Breaking News

Daily Archives: ಮೇ 22, 2024

ರಾಜ್ಯ ಸರ್ಕಾರ ಗ್ಯಾರಂಟಿಗಳ ಅಮಲಿನಲ್ಲಿದೆ. : ಎನ್ ರವಿಕುಮಾರ್

ಕೊಪ್ಪಳ: ರಾಜ್ಯ ಸರ್ಕಾರ ಗ್ಯಾರಂಟಿಗಳ ಅಮಲಿನಲ್ಲಿದೆ. ಕಾಂಗ್ರೆಸ್ ಗ್ಯಾರಂಟಿಗಳಲ್ಲಿಯೇ ಕಾಲಹರಣ ಮಾಡುತ್ತಿದೆ. ಅಭಿವೃದ್ಧಿ ಕೆಲಸಕ್ಕೆ ಅನುದಾನ ಕೊಡುತ್ತಿಲ್ಲ. ಗ್ಯಾರಂಟಿ ಬಿಟ್ಟು ರಾಜ್ಯದಲ್ಲಿ ಏನೂ ಇಲ್ಲ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಎನ್ ರವಿಕುಮಾರ್ ವಾಗ್ದಾಳಿ ನಡೆಸಿದರು.   ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಧಿಕಾರದ ದಾಹಕ್ಕಾಗಿ ಗ್ಯಾರಂಟಿ ಯೋಜನೆ ಜಾರಿ ತಂದರು.ರಾಜ್ಯದಲ್ಲಿ ನೀರಾವರಿ, ಕೈಗಾರಿಕೆ, ಕಂದಾಯ, ಶಿಕ್ಷಣ ಹಳ್ಳಹತ್ತಿ ಹೋಗಿವೆ. ಪೋಷಕರೂ ಸಹ ಆತಂಕದಲ್ಲಿದ್ದಾರೆ.ಸರ್ಕಾರಿ ಕೆಲಸ ಶಿಕ್ಷಕರಿಗೆ ಕೊಡಬೇಡಿ. ಶಿಕ್ಷಣದ ಕೆಲಸ …

Read More »

ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ

ಬೆಳಗಾವಿ: ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಕಾಂಗ್ರೆಸ್‌ ಸರ್ಕಾರ ಪರ ತಾವು ಮೃದು ಧೋರಣೆ ತೋರುತ್ತಿಲ್ಲ ಎಂದು ಕೂಡಲ ಸಂಗಮ ಪಂಚಮಸಾಲಿ ಗುರುಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಸ್ಪಷ್ಟನೆ ನೀಡಿದರು. ಬೆಳಗಾವಿಯಲ್ಲಿ ಮಾತನಾಡಿದ ಅವರು, ನಮ್ಮ ಹೋರಾಟ ನಿರಂತರವಾಗಿದೆ. ಯಾವ ಸರಕಾರದ ಮೇಲೂ ಮೃದು ಧೋರಣೆ ಅನುಸರಿಸಿಲ್ಲ ಎಂದರು. ಲೋಕಸಭಾ ಚುನಾವಣೆ ಹಿನ್ನೆಲೆ ಕಾಂಗ್ರೆಸ್‌ ಸರ್ಕಾರ ತಮ್ಮನ್ನ ಕರೆದು ಮಾತನಾಡಿಸಿಲ್ಲ. ಮೊದಲು ಮೀಸಲಾತಿಗಾಗಿ ಮನವಿ ಮಾಡುತ್ತೇವೆ. ಅದಕ್ಕೆ ಸ್ಪಂದನೆ ಸಿಗದಿದ್ದರೆ ಉಗ್ರ ಹೋರಾಟ …

Read More »

ಲಕ್ಷ್ಮಣ್ ಸವದಿ ಸಹಮಾಲಿಕತ್ವದ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ; ಮಹಿಳೆ ಸಾವು

ಬೆಳಗಾವಿ: ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಸಹ ಮಾಲಿಕತ್ವದ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟಗೊಂಡು ಮಹಿಳೆಯೊಬ್ಬರು ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಅಥಣಿಯಲ್ಲಿ ನಡೆದಿದೆ. ಸ್ಪೋಟದಿಂದ ಗಂಭೀರವಾಗಿ ಗಾಯಗೊಂಡ ಶೋಭಾ ತೇಲಿ ಎಂಬವರು ಸಾವನ್ನಪ್ಪಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಅಸುನೀಗಿದ್ದಾರೆ. ಇಬ್ಬರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕಟ್ಟಿ ಗ್ರಾಮದ ಹೊರ ವಲಯದಲ್ಲಿರುವ ಕೈಗಾರಿಕಾ ಪ್ರದೇಶದಲ್ಲಿರುವ ಪ್ರಿಯಾ ಎಕ್ಸ್‌ಪೋರ್ಟ್ ಕೈಗಾರಿಕಾ …

Read More »

ACP ನಿವಾಸದ ಮೇಲೆ ಭ್ರಷ್ಟಾಚಾರ ನಿಗ್ರಹ ದಳ ದಾಳಿ; 3.5 ಕೋಟಿ ರೂ. ಆಸ್ತಿ ಪತ್ತೆ!

ACP ನಿವಾಸದ ಮೇಲೆ ಭ್ರಷ್ಟಾಚಾರ ನಿಗ್ರಹ ದಳ ದಾಳಿ; 3.5 ಕೋಟಿ ರೂ. ಆಸ್ತಿ ಪತ್ತೆ! ತೆಲಂಗಾಣ: ಹೈದರಾಬಾದ್‌(Hyderabad) ನ ಎಸಿಪಿ ಮನೆಯಲ್ಲಿ ಚಿನ್ನ, ಬೆಳ್ಳಿ ಸೇರಿದಂತೆ 3.5 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಹೊಂದಿರುವುದನ್ನು ಭ್ರಷ್ಟಾಚಾರ ನಿಗ್ರಹ ದಳದ(Anti Corruption bureau) ಅಧಿಕಾರಿಗಳು ಪತ್ತೆ ಹಚ್ಚಿರುವುದಾಗಿ ವರದಿ ತಿಳಿಸಿದೆ. ದೂರಿನ ಆಧಾರದ ಮೇಲೆ ಸೆಂಟ್ರಲ್‌ ಕ್ರೈಮ್‌ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಸಿಸ್ಟೆಂಟ್‌ ಕಮಿಷನರ್‌ ಆಫ್‌ ಪೊಲೀಸ್‌ ಅವರ(ACP house) ನಿವಾಸದ ಮೇಲೆ …

Read More »

ಜಲಾಶಯದ ಹಿನ್ನೀರಿನಲ್ಲಿ ದೋಣಿ ಮಗುಚಿ ಆರು ಮಂದಿ ಮೃತ್ಯು

ಪುಣೆ : ಜಿಲ್ಲೆಯ ಉಜನಿ ಅಣೆಕಟ್ಟಿನ ಹಿನ್ನೀರಿನಲ್ಲಿ ದೋಣಿ ಮಗುಚಿ ಇಬ್ಬರು ಮಕ್ಕಳು ಸೇರಿದಂತೆ ಆರು ಜನರು ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಮಂಗಳವಾರ ಸಂಜೆ ಭಾರೀ ಗಾಳಿ ಮತ್ತು ಮಳೆಯ ಹಿನ್ನೆಲೆಯಲ್ಲಿ ಈ ದುರಂತ ನಡೆದಿದೆ. ಸಂಜೆ ನಗರದಾದ್ಯಂತ ಭಾರೀ ಮಳೆ ಮತ್ತು ಬಲವಾದ ಗಾಳಿ ಬೀಸಿದ ನಂತರ ಈ ಘಟನೆ ಸಂಭವಿಸಿದೆ . ಇಂದಾಪುರ ತಹಶೀಲ್ದಾರ್ ಶ್ರೀಕಾಂತ್ ಪಾಟೀಲ್ ಅವರು ನೀಡಿದ ಪ್ರಕಾರ, ಮೃತರಲ್ಲಿ ಮೂವರು …

Read More »

ಅನೈತಿಕ ಸಂಬಂಧ?ಮಹಿಳೆಯೊಂದಿಗೆ ಪೊಲೀಸ್ ಸಿಬ್ಬಂದಿ ನೇಣಿಗೆ ಶರಣು:

ಹುಬ್ಬಳ್ಳಿ, ಮೇ 21: ಹುಬ್ಬಳ್ಳಿ ಸಂಚಾರಿ ವಿಭಾಗದ ಕಾನ್ಸ್‌ಟೇಬಲ್ ಒಬ್ಬರ ಮೃತದೇಹ ಮಹಿಳೆಯೊಂದಿಗೆ ಆತ್ಮಹತ್ಯೆ ಮಾಡಿಕೊಂಡ ಕೊಳೆತ ಸ್ಥಿತಿಯಲ್ಲಿ ಪತ್ತೆ ಆಗಿದೆ. ಈ ಪೊಲೀಸ್ ಸಿಬ್ಬಂದಿ ಅನೈತಿಕ ಸಂಬಂಧ ಹೊಂದಿದ್ದೆ ಕಾರಣ ಎಂದು ಶಂಕಿಸಲಾಗಿದೆ. ಮಹೇಶ ಹೆಸರೂರು (30) ಮೃತ ಸಂಚಾರಿ ಪೊಲೀಸ್ ಕಾನ್ಸ್‌ಟೇಬಲ್, ಲಕ್ಷ್ಮಿ ವಾಲಿ (30) ಮೃತ ಮಹಿಳೆ. ಇವರಿಬ್ಬರು ಆತ್ಮಹತ್ಯೆ ಶರಣಾಗಿ ಮೂರು ದಿನ ಕಳೆದಿದೆ ಎನ್ನಲಾಗುತ್ತಿದೆ. ಮೃತದೇಹ ಕೊಳೆತ ವಾಸನೆ ಬಂದ ಬಳಿಕ ಅಕ್ಕಪಕ್ಕದ …

Read More »

HSRṔ ನಂಬರ್‌ ಪ್ಲೇಟ್‌ ಅಳವಡಿಸಿಕೊಳ್ಳಲು ಜೂನ್‌ 12 ರವರೆಗೂ ಅವಕಾಶ!

ಬೆಂಗಳೂರು : ಕರ್ನಾಟಕ ಸಾರಿಗೆ ಇಲಾಖೆಯು ರಾಜ್ಯದಲ್ಲಿ ಎಲ್ಲ ವಾಹನಗಳಿಗೂ ಹೈ ಸೆಕ್ಯುರಿಟಿ ರಿಜಿಸ್ಟ್ರೇಶನ್ ಪ್ಲೇಟ್‌ಗಳು (HSRP) ಅಳವಡಿಕೆಗೆ ಮೇ 31 ಅವಕಾಶ ನೀಡಲಾಗಿತ್ತು. ಈ ನಡುವೆ ನಂಬರ್‌ ಪ್ಲೇಟ್‌ ಅಳವಡಿಸದ ವಾಹನ ಸವಾರರಿಗೆ ಸಿಹಿಸುದ್ದಿ ಸಿಕ್ಕಿದ್ದು, ಜೂನ್‌ 12 ರವರೆಗೆ ಹೆಚ್‌ ಎಸ್‌ ಆರ್‌ ಪಿ ನಂಬರ್‌ ಪ್ಲೇಟ್‌ ಅಳವಡಿಸಿಕೊಳ್ಳಲು ಸರ್ಕಾರ ಕಾಲಾವಕಾಶ ನೀಡಿದೆ. ಹೌದು, ಹೆಚ್​​ಎಸ್​ಆರ್​ಪಿ ನಂಬರ್ ಪ್ಲೇಟ್​ ಅಳವಡಿಕೆಗೆ ಇರುವ ಮೇ 31ರ ಗಡುವು ವಿಸ್ತರಣೆ …

Read More »