Breaking News

Monthly Archives: ಮೇ 2024

ನದಿಯಲ್ಲಿ ಮುಳುಗಿ ನಾಲ್ವರು ಮೃತ್ಯು:ಇಬ್ಬರು ಬೆಳಗಾವಿಯವರು

ಬೆಳಗಾವಿ : ಮಹಾರಾಷ್ಟ್ರದ ಕಾಗಲ್ ಬಳಿ ವೇದಗಂಗಾ ನದಿಯಲ್ಲಿ ಮುಳುಗಿ ನಾಲ್ವರು ಸಾವನ್ನಪ್ಪಿದ್ದಾರೆ. ಮೃತ ದುರ್ದೈವಿಗಳಲ್ಲಿ ಇಬ್ಬರು ಬೆಳಗಾವಿ ಜಿಲ್ಲೆಯ ಅಥಣಿ ಮೂಲದವರಾಗಿದ್ದಾರೆ. ಇನ್ನುಳಿದ ಇಬ್ಬರು ಮಹಾರಾಷ್ಟ್ರ ಮೂಲದವರಾಗಿದ್ದಾರೆ. ಕೊಲ್ಲಾಪುರ ಜಿಲ್ಲೆಯ ಕಾಗಲ್ ತಾಲೂಕಿನ ಬಸ್ತವಾಡೆ ಗ್ರಾಮದ ಬಳಿ ವೇದಗಂಗಾ ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿ ಮುಳುಗಿ ಸಾವಿಗೀಡಾಗಿದ್ದಾರೆ. ಜಿತೇಂದ್ರ ವಿಲಾಸ ಲೋಕ್ರೆ (36), ರೇಷ್ಮ ದೀಪಕ ಏಳಮಲೆ (34), ಸವಿತಾ ಅಮರ ಕಾಂಬಳೆ (27) ಹಾಗೂ ಯಶ್ ದಿಲೀಪ ಕಾಂಬಳೆ …

Read More »

ನಿಗಮ-ಮಂಡಳಿ, ಸ್ಥಳೀಯ ಸಂಸ್ಥೆಗಳು ಸಭೆ ನಡೆಸಲು ಮಾದರಿ ನೀತಿ ಸಂಹಿತೆಯಿಂದ ವಿನಾಯ್ತಿ: ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ರಾಜ್ಯ ಸರ್ಕಾರದಿಂದ ಸರ್ಕಾರದ ವಿವಿಧ ನಿಗಮ-ಮಂಡಳಿಗಳು, ಸಮಿತಿಗಳು ಹಾಗೂ ಸ್ಥಳೀಯ ಸಂಸ್ಥೆಗಳು ಮತ್ತು ಇತರೆ ಶಾಸನಾತ್ಮಕ ಸಂಸ್ಥೆಗಳಲ್ಲಿ ಶಾಸನಾತ್ಮಕ ಸಭೆಗಳನ್ನು ನಡೆಸಲು ಮಾದರಿ ನೀತಿ ಸಂಹಿತೆಯಿಂದ ವಿನಾಯ್ತಿ ನೀಡಿ ಆದೇಶಿಸಿದೆ. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರು ಈ ಸಂಬಂಧ ಸಿಎಂ ಅಪರ ಮುಖ್ಯಕಾರ್ಯದರ್ಶಿ, ಡಿಸಿಎಂ ಆಪ್ತ ಕಾರ್ಯದರ್ಶಿ, ಎಲ್ಲಾ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು, ಎಲ್ಲಾ ಜಿಲ್ಲಾಧಿಕಾರಿ, ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗಳಿಗೆ ಪತ್ರವನ್ನು ಬರೆದಿದ್ದಾರೆ.   ಸಿಎಸ್ …

Read More »

ಸಂವಿಧಾನವನ್ನು ಬದಲಾಯಿಸಲು ಸಾಧ್ಯವಿಲ್ಲ, : ನಿತಿನ್ ಗಡ್ಕರಿ

ಮುಂಬೈ: ನಾಸಿಕ್ ಲೋಕಸಭಾ ಕ್ಷೇತ್ರದ ಆಡಳಿತಾರೂಢ ಮೈತ್ರಿಕೂಟದ ಅಭ್ಯರ್ಥಿ ಶಿವಸೇನೆಯ ಹೇಮಂತ್ ಗೋಡ್ಸೆ ಪರ ಶುಕ್ರವಾರ ನಡೆದ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ, ಡಾ.ಭೀಮ್ ರಾವ್ ಅಂಬೇಡ್ಕರ್ ರಚಿಸಿದ ಸಂವಿಧಾನವನ್ನು ಯಾವುದೇ ಸರ್ಕಾರ ಬದಲಾಯಿಸಲು ಸಾಧ್ಯವಿಲ್ಲ ಎಂದು ಹೇಳಿದರು. ಇದನ್ನು ಬದಲಾಯಿಸಲು ಬಿಜೆಪಿ ಯೋಜಿಸುತ್ತಿದೆ ಎಂದು ಕಾಂಗ್ರೆಸ್ ಸುಳ್ಳುಗಳನ್ನು ಹರಡುತ್ತಿದೆ ಎಂದು ನಿತಿನ್ ಗಡ್ಕರಿ ಹೇಳಿದರು. ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನವನ್ನು ಯಾವುದೇ ಸರ್ಕಾರ …

Read More »

ಕರ್ನಾಟಕ ‘SSLC ಪರೀಕ್ಷೆ-2’ರ ‘ಪರಿಷ್ಕೃತ ವೇಳಾಪಟ್ಟಿ’ ಪ್ರಕಟ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ-2ಕ್ಕೆ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಅದರಂತೆ ಜೂನ್.14ರಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ-2 ಪ್ರಾರಂಭಗೊಳ್ಳಲಿದೆ. ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರಾದಂತ ಎನ್ ಮಂಜುಶ್ರೀ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ. ಅದರಲ್ಲಿ 2024ರ ಎಸ್.ಎಸ್.ಎಲ್.ಸಿ ಪರೀಕ್ಷೆ-2ನ್ನು ದಿನಾಂಕ:07-06-2024 ರಿಂದ 14-06-2024 ರವರೆಗೆ ನಡೆಸಲು …

Read More »

ಜರ್ಮಿನಿಯಿಂದ ಲಂಡನ್‌ಗೆ ಹಾರಿದ ಪ್ರಜ್ವಲ್​ ರೇವಣ್ಣ

ಬೆಂಗಳೂರು: ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು ಮಾಹಿತಿ ಇತ್ತು. ಇದೀಗ ಪ್ರಜ್ವಲ್​ ರೇವಣ್ಣ ಜರ್ಮನಿಯಿಂದ, ಲಂಡನ್​ಗೆ ಹೋಗಿದ್ದಾರೆ ಎಂದು ಮೂಲಗಳಿಂದ ಮಾಹಿತಿ ದೊರೆತಿದೆ. ಇಂಗ್ಲೆಂಡ್​ನಲ್ಲಿನ ಭಾರತದ ಉದ್ಯಮಿಯೊಬ್ಬರ ಸಹಾಯದಿಂದ ಸಂಸದ ಪ್ರಜ್ವಲ್​ ರೇವಣ್ಣ ಮತ್ತು ದುಬೈ ಮೂಲದ ಒರ್ವ ಮತ್ತು ಬೆಂಗಳೂರು ಮೂಲದ ಒರ್ವ ಸ್ನೇಹಿತರ ಜೊತೆ ರೈಲು ಮೂಲಕ ಜರ್ಮಿನಿಯ ಮ್ಯೂನಿಚ್ ಲಂಡನ್‌ಗೆ ಹೋಗಿರುವ …

Read More »

ತೀರ್ಥಯಾತ್ರೆಗೆ ಬಂದ ನಾಲ್ವರು ನದಿಯಲ್ಲಿ ಮುಳುಗಿ ದಾರುಣ ಸಾವು

ಬೆಳಗಾವಿ: ತೀರ್ಥಯಾತ್ರೆಗೆಂದು ಅತಿಥಿ ಗೃಹಕ್ಕೆ ಬಂದಿದ್ದವರು ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕೊಲ್ಲಾಪುರದ ಕಾಗಲ್ ತಾಲೂಕಿನ ಬಸ್ತವಾಡೆ ಅಣೆಕಟ್ಟಿನಲ್ಲಿ ವೇದಗಂಗಾ ನದಿಯಲ್ಲಿ ನಡೆದಿದೆ. ಜಿತೇಂದ್ರ ವಿಲಾಸ್ ಲೋಕ್ರೆ (36), ರೇಷ್ಮಾ ದಿಲೀಪ್ ಏಳಮಲ್ಲೆ (34), ಸವಿತಾ ಅಮರ್ ಕಾಂಬಳೆ (27), ಯಶ್ ದಿಲೀಪ್ ಏಳಮಲ್ಲೆ (17) ಮೃತ ದುರ್ದೈವಿಗಳು. ಮೃತರಲ್ಲಿ ಇಬ್ಬರು ಬೆಳಗಾವಿಯ ಅಥಣಿ ತಾಲೂಕಿನವರು ಎಂದು ತಿಳಿದುಬಂದಿದೆ.ಇಬ್ಬರು ಮಹಿಳೆಯರು ಸೇರಿದಂತೆ ಮೂವರ ಶವಗಳನ್ನು …

Read More »

ಕೊಯ್ನಾದಿಂದ ಕೃಷ್ಣಾ ನದಿಗೆ ನೀರು ಬಿಡುವಂತೆ ಮಹಾರಾಷ್ಟ್ರಕ್ಕೆ ರಾಜ್ಯ ಸರ್ಕಾರ ಮನವಿ

ಬೆಳಗಾವಿ: ರಾಜ್ಯದ ಹಲವೆಡೆ ಬರ ಪರಿಸ್ಥಿತಿ ತಲೆದೋರಿದ್ದು, ಕೊಯ್ನಾ ಅಣೆಕಟ್ಟೆಯಿಂದ ಕೃಷ್ಣಾ ನದಿಗೆ ನೀರು ಬಿಡುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಮನವಿ ಮಾಡಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸತೀಶ್ ಜಾರಕಿಹೊಳಿ, ತೀವ್ರ ಬರ ಪರಿಸ್ಥಿತಿ ಹಿನ್ನಲೆಯಲ್ಲಿ ರಾಜ್ಯ ಸರ್ಕಾರದ ವತಿಯಿಂದ ಮಹಾರಾಷ್ಟ್ರ ಸರ್ಕಾರಕ್ಕೆ ಪತ್ರ ಬರೆದಿದ್ದೇವೆ. ಕೊಯ್ನಾದಿಂದ ಕೃಷ್ಣಾ ನದಿಗೆ ನೀರು ಬಿಡುವಂತೆ ಮಹಾರಾಷ್ಟ್ರಕ್ಕೆ ಮನವಿ ಮಾಡಿದ್ದೇವೆ. ಮಹಾರಾಷ್ಟ್ರ ಸರ್ಕಾರ ನೀರು …

Read More »

3 ತಿಂಗಳಿಂದಲೇ ಅಂಜಲಿ ಹತ್ಯೆಗೆ ಪ್ಲಾನ್; ವಕೀಲರ ಬಳಿಯೂ ಮಾಹಿತಿ ಸಂಗ್ರಹ!

ಹುಬ್ಬಳ್ಳಿ: ರಾಜ್ಯದಲ್ಲಿ ಸಂಚಲನ ಸೃಷ್ಟಿಸಿರುವ ಹುಬ್ಬಳ್ಳಿಯ ಅಂಜಲಿ ಹತ್ಯೆಯ ಆರೋಪಿಯನ್ನು ಗುರುವಾರ ತಡರಾತ್ರಿ ಬಂಧಿಸಲಾಗಿದೆ. ಕೊಲೆ ಆರೋಪಿ ಗಿರೀಶ್‌ ಸಾವಂತ್‌ ಅನ್ನು ದಾವಣಗೆರೆ ಬಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ರೈಲ್ವೇ ಪೊಲೀಸರ ಸಹಾಯದಿಂದ ಗಿರೀಶ್‌ನನ್ನು ಬಂಧಿಸಲಾಗಿದೆ.   ಬಂಧಿತ ವಿಶ್ವನಾಥ್ ಅಲಿಯಾಸ್ ಗಿರೀಶ್ ಸಾವಂತ್ ಪ್ರಾಥಮಿಕ ತನಿಖೆಯಲ್ಲಿ ಆಘಾತಕಾರಿ ಮಾಹಿತಿ ಬಹಿರಂಗವಾಗಿದೆ. ಕಳೆದ ಮೂರು ತಿಂಗಳಿನಿಂದ ಅಂಜಲಿಯನ್ನು ಕೊಲೆ ಮಾಡುವ ಯೋಜನೆ ಹಾಕಿಕೊಂಡಿದ್ದು , ಈ ವಿಷಯವನ್ನು ತನ್ನ ಸ್ನೇಹಿತರೊಂದಿಗೆ ಹಂಚಿಕೊಂಡಿದ್ದಾಗಿ …

Read More »

ನೀತಿ ಸಂಹಿತೆ ಸಡಿಲಿಕೆ: ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದ ಸಿಎಂ; 2 ತಿಂಗಳ ಬಳಿಕ ಸಚಿವರು-ಅಧಿಕಾರಿಗಳೊಂದಿಗೆ ಸಭೆ!

ನೀತಿ ಸಂಹಿತೆ ಸಡಿಲಿಕೆ: ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದ ಸಿಎಂ; 2 ತಿಂಗಳ ಬಳಿಕ ಸಚಿವರು-ಅಧಿಕಾರಿಗಳೊಂದಿಗೆ ಸಭೆ! ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆ ಮುಕ್ತಾಯಗೊಂಡ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವಿಧ ಇಲಾಖೆಗಳ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಸುದೀರ್ಘ ಸಭೆ ನಡೆಸಿದ್ದು, ಬರ ಪರಿಹಾರ, ಪೂರ್ವ ಮುಂಗಾರು ಮಳೆಯ ಬಿತ್ತನೆ ಚಟುವಟಿಕೆಗಾಗಿ ಬಿತ್ತನೆ ಬೀಜ ಹಾಗೂ ರಸಗೊಬ್ಬರ ವ್ಯವಸ್ಥೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ರಾಜ್ಯದಲ್ಲಿ ಲೋಕಸಭಾ ಚುನಾವಣೆ …

Read More »

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಿ; ಹೆಚ್ ಡಿ ದೇವೇಗೌಡ

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಕೇಳಿಬರುತ್ತಿರುವ ಲೈಂಗಿಕ ದೌರ್ಜನ್ಯದ ಅಶ್ಲೀಲ ವಿಡಿಯೊ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜೆಡಿಎಸ್ ವರಿಷ್ಠ ಹೆಚ್​​​ಡಿ ದೇವೇಗೌಡರು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಇಂದು ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ದೇವೇಗೌಡರ 91ನೇ ಹುಟ್ಟುಹಬ್ಬ. ಆ ಪ್ರಯುಕ್ತ ಬೆಂಗಳೂರಿನಲ್ಲಿ ವೆಂಕಟೇಶ್ವರ ದೇವಸ್ಥಾನಕ್ಕೆ ಹೋಗಿ ಅರ್ಚನೆ ಮಾಡಿಸಿದ ಬಳಿಕ ಹೊರಗೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಮ್ಮ ಕುಟುಂಬದ ವಿರುದ್ಧ ರಾಜಕೀಯ ಕುತಂತ್ರ ನಡೆದಿದೆ. ಪ್ರಜ್ವಲ್ …

Read More »