Breaking News

Monthly Archives: ಮೇ 2024

ಬಂದೇ ಬಿಡ್ತು ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ನೋಂದಣಿ ಡೆಡ್‌ಲೈನ್‌!

ಬೆಂಗಳೂರು: ‌ರಾಜ್ಯದಲ್ಲಿ ಎಲ್ಲ ಹಳೆಯ ವಾಹನಗಳಿಗೆ (Old Vehicles) ಅತಿ ಸುರಕ್ಷಿತ ನೋಂದಣಿ ಫಲಕ (ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್‌ ನಂಬರ್‌ ಪ್ಲೇಟ್‌ – HSRP Number Plate) ಕಡ್ಡಾಯವಾಗಿ ಅಳವಡಿಸಲು ಇದ್ದ ಗಡುವು ಮುಗಿಯುತ್ತಾ ಬಂದರೂ ವಾಹನ ಸವಾರರು ಮಾತ್ರ ನಿರಾಸಕ್ತಿ ತೋರಿದ್ದಾರೆ.

Read More »

ಮಾಜಿ ಶಾಸಕ ಪ್ರೀತಂ ಗೌಡ ಆಪ್ತರ ಹೋಟೆಲ್, ಬಾರ್ ಗಳ ಮೇಲೆ SIT ದಾಳಿ

ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಎಸ್‌ಐಟಿ ಅಧಿಕಾರಿಗಳು ಹಾಸನದ ಎರಡು ಕಡೆ ದಾಳಿ ನಡೆಸಿದ್ದಾರೆ. ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಅವರ ಆಪ್ತರಾದ ಶರತ್ ಹಾಗೂ ಕಿರಣ್ ಒಡೆತನದ ಹೋಟೆಲ್, ಬಾರ್ ಗಳ ಮೇಲೆ ಎಸ್‌ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಶರತ್ ಒಡೆತನದ ಕ್ವಾಲಿಟಿ ಬಾರ್ ಹಾಗೂ ಕಿರಣ್ ಒಡೆತನದ ಶ್ರೀಕೃಷ್ಣ ಹೋಟೆಲ್ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

Read More »

ಚಿಕ್ಕೋಡಿ | ಬೆಟ್ಟಿಂಗ್‌: ಹೊಡೆದಾಡಿಕೊಂಡ ಕಾರ್ಯಕರ್ತರು

ಚಿಕ್ಕೋಡಿ: ಲೋಕಸಭೆಗೆ ಚುನಾವಣೆಯಲ್ಲಿ ಯಾರು ಗೆಲ್ಲುತ್ತಾರೆ ಎಂಬ ಕುರಿತು ಕಾಂಗ್ರೆಸ್‌ ಹಾಗೂ ಬಿಜೆಪಿ ಕಾರ್ಯಕರ್ತರಲ್ಲಿ ಬೆಟ್ಟಿಂಗ್ ಅವ್ಯಾಹತವಾಗಿ ನಡೆದಿದೆ. ಪಟ್ಟಣದ ಮದ್ಯದ ಅಂಗಡಿ ಎದುರು ಸೋಮವಾರ ಇಬ್ಬರು ಕಾರ್ಯಕರ್ತರು ಪರಸ್ಪರ ಚಪ್ಪಲಿಯಿಂದ ಹೊಡೆದಾಡಿಕೊಂಡಿದ್ದಾರೆ.ಇದರ ವಿಡಿಯೊ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ.   ಈ ಬಾರಿ ಕಾಂಗ್ರೆಸ್‌ನ ಹಾಗೂ ಬಿಜೆಪಿಯ  ಮಧ್ಯೆ ನೇರ ಸ್ಪರ್ಧೆ ಏರ್ಪಟ್ಟಿದೆ. ಎರಡೂ ಕಡೆಯ ಅಭಿಮಾನಿಗಳು ಸಾವಿರ, ಹತ್ತು ಸಾವಿರ, ಲಕ್ಷ ಹೀಗೆ ಬೆಟ್ಟಿಂಗ್‌ ಕಟ್ಟಿದ್ದಾರೆ ಎಂಬ …

Read More »

ಧಾರವಾಡ; ಮೇ 14 ರಿಂದ ಮಾವು ಪ್ರದರ್ಶನ, ಮಾರಾಟ ಮೇಳ

ಧಾರವಾಡ, ಮೇ 14: ಕಳೆದ ವರ್ಷ ಮುಂಗಾರು ಮಳೆ ಕೈಕೊಟ್ಟು, ಈ ಬಾರಿಯ ಸುಡು ಬೇಸಿಗೆಯ ಪರಿಣಾಮ ನಿರೀಕ್ಷೆ ಮಾಡಿದಷ್ಟು ಮಾವಿನ ಬೆಳೆ ಬಂದಿಲ್ಲ. ಮಾರುಕಟ್ಟೆಯಲ್ಲಿ ಸದ್ದು ಮಾಡಬೇಕಿದ್ದ ಹಣ್ಣುಗಳ ರಾಜ ಅಷ್ಟಾಗಿ ಕಂಡುಬರುತ್ತಿಲ್ಲ. ವಿವಿಧ ಬಗೆಯ ಮಾವಿನ ಹಣ್ಣು ಸವಿಯುವ ಉತ್ಸಾಹದಲ್ಲಿರುವ ಜನರಿಗೆ ಸಿಹಿಸುದ್ದಿಯೊಂದಿದೆ.ಧಾರವಾಡ ಜಿಲ್ಲೆಯಲ್ಲಿ 3 ದಿನಗಳ ಮಾವು ಪ್ರದರ್ಶನ ಮತ್ತು ಮಾರಾಟ ಮೇಳ ಆಯೋಜನೆ ಮಾಡಲಾಗಿದೆ. ರೈತರಿಂದ ನೇರವಾಗಿ ಗ್ರಾಹಕರಿಗೆ ಮಾವು ತಲುಪಲಿದೆ.

Read More »

ಹೈಬ್ರಿಡ್ ಜೋಳದ ಕುಣಿಗಾಳು ಬಿತ್ತನೆ: ಭರ್ಜರಿ ಫಸಲು

ಸಂಕೇಶ್ವರ: ಯಾವುದೇ ಬೆಳೆ ಬೆಳೆಯಲು ಅವುಗಳ ಬಿತ್ತನೆಯಲ್ಲಿ ಸೂಕ್ತ ಅಂತರ ಅಗತ್ಯ. ಇದರಿಂದ ಬೆಳೆಗಳು ಉತ್ತಮವಾಗಿ ಬೆಳೆದು ಉತ್ತಮ ಫಸಲು ಬರಲು ಸಾಧ್ಯ ಎಂಬ ಅಂಶವನ್ನು ಸಂಕೇಶ್ವರದ ರೈತ ಮಲ್ಲಿಕಾರ್ಜುನ ಕಲ್ಲಪ್ಪಾ ಬಸ್ತವಾಡಿ ಅವರು ತಮ್ಮ ಹೊಲದಲ್ಲಿ ಹೈಬ್ರಿಡ್ ಜೋಳದ ಕುಣಿಗಾಳು ಬಿತ್ತನೆ ಪ್ರಾಯೋಗಿಕವಾಗಿ ಮಾಡಿ ಯಶಸ್ವಿಯಾಗಿದ್ದಾರೆ.ಇದರಿಂದ ಅವರಿಗೆ ಭರ್ಜರಿ ಫಸಲು ಬಂದಿದೆ. ಹೊಲದಲ್ಲಿ ಏನಾದರೊಂದು ಹೊಸ ಪ್ರಯೋಗ ಮಾಡುತ್ತಲೆ ಬಂದಿರುವ ಮಲ್ಲಿಕಾರ್ಜುನ ಬಸ್ತವಾಡಿ, ಈ ವರ್ಷ ಹಿಂಗಾರಿನಲ್ಲಿ ಒಂದು …

Read More »

ಗೋಕಾಕ್ ಫಾಲ್ಸ್‌ನಲ್ಲಿ ಜಲವೈಭವ

ಬೆಳಗಾವಿ: ಬಿರು ಬೇಸಿಗೆಯಲ್ಲೂ ಸುಪ್ರಸಿದ್ಧ ಗೋಕಾಕ್ ಫಾಲ್ಸ್‌ನಲ್ಲಿ ಜಲವೈಭವ ಸೃಷ್ಟಿಯಾಗಿದೆ. ಮಳೆಗಾಲದಲ್ಲಿ ಪ್ರವಾಸಿಗರನ್ನು ಸೂಜಿಗಲ್ಲಿನಂತೆ ಸೆಳೆಯುವ ಫಾಲ್ಸ್ ಈಗ ಬೇಸಿಗೆಯಲ್ಲೂ ಧುಮ್ಮಿಕ್ಕುತ್ತಿದೆ. ಘಟಪ್ರಭಾ ಜಲಾಶಯದಿಂದ ನೀರು ಬಿಡುಗಡೆ ಮಾಡಿದ ಪರಿಣಾಮ ‌ಗೋಕಾಕ್ ಜಲಪಾತ ಧುಮ್ಮಿಕ್ಕಿ ಹರಿಯುತ್ತಿದೆ.

Read More »

ಹೋರ್ಡಿಂಗ್‌ ಕುಸಿದು ಬಿದ್ದ ಪ್ರಕರಣ; ಮೃತರ ಸಂಖ್ಯೆ 14ಕ್ಕೆ ಏರಿಕೆ, 74 ಮಂದಿಗೆ ಗಾಯ

ಮುಂಬಯಿ: ಬಿರುಗಾಳಿ ಸಹಿತ ಮಳೆಯ ಅವಾಂತರಕ್ಕೆ ಸೋಮವಾರ ಮುಂಬೈನ ಘಾಟ್ಕೋಪರ್ ಪ್ರದೇಶದಲ್ಲಿ ಪೆಟ್ರೋಲ್ ಬಂಕ್ ಮೇಲೆ ದೈತ್ಯ ಜಾಹೀರಾತು ಫಲಕ ಬಿದ್ದ ಪ್ರಕರಣದಲ್ಲಿ ಮೃತರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ ಅಲ್ಲದೆ 74 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ನಗರದಲ್ಲಿ ಸೋಮವಾರ ಬಿರುಗಾಳಿ ಸಹಿತ ಭಾರೀ ಮಳೆಯಾಗಿದ್ದು ಹಲವೆಡೆ ಮರಗಳು ಧರೆಗುರುಳಿವೆ, ಅಲ್ಲದೆ ಜನಜೀವನ ಅಸ್ತವ್ಯಸ್ತಗೊಂಡಿದೆ, ಇದೆ ವೇಳೆ ಪಂತನಗರದ ಈಸ್ಟರ್ನ್ ಎಕ್ಸ್‌ಪ್ರೆಸ್ ಹೆದ್ದಾರಿಯ ಬಳಿ ಇರುವ ಪೆಟ್ರೋಲ್ ಬಂಕ್ …

Read More »

ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಪ್ರಕರಣ: ಹರ್ಯಾಣದಲ್ಲಿ ಆರನೇ ಆರೋಪಿ ಬಂಧನ

ಮುಂಬಯಿ: ಕಳೆದ ಏಪ್ರಿಲ್‌ನಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮನೆಯ ಬಳಿ ನಡೆದ ಗುಂಡಿನ ದಾಳಿ ಪ್ರಕರಣ ಮುಂಬೈ ಹಾಗೂ ಬಾಲಿವುಡ್ ಅಭಿಮಾನಿಗಳನ್ನು ಬೆಚ್ಚಿ ಬೀಳಿಸಿತ್ತು. ಏಪ್ರಿಲ್ 14 ರಂದು ನಡೆದ ಈ ಘಟನೆಯಿಂದ ಮುಂಬೈ ಪೊಲೀಸ್ ಕ್ರೈಂ ಬ್ರಾಂಚ್ ಈ ಪ್ರಕರಣವನ್ನು ನಿರಂತರವಾಗಿ ತನಿಖೆ ನಡೆಸುತ್ತಿದೆ, ಇದೀಗ ಈ ಪ್ರಕರಣದಲ್ಲಿ ಪೊಲೀಸರಿಗೆ ಮತ್ತೊಂದು ಯಶಸ್ಸು ಸಿಕ್ಕಿದೆ. ಮುಂಬೈ ಪೊಲೀಸರು ಸಲ್ಮಾನ್ ಖಾನ್ ಮನೆಯ ಹೊರಗೆ ಗುಂಡು ಹಾರಿಸಿದ ಪ್ರಕರಣದ …

Read More »

ಇಂದು ಮಧ್ಯಾಹ್ನದ ವೇಳೆಗೆ ರೇವಣ್ಣ ರಿಲೀಸ್; ಜೈಲಿನ ಬಳಿ ಪೊಲೀಸ್ ಬಿಗಿ ಭದ್ರತೆ

ಬೆಂಗಳೂರು: ಮಹಿಳೆ ಅಪಹರಣ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವ, ಜೆಡಿಎಸ್ ಶಾಸಕ ಎಚ್‌.ಡಿ ರೇವಣ್ಣಗೆ (Former Minister HD Revanna) ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು (Bail) ನೀಡಿದೆ. ಇಂದು ಪರಪ್ಪನ ಅಗ್ರಹಾರ ಜೈಲಿನಿಂದ (Parappana Agrahara Prison) ರೇವಣ್ಣ ರಿಲೀಸ್ ಆಗಲಿದ್ದಾರೆ.

Read More »

ಒಂದೂವರೆ ವರ್ಷದಿಂದ ನಿರ್ಮಾಣವಾಗುತ್ತಿರುವ ಕಣಬರ್ಗಿ ರಸ್ತೆ ಪೂರ್ಣ ಆಗೋದು ಯಾವಾಗ?

ಬೆಳಗಾವಿ: ನಗರದ ಹೊರ ವಲಯದ ಕಣಬರ್ಗಿಯಲ್ಲಿ ಒಂದೂವರೆ ವರ್ಷದಿಂದ ನಿರ್ಮಾಣವಾಗುತ್ತಿರುವ ರಸ್ತೆ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಕಾಮಗಾರಿ ವಿಳಂಬಕ್ಕೆ ಸ್ಥಳೀಯ ನಿವಾಸಿಗಳು ಸಂಬಂಧಿಸಿದ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಕಣಬರ್ಗಿ ಬಸ್‌ ನಿಲ್ದಾಣದಿಂದ ಶ್ರೀ ಸಿದ್ದೇಶ್ವರ ದೇವಸ್ಥಾನದವರೆಗೆ ರಸ್ತೆ ನಿರ್ಮಾಣ ಕಾಮಗಾರಿ ಆರಂಭಗೊಂಡಿದೆ. ಆದರೆ ರಸ್ತೆ ನಿರ್ಮಾಣ ಕೊನೆಯ ಹಂತಕ್ಕೆ ತಲುಪಿದ್ದರೂ ಮುಗಿಸಲು ಗುತ್ತಿಗೆದಾರರು ಹಿಂದೇಟು ಹಾಕುತ್ತಿದ್ದಾರೆ. ಕಾಮಗಾರಿ ಅರ್ಧಕ್ಕೆ ನಿಂತಿದ್ದರಿಂದ ಸಾರ್ವಜನಿಕರು ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಕಣಬರ್ಗಿಯ …

Read More »