರೆಸ್ ಪಕ್ಷವು ಭಾರತದ ಸಾಮರ್ಥ್ಯಕ್ಕೆ ಅನ್ಯಾಯ ಮಾಡಿದೆ; ಪ್ರಧಾನಿ ಮೋದಿ ಆರೋಪ

ದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Modi) ಪಶ್ಚಿಮ ದೆಹಲಿಯ ದ್ವಾರಕಾದಲ್ಲಿ ನಡೆದ ಚುನಾವಣಾ ಪ್ರಚಾರ ರ್ಯಾಲಿಯಲ್ಲಿ ಕಾಂಗ್ರೆಸ್ (Congress) ವಿರುದ್ಧ ವಾಗ್ದಾಳಿ ನಡೆಸಿದರು. 60 ವರ್ಷಗಳಿಂದ ಕಾಂಗ್ರೆಸ್​ ಪಕ್ಷವು ಭಾರತದ ಸಾಮರ್ಥ್ಯಕ್ಕೆ ಅನ್ಯಾಯ ಮಾಡಿದೆ ಎಂದು ಆರೋಪಿಸಿದರು.

Read More »

RTO ಅಧಿಕಾರಿಗಳಿಂದ ಬಸ್ ಸೀಜ್. ಗದಗದಲ್ಲಿ ಆಂಧ್ರ ಪ್ರವಾಸಿಗರ ಪರದಾಟ!

ಗದಗ: ಹೈದರಾಬಾದ್, ಕರ್ನಾಟಕ, ಗೋವಾ ತಮಿಳುನಾಡು ರಾಜ್ಯ ಪ್ರವಾಸಕ್ಕೆ ಹೊರಟಿದ್ದ ಬಸ್ಸನ್ನು ಗದಗ ಆರ್ ಟಿಓ ಅಧಿಕಾರಿಗಳು ವಶಕ್ಕೆ ಪಡೆದ ಹಿನ್ನೆಲೆಯಲ್ಲಿ ಬಸ್ಸಿನಲ್ಲಿದ್ದ ಮಕ್ಕಳು, ಮಹಿಳೆಯರು ಸೇರಿದಂತೆ 49 ಪ್ರವಾಸಿಗರು ಗದಗ ಆರ್ ಟಿಓ ಕಚೇರಿ ಬಳಿಯೇ ರಾತ್ರಿ ಕಳೆದ ಘಟನೆ ಬೆಳಕಿಗೆ ಬಂದಿದೆ. ಬಸ್ಸಿನ ದಾಖಲೆ ಪತ್ರಗಳು ಸರಿಯಾಗಿ ಇರದ ಕಾರಣ ಹೆದ್ದಾರಿಯಲ್ಲಿ ವಾಹನಗಳನ್ನು ತಪಾಸಣೆ ನಡೆಸುತ್ತಿದ್ದ ಅಧಿಕಾರಿಗಳು ಆಂಧ್ರಪ್ರದೇಶದ ಬಸ್ಸನ್ನು ತಪಾಸಣೆ ನಡೆಸಿದ್ದಾರೆ ಈ ವೇಳೆ ಬಸ್ಸಿನ ದಾಖಲೆ …

Read More »

2A ಮೀಸಲಾತಿ ಕೋರಿ ಮತ್ತೆ ಪಂಚಮಸಾಲಿ ಹೋರಾಟ:

ಧಾರವಾಡ : ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ ೨ಎ ಮೀಸಲಾತಿ ಕೊರಿ ನಡೆಯುತ್ತಿದ್ದ ಹೋರಾಟವನ್ನು ಮತ್ತೆ ಮುಂದುವರಿಸುವ ಸಂಬಂಧ ನಾಳೆ (ಗುರುವಾರ) ರಂದು ಮಧ್ಯಾಹ್ನ 3 ಗಂಟೆಗೆ ಜೋಯಿಡಾ ತಾಲೂಕಿನ ಸುಕ್ಷೇತ್ರ ಉಳವಿಯಲ್ಲಿ ಹೋರಾಟ ಸಮಿತಿಯ ಪದಾಧಿಕಾರಿಗಳ ಸಭೆ ಕರೆಯಲಾಗಿದೆ ಎಂದು ಕೂಡಲಸಂಗಮದ ಪಂಚಮಸಾಲಿ ಪೀಠಾಧ್ಯಕ್ಷರಾದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.

Read More »