Breaking News

Daily Archives: ಮೇ 28, 2024

ಶಾಲಾ, ಕಾಲೇಜು ಶಿಕ್ಷಕರ ನೇಮಕಾತಿ ಗುತ್ತಿಗೆ ರದ್ದು: ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ರಾಜ್ಯ ಸರ್ಕಾರದಿಂದ ಬಿಬಿಎಂಪಿ ಶಾಲಾ, ಕಾಲೇಜು ಶಿಕ್ಷಕರ ನೇಮಕಾತಿ ಗುತ್ತಿಗೆಯನ್ನು ರದ್ದುಗೊಳಿಸಿ ಆದೇಶಿಸಿದೆ. ಈ ಮೂಲಕ ತೀವ್ರ ಮುಜುಗರಕ್ಕೆ ಕಾರಣವಾಗಿದ್ದಂತ ಬಿಬಿಎಂಪಿ ಶಿಕ್ಷಕರ ನೇಮಕಾತಿ ಟೆಂಡರ್ ರದ್ದುಗೊಳಿಸಿ ಆದೇಶಿಸಿದೆ. ಮಾಜಿ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿ, ಈ ಹಿಂದೆಯೂ ಈ ವಿಚಾರವನ್ನು ರಾಜ್ಯದ ಉಪಮುಖ್ಯಮಂತ್ರಿಗಳ ಗಮನಕ್ಕೆ ಹಾಗೂ ಬಿಬಿಎಂಪಿಯ ಮುಖ್ಯ ಆಯುಕ್ತರ ಗಮನಕ್ಕೆ ತಂದಿದ್ದೆ. ಆಗ ಅದನ್ನು ಪರಿಶೀಲಿಸುವುದಾಗಿ ಹೇಳಿ …

Read More »

ಪೂರ್ವ ಮುಂಗಾರು ಮಳೆಯಿಂದ ಮಣ್ಣಿನಲ್ಲಿ ತೇವಾಂಶ ಹೆಚ್ಚಳ: ಖಾರಿಫ್ ಪೂರ್ವ ಬಿತ್ತನೆ ವಿಳಂಬ

ಬೆಂಗಳೂರು: ಮುಂಗಾರು ಪ್ರವೇಶಕ್ಕೆ ಮುನ್ನ ಕರ್ನಾಟಕದಲ್ಲಿ ಈ ವರ್ಷ ಸಾಕಷ್ಟು ವಿಳಂಬದ ನಂತರ ಖಾರಿಫ್ ಪೂರ್ವ ಬಿತ್ತನೆ ಆರಂಭವಾಗಿದೆ. ರಾಜ್ಯಾದ್ಯಂತ ಕಳೆದ ಕೆಲವು ದಿನಗಳಿಂದ ಉತ್ತಮ ಮಳೆ ಸುರಿದು ಸಂಕಷ್ಟದಲ್ಲಿರುವ ರೈತರಿಗೆ ಸಮಾಧಾನ ತಂದಿದೆ. ಆದರೆ ಹಲವೆಡೆ ಮಣ್ಣಿನಲ್ಲಿ ತೇವಾಂಶ ಹೆಚ್ಚಾಗಿದ್ದು, ರೈತರ ಬೀಜ ಬಿತ್ತನೆ ಕಾರ್ಯ ನಿರೀಕ್ಷಿತ ಮಟ್ಟ ತಲುಪಿಲ್ಲ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ(KSNDMC) ಅಂಕಿಅಂಶಗಳ ಪ್ರಕಾರ, ಮೇ 1 ರಿಂದ ಇಲ್ಲಿಯವರೆಗೆ, ರಾಜ್ಯದಲ್ಲಿ ಸರಾಸರಿ …

Read More »

ಪರಿಷತ್ ಚುನಾವಣೆ: ಇಂದು ಸಿಎಂ ಡಿಸಿಎಂ ದೆಹಲಿಗೆ-

ಬೆಂಗಳೂರು ಮೇ 28: ಮೇಲ್ಮನೆ ಅಭ್ಯರ್ಥಿ ಘೋಷಣೆಗೆ ಇಂದು ಸಿಎಂ ಸಿದ್ಧರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ತೆರಳಿದ್ದು ವಿಮಾನದಲ್ಲೇ ಸಭೆ ನಡೆಯುವ ಸಾಧ್ಯತೆ ಇದೆ. ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಲು ಇಂದು ಬೆಳಗ್ಗೆ 11ಕ್ಕೆ ವಿಶೇಷ ವಿಮಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ದೆಹಲಿಗೆ ತೆರಳಲಿದ್ದಾರೆ. ಜೂನ್ 13 ರಂದು ವಿಧಾನಸಭೆಯಿಂದ ವಿಧಾನಪರಿಷತ್ತಿನ 11 …

Read More »

ರಾಮದುರ್ಗ | ಪೇಜಾವರ ವಿಶ್ವಪ್ರಸನ್ನ ತೀರ್ಥರ ಪುರಪ್ರವೇಶ: ಅದ್ದೂರಿ ಸ್ವಾಗತ

ರಾಮದುರ್ಗ: ಉಡುಪಿಯ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥರು ಸೋಮವಾರ ರಾಮದುರ್ಗ ಪಟ್ಟಣಕ್ಕೆ ಆಗಮಿಸಿದಾಗ ಬ್ರಾಹ್ಮಣ ಸಮಾಜದ ಪ್ರಮುಖರು ಅದ್ದೂರಿ ಸ್ವಾಗತ ಕೋರಿದರು. ಸಾರೋಟನಲ್ಲಿ ಆಸೀನರಾಗಿದ್ದ ಪೇಜಾವರ ಶ್ರೀಗಳನ್ನು ಮತ್ತು ವಿಶ್ವೇಶ ತೀರ್ಥರ ಭಾವಚಿತ್ರವನ್ನು ತೆರದ ಜೀಪಿನಲ್ಲಿ ಇಟ್ಟು ಭವ್ಯ ಮೆರವಣಿಗೆಯಲ್ಲಿ ಕರೆ ತರಲಾಯಿತು. ಮೆರವಣಿಗೆಯು ಇಲ್ಲಿನ ವೆಂಕಟೇಶ್ವರ ದೇವಸ್ಥಾನದಿಂದ ತೇರ ಬಜಾರ, ರಾಘವೇಂದ್ರ ರಥ ಬೀದಿಗಳಲ್ಲಿ ಸಂಚರಿಸಿತು. ಮೆರವಣಿಗೆಯಲ್ಲಿ ಸುಮಂಗಲೆಯರು ಪೂರ್ಣಕುಂಭ ಮೇಳೆ, ಡೊಳ್ಳು, ಜಾಂಜ್‌ ಪದಕಗಳ ಸದ್ದು ಮೊಳಗಿದವು. ಮಹಿಳೆಯರು …

Read More »

ವಿದ್ಯುತ್ ಕೇಬಲ್ ವೈರ್ ತುಳಿದು ರೈತ ಸಾವು

ಚನ್ನಮ್ಮನ ಕಿತ್ತೂರು: ಕೊಳವೆಬಾವಿಗೆ ಸಂಪರ್ಕ ಕಲ್ಪಿಸಿರುವ ತುಂಡಾಗಿದ್ದ ವಿದ್ಯುತ್ ಪ್ರವಹಿಸುತ್ತಿರುವ ಕೇಬಲ್ ವೈರ್ ಆಕಸ್ಮಿಕವಾಗಿ ತುಳಿದು ವ್ಯಕ್ತಿಯೊಬ್ಬ ಸ್ಥಳದಲ್ಲೇ ಸೋಮವಾರ ಮೃತಪಟ್ಟಿದ್ದಾರೆ. ತಾಲ್ಲೂಕಿನ ಹಿರೇನಂದಿಹಳ್ಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸದಸ್ಯ ಮಂಜುನಾಥ ನೀಲಪ್ಪ ದಾಸನಕೊಪ್ಪ (42) ಮೃತ ವ್ಯಕ್ತಿ.   ಹೊಲದಲ್ಲಿ ಕೆಲಸ ಮಾಡುತ್ತಿದ್ದ ಸಮಯದಲ್ಲಿ ಈ ಅವಘಡ ಸಂಭವಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ಕುರಿತು ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಬೆಳಗಾವಿ: ‘ಕಾಹೇರ್’ 14ನೇ ಘಟಿಕೋತ್ಸವ; 1,739 ಪದವಿ ಪ್ರದಾನ ಮಾಡಿದ ಉಪರಾಷ್ಟ್ರಪತಿ

ಬೆಳಗಾವಿ: ನಗರದಲ್ಲಿ ಸೋಮವಾರ ನಡೆದ ಕೆಎಲ್‌ಇ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿ (ಕಾಹೇರ್‌) 14ನೇ ಘಟಿಕೋತ್ಸವದಲ್ಲಿ ಉಪರಾಷ್ಟ್ರಪತಿ ಜಗದೀಪ್‌ ಧನಕರ ಅವರು ಘಟಿಕೋತ್ಸವ ಭಾಷಣ ಮಾಡಿದರು. ಒಟ್ಟು 1,739 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿದರು. ಕಾಹೇರ್‌ನಿಂದ ಇದೇ ಮೊದಲ ಬಾರಿಗೆ ನೀಡಲಾದ ‘ಗೌರವ ಡಾಕ್ಟರೇಟ್‌’ ಅನ್ನು ಅಮೆರಿಕದ ಫಿಲಿಡೆಲ್ಫಿಯಾದ ಥಾಮಸ್ ಝೆಫರ್ಸನ್‌ ವಿಶ್ವವಿದ್ಯಾಲಯದ ವೈಸ್‌ ಪ್ರೊವೊಸ್ಟ್ ಡಾ.ರಿಚರ್ಡ್‌ ಜಾಕೋಬ್ ಡರ್ಮನ್ ಅವರಿಗೆ ಪ್ರದಾನ ಮಾಡಿದರು. ಆರೋಗ್ಯ ವಿಜ್ಞಾನ ಕ್ಷೇತ್ರದಲ್ಲಿನ ಸಂಶೋಧನೆ …

Read More »

ಹೆಸರಷ್ಟೇ ‘ತುಂಬು’ಕೆರೆ, ವರ್ಷವಿಡೀ ಖಾಲಿ

ಎಂ.ಕೆ‌.ಹುಬ್ಬಳ್ಳಿ: ಒಂದು ಕಾಲದಲ್ಲಿ ಇಡೀ ಊರಿನ ಜನರ ದಾಹ ನೀಗಿಸುತ್ತಿದ್ದ ಇಲ್ಲಿನ ಐತಿಹಾಸಿಕ ‘ತುಂಬುಕೆರೆ’ ಈಗ ಬಾಯಾರಿ ಬಳಲಿದೆ. ಅಧಿಕಾರಿಗಳ ನಿರ್ಲಕ್ಷ್ಯ, ಜನರ ನಿಷ್ಕಾಳಜಿಯಿಂದ ಅವ್ಯವಸ್ಥೆ ಆಗರವಾಗಿ ಮಾರ್ಪಟ್ಟಿದೆ. ಇದು ಹೆಸರಿಗಷ್ಟೇ ತುಂಬುಕೆರೆ. ವರ್ಷವಿಡೀ ‘ಖಾಲಿ’ ಇರುತ್ತದೆ. ಕಾಲುವೆ ಒತ್ತುವರಿಯಾಗಿದ್ದರಿಂದ ಮತ್ತು ರಾಷ್ಟ್ರೀಯ ಹೆದ್ದಾರಿ-4 ನಿರ್ಮಾಣದ ವೇಳೆ ಕೆಲವು ಜಲಮೂಲ ಮುಚ್ಚಿದ್ದರಿಂದ ಕೆರೆಗೆ ಮಳೆನೀರು ಹರಿದುಬರುವುದು ನಿಂತಿದೆ. ಕೆರೆಯ ಜಾಗ ಒತ್ತುವರಿ ಮತ್ತು ಕೊಳಚೆ ನೀರು ನುಗ್ಗುತ್ತಿರುವುದನ್ನು ತಡೆಯುವಲ್ಲಿ ವಿಫಲವಾದ ಪಟ್ಟಣ …

Read More »

ಭರವಸೆ ಮೂಡಿದ ಪೂರ್ವ ಮುಂಗಾರು: ಬಿತ್ತನೆ ಬೀಜ ವಿತರಣೆ ಶುರು

ಬೆಳಗಾವಿ: ಕಳೆದ ವರ್ಷ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ಆತಂಕಗೊಂಡಿದ್ದ ಜಿಲ್ಲೆಯ ರೈತರು, ಈ ಬಾರಿ ಮುಂಗಾರು ಪೂರ್ವ ಮಳೆ ಕೈಹಿಡಿದಿದ್ದರಿಂದ ಸಂತಸಗೊಂಡಿದ್ದಾರೆ. ಕಳೆದೊಂದು ವಾರದಿಂದೀಚೆಗೆ ಆಗಾಗ ಸುರಿಯುತ್ತಿರುವ ಮಳೆ, ಬಿತ್ತನೆ ಪೂರ್ವ ಚಟುವಟಿಕೆಗೆ ವೇಗ ನೀಡಿದೆ. ಬಿತ್ತನೆಗಾಗಿ ಭೂಮಿ ಹದಗೊಳಿಸುತ್ತಿರುವ ರೈತರಿಗೆ ಸಮರ್ಪಕವಾಗಿ ಬಿತ್ತನೆ ಬೀಜ ಮತ್ತು ರಸಗೊಬ್ಬರ ವಿತರಣೆಗೆ ಕೃಷಿ ಇಲಾಖೆ ಸಿದ್ಧತೆ ಮಾಡಿಕೊಂಡಿದೆ. ರಾಮದುರ್ಗ, ಖಾನಾಪುರ, ಮೂಡಲಗಿ ತಾಲ್ಲೂಕುಗಳಲ್ಲಿ ಈಗಾಗಲೇ ಬಿತ್ತನೆ ಬೀಜಗಳ ವಿತರಣೆ ಆರಂಭವಾಗಿದೆ. …

Read More »

ಪತಿ ನೆನಪಿಗಾಗಿ ಗ್ರಂಥಾಲಯ ಅಭಿವೃದ್ಧಿ

ಬೆಳಗಾವಿ: 2022ರ ಆಗಸ್ಟ್‌ನಲ್ಲಿ ನಿಧನರಾದ ಪತಿ ನೆನಪಿಗಾಗಿ ಪತ್ನಿಯೊಬ್ಬರು, ಇಲ್ಲಿನ ಸರ್ಕಾರಿ ಸರ್ದಾರ್ಸ್‌ ಪ್ರೌಢಶಾಲೆಯಲ್ಲಿ ₹1.13 ಲಕ್ಷ ವೆಚ್ಚದಲ್ಲಿ ಗ್ರಂಥಾಲಯ ಅಭಿವೃದ್ಧಿಪಡಿಸಿದ್ದಾರೆ. ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಸ್ಥಾನಿಕ ವೈದ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಡಾ.ವಿದ್ಯಾ ಅರಳಿಕಟ್ಟಿ ಇಂಥದ್ದೊಂದು ಕೆಲಸ ಮಾಡಿದವರು.   174 ವರ್ಷಗಳ ಹಿಂದೆ ಸ್ಥಾಪನೆಯಾದ ಈ ಪ್ರೌಢಶಾಲೆಯಲ್ಲಿ ಗ್ರಂಥಾಲಯಕ್ಕೆ ಪ‍್ರತ್ಯೇಕ ಕೊಠಡಿ, ಪರಿಕರ ಮತ್ತು ಆಸನ ವ್ಯವಸ್ಥೆ ಇರಲಿಲ್ಲ. ಒಂದಿಷ್ಟು ಹಳೆಯ ಪುಸ್ತಕಗಳನ್ನು ಹೊರತುಪಡಿಸಿದರೆ, ಗ್ರಂಥಾಲಯ …

Read More »

ಹೊಸ ಕಾನೂನು; ಪೊಲೀಸರಿಗೆ ತರಬೇತಿ

ಬೆಳಗಾವಿ: ಇಲ್ಲಿನ ರಾಜಾ ಲಖಮಗೌಡ ಕಾನೂನು ಮಹಾವಿದ್ಯಾಲಯದಲ್ಲಿ ನಗರ ಪೊಲೀಸ್‌ ಕಮಿಷನರೇಟ್‌ ವ್ಯಾಪ್ತಿಯ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಹೊಸ ಕ್ರಿಮಿನಲ್‌ ಕಾನೂನುಗಳ ಬಗ್ಗೆ ತರಬೇತಿ ನೀಡಲಾಯಿತು. ನಗರ ಪೊಲೀಸ್‌ ಉಪ ಆಯುಕ್ತರ ನೇತೃತ್ವದಲ್ಲಿ ನಡೆದ ತರಬೇತಿಯಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ, ಭಾರತೀಯ ನ್ಯಾಸ ಸಂಹಿತೆ, ಭಾರತೀಯ ಸಾಕ್ಷಿ ಅಧಿನಿಯಮ ಕುರಿತು ಸಂಪನ್ಮೂಲ ವ್ಯಕ್ತಿಗಳು ಮಾರ್ಗದರ್ಶನ ನೀಡಿದರು.   ‘ಜುಲೈ 1ರಿಂದ ಹೊಸ ಕಾನೂನುಗಳು ಜಾರಿಗೆ ಬರಲಿವೆ. ಈ ಬಗ್ಗೆ …

Read More »