ಮಂಗಳೂರು: ನಮ್ಮ ಸರಕಾರ ಬಂದು ಒಂದು ವರ್ಷವಾಗಿದೆ..ನಾವು ಏನೇನು ಮಾಡಿದ್ದೇವೆ ಅಂತ ಜನರಿಗೆ ತಿಳಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದರು. ದ.ಕ ಜಿಲ್ಲೆಯ ಬೆಳ್ತಂಗಡಿಯ ಗುರುವಾಯನಕೆರೆಯಲ್ಲಿ ನಡೆಯಲಿರುವ ಮಾಜಿ ಶಾಸಕ ವಸಂತ ಬಂಗೇರ ಅವರ ಉತ್ತರ ಕ್ರಿಯೆಯಲ್ಲಿ ಭಾಗಿಯಾಗುವುದಕ್ಕೆ ಆಗಮಿಸಿರುವ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ನೀರಾವರಿಗೆ 16000 ಕೋಟಿ ರೂ ಇತ್ತು ಈ ವರ್ಷ 18 ಸಾವಿರ ಕೋಟಿ ಇಟ್ಟಿದ್ದೇವೆ. ಏನು ಮಾಡಿಲ್ಲ ಅಂತ ಅಂದ್ರೆ ಏನು ಹೇಳುವುದು? ಗ್ಯಾರೆಂಟಿಯನ್ನು …
Read More »Monthly Archives: ಮೇ 2024
ಡ್ರೈವಿಂಗ್ ಲೈಸೆನ್ಸ್; ಜೂನ್ 1ರಿಂದ ಹೊಸ ರೂಲ್ಸ್!
ಇನ್ನು ಮುಂದೆ ಚಾಲನಾ ಪರವಾನಗಿ ಪಡೆಯಲು ಸರ್ಕಾರಿ ಪ್ರಾದೇಶಿಕ ಸಾರಿಗೆ ಕಚೇರಿಗೆ (RTO) ಹೋಗಬೇಕಿಲ್ಲ. ಬದಲಾಗಿ ಖಾಸಗಿ ಸಂಸ್ಥೆಗಳಿಂದಲೂ ಚಾಲನಾ ಪರವಾನಗಿ (Driving Licence New Rules) ಪಡೆಯಬಹುದಾಗಿದೆ. ಸರ್ಕಾರವು ಚಾಲನಾ ಪರವಾನಗಿ ಪಡೆಯುವ ನಿಯಮವನ್ನು (New Rules) ಬದಲಾಯಿಸಿದ್ದು, ಜೂನ್ 1ರಿಂದ ಇದು ಜಾರಿಗೆ ಬರಲಿದೆ. ಮೊದಲು ಇದು ಆಯ್ದ ನಗರಗಳಲ್ಲಿ ಮಾತ್ರ ಪ್ರಾಯೋಗಿಕವಾಗಿ ಜಾರಿಯಾಗಲಿದೆ. ಪರಿಸರ ಮಾಲಿನ್ಯ ತಡೆಯುವ ಉದ್ದೇಶದಿಂದ ಸುಮಾರು 9,00,000 ಹಳೆಯ ಸರ್ಕಾರಿ ವಾಹನಗಳನ್ನು …
Read More »ಅಂಜಲಿ ಪ್ರಕರಣದಲ್ಲಿ ಮತ್ತೋರ್ವ ಪೊಲೀಸ್ ಅಧಿಕಾರಿ ಅಮಾನತು
ಹುಬ್ಬಳ್ಳಿ: ಅಂಜಲಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಮತ್ತೊಬ್ಬ ಪೊಲೀಸ್ ಅಧಿಕಾರಿ ತಲೆದಂಡವಾಗಿದೆ. ಅಂಜಲಿ ಮತ್ತು ನೇಹಾ ಹತ್ಯೆ ಸೇರಿದಂತೆ ವಿವಿಧ ಪ್ರಕರಣದಲ್ಲಿ ಕರ್ತವ್ಯ ಲೋಪ ಹಿನ್ನೆಲೆ, ದಕ್ಷಿಣ ಉಪ ವಿಭಾಗದ ಎಸಿಪಿ ವಿಜಯ್ ಕುಮಾರ್ ತಳವಾರ್ ಅವರನ್ನು ಅಮಾನತು ಮಾಡಲಾಗಿದೆ. ಹುಬ್ಬಳ್ಳಿಯಲ್ಲಿಂದು ಗೃಹಸಚಿವ ಜಿ.ಪರಮೇಶ್ವರ್ ಸುದ್ದಿಗೋಷ್ಠಿ ನಡೆಸಿದ್ದು, ಈ ವೇಳೆ ಮಾತನಾಡಿದ್ದ ಅವರು, ಯಾರೇ ತಪ್ಪು ಮಾಡಿದ್ದರೂ ಯಾವುದೇ ಜಾತಿ ಮತ ನೋಡದೇ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಭರವಸೆ ನೀಡಿದ್ದರು. …
Read More »ಮೊಟ್ಟೆಗಿಂತ ಹೆಚ್ಚು ಪ್ರೋಟೀನ್ ಬೇಕೇ.? ಹಾಗಿದ್ರೆ, ಈ ‘ಬೇಳೆಕಾಳು’ ಸೇವಿಸಿ,
ದೇಹವನ್ನ ಆರೋಗ್ಯಕರವಾಗಿ ಮತ್ತು ಫಿಟ್ ಆಗಿರಿಸಲು ವಿಟಮಿನ್’ಗಳು, ಖನಿಜಾಂಶಗಳು ಮತ್ತು ಪ್ರೋಟೀನ್’ಗಳು ಅತ್ಯಗತ್ಯ. ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನ ಹೆಚ್ಚಿಸಲು ಪ್ರೋಟೀನ್ ಸಹಾಯ ಮಾಡುತ್ತದೆ. ಆದಾಗ್ಯೂ, ಪ್ರೋಟೀನ್ ಜೊತೆಗೆ ಜೀವಸತ್ವಗಳು ದೇಹದ ಬೆಳವಣಿಗೆಯಿಂದ ರೋಗನಿರೋಧಕ ಶಕ್ತಿಯನ್ನ ಹೆಚ್ಚಿಸಲು ಬಹಳ ಸಹಾಯಕವಾಗಿವೆ. ಮೊಟ್ಟೆಗಳು ಪ್ರೋಟೀನ್’ನ ಮೂಲಗಳಲ್ಲಿ ಒಂದಾಗಿದೆ ಎಂದು ವೈದ್ಯರು ಸೂಚಿಸುತ್ತಾರೆ, ಮಕ್ಕಳಿಂದ ವಯಸ್ಕರವರೆಗೂ ಪ್ರತಿಯೊಬ್ಬರೂ ದಿನಕ್ಕೆ ಕನಿಷ್ಠ 1 ಮೊಟ್ಟೆಯನ್ನ ತಿನ್ನಬೇಕು. ಆದಾಗ್ಯೂ, ಧಾನ್ಯಗಳು (ದ್ವಿದಳ ಧಾನ್ಯಗಳು) ಮೊಟ್ಟೆಗಳಿಗಿಂತ ಹೆಚ್ಚಿನ ಪ್ರೋಟೀನ್ …
Read More »ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ
ಬಿಜೆಪಿ ಬಿಜೆಪಿಯಲ್ಲಿ ಹಾಲಿ ಸದಸ್ಯ ಎನ್.ರವಿಕುಮಾರ್ ಅವರನ್ನು ಮತ್ತೊಂದು ಅವಧಿಗೆ ಆಯ್ಕೆಗೊಳಿಸಬೇಕೆಂಬುದು ಪಕ್ಷದ ವಲಯದಲ್ಲಿ ದೃಢಪಟ್ಟಿದೆ. ಇನ್ನುಳಿದ ಎರಡು ಸ್ಥಾನಗಳನ್ನು ಯಾರಿಗೆ ಕೊಡಬೇಕೆಂಬ ಬಗ್ಗೆ ಪ್ರಾದೇಶಿಕ ಹಾಗೂ ಜಾತಿವಾರು ಚರ್ಚೆ ನಡೆಸಬೇಕಿದೆ. ಇನ್ನೆರಡು ದಿನದಲ್ಲಿ ಈ ಸಂಬಂಧ ಸಭೆ ಸೇರಿ ಸಾಧ್ಯತೆಗಳ ಬಗ್ಗೆ ಪರಿಶೀಲನೆ ನಡೆಸಲು ಬಿಜೆಪಿ ನಿರ್ಧರಿಸಿದೆ. ಮೂರರ ಪೈಕಿ ಒಂದು ಸ್ಥಾನವನ್ನು ಮಾಜಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರಿಗೆ ನೀಡಬೇಕೆಂಬ ವಾದ ಕರಾವಳಿ ಭಾಗದ ಶಾಸಕರಿಂದ ಕೇಳಿ …
Read More »ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್ ರೇವಣ್ಣ ಪಾಸ್ಪೋರ್ಟ್ ರದ್ದಿಗೆ SIT ಮನವಿ!
ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್ ರೇವಣ್ಣ ಪಾಸ್ಪೋರ್ಟ್ ರದ್ದಿಗೆ SIT ಮನವಿ! ಬೆಂಗಳೂರು: ಹಾಸನದ ಹಾಲಿ ಸಂಸದ, ಮಾಜಿ ಶಾಸಕ ಎಚ್.ಡಿ. ರೇವಣ್ಣ ಅವರ ಪುತ್ರ ಪ್ರಜ್ವಲ್ ರೇವಣ್ಣ ಇದೀಗ ವಿದೇಶದಲ್ಲಿ ತಲೆಮರೆಸಿಕೊಂಡಿದ್ದು, ತಮ್ಮ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪಗಳು ವ್ಯಾಪಕವಾಗಿ ಕೇಳಿಬರುತ್ತಿದ್ದಂತೆ ಈ ರೀತಿ ವಿದೇಶಕ್ಕೆ ಹಾರುವ ಮೂಲಕ ವಿಚಾರಣೆಯಿಂದ ತಪ್ಪಿಸಿಕೊಳ್ಳುತ್ತಿದ್ದಾರೆ ಎಂಬ ಗಂಭೀರ ಆರೋಪವೂ ಸಹ ಕೇಳಿಬಂದಿದೆ. ಈಗಾಗಲೇ ಚುರುಕು ತನಿಖೆಯನ್ನು ಕೈಗೊಂಡಿರುವ ಎಸ್ಐಟಿ ತಂಡ, ಪ್ರಜ್ವಲ್ ವಿರುದ್ಧ ಬ್ಲೂ …
Read More »ಮಾರ್ಗಸೂಚಿ ಅನುಸಾರ ಮೇ 29 ರಿಂದ ಎಲ್ಲಾ ಶಾಲೆ ಆರಂಭಿಸಲು ಶಿಕ್ಷಣ ಇಲಾಖೆ ಸೂಚನೆ
ಬೆಂಗಳೂರು: ಶಿಕ್ಷಣ ಇಲಾಖೆ ಹೊರಡಿಸಿದ ಮಾರ್ಗಸೂಚಿ ಮತ್ತು ಸುತ್ತೋಲೆಯ ಪ್ರಕಾರ ಎಲ್ಲಾ ಶಾಲೆಗಳು ಮೇ 29 ರಿಂದ ತರಗತಿಗಳನ್ನು ಆರಂಭಿಸಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಸೂಚಿಸಿದೆ. ರಾಜ್ಯದ ಅನೇಕ ಖಾಸಗಿ ಶಾಲೆಗಳು ಬೇಸಿಗೆ ರಜೆ ಕಡಿತಗೊಳಿಸಿ ಮೇ ತಿಂಗಳಿಂದ ತರಗತಿಗಳನ್ನು ಆರಂಭಿಸಿ ಮಕ್ಕಳ ಹಕ್ಕುಗಳನ್ನು ಉಲ್ಲನಿಸಿವೆ. ಅಂತಹ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದಿಂದ ಶಿಕ್ಷಣ ಇಲಾಖೆಗೆ ಪತ್ರ ಬರೆಯಲಾಗಿದೆ. ಶೈಕ್ಷಣಿಕ …
Read More »ಕೃಷ್ಣಾ ನದಿಯ ನೀರಿನ ಮಟ್ಟದ ಪರಿಶೀಲನೆಯನ್ನು ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ ಅವರು ನಡೆಸಿದರು.
ಕುಡಚಿ ಪಟ್ಟಣದ ಸಮೀಪದಲ್ಲಿ ಇಂದು ಕೃಷ್ಣಾ ನದಿಯ ನೀರಿನ ಮಟ್ಟದ ಪರಿಶೀಲನೆಯನ್ನು ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ ಅವರು ನಡೆಸಿದರು. ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು. ಕೊಯ್ನಾ ಡ್ಯಾಮ್ ನಿಂದ ಕೃಷ್ಣಾ ನದಿಗೆ ನೀರು ಬಿಡಲು ಸಿಎಂ ಶ್ರೀ ಸಿದ್ದರಾಮಯ್ಯನವರು ಮಹಾರಾಷ್ಟ್ರ ಮುಖ್ಯಮಂತ್ರಿ ಶ್ರೀ ಏಕನಾಥ ಶಿಂಧೆ ಅವರಿಗೆ ಪತ್ರ ಬರೆದಿದ್ದರು.ಕೃಷ್ಣಾ ನದಿಗೆ ಕೊಯ್ನಾ ಡ್ಯಾಮ್ ನಿಂದ ಶೀಘ್ರವೇ ನೀರು ಬಿಡಲು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರು …
Read More »ಎಷ್ಟು ದಿನ ಈ ಕಳ್ಳ-ಪೊಲೀಸ್ ಆಟ, ಬೇಗ ಬಂದು ಶರಣಾಗು ; HDK
ಬೆಂಗಳೂರು : ಎಷ್ಟು ದಿನ ಈ ಕಳ್ಳ-ಪೊಲೀಸ್ ಆಟ, ಬೇಗ ಬಂದು ಶರಣಾಗು ಎಂದು ಪ್ರಜ್ವಲ್ ರೇವಣ್ಣಗೆ ಮಾಜಿ ಸಿಎಂ ಕುಮಾರಸ್ವಾಮಿ ಮನವಿ ಮಾಡಿದ್ದಾರೆ. ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಸಿಲುಕಿರುವ ಪ್ರಜ್ವಲ್ ರೇವಣ್ಣ ವಿದೇಶದಲ್ಲಿ ತಲೆಮರೆಸಿಕೊಂಡಿದ್ದು, ಬೇಗ ಬಂದು ಶರಣಾಗುವಂತೆ ಹೆಚ್ಡಿಕೆ ಮನವಿ ಮಾಡಿದ್ದಾರೆ. ಈ ನೆಲದ ಕಾನೂನು ಇದೆ. ಯಾಕೆ ಹೆದರಬೇಕು. ನನ್ನ ಹಾಗೂ ಹೆಚ್ ಡಿಡಿ ಮೇಲೆ ಗೌರವ ಇದ್ರೆ 24-48 ಗಂಟೆಯೊಳಗೆ ಬಂದು ಶರಣಾಗು ಎಂದು …
Read More »ಅಂಜಲಿ ಕೊಲೆ ಪ್ರಕರಣ ಸಿಐಡಿಗೆ, ನೇಹಾ ಕೇಸ್ ಸಿಬಿಐಗೆ ಕೊಡಲ್ಲ: ಗೃಹ ಸಚಿವ
ಹುಬ್ಬಳ್ಳಿ: ಹುಬ್ಬಳ್ಳಿಯ ನೇಹಾ ಹಿರೇಮಠ್ ಹತ್ಯೆ ಪ್ರಕರಣ ಬೆನ್ನಲ್ಲೇ ಇದೀಗ ಅಂಜಲಿ ಅಂಬಿಗೇರ ಕೊಲೆ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಈ ಬಗ್ಗೆ ಹುಬ್ಬಳ್ಳಿಯಲ್ಲಿ ಗೃಹ ಸಚಿವ ಡಾ. ಜಿ ಪರಮೇಶ್ವರ್ ತಿಳಿಸಿದ್ದಾರೆ. ಇಂದು ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿರುವ ಅಂಜಲಿ ಅಂಬಿಗೇರ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಅಂಜಲಿ ಅಂಬಿಗೇರ ಕೊಲೆ ಪ್ರಕರಣವನ್ನು ಇಂದು ಸಂಜೆ ಅಥವಾ ನಾಳೆ ಸಿಐಡಿಗೆ ಹಸ್ತಾಂತರ ಮಾಡುತ್ತೇವೆ …
Read More »