Breaking News

Monthly Archives: ಮೇ 2024

ಭೀಕರ ರಸ್ತೆ ಅಪಘಾತ; ಬಿತ್ತನೆ ಬೀಜ ಖರೀದಿಸಲು ಬಂದಿದ್ದ ರೈತರಿಬ್ಬರು ಸ್ಥಳದಲ್ಲೇ ಮೃತ್ಯು

ಗದಗ: ಸರ್ಕಾರಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ನಲ್ಲಿದ್ದ ಇಬ್ಬರು ರೈತರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಹಳ್ಳಿಗುಡಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಹಳ್ಳಿಗುಡಿ ಗ್ರಾಮದ ರೈತ ಪರಸಪ್ಪ ಜೋಗಿನ ಹಾಗೂ ಪೇಠಾಲೂರ ಗ್ರಾಮದ ಮಾರುತಿ ಯಾಟಿ ಎಂದು ಗುರುತಿಸಲಾಗಿದೆ. ಬಿತ್ತನೆ ಬೀಜ ಖರೀದಿಗಾಗಿ ಇಬ್ಬರು ರೈತರು ಮುಂಡರಗಿಗೆ ಬಂದಿದ್ದರು ಖರೀದಿ ಮುಗಿಸಿ ತಮ್ಮ ಊರಿನತ್ತ ಬೈಕ್ ನಲ್ಲಿ ತೆರಳುತ್ತಿದ್ದ …

Read More »

ಪ್ರೀತಿ ನಿರಾಕರಿಸಿದ್ದಕ್ಕೆ ಕೊಲೆ ಬೆದರಿಕೆ ಹಾಕಿದ್ದಾತನ ಸೆರೆ

ಬೆಳಗಾವಿ: ಪ್ರೀತಿ ನಿರಾಕರಿಸಿದ ಯುವತಿಗೆ ಕೊಲೆ ಬೆದರಿಕೆ ಒಡ್ಡಿದ್ದ ಆರೋಪದಲ್ಲಿ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ತಾಲೂಕಿನ ಕಿಣಯೇ ಗ್ರಾಮದ ತಿಪ್ಪಣ್ಣ ಡೋಕರೆ ಎಂಬಾತನು ತನ್ನು ಪ್ರೀತಿಯನ್ನು ನಿರಾಕರಿಸಿದ ಯುವತಿ ಮನೆ ಮೇಲೆ ಕಲ್ಲು ತೂರಾಟ ಮಾಡಿ ಕಿಟಕಿ ಗಾಜು ಪುಡಿ ಮಾಡಿದ್ದಾನೆ. ಭಯಭೀತರಾದ ಯುವತಿ ಮನೆಯವರು ಗ್ರಾಮೀಣ ಠಾಣೆಗೆ ದೂರು ನೀಡಿದ್ದು, ಆರೋಪಿಯ ಹೆಡೆಮುರಿ ಕಟ್ಟಿದ್ದಾರೆ. ಇದೇ ಗ್ರಾಮದ ಬಿಕಾಂ ವಿದ್ಯಾರ್ಥಿನಿಯ ಬೆನ್ನು ಬಿದ್ದಿದ್ದ ಈತ ಮೂರು ವರ್ಷಗಳಿಂದ …

Read More »

ರಾಜ್ಯಕ್ಕೆ ಬರುತ್ತಿದ್ದ ನೀರನ್ನು ತಡೆ ಹಿಡಿದ ಮಹಾ ಸರ್ಕಾರದ ಕ್ರಮಕ್ಕೆ ರೈತರು ಆಕ್ರೋಶ

ಚಿಕ್ಕೋಡಿ: ಕೃಷ್ಣಾ ನದಿಯಿಂದ ಹರಿದು ಬರುತ್ತಿದ್ದ ನೀರನ್ನು ಮಹಾರಾಷ್ಟ್ರ ಸರ್ಕಾರ ತಡೆ ಹಿಡಿದಿದೆ. ಇದರಿಂದ ಮಹಾರಾಷ್ಟ್ರ ಸರ್ಕಾರ ಕರ್ನಾಟಕ ರಾಜ್ಯದ ವಿರುದ್ದ ಮತ್ತೆ ಕ್ಯಾತೆ ತೆಗೆದಿದೆ ಎಂದು ರೈತರು ಆಕ್ರೋಶ ಹೊರಹಾಕಿದ್ದಾರೆ. ಕೃಷ್ಣಾ ನೀರಿನ ವಿಷಯವಾಗಿ ಮತ್ತೆ ಮಹಾರಾಷ್ಟ್ರ ಸರ್ಕಾರ ಕ್ಯಾತೆ ತೆಗೆದಿದೆ. ಕರ್ನಾಟಕಕ್ಕೆ ಹರಿದು ಬರುತ್ತಿದ್ದ ನೀರನ್ನು ಮೇ.26ರ ರವಿವಾರ ಮಹಾರಾಷ್ಟ್ರ ಸರಕಾರ ತಡೆ ಹಿಡಿದಿದೆ. ಗಡಿ ಭಾಗದ ರಾಜಾಪೂರ ಬ್ಯಾರೇಜ್ ಮೂಲಕ ಕರ್ನಾಟಕಕ್ಕೆ ಹರಿದು ಬರುತ್ತಿದ್ದ ಕೃಷ್ಣಾ ನದಿ …

Read More »

ಮಾಜಿ ಸಿಎಂ ‘BSY’ ವಿರುದ್ಧ ಪೋಕ್ಸೋ ಕೇಸ್ ದಾಖಲಿಸಿದ್ದ ಮಹಿಳೆ ಸಾವು

ಬೆಂಗಳೂರು : ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸ್ ದಾಖಲಿಸಿದ್ದ ಮಹಿಳೆ ಮೃತಪಟ್ಟ ಘಟನೆ ಹುಳಿಮಾವು ಬಳಿಯ ನ್ಯಾನೋ ಆಸ್ಪತ್ರೆಯಲ್ಲಿ ನಡೆದಿದೆ. ಉಸಿರಾಟ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದ ಮೇರೆಗೆ ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿತ್ತು, ನಂತರ ಈ ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಿ ಡಿಜಿ, ಐಜಿಪಿ ಅಲೋಕ್ …

Read More »

ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಅಂಗಡಿ.

ರಾಯಚೂರು: ನಗರದ ಮಹಾವೀರ ವೃತ್ತದಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಗಿಗಾ ಬೈಟ್ ಎನ್ನುವ ಎಲೆಕ್ಟ್ರಿಕ್ ಬೈಕ್ ಗಳ ಅಂಗಡಿಗೆ ಬೆಂಕಿ ಬಿದ್ದು ಹೊತ್ತಿ ಉರಿದಿದೆ. ಏಕಾಏಕಿ ಬೆಂಕಿ ಹೊತ್ತಿಕೊಂಡಿದ್ದು ಕ್ಷಣಾರ್ಧದಲ್ಲಿ ಎಲ್ಲ ವಸ್ತುಗಳು ಸುಟ್ಟು ಭಸ್ಮವಾಗಿದೆ. ಘಟನೆಯಲ್ಲಿ ಲಕ್ಷಾಂತರ ಮೌಲ್ಯದ ಹಾನಿಯಾಗಿದೆ. ಘಟನೆಯಲ್ಲಿ ಮೂರು ಎಲೆಕ್ಟ್ರಿಕ್ ವಾಹನಗಳು, ಎರಡು ಬೈಕ್ ಗಳು ಸುಟ್ಟು ಕರಕಲಾಗಿವೆ. ಎರಡು ಅಂತಸ್ತಿನ ಕಟ್ಟಡದಲ್ಲಿ ದಟ್ಟ ಹೊಗೆ ಆವರಿಸಿದ್ದು, ಅಕ್ಕಪಕ್ಕದ ಅಂಗಡಿಗಳಿಗೂ ಬೆಂಕಿ ಹರಡಿಕೊಂಡಿದೆ. ಕಟ್ಟಡದೊಳಗೆ ಕಾರ್ಮಿಕರು …

Read More »

ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್ : ಮೇ 31ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್

ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿಗಳಿಕೆ ಕೇಸ್ ಗೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ಸಮ್ಮತಿಯನ್ನು ಹಿಂಪಡೆದ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆಯನ್ನು ಹೈ ಕೋರ್ಟ್ ಮೇ 31ಕ್ಕೆ ಮುಂದೂಡಿತು. ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ರಿಟ್ ಅರ್ಜಿ ವಿಚಾರಣೆ ನಡೆಯುತ್ತಿದ್ದು ಸಿ.ಬಿ.ಐ ತನಿಖೆಗೆ ಸಮ್ಮತಿ ಹಿಂಪಡೆದ ಸರಕಾರದ ಕ್ರಮ ಪ್ರಶ್ನಿಸಿ ರಿಟ್ ಅರ್ಜಿ ಕುರಿತಂತೆ ಡಿಕೆ ಶಿವಕುಮಾರ್ ಪರ ಹಿರಿಯ …

Read More »

ಗ್ರಾಹಕರಿಗೆ ಬಂಪರ್ ಆಫರ್‌ ನೀಡಿದ ಬಿಎಸ್‌ಎನ್‌ಎಲ್‌

BSNL ಭಾರತದ ಹಳೆಯ ಟೆಲಿಕಾಂ ಕಂಪನಿ. ಒಂದು ಕಾಲದಲ್ಲಿ ಈ ಕ್ಷೇತ್ರದಲ್ಲಿ ರಾಜನಂತೆ ಮೆರೆದ ಕಂಪನಿ, ಇಂದು ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಹೋರಾಡುತ್ತಿದೆ. ಮಾರುಕಟ್ಟೆಯಲ್ಲಿರುವ ಹಲವು ಟೆಲಿಕಾಂ ಕಂಪನಿಗಳ ಜೊತೆ ಸರ್ಕಾರಿ ಟೆಲಿಕಾಂ ಕಂಪನಿ ಸ್ಪರ್ಧೆ ಮಾಡುವಲ್ಲಿ ಕೊಂಚ ಹಿಂದೆ ಬಿದ್ದಿದೆ. ಆದರೆ ಈಗ ಕಾಲ ಬದಲಾಗಿದೆ. ಬಿಎಸ್‌ಎನ್‌ಎಲ್‌ (BSNL) ಸಹ ತನ್ನ ಗ್ರಾಹಕರನ್ನು ಹಿಡಿದಿಟ್ಟುಕೊಳ್ಳಲು ಪ್ಲ್ಯಾನ್ ಮಾಡಿಕೊಂಡಿದೆ. ಬಿಎಸ್‌ಎನ್‌ಎಲ್‌ ಬಿಟ್ಟಿರುವ ಆಫರ್‌ ಕಂಡು ಇತರ ಟೆಲಿಕಾಂ ಕಂಪನಿಗಳ ನಿದ್ದೆ …

Read More »

ಸರ್ಕಾರಿ ನೌಕರ ಆತ್ಮಹತ್ಯೆಗೆ ಶರಣು

ಶಿವಮೊಗ್ಗ, ಮೇ 27: ಸರ್ಕಾರಿ ನೌಕರರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಬೆಂಗಳೂರಿನಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಧೀಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದ ಉದ್ಯೋಗಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿವಮೊಗ್ಗ ನಗರದ ವಿನೋಬ ನಗರದ ನಿವಾಸದಲ್ಲಿ ಚಂದ್ರಶೇಖರನ್ (50) ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾವಿಗೂ ಮುನ್ನ ಅವರು 6 ಪುಟದ ಡೆತ್ ನೋಟ್ ಬರೆದಿಟ್ಟಿದ್ದಾರೆ. ವಿನೋಬ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

Read More »

ಈ ದೇಶವನ್ನು ಎಂದಿಗೂ ‘ಹಿಂದೂ ರಾಷ್ಟ’ವನ್ನಾಗಿ ಮಾಡಲು ಸಾಧ್ಯವಿಲ್ಲ : ಸಿಎಂ

ಬೆಂಗಳೂರು : ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಲ್ಲರನ್ನು ಒಟ್ಟಿಗೆ ತೆಗೆದುಕೊಂಡು ಹೋಗುತ್ತೇವೆ. ಮೋದಿ ಹಿಂದೂ ರಾಷ್ಟ್ರ ಮಾಡ್ತೀವಿ ಅಂತಾರೆ ಇದು ಕನಸಿನ ಮಾತು. ಈ ದೇಶವನ್ನು ಹಿಂದೂ ರಾಷ್ಟ್ರ ಮಾಡಲು ಸಾಧ್ಯವಿಲ್ಲ ಎಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನೆಹರು ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದರು. ಚುನಾವಣೆಯಲ್ಲಿ ಸೋಲುತ್ತೇವೆ ಅನ್ನೋದು ಮೋದಿಗೆ ಖಾತ್ರಿಯಾಗಿದೆ. ಮೋದಿ ವಿಕಸಿತ ಭಾರತ ಮಾಡಲು ದೇವರೇ ಕಳಿಸಿದ್ದಾನೆ.ಅಂತಾರೆ ಅದಕ್ಕಾಗಿ ಹಿಂದೂ ಮುಸ್ಲಿಮರನ್ನು ಡಿವೈಡ್ …

Read More »

ಕರ್ನಾಟಕದಲ್ಲಿ ಕುಬೇರರ ತವರು ಯಾವುದು ಗೊತ್ತಾ?

 ಸಾಮಾನ್ಯವಾಗಿ ನಾವು ಭಾರತದ ಅತ್ಯಂತ ಶ್ರೀಮಂತ ನಗರಗಳ ಬಗ್ಗೆ ಕೇಳಿರುತ್ತೇವೆ. ಹಾಗೆಯೇ ವಿಜ್ಞಾನ, ತಂತ್ರಜ್ಞಾನ, ಶಿಕ್ಷಣ, ಪ್ರವಾಸೋದ್ಯಮ, ಹಣಕಾಸು ವಿಚಾರಕ್ಕೆ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ 2024ನೇ ಸಾಲಿನಲ್ಲಿ ಯಾವೆಲ್ಲಾ ಜಿಲ್ಲೆಗಳು ಶ್ರೀಮಂತ ಪಟ್ಟವನ್ನು ಪಡೆದುಕೊಂಡಿವೆ, ವಿಶೇಷತೆ ಹಾಗೂ ಅಲ್ಲಿನ ತಲಾ ಆದಾಯ ಎಷ್ಟು ಎನ್ನುವ ಮಾಹಿತಿಯನ್ನು ಅಂಕಿಅಂಶಗಳ ಸಹಿತ ನೀಡಲಾಗಿದೆ ಇಲ್ಲಿ ಗಮನಿಸಿ. ರಾಜದಲ್ಲಿನ ಒಂದೊಂದು ಜಿಲ್ಲೆಗಳು ಒಂದೊಂದು ವಿಶೇಷತೆಗಳನ್ನು ಹೊಂದಿವೆ. ಉದಾಹರಣೆಗೆ ಧಾರವಾಡ-ಪೇಡಾನಗರಿ, ದಾವಣಗೆರೆ-ಬೆಣ್ಣೆನಗರಿ, ಮಂಡ್ಯ-ಸಕ್ಕರೆ ನಾಡು, ಮೈಸೂರು-ಸಾಂಸ್ಕೃತಿಕ …

Read More »