ಬೆಳಗಾವಿ: ಮಳೆಗಾಲ ಮತ್ತೆ ಬಂದಿದೆ. 2024-25ನೇ ಸಾಲಿನ ತರಗತಿಗಳ ಆರಂಭಕ್ಕೆ ಒಂದೇ ವಾರ ಬಾಕಿ ಇದೆ. ಈ ಮಧ್ಯೆ, ಮುಂಗಾರು ಪೂರ್ವದಲ್ಲಿ ಜೋರಾಗಿ ಸುರಿಯುತ್ತಿರುವ ಮಳೆ- ಗಾಳಿಯಿಂದ ಶಾಲೆಗಳ ಪತ್ರಾಸ್ ಹಾರಿಹೋಗುವುದು, ಗೋಡೆ ಕುಸಿಯುವುದು ಸಾಮಾನ್ಯವಾಗಿದೆ. ಆದರೆ, ಜಿಲ್ಲೆಯ ಹಲವು ಸರ್ಕಾರಿ ಶಾಲೆಗಳು ಶಿಥಿಲ ಕೊಠಡಿಗಳಿಂದ ಎದುರಿಸುತ್ತಿರುವ ಸಮಸ್ಯೆಗೆ ಮುಕ್ತಿ ಸಿಕ್ಕಿಲ್ಲ. ಈ ವರ್ಷವೂ ವಿದ್ಯಾರ್ಥಿಗಳು ಅದೇ ಕೊಠಡಿಗಳಲ್ಲೇ ಆತಂಕದಿಂದ ಓದುವುದು ತಪ್ಪಿಲ್ಲ. ಇತ್ತೀಚೆಗೆ ಸುರಿದ ಮಳೆ, ಜೋರಾಗಿ ಬೀಸುತ್ತಿರುವ …
Read More »Monthly Archives: ಮೇ 2024
ಮೂಡಲಗಿ: ಖಾನಟ್ಟಿಯ ಶಿವಲಿಂಗೇಶ್ವರ ರಥೋತ್ಸವ ಇಂದು
ಮೂಡಲಗಿ: ಮೂಡಲಗಿ ತಾಲ್ಲೂಕಿನ ಖಾನಟ್ಟಿ ಗ್ರಾಮದ ಸಿದ್ಧಿ ಪುರುಷ ಜಗದ್ಗುರು ಶಿವಲಿಂಗೇಶ್ವರರ ಜಾತ್ರೆ ಮತ್ತು ರಥೋತ್ಸವವು ಜಗದ್ಗುರು ಶಿವಲಿಂಗೇಶ್ವರ ಕುಮಾರೇಂದ್ರ ಅವರ ಸನ್ನಿಧಿಯಲ್ಲಿ ಮೇ 20ರಂದು ಸಂಜೆ 5ಕ್ಕೆ ನಡೆಯಲಿದೆ. ವರ್ಷದಲ್ಲಿ ಮೂರು ಬಾರಿ ಜಾತ್ರೆ ನಡೆಯುವ ವಿಶಿಷ್ಟ ಸಂಪ್ರದಾಯವನ್ನು ಖಾನಟ್ಟಿ ಶಿವಲಿಂಗೇಶ್ವರ ದೇವಸ್ಥಾನ ಹೊಂದಿದೆ. ಶ್ರಾವಣ ಮಾಸ, ಶಿವರಾತ್ರಿ ದಿನಗಳಂದು ಜಾತ್ರೆ ನಡೆಯುತ್ತದೆ. ಬಸವ ಜಯಂತಿ ನಂತರ ಬರುವ ಸೋಮವಾರದಂದು ನಡೆಯುವ ಜಾತ್ರೆಯು ಅವಿಗಳಲ್ಲಿ ಪ್ರಮುಖವೆನಿಸಿದೆ. ಹಿನ್ನೆಲೆ: ಕ್ರಿ.ಶ. …
Read More »ಕೊಪ್ಪಳ | ವಾಣಿಜ್ಯ ಮಳಿಗೆಗಳಿಗೆ ಬೆಂಕಿ: ದಟ್ಟ ಹೊಗೆ
ಕೊಪ್ಪಳ: ನಗರದ ಮಧ್ಯಭಾಗದಲ್ಲಿರುವ ವಾಣಿಜ್ಯ ಮಳಿಗೆಗೆ ಸೋಮವಾರ ಮಧ್ಯಾಹ್ನ ಬೆಂಕಿ ಹೊತ್ತಿಕೊಂಡಿದ್ದು ದಟ್ಟ ಹೊಗೆ ಆವರಿಸಿಕೊಂಡಿದೆ. ಇದರಿಂದ ಜನ ಆತಂಕಕ್ಕೆ ಒಳಗಾಗಿದ್ದರು. ಇಲ್ಲಿನ ಕೇಂದ್ರೀಯ ಬಸ್ ನಿಲ್ದಾಣದ ಎದುರು ಇರುವ ವರ್ಣೇಕರ್ ಕಾಂಪ್ಲೆಕ್ಸ್ ಮಾರ್ಗದಿಂದ ರೈಲ್ವೆ ನಿಲ್ದಾಣಕ್ಕೆ ತೆರಳುವ ಮಾರ್ಗದಲ್ಲಿ ಬೆಂಕಿ ಅವಘಡ ನಡೆದಿದೆ. ಪೇಂಟ್ ಮಾರಾಟದ ಅಂಗಡಿಗೆ ಬೆಂಕಿ ಹೊತ್ತಿಕೊಂಡಿದ್ದು, ಅಗ್ನಿಶಾಮಕ ದಳ ಸಿಬ್ಬಂದಿ ಒಂದೂವರೆ ತಾಸಿನಿಂದ ಪ್ರಯತ್ನ ಮಾಡಿದರೂ ಬೆಂಕಿ ನಿಯಂತ್ರಣಕ್ಕೆ ಬಂದಿಲ್ಲ. ಅಕ್ಕಪಕ್ಕದ ಅಂಗಡಿಗಳಿಗೂ ಬೆಂಕಿ …
Read More »ಕಾಂಗ್ರೆಸ್ ಶಾಸಕ ಮಹಾಂತೇಶ ಕೌಜಲಗಿ ಕಾರು ಅಪಘಾತ
ವಿಧಾನಸೌಧ ಮುಂಭಾಗದಲ್ಲೇ ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ ಕಾರು ಅಪಘಾತವಾಗಿದೆ. ಬೆಂಗಳೂರು, ಮೇ 20: ವಿಧಾನಸೌಧ (Vidhan Soudha) ಮುಂಭಾಗದಲ್ಲೇ ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ (Mahantesh Koujalagi) ಕಾರು ಅಪಘಾತವಾಗಿದೆ. ಅಪಘಾತದಲ್ಲಿ ಶಾಸಕ ಮಹಾಂತೇಶ ಕೌಜಲಗಿ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕಬ್ಬನ್ ಪಾರ್ಕ್ ಸಂಚಾರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಶಾಸಕರ ಭವನದಿಂದ ಬರುವಾಗ, ಅತಿವೇಗವಾಗಿ ಬಂದ ಪೊಲೋ ಕಾರು ಶಾಸಕ ಮಹಾಂತೇಶ ಕೌಜಲಗಿಯವರ ಕಾರಿಗೆ ಗುದ್ದಿದೆ. ಅಪಘಾತದಲ್ಲಿ ಸಣ್ಣಪುಟ್ಟ …
Read More »ರೇವ್ ಪಾರ್ಟಿ ಮೇಲೆ ಪೊಲೀಸ್ ದಾಳಿ, ತೆಲುಗು ನಟಿ ಹೇಮಾ ಪತ್ತೆ; ನಟಿಯರನ್ನು ಕರೆಸಿಕೊಂಡು ಏನ್ ಮಾಡ್ತಿದ್ರು?
ಬೆಂಗಳೂರು: ಸಿಸಿಬಿ ಪೊಲೀಸರು (CCB Police) ರಾಜಧಾನಿಯಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿಯೊಂದರ (Rave party) ಮೇಲೆ ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಆಂಧ್ರಪ್ರದೇಶದಿಂದ (Andhra Pradesh) ತೆಲುಗು ನಟಿಯರನ್ನು ಕರೆಸಿಕೊಂಡು ಪಾರ್ಟಿ ಮಾಡುತ್ತಿದ್ದುದು ಪತ್ತೆಯಾಗಿದೆ. ತೆಲುಗು ನಟಿ (Telugu Actress) ಹೇಮಾ ರೇವ್ ಪಾರ್ಟಿಯಲ್ಲಿ ಭಾಗಿಯಾಗಿದ್ದುದು ಕಂಡುಬಂದಿದೆ. ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ (Electronic City) ಬಳಿಯ ಫಾರ್ಮ್ ಹೌಸ್ ಒಂದರ ಮೇಲೆ ದಾಳಿ ನಡೆಸಲಾಯಿತು. ಪಾರ್ಟಿಯಲ್ಲಿ ಡ್ರಗ್ಸ್ ಪತ್ತೆಯಾಗಿವೆ. ಎಂಡಿಎಂಎ …
Read More »ಖಾಸಗಿ ಶಾಲೆಗಳ ಶುಲ್ಕದಲ್ಲಿ ಭಾರೀ ಏರಿಕೆ !
ಬೆಂಗಳೂರು : ಅಗತ್ಯ ವಸ್ತುಗಳ ಬೆಲೆಯ ಏರಿಕೆಯ ನಡುವೆ ಇದೀಗ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸುವ ಪೋಷಕರಿಗೆ ಬಿಗ್ ಶಾಕ್. ಖಾಸಗಿ ಶಾಲೆಗಳ ಶುಲ್ಕ ಈ ಬಾರಿ 30ರಿಂದ 40ರಷ್ಟು ಶುಲ್ಕ ಏರಿಕೆಯಾಗಿದೆ. ಖಾಸಗಿ ಶಾಲೆಗಳ ಆಡಳಿತ ಮಂಡಳಿ ಪ್ರತಿ ವರ್ಷ ಶುಲ್ಕ ಹೆಚ್ಚಳ ಮಾಡುತ್ತವೆ. ಈ ಬಾರಿ ಶೇ. 30ರಿಂದ 40ರಷ್ಟು ಶುಲ್ಕ ಏರಿಕೆ ಮಾಡಿವೆ. ಖಾಸಗಿ ಶಾಲೆಗಳು 2023-24ನೇ ಸಾಲಿನಿಂದ ಶುಲ್ಕವನ್ನು ಹೆಚ್ಚಳ ಮಾಡುತ್ತಿವೆ. ಹಿಂದಿನ ವರ್ಷಕ್ಕಿಂತ …
Read More »ಯಾವುದೇ ಕಾರಣಕ್ಕೂ ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲ್ಲ ; ಸಿಎಂ
ಬೆಂಗಳೂರು : ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲ್ಲ ಎಂದು ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ. ರಾಜ್ಯ ಸರ್ಕಾರಕ್ಕೆ 1 ವರ್ಷ ತುಂಬಿದ ಹಿನ್ನೆಲೆ ಪ್ಲೆಸ್ ಕ್ಲಬ್ ನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲ್ಲ, ಗ್ಯಾರಂಟಿ ಯೋಜನೆಗಳು ಸ್ಥಗಿತವಾಗುತ್ತದೆ ಎಂದು ಬಿಜೆಪಿಯವರು ಅಪಪ್ರಚಾರ ಮಾಡುತ್ತಿದ್ದಾರೆ. ನಮ್ಮ ಸರ್ಕಾರದ ಯೋಜನೆಗಳು ಮುಂದುವರೆಯಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ನಾವು ನುಡಿದಂತೆ …
Read More »ಬೆಂಗಳೂರಲ್ಲಿ ತಡರಾತ್ರಿ ರೇವ್ ಪಾರ್ಟಿ ಮೇಲೆ ಸಿಸಿಬಿ ದಾಳಿ: 25 ಯುವತಿಯರು, ಡ್ರಗ್ಸ್ ಪತ್ತೆ
ಬೆಂಗಳೂರು: ಬೆಂಗಳೂರಿನಲ್ಲಿ ರೇವ್ ಪಾರ್ಟಿ ಮೇಲೆ ಸಿಸಿಬಿ ತಂಡ ದಾಳಿ ನಡೆಸಿದೆ. ಎಲೆಕ್ಟ್ರಾನಿಕ್ ಸಿಟಿ ಸಮೀಪದ ಜಿ.ಆರ್. ಫಾರ್ಮ್ ಹೌಸ್ ಮೇಲೆ ದಾಳಿ ಮಾಡಲಾಗಿದ್ದು, ಎಂಡಿಎಂಎ ಮಾತ್ರೆಗಳು ಮತ್ತು ಕೊಕೇನ್ ಪತ್ತೆಯಾಗಿದೆ. ಪಾರ್ಟಿಯಲ್ಲಿ 25ಕ್ಕೂ ಹೆಚ್ಚು ಯುವತಿಯರು ಇದ್ದರು. ಆಂಧ್ರಪ್ರದೇಶ, ಬೆಂಗಳೂರು ಮೂಲದ 100ಕ್ಕೂ ಹೆಚ್ಚು ಜನರು ಭಾಗವಹಿಸಿದ್ದರು. ತಡರಾತ್ರಿ ಎರಡು ಗಂಟೆಯಾದರೂ ಪಾರ್ಟಿ ನಡೆಯುತ್ತಿತ್ತು. ಅವಧಿ ಮೀರಿ ಪಾರ್ಟಿ ನಡೆಸಿದ್ದು, ಡ್ರಗ್ಸ್ ಬಳಕೆ ಮಾಡಲಾಗಿದೆ. ಹೈದರಾಬಾದ್ ಮೂಲದ ವಾಸು ಪಾರ್ಟಿ …
Read More »ಚಿಕ್ಕೋಡಿ: ಹಾವು ಕಚ್ಚಿ ಬಾಲಕಿ ಸಾವು
ಚಿಕ್ಕೋಡಿ: ತಾಲ್ಲೂಕಿನ ಕೇರೂರವಾಡಿಯಲ್ಲಿ ಶುಕ್ರವಾರ ರಾತ್ರಿ ಹಾವು ಕಚ್ಚಿ 4 ವರ್ಷದ ಬಾಲಕಿ ಶಿವಾನಿ ತುಳಸಿಗೇರಿ ಮೃತಪಟ್ಟ ಘಟನೆ ನಡೆದಿದೆ. ಮೂಲತಃ ರಾಯಬಾಗ ತಾಲ್ಲೂಕಿನ ಚಿಂಚಲಿ ಪಟ್ಟಣದ ನಿವಾಸಿಗಳಾದ ಭುಜೇಂದ್ರ ಹಾಗೂ ದೀಪಾ ದಂಪತಿಯ ಪುತ್ರಿ ಶಿವಾನಿ ಅಜ್ಜಿಯ ಮನೆಗೆ ಬಂದಿದ್ದಳು. ಶುಕ್ರವಾರ ರಾತ್ರಿ ತೋಟದ ಮನೆಯ ಮುಂದೆ ಆಟ ಆಡುವಾಗ ಬಾಲಕಿಯ ಕಾಲಿಗೆ ಹಾವು ಕಚ್ಚಿದೆ. ಕೂಡಲೇ ಚಿಕ್ಕೋಡಿ ತಾಲ್ಲೂಕು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು. ಹೆಚ್ಚಿನ ಚಿಕಿತ್ಸೆಗೆ …
Read More »ಪ್ರಭಾಕರ ಕೋರೆ: ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷರಾಗಿ 40 ವರ್ಷ ಪೂರ್ಣ
ಬೆಳಗಾವಿ: ‘ದಾನ ಪಡೆಯುವ ಕೈಗಳು ಶುದ್ಧವಾಗಿದ್ದರೆ ಮಾತ್ರ ದಾನ ನೀಡುವ ಕೈಗಳು ಮುಂದೆ ಬರುತ್ತವೆ. ಕರ್ನಾಟಕ ಲಿಂಗಾಯತ ಶಿಕ್ಷಣ (ಕೆಎಲ್‌ಇ) ಸಂಸ್ಥೆ ವಿಶ್ವಮಟ್ಟಕ್ಕೆ ಬೆಳೆಯಲು ಇಂಥ ಶುದ್ಧ ಕೈಗಳೇ ಕಾರಣ’ ಎಂದು ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಹೇಳಿದರು. ಪ್ರಭಾಕರ ಕೋರೆ ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷರಾಗಿ 40 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ, ಸಂಸ್ಥೆಯ ಪರಿವಾರದವರು ನಗರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು. ‘ಬ್ರಿಟಿಷ್ ಆಡಳಿತದಲ್ಲಿ ಉನ್ನತ ಶಿಕ್ಷಣ ಪಡೆದಿದ್ದ …
Read More »