Breaking News

Monthly Archives: ಮೇ 2024

ಕರ್ನಾಟಕ ರಾಜ್ಯ ಹಣಕಾಸು ಹಣಕಾಸು ಸಂಸ್ಥೆ ಮೇಲೆ ಲೋಕಾ ದಾಳಿ :ರೆಡ್ ಹ್ಯಾಂಡ್ ಆಗಿ ಬಲೆಗೆ ಬಿದ್ದ ಡೆಪ್ಯೂಟಿ ಮ್ಯಾನೇಜರ್

ಧಾರವಾಡ : ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ದಾಳಿಯ ವೇಳೆ 8 ಸಾವಿರ ಲಂಚ ಪಡೆಯುವಾಗ ಡೆಪ್ಯೂಟಿ ಮ್ಯಾನೇಜರ್ ಲೋಕಾಯುಕ್ತ ಅಧಿಕಾರಿಗಳಿಗೆ ರೆಡ್ ಹ್ಯಾಂಡ್ ಅಗಿ ಬಲೆಗೆ ಬಿದ್ದಿದ್ದಾನೆ. ಹೌದು ಧಾರವಾಡ ನಗರದ ರಾಯಪುರ ಬಡಾವಣೆಯಲ್ಲಿರುವ ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯ ಕಚೇರಿಯ ಮೇಲೆ 8 ಸಾವಿರ ಲಂಚ ಪಡೆಯುವಾಗ ಬೆಳಗ್ಗೆ ಬಿದ್ದ ಅಧಿಕಾರಿ ಡೆಪ್ಯೂಟಿ ಮ್ಯಾನೇಜರ್ ರಮೇಶ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ . …

Read More »

ಸಾಣಿಕೊಪ್ಪದಲ್ಲಿ ಹೆಜ್ಜೆ-ಹೆಜ್ಜೆಗೂ ಸಮಸ್ಯೆ

ಬೈಲಹೊಂಗಲ: ರಸ್ತೆಬದಿ ಬಿದ್ದಿರುವ ಕಸದ ರಾಶಿ. ತ್ಯಾಜ್ಯ ಪದಾರ್ಥಗಳಿಂದ ತುಂಬಿ ತುಳುಕುವ ಚರಂಡಿಗಳು. ರಸ್ತೆಯಲ್ಲೇ ಹರಿಯುವ ಕೊಳಚೆ ನೀರು. ಹಿರೇಬಾಗೇವಾಡಿ-ಸವದತ್ತಿ ರಾಜ್ಯ ಹೆದ್ದಾರಿಗೆ ಹೊಂದಿಕೊಂಡಿರುವ ತಾಲ್ಲೂಕಿನ ಸಾಣಿಕೊಪ್ಪದಲ್ಲಿ ಒಂದು ಸುತ್ತು ಹಾಕಿಬಂದರೆ, ಇಂಥ ದೃಶ್ಯ ಕಣ್ಣಿಗೆ ಬೀಳುತ್ತವೆ. ಚಿವಟಗುಂಡಿ ಗ್ರಾಮ ಪಂಚಾಯ್ತಿ ವ್ಯಾಪ್ತಿಗೆ ಒಳಪಟ್ಟಿರುವ ಈ ಗ್ರಾಮದಲ್ಲಿ 400 ಮನೆಗಳಿವೆ. 2,200 ಜನಸಂಖ್ಯೆ ಇದೆ. ರಾಜ್ಯ ಹೆದ್ದಾರಿ ಹಾಯ್ದು ಹೋಗಿದ್ದರೂ, ಈ ಊರು ಅಭಿವೃದ್ಧಿಗೆ ತನ್ನನ್ನು ತೆರೆದುಕೊಂಡಿಲ್ಲ. ಕನಿಷ್ಠ ಮೂಲಸೌಲಭ್ಯಕ್ಕಾಗಿ ಗ್ರಾಮಸ್ಥರ …

Read More »

ದುಃಸ್ಥಿತಿಯಲ್ಲಿ ವಿದ್ಯಾರ್ಥಿನಿಯರ ವಸತಿ ನಿಲಯ

ಚಿಕ್ಕೋಡಿ: ಚಿಕ್ಕೋಡಿ ಹಾಗೂ ನಿಪ್ಪಾಣಿ ತಾಲ್ಲೂಕು ವ್ಯಾಪ್ತಿಯಲ್ಲಿ ಸಮಾಜ ಕಲ್ಯಾಣ ಇಲಾಖೆಗೆ ಸೇರಿದ ಬಾಲಕ ಹಾಗೂ ಬಾಲಕಿಯರ 16 ವಸತಿ ನಿಲಯಗಳು ಇದ್ದು, ಇವುಗಳ ಪೈಕಿ ಚಿಕ್ಕೋಡಿ ಪಟ್ಟಣದ ಬಾಲಕಿಯರ ವಸತಿ ನಿಲಯ ಶಿಥಿಲಗೊಂಡಿದ್ದು, ಈಗಲೋ ಆಗಲೋ ಬೀಳುವ ಸ್ಥಿತಿಯಲ್ಲಿದೆ. ಶಾಲಾ ತರಗತಿಗಳು ಪ್ರಾರಂಭವಾಗುತ್ತಿದ್ದರೂ ಪರ್ಯಾಯ ವ್ಯವಸ್ಥೆ ಮಾಡದೇ ಅಧಿಕಾರಿಗಳು ಕೈ ಕಟ್ಟಿ ಕುಳಿತಿದ್ದಾರೆ. ಮೆಟ್ರಿಕ್ ಪೂರ್ವ 13 ಹಾಗೂ ಮೆಟ್ರಿಕ್ ನಂತರದ 3 ವಸತಿ ನಿಲಯಗಳಲ್ಲಿ 2024-25ನೇ ಸಾಲಿನಲ್ಲಿ ವ್ಯಾಸಾಂಗ …

Read More »

ಕುಸಿದ ಅಂತರ್ಜಲ ಮಟ್ಟ: ಬರಿದಾಗಿವೆ ಬೆಳವಿ, ಯಾದಗೂಡ ಕೆರೆ

ಹುಕ್ಕೇರಿ: ಭೀಕರ ಬರದ ಹಿನ್ನೆಲೆಯಲ್ಲಿ ತಾಲ್ಲೂಕಿನ ಯಾದಗೂಡ ಮತ್ತು ಬೆಳವಿ ಗ್ರಾಮದಲ್ಲಿನ ಕೆರೆಗಳ ಒಡಲು ಬರಿದಾಗಿದೆ. ಪ್ರತಿವರ್ಷ ಉತ್ತಮ ಮಳೆಯಾಗಿ, ಬೇಸಿಗೆಯಲ್ಲೂ ಕೆರೆಗಳಲ್ಲಿ ಒಂದಿಷ್ಟು ನೀರು ಸಂಗ್ರಹವಿರುತ್ತಿತ್ತು. ಆದರೆ, ಕಳೆದ ವರ್ಷ ಮಳೆಯಾಗದ ಹಿನ್ನೆಲೆಯಲ್ಲಿ ಈ ಬಾರಿ ನೀರಿಲ್ಲದೆ ಭಣಗುಡುತ್ತಿವೆ. ಇದರಿಂದಾಗಿ ಪಕ್ಕದ ಜಮೀನುಗಳಲ್ಲಿ ಕೊರೆಯಿಸಿರುವ ತೆರೆದಬಾವಿ ಮತ್ತು ಕೊಳವೆಬಾವಿಗಳಲ್ಲೂ ಅಂತರ್ಜಲ ಮಟ್ಟ ಕುಸಿದಿದೆ. ಕೆರೆಯನ್ನೇ ನಂಬಿಕೊಂಡು ಕೃಷಿ ಮಾಡುತ್ತಿದ್ದವರಿಗೆ ತೊಂದರೆಯಾಗಿದೆ. ಇಂದು ಅಥವಾ ನಾಳೆ ದೊಡ್ಡ ಮಳೆ ಸುರಿಯಬಹುದು. ಕೆರೆ …

Read More »

ಪ್ರಜ್ವಲ್ ರೇವಣ್ಣ’ ವಾಪಸ್ ಬಂದ್ರೆ ಏರ್ ಪೋರ್ಟ್ ನಲ್ಲೇ ಅರೆಸ್ಟ್ ಮಾಡ್ತೀವಿ-ಗೃಹ ಸಚಿವ

ಬೆಂಗಳೂರು : ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್ ರೇವಣ್ಣ ವಾಪಸ್ ದೇಶಕ್ಕೆ ಬಂದ್ರೆ ಏರ್ ಪೋರ್ಟ್ ನಲ್ಲೇ ಅರೆಸ್ಟ್ ಮಾಡ್ತೀವಿ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಪ್ರಜ್ವಲ್ ರೇವಣ್ಣ ಈಗಾಗಲೇ ಪ್ರಜ್ವಲ್ ರೇವಣ್ಣ ಬಂಧಿಸಲು ವಾರೆಂಟ್ ಜಾರಿ ಮಾಡಲಾಗಿದೆ. ಆದ್ದರಿಂದ ಅವರು ಭಾರತಕ್ಕೆ ಬರುತ್ತಿದ್ದಂತೆ ಎಸ್‌ಐಟಿ ಅಧಿಕಾರಿಗಳು ಬಂಧಿಸಲಿದ್ದಾರೆ ಎಂದು ಹೇಳಿದರು. ಈ ಪ್ರಕರಣದಲ್ಲಿ ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಕಾರ್ಯಕರ್ತರು ಎಂಬ ಆಧಾರದ ಮೇಲೆ …

Read More »

ಜೂನ್ 4ರ ನಂತರ ಮೋದಿ ಪ್ರಧಾನಿಯಾಗಲ್ಲ: ರಾಹುಲ್ ಗಾಂಧಿ

ನವದೆಹಲಿ: ನರೇಂದ್ರ ಮೋದಿ ಅವರು ಮುಂದಿನ ಪ್ರಧಾನಿಯಾಗುವುದಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಹೇಳಿದ್ದಾರೆ. ವಾರಣಾಸಿಯಲ್ಲಿ ನಡೆದ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಇಲ್ಲಿ ಸ್ಪರ್ಧೆ ಪ್ರಧಾನಿ ಅಭ್ಯರ್ಥಿ ಮತ್ತು ಕಾಂಗ್ರೆಸ್ ಅಭ್ಯರ್ಥಿ ಅಜಯ್ ರಾಯ್ ನಡುವೆ ಅಲ್ಲ, ಏಕೆಂದರೆ ಮೋದಿ ಮತ್ತೆ ಪ್ರಧಾನಿಯಾಗುವುದಿಲ್ಲ ಎಂದು ಹೇಳಿದರು. “ಜೂನ್ 4 ರ ನಂತರ ನರೇಂದ್ರ ಮೋದಿ ಈ ದೇಶದ ಪ್ರಧಾನಿಯಾಗುವುದಿಲ್ಲ ಎಂದು ನಾನು ನಿಮಗೆ ಭರವಸೆ ನೀಡುತ್ತಿದ್ದೇನೆ” …

Read More »

ಪ್ರಜ್ವಲ್‌ ರೇವಣ್ಣ ನಾಳೆ ಮಧ್ಯರಾತ್ರಿ 12.30 ಕ್ಕೆ ಕೆಂಪೇಗೌಡ ಏರ್‌ ಪೋರ್ಟ್‌ ಗೆ

ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಸಿಲುಕಿರುವ ಪ್ರಜ್ವಲ್ ರೇವಣ್ಣ ಜರ್ಮನಿಂದ ಬೆಂಗಳೂರಿಗೆ ವಾಪಸ್ ಆಗಲು ನಾಳೆಯೇ ಟಿಕೆಟ್ ಬುಕ್ ಆಗಿದೆ ಎಂದು ವರದಿಯಾಗಿದೆ. ಜರ್ಮನಿಗೆ ತೆರಳಲು ಲುಪ್ತಾನ್ಸಾ ಫ್ಲೈಟ್ ಟಿಕೆಟ್ ಬುಕ್ ಮಾಡಿರುವ ಪ್ರಜ್ವಲ್ ರೇವಣ್ಣ ಅವರು ಜರ್ಮನಿಯ ಫ್ರಾಂಕ್ ಫರ್ಟ್ ನಿಂದ ಬೆಂಗಳೂರಿಗೆ ರಿಟರ್ನ್ ಟಿಕೆಟ್ ಬುಕ್ ಮಾಡಿದ್ದಾರೆ.   ನಾಳೆ ಮಧ್ಯಾಹ್ನ 1.30 ಕ್ಕೆ ಫ್ರಾಂಕ್ ಫರ್ಟ್ ನಿಂದ ವಿಮಾನವು ಹೊರಡಲಿದ್ದು, ರಾತ್ರಿ 12.30 ಗಂಟೆ …

Read More »

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ; ರೇಸ್‌ನಲ್ಲಿ ಯಾರಿದ್ದಾರೆ?

ಬೆಂಗಳೂರು, ಮೇ 29: ಲೋಕಸಭಾ ಚುನಾವಣೆ ರಾಜ್ಯದಲ್ಲಿ ಎರಡು ಹಂತದಲ್ಲಿ ನಡೆದಿದ್ದು, ಸದ್ಯ ರಾಜಕೀಯ ನಾಯಕರು ಜೂನ್‌ 4 ರ ಫಲಿತಾಂಶಕ್ಕಾಗಿ ಎದುರು ನೋಡುತ್ತಿದ್ದಾರೆ. ಇತ್ತ ಕೈ ಪಾಳಯದಲ್ಲಿ ರಾಜ್ಯ ಕಾಂಗ್ರೆಸ್‌ ಅಧ್ಯಕ್ಷ ಬದಲಾವಣೆ ವಿಚಾರ ಮುನ್ನಲೆ ಬಂದಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಾಗ ಮುಖ್ಯಮಂತ್ರಿ ಹುದ್ದೆಗೆ ಸಿದ್ಧರಾಮಯ್ಯ ಮತ್ತು ಉಪಮುಖ್ಯಮಂತ್ರಿ ಹುದ್ದೆಗೆ ಡಿ.ಕೆ.ಶಿವಕುಮಾರ್ ಅವರ ನೇಮಕವನ್ನು ಕಾಂಗ್ರೆಸ್‌ ಹೈಕಮಾಂಡ್‌ ಪ್ರಕಟಿಸಿದ್ದರು, ಆ ವೇಳೆ ಲೋಕಸಭಾ …

Read More »

ಪೆನ್‌ಡ್ರೈವ್‌ ಹಾಗೂ ಅತ್ಯಾಚಾರ ಪ್ರಕರಣ : ಹಾಸನ- ಹೊಳೆನರಸೀಪುರಕ್ಕೆ ಎಸ್‌‍ಐಟಿ ತಂಡ

ಹಾಸನ, ಮೇ 29- ಅಶ್ಲೀಲ ವಿಡಿಯೋಗಳ ಪೆನ್‌ಡ್ರೈವ್‌ ಹಾಗೂ ಅತ್ಯಾಚಾರ ಪ್ರಕರಣದ ಹಿನ್ನೆಲೆಯಲ್ಲಿ ಎಸ್‌‍ಐಟಿ ತಂಡ ಮತ್ತೊಮೆ ಹಾಸನ ಹಾಗೂ ಹೊಳೆನರಸೀಪುರಕ್ಕೆ ಭೇಟಿ ನೀಡಿ ಮುಂಜಾನೆಯವರೆಗೂ ಪರಿಶೀಲನೆ ನಡೆಸಿದೆ.ಹಾಸನ ನಗರದ ಸಂಸದರ ನಿವಾಸ ಹಾಗೂ ಹೊಳೆನರಸೀಪುರದ ಎಚ್‌.ಡಿ.ರೇವಣ್ಣ ಅವರ ನಿವಾಸಕ್ಕೆ ಎಸ್‌‍ಐಟಿ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಈ ಹಿಂದೆ ಕೂಡ ಸ್ಥಳ ಮಹಜರು ನಡೆಸಿದ ಎಸ್‌‍ಐಟಿ ಅಧಿಕಾರಿಗಳು ಎಸಿಪಿ ಸತ್ಯನಾರಾಯಣ ನೇತೃತ್ವದಲ್ಲಿ ಎರಡೂ ನಿವಾಸಗಳಲ್ಲೂ ಮತ್ತೆ ಪರಿಶೀಲನೆ ನಡೆಸಿದ್ದಾರೆ.ಕೆಲದಿನಗಳ …

Read More »

ಪೋರ್ಷೆ ಕಾರ್ ಅಪಘಾತದ ಕೇಸ್; ಅಪ್ರಾಪ್ತನ ಜೊತೆ ಇದ್ದಿದ್ದು ಶಾಸಕನ ಪುತ್ರ..!

ಮಹಾರಾಷ್ಟ್ರದ ಪುಣೆಯಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಯ ಅಪ್ರಾಪ್ತ ಪುತ್ರ ಚಲಾಯಿಸುತ್ತಿದ್ದ ಐಷಾರಾಮಿ ಪೋರ್ಷೆ ಕಾರು ಬೈಕಿನಲ್ಲಿ ತೆರಳುತ್ತಿದ್ದ ಟೆಕ್ಕಿಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕಿನಲ್ಲಿದ್ದ ಇಬ್ಬರೂ ಸಾವನ್ನಪ್ಪಿದ್ದರು. ಈ ಪ್ರಕರಣದಲ್ಲಿ ಅಪ್ರಾಪ್ತನನ್ನು ಬಚಾವ್ ಮಾಡಲು ಇನ್ನಿಲ್ಲದ ಪ್ರಯತ್ನ ನಡೆದಿತ್ತು. ಅಪಘಾತಕ್ಕೂ ಮುನ್ನ ಪ್ರತಿಷ್ಠಿತ ಕ್ಲಬ್ ಮತ್ತು ಬಾರ್ ನಲ್ಲಿ ಮದ್ಯ ಸೇವಿಸಿದ್ದ ಅಪ್ರಾಪ್ತ ಮತ್ತಿನಲ್ಲಿ ಈ ಅಪಘಾತವೆಸಗಿದ್ದ ಎಂದು ಹೇಳಲಾಗಿದ್ದು, ಆತನ ತಂದೆ ಆಸ್ಪತ್ರೆಯ ವೈದ್ಯರಿಗೆ ಲಂಚ ನೀಡಿ ರಕ್ತದ …

Read More »