ಚಿಕ್ಕೋಡಿ: ಜಾತ್ರೆಯಲ್ಲಿ ವಿಷಾಹಾರ ಸೇವಿಸಿ 44 ಮಂದಿ ಅಸ್ವಸ್ಥವಾಗಿರುವ ಘಟನೆ ಕೇರೂರ ಗ್ರಾಮದಲ್ಲಿ ನಡೆದಿದೆ. ಕೇರೂರ ಗ್ರಾಮದ ಬೇಕ್ಕೆರಿ ತೋಟದಲ್ಲಿ ಇರುವ ಶ್ರೀ ಬಾಳು ಮಾಮಾ ದೇವಸ್ಥಾನದಲ್ಲಿ ಬುಧವಾರ ಜಾತ್ರೆಯನ್ನು ಆಯೋಜಿಸಲಾಗಿತ್ತು. ಮಧ್ಯಾಹ್ನ ಮಹಾಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.ಮಧ್ಯಾಹ್ನ ಅನೇಕ ಭಕ್ತರು ಮಹಾಪ್ರಸಾದ ಸೇವಿಸಿದ್ದರು. ಮಧ್ಯಾಹ್ನ ಉಳಿದಿದ್ದ ಅನ್ನವನ್ನೇ ರಾತ್ರಿ ಸೇವಿಸಿದ್ದ ಭಕ್ತರು ವಾಂತಿ,ಭೇದಿಯಿಂದ ಬಳಲುತ್ತಿದ್ದರು. ಮುಂಜಾನೆಯಿಂದ ಅಸ್ವಸ್ಥವಾಗಿರುವುದರಿಂದ ಚಿಕ್ಕೊಡಿಯ ಸಾರ್ವಜನಿಕ ಆಸ್ಪತ್ರೆಯಲ್ಲಿ 31 ಜನ,ಕೇರೂರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 5 ಜನ,ಯಕ್ಸಂಬಾ …
Read More »Monthly Archives: ಮೇ 2024
ಪ್ರಜ್ವಲ್ ರೇವಣ್ಣನ ಮುಟ್ಟೋದು ಅಷ್ಟು ಸುಲಭವಲ್ಲ! ಕೊನೆ ಕ್ಷಣದಲ್ಲಿ ಏನು ಬೇಕಾದ್ರೂ ಆಗಬಹುದಾ?
ಬೆಂಗಳೂರು: ಪೆನ್ ಡ್ರೈವ್ಗೆ ಸಂಬಂಧಿಸಿದಂತೆ ಸಾಲು ಸಾಲು ಆರೋಪಗಳನ್ನು ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ ರೇವಣ್ಣ ಇಂದು ಮಧ್ಯರಾತ್ರಿ ಬೆಂಗಳೂರಿಗೆ ಬರೋದು ಪಕ್ಕಾ ಆಗಿದೆ. ಜರ್ಮನಿಯಿಂದ ಪ್ರಜ್ವಲ್ನ ಹೊತ್ತ ವಿಮಾನ ಬೆಂಗಳೂರಿನತ್ತ ಧಾವಿಸುತ್ತಿದೆ. ಪ್ರಜ್ವಲ್ ಬಂದ ಕೂಡಲೇ ಬಂಧನಕ್ಕೆ ಎಸ್ ಐಟಿ ಸಜ್ಜಾಗಿದೆ. ಈಗಾಗಲೇ ಕೋರ್ಟ್ ನಿಂದ ಅರೆಸ್ಟ್ ವಾರೆಂಟ್ ಪಡೆಯಲಾಗಿದೆ. ಏರ್ಪೋರ್ಟ್ನಲ್ಲೇ ಅಧಿಕಾರಿಗಳು ಬೀಡುಬಿಟ್ಟಿದ್ದಾರೆ. ಸ್ಥಳೀಯ ಪೊಲೀಸರ ಸಹಾಕಾರದೊಂದಿಗೆ ವಶಕ್ಕೆ ಪಡೆಯಲು ಸಿದ್ಧತೆ ಮಾಡಿಕೊಂಡಿದ್ದಾರೆ. ಕೆಂಪೇಗೌಡ ಏರ್ ಪೋರ್ಟ್ …
Read More »ಹಾವು ಕಚ್ಚಿ ರೈತ ಮಹಿಳೆ ಮೃತ್ಯು
ಭರಮಸಾಗರ: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತ ಮಹಿಳೆಗೆ ಹಾವು ಕಚ್ಚಿ ಸಾವನ್ನಪ್ಪಿರುವ ಘಟನೆ ಗುರುವಾರ ನಡೆದಿದೆ. ಸಮೀಪದ ಓಬಳಾಪುರ ಗ್ರಾಮದ ವಿಜಯಲಕ್ಷ್ಮೀ (55) ಮೃತ ಮಹಿಳೆ. ಬುಧವಾರ ತಮ್ಮದೇ ಹೊಲದಲ್ಲಿ ಪಾರ್ಥೇನಿಯಂ ಗಿಡ ಕೀಳುವ ವೇಳೆ ಬಲಗೈಗೆ ಹಾವು ಕಚ್ಚಿದೆ. ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿದ ನಂತರ ಹೆಚ್ಚಿನ ಚಿಕಿತ್ಸೆ ಗೆ ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗುರುವಾರ ಮುಂಜಾನೆ ಚಿಕಿತ್ಸೆ ಫಲಕಾರಿ ಆಗದೆ ಸಾವನ್ನಪ್ಪಿದ್ದಾರೆ. ಮೃತರು ಪತಿ, …
Read More »ಪೊಲೀಸ್ ಸಿಬ್ಬಂದಿ ಮನೆಯಲ್ಲಿ ಕಳವು
ಕುಶಾಲನಗರ: ತಾಲೂಕಿನ ಮಾದಾಪಟ್ಟಣ ಗ್ರಾಮದ ನಿವಾಸಿ ಪೊಲೀಸ್ ಕಾನ್ಸ್ಟೆಬಲ್ ಸುನಿಲ್ ಕುಮಾರ್ ಎಂಬುವರ ಮನೆ ಹಿಂಬಾಗಿಲಿನ ಬೀಗ ಮುರಿದು ಒಳನುಗ್ಗಿದ ಕಳ್ಳರು ಅಲ್ಮೇರಾ ಒಡೆದು ₹15 ಸಾವಿರ ನಗದು ಹಾಗೂ 40 ಗ್ರಾಂ ಚಿನ್ನಾಭರಣ ಕಳವು ಮಾಡಿದ್ದಾರೆ. ಇದೇ ಮನೆಯ ಹಿಂಭಾಗದಲ್ಲಿರುವ ಮನೆಯಲ್ಲಿಯೂ ಕಳವಿಗೆ ಪ್ರಯತ್ನಿಸಿದ್ದಾರೆ. ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಹಾಗೂ ಜಿಲ್ಲಾ ವಿಧಿವಿಜ್ಞಾನ, ಹಾಗೂ ಶ್ವಾನದಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು. ಆದರೆ ಕಳ್ಳರ ಸುಳಿವು ಮಾತ್ರ …
Read More »ರೈಲಿನಿಂದ ಜಿಗಿಯಲು ಯತ್ನಿಸಿದ ವೃದ್ಧ
ಮೈಸೂರು: ಮಕ್ಕಳ ನಡವಳಿಕೆಯಿಂದ ನೊಂದ ಗದಗ ಜಿಲ್ಲೆಯ ರೋಣ ತಾಲ್ಲೂಕಿನ ಮೂಡಲಗೆರೆಯ ಈರಪ್ಪ ಶಂಕರಪ್ಪ ನಯನಾಪುರ ಅವರು ಮನೆ ಬಿಟ್ಟು ಮೈಸೂರಿಗೆ ಬರುತ್ತಿದ್ದ ಚಲಿಸುತ್ತಿದ್ದ ರೈಲಿನಲ್ಲಿ ಧುಮುಕಲು ಯತ್ನಿಸಿದ್ದಾರೆ. ಇತರೆ ಪ್ರಯಾಣಿಕರು ಅವರನ್ನು ರಕ್ಷಣೆ ಮಾಡಿ ರೈಲ್ವೆ ನಿಲ್ದಾಣಕ್ಕೆ ಕರೆತಂದರು. ಮಾನವ ಹಕ್ಕು ಹೋರಾಟಗಾರ ಪ್ರಸನ್ನ ಅವರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಮಾಹಿತಿ ನೀಡಿದರು. ಬಳಿಕ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಬಸವರಾಜು ಅರವಿಂದ ನಗರದ ಜೆಎಸ್ಎಸ್ …
Read More »ಪೆನ್ಡ್ರೈವ್ ಹಂಚಿಕೆ ಪ್ರಕರಣ: ಆರೋಪಿಗಳಾದ ಚೇತನ್, ಲಿಖಿತ್ಗೆ ಜಾಮೀನು
ಹಾಸನ: ಅಶ್ಲೀಲ ವಿಡಿಯೊಗಳಿದ್ದ ಪೆನ್ಡ್ರೈವ್ ಹಂಚಿಕೆ ಪ್ರಕರಣದ ಆರೋಪಿಗಳಾದ ಚೇತನ್ ಹಾಗೂ ಲಿಖಿತ್ಗೌಡಗೆ ಗುರುವಾರ ಮೂರನೇ ಅಧಿಕ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಪೆನ್ಡ್ರೈವ್ ಹಂಚಿಕೆ ಪ್ರಕರಣದ ಆರನೇ ಮತ್ತು ಏಳನೇ ಆರೋಪಿಯಾಗಿರುವ ಯಲಗುಂದ ಚೇತನ್ ಹಾಗೂ ಲಿಖಿತ್ಗೌಡ ಅವರನ್ನು ಎಸ್ಐಟಿ ಅಧಿಕಾರಿಗಳು ಮೇ 12 ರಂದು ಬಂಧಿಸಿದ್ದರು. ಬಂಧನದ ಹದಿನೆಂಟು ದಿನಗಳ ಬಳಿಕ ಆರೋಪಿಗಳಿಗೆ ಜಾಮೀನು ಮಂಜೂರಾಗಿದೆ. ಸದ್ಯ ಹಾಸನದ ಸಂತೇಪೇಟೆಯ ಜಿಲ್ಲಾ ಕಾರಾಗೃಹದಲ್ಲಿರುವ ಚೇತನ್ …
Read More »ಮುಂಬೈ ಹೊಟೇಲ್ ಉದ್ಯಮಿ ಕೊಲೆ ಪ್ರಕರಣದಲ್ಲಿ ಗ್ಯಾಂಗ್ಸ್ಟರ್ ಛೋಟಾ ರಾಜನ್ಗೆ ಜೀವಾವಧಿ ಶಿಕ್ಷೆ
ಮುಂಬೈ: 2001ರಲ್ಲಿ ಮುಂಬೈನ ಹೊಟೇಲ್ ಉದ್ಯಮಿ ಜಯಾ ಶೆಟ್ಟಿ ಅವರನ್ನು ಹತ್ಯೆ ಮಾಡಿದ ಪ್ರಕರಣದಲ್ಲಿ ಗ್ಯಾಂಗ್ಸ್ಟರ್ ಛೋಟಾ ರಾಜನ್ಗೆ ಮುಂಬೈ ವಿಶೇಷ ನ್ಯಾಯಾಲಯ ಗುರುವಾರ ಜೀವಾವಧಿ ಶಿಕ್ಷೆ ವಿಧಿಸಿದೆ. ಮಹಾರಾಷ್ಟ್ರದ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ(MCOCA) ಅಡಿಯಲ್ಲಿ ದಾಖಲಾದ ಪ್ರಕರಣಗಳ ವಿಶೇಷ ನ್ಯಾಯಾಧೀಶ ಎ.ಎಂ.ಪಾಟೀಲ್ ಅವರು, ಜಯಾ ಶೆಟ್ಟಿ ಕೊಲೆ ಪ್ರಕರಣದಲ್ಲಿ ರಾಜನ್ ಅಪರಾಧಿ ಎಂದು ಘೋಷಿಸಿದರು. ಜಯಾ ಶೆಟ್ಟಿ ಅವರು ಸೆಂಟ್ರಲ್ ಮುಂಬೈನ ಗಮದೇವಿಯಲ್ಲಿ ಗೋಲ್ಡನ್ ಕ್ರೌನ್ ಹೋಟೆಲ್ ನಡೆಸುತ್ತಿದ್ದರು. …
Read More »ಲೋಕಸಭಾ ಚುನಾವಣೆ ಮತಏಣಿಕೆ: ರಾಜ್ಯಾಧ್ಯಂತ ಜೂ.04 ರಿಂದ 05 ರಂದು 144 ಸೆಕ್ಷನ್ ಅಡಿ ‘ನಿಷೇದಾಜ್ಞೆ’ ಜಾರಿ
ಬೆಂಗಳೂರು: ಎರಡು ಹಂತಗಳಲ್ಲಿ ನಡೆದ ಸಾರ್ವತ್ರಿಕ ಲೋಕಸಭೆ ಚುನಾವಣೆ-2024 ರ ಹಿನ್ನೆಲೆಯಲ್ಲಿ ಮತ ಎಣಿಕೆಯು ಜೂನ್.4ರಂದು ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ನಡೆಯಲಿದೆ. ಈ ಹಿನ್ನಲೆಯಲ್ಲಿ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಸುಗಮವಾಗಿರುವಂತೆ ನೋಡಿಕೊಳ್ಳಲು ಜೂನ್.04 ರ ಬೆಳಗ್ಗೆ 6 ರಿಂದ ಜೂನ್.05 ರ ಬೆಳಗ್ಗೆ 6.00 ಗಂಟೆಯವರೆಗೆ 144 ಸೆಕ್ಷನ್ ಅಡಿಯಲ್ಲಿ ನಿಷೇದಾಜ್ಞೆ ಜಾರಿಗೊಳಿಸಿ ಆಯಾ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಈ ಸಂಬಂಧ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದು, …
Read More »ಮಹಿಳೆಯರಿಂದ ಭರ್ಜರಿ ‘ಶಕ್ತಿ’ ಪ್ರದರ್ಶನ: GST ಸಂಗ್ರಹ ಹೆಚ್ಚಳ
ಬೆಂಗಳೂರು: ಶಕ್ತಿ ಯೋಜನೆಯಿಂದ ಜಿಎಸ್ಟಿ ಸಂಗ್ರಹ ಮತ್ತು ಮಹಿಳೆಯರ ಪಾಲುದಾರಿಕೆ ಶೇ 25.1ನಿಂದ 30.2ಗೆ ಹೆಚ್ಚಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಈ ಕುರಿತಾಗಿ ಟ್ವೀಟ್ ಮಾಡಿರುವ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಶಕ್ತಿ ಉಚಿತ ಯೋಜನೆ ಎಂದು ಮೂಗು ಮುರಿಯುವವರ ಗಮನಕ್ಕೆ! ಶಕ್ತಿ ಯೋಜನೆಯಿಂದ ಜಿಎಸ್ಟಿ ಸಂಗ್ರಹ ಹೆಚ್ಚಿದ್ದು, ಔದ್ಯೋಗಿಕ ಕ್ಷೇತ್ರದಲ್ಲಿ ಶೇ 25.1ನಿಂದ 30.2ರಷ್ಟು ಮಹಿಳೆಯ ಪಾಲುದಾರಿಕೆ ಹೊಂದಿದೆ. https://x.com/RLR_BTM/status/1795828541709492559?ref_src=twsrc%5Etfw%7Ctwcamp%5Etweetembed%7Ctwterm%5E1795828541709492559%7Ctwgr%5Efd4d0d2428a12bdbfbe853e306ea05eb814d8f7b%7Ctwcon%5Es1_&ref_url=https%3A%2F%2Ftv9kannada.com%2Fkarnataka%2Fshakti-yojana-adds-to-karnatakas-gst-as-more-women-join-work-force-ramalingareddy-ggs-840902.html ಇದು ಬಿಟ್ಟಿ ಭಾಗ್ಯವಲ್ಲ ಸಮಾಜದಲ್ಲಿ ಸರ್ಕಾರ ಹೂಡಿರುವ …
Read More »ಕನ್ಯಾಕುಮಾರಿಯಲ್ಲಿ ಮೋದಿ ಧ್ಯಾನಕ್ಕೆ 2,000 ಪೊಲೀಸರ ಸರ್ಪಗಾವಲು: ಪ್ರವಾಸಿಗರಿಗೆ, ದೋಣಿಗಳಿಗೆ ನೋ ಎಂಟ್ರಿ!
ಕನ್ಯಾಕುಮಾರಿಯಲ್ಲಿ ಮೋದಿ ಧ್ಯಾನಕ್ಕೆ 2,000 ಪೊಲೀಸರ ಸರ್ಪಗಾವಲು: ಪ್ರವಾಸಿಗರಿಗೆ, ದೋಣಿಗಳಿಗೆ ನೋ ಎಂಟ್ರಿ! ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಸುಮಾರು ಎರಡೂವರೆ ತಿಂಗಳ ಕಾಲ ದೇಶಾದ್ಯಂತ ಸುಮಾರು 200 ಚುನಾವಣಾ ರ್ಯಾಲಿಗಳು ಮತ್ತು ರೋಡ್ ಶೋಗಳನ್ನು ನಡೆಸಿದ ಪ್ರಧಾನಿ ನರೇಂದ್ರ ಮೋದಿ (Narendra Modi)ಅವರು ಕೊನೆಯ ಹಂತದ ಚುನಾವಣೆಗೂ ಮುನ್ನ ಕನ್ಯಾಕುಮಾರಿಯ (Kanyakumari) ಪ್ರಸಿದ್ಧ ವಿವೇಕಾನಂದ (Vivekananda) ರಾಕ್ ಸ್ಮಾರಕದಲ್ಲಿ ಎರಡು ದಿನಗಳ ಕಾಲ ಧ್ಯಾನ ಮಾಡಲಿದ್ದಾರೆ. ಇದಕ್ಕಾಗಿ …
Read More »