ಬೆಂಗಳೂರು, ಮೇ 29: ಲೋಕಸಭಾ ಚುನಾವಣೆ ರಾಜ್ಯದಲ್ಲಿ ಎರಡು ಹಂತದಲ್ಲಿ ನಡೆದಿದ್ದು, ಸದ್ಯ ರಾಜಕೀಯ ನಾಯಕರು ಜೂನ್ 4 ರ ಫಲಿತಾಂಶಕ್ಕಾಗಿ ಎದುರು ನೋಡುತ್ತಿದ್ದಾರೆ. ಇತ್ತ ಕೈ ಪಾಳಯದಲ್ಲಿ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಬದಲಾವಣೆ ವಿಚಾರ ಮುನ್ನಲೆ ಬಂದಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಾಗ ಮುಖ್ಯಮಂತ್ರಿ ಹುದ್ದೆಗೆ ಸಿದ್ಧರಾಮಯ್ಯ ಮತ್ತು ಉಪಮುಖ್ಯಮಂತ್ರಿ ಹುದ್ದೆಗೆ ಡಿ.ಕೆ.ಶಿವಕುಮಾರ್ ಅವರ ನೇಮಕವನ್ನು ಕಾಂಗ್ರೆಸ್ ಹೈಕಮಾಂಡ್ ಪ್ರಕಟಿಸಿದ್ದರು, ಆ ವೇಳೆ ಲೋಕಸಭಾ …
Read More »Daily Archives: ಮೇ 29, 2024
ಪೆನ್ಡ್ರೈವ್ ಹಾಗೂ ಅತ್ಯಾಚಾರ ಪ್ರಕರಣ : ಹಾಸನ- ಹೊಳೆನರಸೀಪುರಕ್ಕೆ ಎಸ್ಐಟಿ ತಂಡ
ಹಾಸನ, ಮೇ 29- ಅಶ್ಲೀಲ ವಿಡಿಯೋಗಳ ಪೆನ್ಡ್ರೈವ್ ಹಾಗೂ ಅತ್ಯಾಚಾರ ಪ್ರಕರಣದ ಹಿನ್ನೆಲೆಯಲ್ಲಿ ಎಸ್ಐಟಿ ತಂಡ ಮತ್ತೊಮೆ ಹಾಸನ ಹಾಗೂ ಹೊಳೆನರಸೀಪುರಕ್ಕೆ ಭೇಟಿ ನೀಡಿ ಮುಂಜಾನೆಯವರೆಗೂ ಪರಿಶೀಲನೆ ನಡೆಸಿದೆ.ಹಾಸನ ನಗರದ ಸಂಸದರ ನಿವಾಸ ಹಾಗೂ ಹೊಳೆನರಸೀಪುರದ ಎಚ್.ಡಿ.ರೇವಣ್ಣ ಅವರ ನಿವಾಸಕ್ಕೆ ಎಸ್ಐಟಿ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಈ ಹಿಂದೆ ಕೂಡ ಸ್ಥಳ ಮಹಜರು ನಡೆಸಿದ ಎಸ್ಐಟಿ ಅಧಿಕಾರಿಗಳು ಎಸಿಪಿ ಸತ್ಯನಾರಾಯಣ ನೇತೃತ್ವದಲ್ಲಿ ಎರಡೂ ನಿವಾಸಗಳಲ್ಲೂ ಮತ್ತೆ ಪರಿಶೀಲನೆ ನಡೆಸಿದ್ದಾರೆ.ಕೆಲದಿನಗಳ …
Read More »ಪೋರ್ಷೆ ಕಾರ್ ಅಪಘಾತದ ಕೇಸ್; ಅಪ್ರಾಪ್ತನ ಜೊತೆ ಇದ್ದಿದ್ದು ಶಾಸಕನ ಪುತ್ರ..!
ಮಹಾರಾಷ್ಟ್ರದ ಪುಣೆಯಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಯ ಅಪ್ರಾಪ್ತ ಪುತ್ರ ಚಲಾಯಿಸುತ್ತಿದ್ದ ಐಷಾರಾಮಿ ಪೋರ್ಷೆ ಕಾರು ಬೈಕಿನಲ್ಲಿ ತೆರಳುತ್ತಿದ್ದ ಟೆಕ್ಕಿಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕಿನಲ್ಲಿದ್ದ ಇಬ್ಬರೂ ಸಾವನ್ನಪ್ಪಿದ್ದರು. ಈ ಪ್ರಕರಣದಲ್ಲಿ ಅಪ್ರಾಪ್ತನನ್ನು ಬಚಾವ್ ಮಾಡಲು ಇನ್ನಿಲ್ಲದ ಪ್ರಯತ್ನ ನಡೆದಿತ್ತು. ಅಪಘಾತಕ್ಕೂ ಮುನ್ನ ಪ್ರತಿಷ್ಠಿತ ಕ್ಲಬ್ ಮತ್ತು ಬಾರ್ ನಲ್ಲಿ ಮದ್ಯ ಸೇವಿಸಿದ್ದ ಅಪ್ರಾಪ್ತ ಮತ್ತಿನಲ್ಲಿ ಈ ಅಪಘಾತವೆಸಗಿದ್ದ ಎಂದು ಹೇಳಲಾಗಿದ್ದು, ಆತನ ತಂದೆ ಆಸ್ಪತ್ರೆಯ ವೈದ್ಯರಿಗೆ ಲಂಚ ನೀಡಿ ರಕ್ತದ …
Read More »ಇಷ್ಟೊಂದು ಕ್ರೂರ, ಭೀಕರ ಹತ್ಯೆಯನ್ನು ನೋಡಿರಲಿಲ್ಲ- ಇನ್ಸ್ಪೆಕ್ಟರ್
ಕುಣಿಗಲ್: ಹುಲಿಯೂರುದುರ್ಗದಲ್ಲಿ ಮಂಗಳವಾರ ವ್ಯಕ್ತಿಯೊಬ್ಬ ಪ್ರೀತಿಸಿ ಮದುವೆಯಾದ ಪತ್ನಿಯನ್ನು ಕತ್ತು ಕತ್ತರಿಸಿ ಕೊಂದ ನಂತರ ಇಡೀ ರಾತ್ರಿ ದೇಹದ ಚರ್ಮ ಸುಲಿದು, ಅಂಗಾಂಗಗಳನ್ನು ತುಂಡು ತುಂಡಾಗಿ ಕತ್ತರಿಸಿದ್ದಾನೆ. ಪುಷ್ಪಾ (35) ಬರ್ಬರವಾಗಿ ಹತ್ಯೆಯಾದ ಮಹಿಳೆ. ಕೊಲೆ ಆರೋಪದ ಮೇಲೆ ಪತಿ ಶಿವರಾಮನನ್ನು ಪೊಲೀಸರು ಬಂಧಿಸಿದ್ದಾರೆ ಶಿವಮೊಗ್ಗ ಜಿಲ್ಲೆ ಸಾಗರದ ಪುಷ್ಪ ತಾಲ್ಲೂಕಿನ ಸುಗ್ಗನಹಳ್ಳಿಯ ಶಿವರಾಮನನ್ನು ಪ್ರೀತಿಸಿ ಮದುವೆಯಾಗಿದ್ದರು. ಇಬ್ಬರದ್ದೂ ಅಂತರ್ಜಾತಿ ವಿವಾಹ. ದಂಪತಿಗೆ ಎಂಟು ವರ್ಷದ ಗಂಡು ಮಗುವಿದೆ. ಸಾಮಿಲ್ವೊಂದರಲ್ಲಿ …
Read More »ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಸುಪ್ರೀಂಕೋರ್ಟ್ ಶಾಕ್ : ʻಮಧ್ಯಂತರ ಜಾಮೀನುʼ ವಿಸ್ತರಣೆ ಇಲ್ಲ
ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ನಿಂದ ದೊಡ್ಡ ಹಿನ್ನಡೆಯಾಗಿದೆ. ಮಧ್ಯಂತರ ಜಾಮೀನು ವಿಸ್ತರಣೆಗಾಗಿ ಅವರು ಅರ್ಜಿ ಸಲ್ಲಿಸಿದ್ದರು, ಅದನ್ನು ತಿರಸ್ಕರಿಸಲಾಗಿದೆ. ಕೇಜ್ರಿವಾಲ್ ಅವರ ಮನವಿಯನ್ನು ಸ್ವೀಕರಿಸಲು ನ್ಯಾಯಾಲಯದ ರಿಜಿಸ್ಟ್ರಿ ನಿರಾಕರಿಸಿತು. ನಿಯಮಿತ ಜಾಮೀನಿಗಾಗಿ ವಿಚಾರಣಾ ನ್ಯಾಯಾಲಯವನ್ನು ಸಂಪರ್ಕಿಸಲು ಕೇಜ್ರಿವಾಲ್ ಅವರಿಗೆ ಸ್ವಾತಂತ್ರ್ಯ ನೀಡಲಾಗಿದೆ. ಅಂತಹ ಪರಿಸ್ಥಿತಿಯಲ್ಲಿ, ಕೇಜ್ರಿವಾಲ್ ಅವರ ಅರ್ಜಿಯನ್ನು ನಿರ್ವಹಿಸಲಾಗುವುದಿಲ್ಲ. ಸಿಎಂ ಕೇಜ್ರಿವಾಲ್ ಈಗ ಜೂನ್ ೨ ರಂದು ಶರಣಾಗಬೇಕಾಗುತ್ತದೆ. ನ್ಯಾಯಮೂರ್ತಿಗಳಾದ ಸಂಜೀವ್ …
Read More »ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಮೊದಲಬಾರಿಗೆ ಭ್ರಷ್ಟಾಚಾರದ ಗಂಭೀರ ಆರೋಪ?
ಬೆಂಗಳೂರು : ಕಳೆದ ಒಂದು ವರ್ಷದ ಅವಧಿಯಲ್ಲಿ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಮೊದಲಬಾರಿಗೆ ಭ್ರಷ್ಟಾಚಾರದ ಗಂಭೀರ ಆರೋಪ ಕೇಳಿಬಂದಿದೆ. ವಾಲ್ಮೀಕಿ ನಿಗಮದಲ್ಲಿ ಕೋಟ್ಯಾಂತರ ರೂ. ಅವ್ಯವಹಾರ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿದೆ. ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆತ್ಮಹತ್ಯೆ ಪ್ರಕರಣವನ್ನು ಸಿಐಡಿ ಗೆ ವಹಿಸಲಾಗಿದೆ ಎಂದು ಬೆಂಗಳೂರಿನಲ್ಲಿ ಸಚಿವ ನಾಗೇಂದ್ರ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಣ ಯಾವ ರೀತಿ …
Read More »ಶಾಲೆಗಳಲ್ಲಿ ಡೋನೆಶನ್ ಪಡೆದರೆ ನೋಂದಣಿ ರದ್ದು;D.C.
ಬೆಳಗಾವಿ : ಜಿಲ್ಲೆಯ ಅನುದಾನ ರಹಿತ ಅಥವಾ ಅನುದಾನಿತ ಶಾಲೆಗಳಲ್ಲಿ ಮಕ್ಕಳ ಪ್ರವೇಶಕ್ಕೆ ಯಾವುದೇ ರೀತಿಯ ಡೊನೇಶನ್ ಪಡೆಯುವಂತಿಲ್ಲ. ಒಂದು ವೇಳೆ ಕಾನೂನುಬಾಹಿರವಾಗಿ ಡೊನೇಶನ್ ಪಡೆದಿರುವುದು ಕಂಡುಬಂದರೆ ಅಂತಹ ಶಾಲೆಗಳ ವಿರುದ್ಧ ಕಠಿಣ ಕ್ರಮವನ್ನು ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಎಚ್ಚರಿಕೆ ನೀಡಿದ್ದಾರೆ. ಪ್ರಸಕ್ತ ಶೈಕ್ಷಣಿಕ ಸಾಲಿಗೆ ಈಗಾಗಲೇ ಪ್ರವೇಶ ಪ್ರಕ್ರಿಯೆ ಆರಂಭಗೊಂಡಿದೆ. ಕೆಲವು ಶಾಲೆಗಳಲ್ಲಿ ಡೊನೇಶನ್ ಪಡೆಯಲಾಗುತ್ತಿದೆ ಎಂದು ಸಾರ್ವಜನಿಕರಿಂದ ದೂರುಗಳು ಬಂದಿರುತ್ತವೆ. ನಿಯಮಾನುಸಾರ ಸರಕಾರವು ನಿಗದಿಪಡಿಸಿದ …
Read More »ಆಶ್ರಯ ಮನೆ ಕೊಡಿಸುವುದಾಗಿ ನಂಬಿಸಿ ಗ್ರಾ.ಪಂಚಾಯತಿ ಅಧ್ಯಕ್ಷೆ ಪುತ್ರನಿಂದ ಮಹಿಳೆ ಮೇಲೆ ಅತ್ಯಾಚಾರ
ಚಾಮರಾಜನಗರ, : ಚಾಮರಾಜನಗರ ಜಿಲ್ಲೆಯಲ್ಲೊಂದು ಅಮಾನವೀಯ ಘಟನೆ ನಡೆದಿದ್ದು, ಆಶ್ರಯ ಮನೆ ಕೊಡಿಸುವುದಾಗಿ ನಂಬಿಸಿ ಹನೂರು(Hanur)ತಾಲೂಕಿನಪೊನ್ನಾಚಿ ಗ್ರಾಮಪಂಚಾಯಿತಿ ಅಧ್ಯಕ್ಷೆ ಪುತ್ರ ವೈದೇಶ್ ಎಂಬಾತ ಮಹಿಳೆ ಮೇಲೆ ಅತ್ಯಾಚಾರ ನಡೆಸಿದ ಘಟನೆ ನಡೆದಿದೆ. ಈ ಹಿನ್ನಲೆ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ನೀಲಾಂಭಿಕೆಯ ಪುತ್ರ ವೈದೇಶ್ ಮೇಲೆ ಸಂತ್ರಸ್ಥ ಮಹಿಳೆ ದೂರು ನೀಡಿದ್ದಾರೆ. ವಿಡಿಯೋ ವೈರಲ್ ಮಾಡೋದಾಗಿ ನಿರಂತರ ಅತ್ಯಾಚಾರ ಗ್ರಾಮ ಪಂಚಾಯತಿ ವತಿಯಿಂದ ಮನೆ ಕಟ್ಟಿಸಿ ಕೊಡಬೇಕೆಂದರೆ ನನ್ನ ಜೊತೆ ಮಲಗಬೇಕೆಂದು …
Read More »ಠಾಣೆಯಲ್ಲೇ ಎಣ್ಣೆ ಪಾರ್ಟಿ ಮಾಡಿರುವ ಆರೋಪ ಹೆಡ್ ಕಾನ್ಸ್ಟೇಬಲ್ ಅಮಾನತು
ಬೆಳಗಾವಿ, ಮೇ.28: ಚಿಕ್ಕೋಡಿ ತಾಲೂಕಿನ ಅಂಕಲಿ ಪೊಲೀಸ್ ಠಾಣೆ(Ankali police station)ಯಲ್ಲಿ ತಡರಾತ್ರಿ ಸಿಬ್ಬಂದಿ ಎಣ್ಣೆ ಪಾರ್ಟಿ ಮಾಡಿರುವ ಆರೋಪ ಕೇಳಿಬಂದಿತ್ತು.ಜೊತೆಗೆಠಾಣೆ ಮುಂಭಾಗದಲ್ಲಿಮದ್ಯದ ಖಾಲಿ ಬಾಟಲ್, ವಾಟರ್ ಬಾಟಲ್ ಟೇಬಲ್ ಮೇಲೆ ಇರುವ ಫೋಟೋಗಳು ವೈರಲ್ ಆಗಿತ್ತು. ಪೊಲೀಸರ ನಡೆಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಖಂಡನೆ ವ್ಯಕ್ತವಾಗಿತ್ತು. ಈ ಹಿನ್ನಲೆ ಅಂಕಲಿ ಠಾಣೆ ಹೆಡ್ ಕಾನ್ಸ್ಟೇಬಲ್ ರಾಮಚಂದ್ರ ಖೋತ ಎಂಬುವವರನ್ನು ಅಮಾನತುಗೊಳಿಸಿ ಎಸ್ಪಿ ಭೀಮಾಶಂಕರ ಗುಳೇದ್ ಆದೇಶಿಸಿದ್ದಾರೆ. ಸರಕಾರಿ ವಸತಿ …
Read More »ಸವದತ್ತಿ ಯಲ್ಲಮ್ಮನ ದರ್ಶನ ಪಡೆದ ಶಿವರಾಜ್ಕುಮಾರ್
ಹ್ಯಾಟ್ರಿಕ್ ಹೀರೋ’ ಶಿವರಾಜ್ಕುಮಾರ್ ಅವರು ‘ಉತ್ತರಕಾಂಡ’ ಸಿನಿಮಾದಲ್ಲಿ ಒಂದು ಮುಖ್ಯ ಪಾತ್ರ ಮಾಡುತ್ತಿದ್ದಾರೆ. ಈ ಸಿನಿಮಾದ ಚಿತ್ರೀಕರಣ ಬೆಳಗಾವಿಯಲ್ಲಿ ನಡೆಯುತ್ತಿದೆ. ಶಿವರಾಜ್ಕುಮಾರ್ ಕೂಡ ಇದರಲ್ಲಿ ಭಾಗಿ ಆಗಿದ್ದಾರೆ. ಶೂಟಿಂಗ್ ಮುಗಿಸಿದ ನಂತರ ಸವದತ್ತಿಯ ಯಲ್ಲಮ್ಮ ದೇವಸ್ಥಾನಕ್ಕೆ ಅವರು ತೆರಳಿದ್ದಾರೆ.ದೇವರ ದರ್ಶನ ಪಡೆದು ಬಂದಿದ್ದಾರೆ. ನಟ ಶಿವರಾಜ್ಕುಮಾರ್ (Shivarajkumar) ಅವರು ಒಂದಷ್ಟು ದಿನಗಳ ಕಾಲ ಸಿನಿಮಾ ಕೆಲಸಗಳಿಗೆ ಬ್ರೇಕ್ ನೀಡಿದ್ದರು. ಪತ್ನಿ ಗೀತಾ ಶಿವರಾಜ್ಕುಮಾರ್ ಪರವಾಗಿ ಚುನಾವಣಾ ಪ್ರಚಾರದಲ್ಲಿ ಅವರು ಭಾಗಿ ಆಗಿದ್ದರು. ಶಿವಮೊಗ್ಗದಲ್ಲಿ …
Read More »