Breaking News

Monthly Archives: ಮೇ 2024

ರಾಜ್ಯದ 2,207 ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆ

ಬೆಂಗಳೂರು: ರಾಜ್ಯದ 2,207 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡುಬಂದಿದ್ದು ಅದರಲ್ಲಿ 548 ಗ್ರಾಮಗಳಿಗೆ ಟ್ಯಾಂಕರ್‌ಗಳ ಮೂಲಕ ಕುಡಿಯುವ ನೀರು ಒದಗಿಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ. ಈ ಕುರಿತು ಶನಿವಾರ ಪತ್ರಿಕೆ ಪ್ರಕಟನೆ ನೀಡಿರುವ ಅವರು, 413 ಗ್ರಾಮಗಳನ್ನು ಒಳಗೊಂಡ 37 ಬಹುಗ್ರಾಮ ಕುಡಿಯುವ ನೀರು ಯೋಜನೆಯ ಜಲಮೂಲ ಒಣಗಿವೆ. ಈ ಗ್ರಾಮಗಳೂ ಸೇರಿದಂತೆ ಕುಡಿಯುವ ನೀರಿನ ಸಮಸ್ಯೆ ಇರುವ 2,207 ಗ್ರಾಮಗಳ ಪೈಕಿ 548 …

Read More »

ಶೂ ವ್ಯಾಪಾರಿ ನಿವಾಸದಲ್ಲಿ ಬರೋಬ್ಬರಿ 40 ಕೋಟಿ ರೂ. ನಗದು ವಶಕ್ಕೆ IT RAID

ಉತ್ತರ ಪ್ರದೇಶದ ಆಗ್ರಾದಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ನಡೆಸಿದ ದಾಳಿಯ ಫಲವಾಗಿ 40 ಕೋಟಿ ರೂ. ಹಣವನ್ನು ಜಪ್ತಿ ಮಾಡಲಾಗಿದೆ. ತೆರಿಗೆ ವಂಚನೆ ಮತ್ತು ಅಕ್ರಮ ಆಸ್ತಿ ಹೊಂದಿರುವ ಆರೋಪದ ಮೇಲೆ ಆಗ್ರಾದಲ್ಲಿರುವ ಶೂ ವ್ಯಾಪಾರಿ ರಾಮನಾಥ್‌ ಡಂಗ್‌ ಅವರ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ಪ್ರಕರಣದಲ್ಲಿ ದಾಖಲೆ ಇಲ್ಲದ 500 ರೂ. ನೋಟುಗಳ ಹಲವು ಬಂಡಲ್‌ಗಳನ್ನು ಹೊರತೆಗೆಯಲಾಗಿದೆ. ಪ್ರಸ್ತುತ 40 ಕೋಟಿ ರೂ. …

Read More »

ಲೋಕಾ ಭರ್ಜರಿ ಬೇಟೆ; ಲಂಚ ಪಡೆಯುವಾಗ ರೆಡ್​ಹ್ಯಾಂಡ್​ ಆಗಿ ಸಿಕ್ಕಿ ಬಿದ್ದ PSI, ಶಿಕ್ಷಣಾಧಿಕಾರಿ, ಸರ್ವೆಯರ್

ಹಾವೇರಿ: ಲಂಚಕ್ಕೆ (Bribe) ಬೇಡಿಕೆ ಇಟ್ಟ ಹಾವೇರಿ (Haveri) ಜಿಲ್ಲೆ ಶಿಗ್ಗಾವಿ ತಾಲೂಕಿನ ತಡಸ ಠಾಣೆ ಪಿಎಸ್​ಐ (PSI), ಲೋಕಾಯುಕ್ತ (Lokayukta) ಬಲೆಗೆ ಬಿದ್ದಿದ್ದಾರೆ. ಇಸ್ಪೀಟು ಆಡಲು ಅನುಮತಿಗಾಗಿ 2 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟು, ಲಂಚ ಪಡೆಯುವಾಗ ತಡಸ ಪೊಲೀಸ್ ಠಾಣೆ (Tadasa Police Station) PSI ಶರಣಬಸಪ್ಪ ಕಾಂದೆ ಹಾಗೂ ಪೇದೆ ಸುರೇಶ್ ಮಾನೋಜಿ ರೆಡ್​​ಹ್ಯಾಂಡ್​ ಆಗಿ ಸಿಕ್ಕಿಬಿದ್ದಿದ್ದಾರೆ. ಲೋಕಾಯುಕ್ತ ಡಿವೈಎಸ್​ಪಿ (DYsP) ಚಂದ್ರಶೇಖರ ನೇತೃತ್ವದಲ್ಲಿ ದಾಳಿ …

Read More »

ನಮ್ಮಷ್ಟಕ್ಕೆ ನಮ್ಮನ್ನು ಬದುಕಲು ಬಿಡಿ ಎಂದು ಬಿಕ್ಕಿದ ಪವಿತ್ರಾ ಜಯರಾಂ ಮಗಳು..!

ಪವಿತ್ರಾ ಜಯರಾಂ ಮತ್ತು ಅವರ ಸ್ನೇಹಿತ ಚಂದ್ರಕಾಂತ್ ನಿಧನದ ನಂತರ ಇಬ್ಬರ ಸಂಬಂಧದ ಬಗ್ಗೆ ಚರ್ಚೆ ನಡೆಯುತ್ತಿದೆ. ಕೆಲವರು ಇಬ್ಬರು ಮದುವೆಯಾಗುವ ನಿರ್ಧಾರಕ್ಕೆ ಬಂದಿದ್ದರು ಎಂದು ಹೇಳಿದರೆ ಇನ್ನೂ ಕೆಲವರು ಇಬ್ಬರು ಜೊತೆಯಲ್ಲಿಯೇ ವಾಸ ಮಾಡ್ತಿದ್ದರು ಎನ್ನುವ ಮಾತುಗಳನ್ನಾಡುತ್ತಿದ್ದಾರೆ. ಇನ್ನೂ.. ಚಂದ್ರಕಾಂತ್ ಅವರ ಪತ್ನಿ ಶಿಲ್ಪಾ ಪ್ರೇಮಾ, ಪವಿತ್ರಾ ನಮ್ಮ ಬದುಕಿನಲ್ಲಿ ಬಂದ ನಂತರ ನಮ್ಮ ಜೀವನವೇ ಹಾಳಾಯ್ತು ಎಂದು ಕಣ್ಣೀರು ಹಾಕಿದ್ದಾರೆ. ಚಂದ್ರಕಾಂತ್ ಅವರ ತಾಯಿ ಕೂಡ ಪವಿತ್ರಾಳಿಂದಲೇ …

Read More »

ನಿಮಗೆ ಧಮ್ ಇಲ್ಲದಿದ್ರೆ ರಾಜೀನಾಮೆ ಕೊಡಿ – ನೇಹಾ ತಂದೆ ಕಿಡಿ

ಹುಬ್ಬಳ್ಳಿ : ಸರ್ಕಾರ ದಕ್ಷ ಪೊಲೀಸ್‌ ಅಧಿಕಾರಿ ನೇಮಿಸಬೇಕು. ಸರ್ಕಾರಕ್ಕೆ ಧಮ್ಮ ಇಲ್ಲ, ಅಂದರೆ ರಾಜೀನಾಮೆ ಕೊಟ್ಟು ಹೋಗಿ ಎಂದು ಮೃತ ನೇಹಾ ತಂದೆ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಕಾರ್ಪೋರೇಟರ್ ನಿರಂಜನ್‌ ಹಿರೇಮಠ (niranjan hiremath) ಆರೋಪಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ವಾರ್ಡ್​​ನಲ್ಲಿ ಎರಡು ಕೊಲೆಗಳು ಆಗಿವೆ. ಮೊದಲು ನನ್ನ ಕೊಲೆ ಮಾಡಲು ಸಂಚು ರೂಪಿಸಿದ್ದರು, ಆದರೆ ನನ್ನ ಮಗಳನ್ನು ಕೊಲೆ ಮಾಡಿದ್ದಾರೆ. ಬಳಿಕ ಅಂಜಲಿ ಯುವತಿಯ ಕೊಲೆ …

Read More »

ಸತತ 6 ಸೋಲಿನಿಂದ ಸತತ 6 ಗೆಲುವಿನ ತನಕ; ಅಸಾಧ್ಯವನ್ನೂ ಸಾಧಿಸಿದ ಆರ್‌ಸಿಬಿ ಪ್ಲೇಆಫ್ ಹಾದಿಯೇ ರೋಚಕ

ಮೊದಲ 8 ಪಂದ್ಯಗಳಲ್ಲಿ ಕೇವಲ ಒಂದು ಗೆಲುವು. ಉಳಿದ 7 ಪಂದ್ಯಗಳಲ್ಲಿ ಹೀನಾಯ ಸೋಲು. ಅದರಲ್ಲೂ ಆರು ಪಂದ್ಯಗಳಲ್ಲಿ ಸತತ ಸೋಲು. ಅಂಕಪಟ್ಟಿಯಲ್ಲಿ ಕೊನೆಯ (10ನೇ) ಸ್ಥಾನ. ಈ ತಂಡ ಐಪಿಎಲ್‌ 2024ರ ಪ್ಲೇಆಫ್‌ ಪ್ರವೇಶಿಸುವುದು ಬಿಡಿ, ಕನಿಷ್ಠ ಅಂಕಪಟ್ಟಿಯಲ್ಲಿ 9ನೇ ಸ್ಥಾನ ಪಡೆಯುವುದು ಕೂಡಾ ಅಸಾಧ್ಯ ಎಂದು ಹೇಳಿದವರೇ ಹೆಚ್ಚು. ಆದರೆ, ಆ ತಂಡದ ಕೋಟ್ಯಾಂತರ ನಿಷ್ಠಾವಂತ ಅಭಿಮಾನಿಗಳಿಗೆ ತನ್ನ ನೆಚ್ಚಿನ ತಂಡದ ಮೇಲೆ ಸಂಪೂರ್ಣ ನಂಬಿಕೆ ಇತ್ತು. …

Read More »

ವಿರಾಮ ಆಚರಣೆಯ ನಡುವೆ ಹೊಸ ಕಾರ್ಯಗಳ ಪ್ರಸ್ತಾವ

ಮೇಷ: ಗೃಹಕೃತ್ಯಗಳಿಗೆ ಅನಿವಾರ್ಯವಾಗಿ ಸಮಯ ನೀಡಿಕೆ. ಹತ್ತಿರದ ದೇವಾಲಯಕ್ಕೆ ಭೇಟಿ. ಹಿರಿಯರಿಗೆ, ಗೃಹಿಣಿಯರಿಗೆ, ಮಕ್ಕಳಿಗೆ ಸಮಾಧಾನದ ದಿನ. ದೂರದಲ್ಲಿರುವ ಆತ್ಮೀಯ ಮಿತ್ರರಿಂದ ಶುಭ ಸಮಾಚಾರ. ವೃಷಭ: ವಿರಾಮ ಆಚರಣೆಯ ನಡುವೆ ಹೊಸ ಕಾರ್ಯಗಳ ಪ್ರಸ್ತಾವ. ಕುಟುಂಬದ ಹಿರಿಯ ಸದಸ್ಯರ ಭೇಟಿ. ಅನಾಥಾಶ್ರಮ, ವೃದ್ಧಾಶ್ರಮ ಗಳಿಗೆ ಭೇಟಿ. ಹಿರಿಯರು, ಗೃಹಿಣಿಯರಿಗೆ ನೆಮ್ಮದಿಯ ಅನುಭವ. ಬಂಧುವರ್ಗದಲ್ಲಿ ವಿವಾಹ ಮಾತುಕತೆ. ಮಿಥುನ: ಮನೆಯಲ್ಲಿ ವಿರಾಮದ ಭಾವ. ಉದ್ಯೋಗಸ್ಥರಿಗೆ ಬಾಕಿಯುಳಿದಿರುವ ನಾಳೆಗೆ ಉಳಿದಿರುವ ಕೆಲಸಗಳ ಚಿಂತೆ. ವ್ಯವಹಾರಸ್ಥರಿಗೆ ನಿರಾಳ …

Read More »

BJP ಕಚೇರಿಗೆ ಬರುತ್ತಿದ್ದೇವೆ.. ಎಲ್ಲರನ್ನೂ ಬಂಧಿಸಿ: ಪ್ರಧಾನಿಗೆ ಕೇಜ್ರಿವಾಲ್ ಸವಾಲು

ಹೊಸದಿಲ್ಲಿ:”ಆಮ್ ಆದ್ಮಿ ಪಕ್ಷದ ಉನ್ನತ ನಾಯಕರು ಭಾನುವಾರ (ಮೇ 19) ಬಿಜೆಪಿ ಪ್ರಧಾನ ಕಚೇರಿಗೆ ಬರುತ್ತೇವೆ. ಎಲ್ಲರನ್ನೂ ಬಂಧಿಸಿ” ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸವಾಲು ಹಾಕಿದ್ದಾರೆ. ಸ್ವಾತಿ ಮಲಿವಾಲ್ ಅವರ ಮೇಲಿನ ಹಲ್ಲೆ ಆರೋಪದಲ್ಲಿ ಅವರ ಸಹಾಯಕ ಬಿಭವ್ ಕುಮಾರ್ ಅವರನ್ನು ಬಂಧಿಸಿದ ಕೆಲವೇ ಗಂಟೆಗಳ ನಂತರ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಕೇಜ್ರಿವಾಲ್ “ಪ್ರಧಾನಿ ಜೈಲಿನ ಆಟ ಆಡುತ್ತಿದ್ದಾರೆ’ ಎಂದು …

Read More »

ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

ಗದಗ: ರಥೋತ್ಸವ ವೇಳೆ ರಥದ ಗಾಲಿಗೆ ಸಿಲುಕಿ ಇಬ್ಬರು ಭಕ್ತರು ಸಾವಿಗೀಡಾಗಿ, ಓರ್ವ ಗಾಯಗೊಂಡ ದುರ್ಘಟನೆ ಜಿಲ್ಲೆಯ ರೋಣ ಪಟ್ಟಣದಲ್ಲಿ ನಡೆದಿದೆ‌. ರೋಣದ ವೀರಭದ್ರೇಶ್ವರ ಜಾತ್ರೆ ಅಂಗವಾಗಿ ಶನಿವಾರ ಸಂಜೆ ಮಹಾರಥೋತ್ಸವ ನಡೆಯಿತು. ಈ ವೇಳೆ ರಥದ ಗಾಲಿಗೆ ಸಿಲುಕಿ ಇಬ್ಬರು ಭಕ್ತರು ಸ್ಥಳದಲ್ಲೆ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯವಾಗಿವೆ. ಮೃತ ಭಕ್ತರು ರೋಣ ಮೂಲದ ನಿವಾಸಿಗಳು ಎನ್ನಲಾಗುತ್ತಿದೆ. ಮಲ್ಲಪ್ಪ ಲಿಂಗನ ಗೌಡ್ರ(55) ಹಾಗೂ ಮತ್ತೋರ್ವ ವ್ಯಕ್ತಿ ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಇನ್ನೋರ್ವನ ಹೆಸರು …

Read More »

Marks card ಕೊಡಲು ಲಂಚ: ಶಿಕ್ಷಣ ಇಲಾಖೆ ಅಧಿಕಾರಿಗಳಿಬ್ಬರು ಲೋಕಾಯುಕ್ತ ಬಲೆಗೆ

ಕಲಬುರಗಿ: ಮೆಟ್ರಿಕ್ ನಕಲು ಮಾರ್ಕ್ಸ್ ಕಾರ್ಡ್ ನೀಡಲು 5000 ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದ ಶಿಕ್ಷಣ ಇಲಾಖೆಯ ಇಬ್ಬರು ಎಫ್.ಡಿ.ಎ ಗಳು ಶನಿವಾರ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳನ್ನು ಶಿವಶಂಕರಯ್ಯ ಹಾಗೂ ಜಟ್ಟಿಂಗ್ರಾಯ ಎಂದು ಗುರುತಿಸಲಾಗಿದೆ. ಇವರಿಬ್ಬರು ಹತ್ತನೇ ತರಗತಿಯ ಮಾರ್ಕ್ಸ್ ಕಾರ್ಡಿನ ನಕಲನ್ನು ನೀಡಲು ವಿದ್ಯಾರ್ಥಿಯ ತಂದೆಯಿಂದ 5000 ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರು. ಶನಿವಾರ ಸಾರ್ವಜನಿಕ ಸ್ಥಳ ಒಂದರಲ್ಲಿ ದೂರುದಾರ ಆರೂನ್ …

Read More »