Breaking News

Daily Archives: ಮೇ 29, 2024

ವಾಸಿಗರ ಕಣ್ಮನ ಸೆಳೆಯುತ್ತಿದೆ ರಾಯಣ್ಣನ ಸಂಗೊಳ್ಳಿ

ಎಂ.ಆರ್‌.ಬಡೇಘರಉದಯವಾಣಿ ಸಮಾಚಾರ ಬೈಲಹೊಂಗಲ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಹುಟ್ಟೂರಿನಲ್ಲಿ 10 ಎಕರೆ ಭೂಪ್ರದೇಶದಲ್ಲಿ ನಿರ್ಮಿಸಿರುವ ಸಂಗೊಳ್ಳಿ ರಾಯಣ್ಣನ ಜೀವನ ಚರಿತ್ರೆ ಸಾರುವ ರಾಕ್‌ ಗಾರ್ಡನ್‌ ಹಾಗೂ ರಾಷ್ಟ್ರಮಟ್ಟದ ಸೈನಿಕ ಶಾಲೆ ಕಣ್ಮನ ಸೆಳೆಯುತ್ತಿದೆ. ರಾಕ್‌ ಗಾರ್ಡನ್‌ ವೀಕ್ಷಣೆಗೆ ಆಗಮಿಸುವ ಪ್ರವಾಸಿಗರಿಗೆ ಕುಟುಂಬ ಸಮೇತ ಕುಳಿತು ಊಟ ಮಾಡಲು, ವಿಶ್ರಾಂತಿ ಪಡೆಯಲು ಅಲ್ಲಲ್ಲಿ ವ್ಯವಸ್ಥೆ ಮಾಡಲಾಗಿದೆ. ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇದೆ. ಒಟ್ಟು 20 ಶೌಚಾಲಯಗಳನ್ನು ನಿರ್ಮಿಸಲಾಗಿದೆ. ಒಂದು ಕ್ಯಾಂಟೀನ್‌ ವ್ಯವಸ್ಥೆ …

Read More »

ಅಕ್ರಮ ಭ್ರೂಣಹತ್ಯೆ ಪ್ರಕರಣ: ಮೂವರ ಬಂಧನ, ಏಳು ಜನರ ವಿರುದ್ಧ ಪ್ರಕರಣ ದಾಖಲು

ಅಕ್ರಮ ಭ್ರೂಣಹತ್ಯೆ ಪ್ರಕರಣ: ಮೂವರ ಬಂಧನ, ಏಳು ಜನರ ವಿರುದ್ಧ ಪ್ರಕರಣ ದಾಖಲು   ಮಹಾಲಿಂಗಪುರ: ಮನೆಯಲ್ಲಿಯೇ ಅಕ್ರಮವಾಗಿ ಭ್ರೂಣಹತ್ಯೆ ಮಾಡುತ್ತಿದ್ದ ಮಹಾಲಿಂಗಪುರದ ಮಹಿಳೆ ಹಾಗೂ ಭ್ರೂಣಹತ್ಯೆ ಪ್ರಕರಣದಲ್ಲಿ ಭಾಗಿಯಾದ ಮಹಾರಾಷ್ಟ್ರದ ಇಬ್ಬರು ಸೇರಿದಂತೆ ಮೂವರನ್ನು ಬುಧವಾರ ಮಹಾಲಿಂಗಪುರ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಮಹಾಲಿಂಗಪುರ ಪಟ್ಟಣದ ಜಯಲಕ್ಷ್ಮೀ ನಗರದ ಕವಿತಾ ಬಾಡನವರ, ಮಹಾರಾಷ್ಟçದ ಸಾಂಗಲಿ ಜಿಲ್ಲೆಯ ದೂದ್‌ಗಾಂವದ ವಿಜಯ ಸಂಜಯ ಗೌಳಿ ಕುಪ್ಪವಾಡದ ಡಾ.ಮಾರುತಿ ಬಾಬಸೋ ಖರಾತ ಬಂತ …

Read More »

ರಸಗೊಬ್ಬರ ಪೂರೈಸಲು ರೈತರ ಒತ್ತಾಯ

ರಾಣೆಬೆನ್ನೂರು: ‘ಹದವಾದ ಮಳೆಯಾಗಿದ್ದು, ರೈತರು ಬಿತ್ತನೆ ಮಾಡುವುದಕ್ಕೆ ಸಕಾಲವಾಗಿದೆ. ಆದರೆ ರಸಗೊಬ್ಬರ ಸಿಗುತ್ತಿಲ್ಲ. ಕೂಡಲೇ ಹೊಸ ಗೊಬ್ಬರ ಪೂರೈಕೆ ಮಾಡಬೇಕು’ ಎಂದು ರೈತ ಜಗದೀಶ್ ಕೆರೋಡಿ ಒತ್ತಾಯಿಸಿದರು. ಸಮೀಪದ ಹುಲ್ಲತ್ತಿ ಗ್ರಾಮದ ರೈತ ಸಂಪರ್ಕ ಕೇಂದ್ರದ ಮುಂದೆ ಶನಿವಾರ ರಸಗೊಬ್ಬರ ಪೂರೈಸುವಂತೆ ಪ್ರತಿಭಟನೆ ನಡೆಸಿ, ರೈತರಿಗೆ ಡಿಎಪಿ ಮತ್ತು ಯುರಿಯಾ ಪೂರೈಕೆ ಆಗದೆ ರೈತರು ಗೊಬ್ಬರಕ್ಕಾಗಿ ಪರದಾಡುವಂತಾಗಿದೆ ಎಂದು ಅವರು ದೂರಿದರು. ಹಾವೇರಿ ಜಿಲ್ಲೆಯಾದ್ಯಂತ ಸುರಿದ ಮಳೆಯಿಂದಾಗಿ ರೈತರ ಕೃಷಿ …

Read More »

ವಿದ್ಯಾರ್ಥಿಗಳಿಗೆ ಗ್ರಾಮೀಣ ಜೀವನದ ಅರಿವು ಅವಶ್ಯ: ಕೂಡಲಶ್ರೀ

ಶಿಗ್ಗಾವಿ: ‘ಗ್ರಾಮೀಣ ಜೀವನದ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವುದು ಅವಶ್ಯವಾಗಿದೆ. ಅದರಿಂದ ಭವಿಷ್ಯದ ಭದ್ರತೆ ಕಾಣಲು ಸಾಧ್ಯವಿದೆ. ಹೀಗಾಗಿ ಶಾಲಾ, ಕಾಲೇಜುಗಳ ಹಂತದಲ್ಲಿ ಈ ಯೋಜನೆ ಜಾರಿಗೆ ತರಲಾಗಿದೆ’ ಎಂದು ಕೂಡಲದ ಗುರುಮಹೇಶ್ವರ ಸ್ವಾಮೀಜಿ ಹೇಳಿದರು.   ತಾಲ್ಲೂಕಿನ ಬಂಕಾಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ದತ್ತು ಗ್ರಾಮ ಚಂದಾಪುರ ಗ್ರಾಮದಲ್ಲಿ ಶುಕ್ರವಾರ ನಡೆದ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು. ‘ವಿದ್ಯಾರ್ಥಿಗಳಿಗೆ …

Read More »

ಹಾನಗಲ್: ಬಿತ್ತನೆ ಬೀಜದ ಪ್ಯಾಕೇಟ್‌ಗೂ ಬಂತು ಕ್ಯೂಆರ್‌ ಕೋಡ್‌

ಹಾನಗಲ್: ಬಿತ್ತನೆ ಬೀಜಗಳ ನಕಲಿ ಹಾವಳಿ ತಡೆಯುವ ನಿಟ್ಟಿನಲ್ಲಿ ಮುಂಗಾರು ಪೂರ್ವದಿಂದಲೇ ಕೃಷಿ ಇಲಾಖೆ ಬಿತ್ತನೆ ಬೀಜಗಳ ಪ್ಯಾಕೇಟ್‌ ಮೇಲೆ ಕ್ಯೂಆರ್‌ ಕೋಡ್‌ ಸ್ಕ್ಯಾನ್‌ ಕಡ್ಡಾಯಗೊಳಿಸಿದೆ. ರೈತರಿಗೆ ಪ್ರಮಾಣೀಕೃತ ಬೀಜಗಳ ವಿತರಣೆ ಮತ್ತು ಅಕ್ರಮ ದಾಸ್ತಾನು ತಡೆಗಟ್ಟುವ ಉದ್ದೇಶ ಹೊಂದಲಾಗಿದೆ.   ಕೃಷಿ ಇಲಾಖೆ ಬಿತ್ತನೆ ಬೀಜಗಳನ್ನು ಸಂಗ್ರಹಿಸಿಕೊಂಡು ತಾಲ್ಲೂಕಿನ 9 ಕೇಂದ್ರಗಳ ಮೂಲಕ ವಿತರಣೆ ಆರಂಭಿಸಿದೆ. ಸಹಾಯಧನದ ವಿತರಣಾ ಕೇಂದ್ರಗಳಿಗೆ ರೈತರು ಆಗಮಿಸಿ ಬೀಜ ಖರೀದಿಯಲ್ಲಿ ತೊಡಗಿದ್ದಾರೆ. ಬೀಜ ವಿತರಣೆ …

Read More »

ಶ್ಯಾಡಗುಪ್ಪಿ ಗ್ರಾಮದಲ್ಲಿ ಜ್ವರ ಉಲ್ಬಣ: 8 ಡೆಂಗಿ ಪ್ರಕರಣ ದಾಖಲು

ಹಾನಗಲ್: ತಾಲ್ಲೂಕಿನ ಶ್ಯಾಡಗುಪ್ಪಿ ಗ್ರಾಮದಲ್ಲಿ ಜ್ವರಬಾಧೆ ಕಾಣಿಸಿಕೊಂಡಿದ್ದು, ಆರೋಗ್ಯ ಇಲಾಖೆ ವರದಿ ಪ್ರಕಾರ ಈ ಗ್ರಾಮದಲ್ಲಿ 8 ಡೆಂಗಿ ಪ್ರಕರಣಗಳು ದಾಖಲಾಗಿವೆ. ಗ್ರಾಮದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಈ ಒಂದು ತಿಂಗಳ ಅವಧಿಯಲ್ಲಿ 54 ಜ್ವರದ ಪ್ರಕರಣಗಳು ದಾಖಲಾಗಿವೆ. ಗ್ರಾಮಸ್ಥರು ಜ್ವರದ ಭೀತಿಗೆ ತಲ್ಲಣಗೊಂಡಿದ್ದಾರೆ. ಜ್ವರದ ಲಕ್ಷಣಗಳು ಕಾಣಿಸಿಕೊಂಡ ಕೂಡಲೇ ಸಮೀಪದ ಅಕ್ಕಿಆಲೂರಿಗೆ ತೆರಳಿ ರಕ್ತ ತಪಾಸಣೆ ಮಾಡಿಸಿಕೊಳ್ಳುತ್ತಿದ್ದಾರೆ. ಪ್ಲೆಟ್‌ಲೆಟ್‌ ಕಡಿಮೆಯಾದ ವರದಿ ಕೈಸೇರುತ್ತಲೇ ಉಳ್ಳವರು ದುಬಾರಿ ವೆಚ್ಚದ ಖಾಸಗಿ …

Read More »

ಬಳ್ಳಾರಿ: ತುಮಟಿ, ವಿಠಲಾಪುರ, ಮಲಪನಗುಡಿಯಲ್ಲಿ ಜಂಟಿ ಸಮೀಕ್ಷೆ

ಬಳ್ಳಾರಿ: ಬಳ್ಳಾರಿ ಜಿಲ್ಲೆಯಲ್ಲಿ ಹಾದು ಹೋಗಿರುವ ಕರ್ನಾಟಕ ಮತ್ತು ಆಂಧ್ರಪ್ರದೇಶ ಮಧ್ಯದ ಅಂತರರಾಜ್ಯ ಗಡಿಯಲ್ಲಿನ ಏಳು ಗಣಿ ಗುತ್ತಿಗೆಗಳ ಜಂಟಿ ಸಮೀಕ್ಷೆ ಕಾರ್ಯ ಬುಧವಾರ ಆರಂಭವಾಯಿತು. ಮೊದಲ ದಿನದ ಸಮೀಕ್ಷೆ ಸಂಡೂರಿನ ತುಮಟಿ, ವಿಠಲಾಪುರ ಮತ್ತು ಆಂಧ್ರ ಪ್ರದೇಶದ ಮಲಪನಗುಡಿಯಲ್ಲಿ ಬರುವ ಮೆಹಬೂಬ್‌ ಟ್ರಾನ್ಸ್‌ಪೋರ್ಟ್‌ ಕಂಪನಿಯ (ಎಂಬಿಟಿ) ಗಣಿಯಿಂದ ಆರಂಭವಾಯಿತು. ಇದಕ್ಕೆ ಹೊಂದಿಕೊಂಡಂತಿರುವ ಹಿಂದ್‌ ಟ್ರೇಡರ್ಸ್‌ (ಎಚ್‌ಟಿ) ಮತ್ತು ಟಿ. ನಾರಾಯಣ ರೆಡ್ಡಿ (ಟಿಎನ್‌ಆರ್‌) ಗಣಿ ಗುತ್ತಿಗೆದಾರರ ಪರ ಪ್ರತಿನಿಧಿಗಳು ಮತ್ತು …

Read More »

ವಿದ್ಯಾರ್ಥಿಗಳು ಮಾನಸಿಕ ಸದೃಢತೆ ಕಾಪಾಡಿಕೊಂಡು ಅಧ್ಯಯನಕ್ಕೆ ಸಜ್ಜಾಗಿ: ಪ್ರವೀಣ

ಅಳ್ನಾವರ: ‘ಒತ್ತಡದ ಬದುಕಿನಲ್ಲಿ ಮಾನಸಿಕ ಸಮತೋಲನ ಕಾಪಾಡಿಕೊಂಡು ಅಧ್ಯಯನಕ್ಕೆ ವಿದ್ಯಾರ್ಥಿಗಳು ಸಜ್ಜಾಗಬೇಕು’ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಪ್ರವೀಣ ಆನಂದಕಂದಾ ಹೇಳಿದರು. ಕಾಲೇಜಿನಲ್ಲಿ ತೆರೆದ ನೂತನ ಜಿಮ್ ಉದ್ಘಾಟಿಸಿ ಮಾತನಾಡಿದ ಅವರು, ‘ಈ ಜಿಮ್‌ನಲ್ಲಿ ಅಧುನಿಕ ಸಲಕರಣೆಗಳನ್ನು ಅಳವಡಿಸಲಾಗಿದೆ. ಸತತ ಓದಿನ ಜೊತೆಗೆ ಏಕಾಗ್ರತೆ ಸಾಧಿಸಲು ಈ ಸಲಕರಣೆಗಳನ್ನು ಬಳಸಿಕೊಂಡು ದೈಹಿಕ ಶ್ರಮ ಹಾಕಬೇಕು’ ಎಂದರು. ಟೇಬಲ್ ಟೆನಿಸ್ ಕೋರ್ಟ್‌ನಲ್ಲಿ ಆಟವಾಡಿದ ಬಳಿಕ ಕ್ರೀಡಾ ವಿಭಾಗದ ಪ್ರಬಾರ ಮುಖ್ಯಸ್ಥ …

Read More »

ತಳಿರು ತೋರಣಗಳಿಂದ ವಿದ್ಯಾರ್ಥಿಗಳ ಸ್ವಾಗತಕ್ಕೆ ಸಿದ್ಧತೆ

ಹರಿಹರ: ಮೇ 31ರಿಂದ 1ರಿಂದ 10ನೇ ತರಗತಿಯ ಶಾಲೆಗಳು ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ತಾಲ್ಲೂಕಿನಾದ್ಯಂತ ಎಲ್ಲಾ ಶಾಲೆಗಳನ್ನು ಸ್ವಚ್ಛಗೊಳಿಸಿ, ತಳಿರು ತೋರಣಗಳಿಂದ ಸಿಂಗರಿಸಿ ವಿದ್ಯಾರ್ಥಿಗಳನ್ನು ಸ್ವಾಗತಿಸಲು ಸೂಚಿಸಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಹನುಮಂತಪ್ಪ ತಿಳಿಸಿದರು. ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾಲ್ಲೂಕಿನಲ್ಲಿ 53 ಸರ್ಕಾರಿ ಕಿರಿಯ, 81 ಸರ್ಕಾರಿ ಹಿರಿಯ ಪ್ರಾಥಮಿಕ, 19 ಸರ್ಕಾರಿ ಪ್ರೌಢಶಾಲೆಗಳು, ತಲಾ 25 ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆ, 20 ಅನುದಾನ ರಹಿತ ಕಿರಿಯ ಪ್ರಾಥಮಿಕ, 42 …

Read More »

ಬಾಲಕನಿಂದ ವ್ಹೀಲಿಂಗ್; ವಾಹನ ಜಪ್ತಿ

ಬೆಂಗಳೂರು: ಕೆ.ಜಿ.ಹಳ್ಳಿ ಸಂಚಾರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ವ್ಹೀಲಿಂಗ್‌ ಮಾಡುವವರನ್ನು ಪತ್ತೆ ಹಚ್ಚಲು ಕೈಗೊಂಡ ವಿಶೇಷ ಕಾರ್ಯಾಚರಣೆಯಲ್ಲಿ ಓರ್ವ ಬಾಲಕನನ್ನು ಪತ್ತೆಮಾಡಿದ್ದು, ವಾಹನವನ್ನು ಜಪ್ತಿಮಾಡಲಾಗಿದೆ. ಬುಧವಾರ ಠಾಣಾ ಸಿಬ್ಬಂದಿ ಗಸ್ತಿನಲ್ಲಿರುವಾಗ ಹೆಚ್.ಬಿ.ಆರ್. ಲೇಔಟ್ ಮುಖ್ಯರಸ್ತೆಯಲ್ಲಿ ವ್ಹೀಲಿಂಗ್‌ ಮಾಡುತ್ತಿದ್ದ ಬಾಲಕನ ದ್ವಿ-ಚಕ್ರ ವಾಹನವನ್ನು ವಶಪಡಿಸಿಕೊಂಡು ವಿಚಾರಣೆ ನಡೆಸಿದ್ದಾರೆ. ‘ವಿಚಾರಣೆಯಲ್ಲಿ ಸವಾರ ಅಪ್ರಾಪ್ತ ವಯಸ್ಕನೆಂದು ತಿಳಿದು ಬಂದಿದ್ದು, ಸಂಚಾರ ಪೊಲೀಸರು ಸವಾರನ ಪೋಷಕರು/ ವಾಹನ ಮಾಲೀಕರ ವಿರುಧ್ಧ ಪ್ರಥಮ ವರ್ತಮಾನ ವರದಿ (ಎಫ್.ಐ.ಆರ್) …

Read More »