Breaking News

Daily Archives: ಜೂನ್ 5, 2024

ಜಾಲತಾಣದಲ್ಲಿ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ರಾಜೀನಾಮೆ ಪತ್ರ!

ಚಿಕ್ಕಬಳ್ಳಾಪುರ: ‘ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಒಂದು ಮತವನ್ನು ಡಾ.ಕೆ.ಸುಧಾಕರ್ ಹೆಚ್ಚು ಪಡೆದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ’ ಎಂದು ಲೋಕಸಭೆ ಚುನಾವಣೆ ಪ್ರಚಾರದ ವೇಳೆ ‌ಮತ್ತು ಮತದಾನದ ನಂತರವೂ ಶಾಸಕ ಪ್ರದೀಪ್ ಈಶ್ವರ್ ಹೇಳಿದ್ದು, ಈ ಮಾತುಗಳು ಈಗ ತೀವ್ರ ಟ್ರೋಲ್‌ಗೆ ಗುರಿಯಾಗಿದೆ. ಬಿಜೆಪಿ ಮುಖಂಡರು, ಕಾರ್ಯಕರ್ತರು ‘ಪ್ರದೀಪ್ ರಾಜೀನಾಮೆ ಯಾವಾಗ’ ಎಂದು ಪ್ರಶ್ನಿಸುತ್ತಿದ್ದಾರೆ. ಈ ನಡುವೆ ಪ್ರದೀಪ್ ಈಶ್ವರ್ ಅಯ್ಯರ್ ಪಿ.ಇ, ಶಾಸಕರು, ಕರ್ನಾಟಕ ವಿಧಾನಸಭೆ ಎನ್ನುವ ರಾಜೀನಾಮೆ …

Read More »

ಎನ್ ಡಿಎ ನಾಯಕರ ಸಭೆ ಅಂತ್ಯ, ಮೋದಿ ಸರ್ಕಾರ ರಚನೆಗೆ ಬೆಂಬಲ ಪತ್ರ ನೀಡಿದ ನಿತೀಶ್, ನಾಯ್ಡು

ನವದೆಹಲಿ: ತೀವ್ರ ಕುತೂಹಲ ಮೂಡಿಸಿದ್ದ ಎನ್ ಡಿಎ ನಾಯಕರ ಸಭೆ ಅಂತ್ಯವಾಗಿದ್ದು, ನರೇಂದ್ರ ಮೋದಿ ನೇತೃತ್ವದಲ್ಲಿ ಸರ್ಕಾರ ರಚನೆಗೆ ಟಿಡಿಪಿ ಹಾಗೂ ಜೆಡಿಯು ಸೇರಿದಂತೆ ಎಲ್ಲಾ ಮಿತ್ರ ಪಕ್ಷಗಳು ಒಪ್ಪಿಗೆ ಸೂಚಿಸಿವೆ. ಮೋದಿ ಅವರು ಜೂನ್ 7 ರಂದು ಸಂಜೆ 5ಕ್ಕೆ ರಾಷ್ಟ್ರಭವನಕ್ಕೆ ತೆರಳಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ. ಮೋದಿ ಅವರಿಗೆ ಎನ್ ಡಿಎ ನಾಯಕರು ಸಾಥ್ ನೀಡಲಿದ್ದಾರೆ. ಇಂದು ಮೋದಿ …

Read More »

ಕರ್ನಾಟಕದಲ್ಲಿ 3 ಮಹಿಳೆಯರಿಗೆ ಮಾತ್ರ ಗೆಲುವು: ಯಾರು, ಯಾವ ಪಕ್ಷ?

ಬೆಂಗಳೂರು, ಜೂನ್ 05: ಕರ್ನಾಟಕ ರಾಜ್ಯದಲ್ಲಿ ನಡೆದ ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, 2024ರಲ್ಲಿ ಮೂವರು ಮಹಿಳಾ ಮಣಿಗಳು ಸಂಸತ್‌ಗೆ ಆಯ್ಕೆ ಆಗಿದ್ದಾರೆ. ಒಟ್ಟು 28 ಮಂದಿ ಪೈಕಿ ಮೂವರು ರಾಜ್ಯದ ಮಹಿಳೆಯರನ್ನು ಪ್ರತಿನಿಧಿಸಿದ್ದಾರೆ. ಬಾಕಿ 25 ಕ್ಷೇತ್ರಗಳಲ್ಲಿ ಪುರುಷ ಅಭ್ಯರ್ಥಿಗಳು ಗೆದ್ದಿದ್ದಾರೆ. ಯಾರು ಯಾವ ಕ್ಷೇತ್ರ? ಯಾವ ಪಕ್ಷಗಳು?, ರಾಜಕೀಯ ಬೆಳವಣಿಗೆ ಬಗ್ಗೆ ಇಲ್ಲಿ ತಿಳಿಯಿರಿ. ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಲೋಕಸಭೆಗೆ ಚುನಾವಣೆ ಮತದಾನ ನಡೆಯಿತು. ಪ್ರಕಟಗೊಂಡ ಫಲಿತಾಂಶದಲ್ಲಿ …

Read More »

ನಾನು ಯಾವುದೇ ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ

ಹುಬ್ಬಳ್ಳಿ, ಜೂನ್ 05: ಬೆಳಗಾವಿಗೆ ನಾನು ವಲಸಿಗ, ಹೊರಗಿನವನು ಎಂದು ಟೀಕಿಸಿದವರಿಗೆ ಜನರೇ ಚುನಾವಣೆಯಲ್ಲಿ ಉತ್ತರ ಕೊಟ್ಟಿದ್ದಾರೆ. ಇದೀಗ 1ಲಕ್ಷ 80 ಸಾವಿರ ಅಂತರದಿಂದ ಜಯಗಳಿಸಿದ್ದೇವೆ. ನಾನು ಯಾವುದೇ ಮಂತ್ರಿ ಸ್ಥಾನದ ಆಕಾಂಕ್ಷಿ ಅಲ್ಲ ಎಂದು ಅವರು ತಿಳಿಸಿದ್ದಾರೆ.   ಲೋಕಸಭಾ ಚುನಾವಣೆಯಲ್ಲಿ ಗೆದ್ದ ನಂತರ ಮೊದಲ ಬಾರಿಗೆ ಹುಬ್ಬಳ್ಳಿಯ ಶ್ರೀ ಸಿದ್ದಾರೂಢ ಮಠಕ್ಕೆ ಭೇಟಿ ನೀಡಿದ ಜಗದೀಶ್ ಶೆಟ್ಟರ್ ಅವರಿಗೆ ಬಿಜೆಪಿ ಕಾರ್ಯಕರ್ತರು ಹಾಗೂ ಶೆಟ್ಟರ್ ಅಭಿಮಾನಿಗಳು ಅದ್ದೂರಿಯಾಗಿ …

Read More »

ಶಿವರಾಜ್​ಕುಮಾರ್ ನಿರುದ್ಯೋಗಿಯಾಗಬೇಕಿಲ್ಲ, ಕುಣಿಯುವ ಕೆಲಸಕ್ಕೆ ಈಗಲೇ ಅರ್ಜಿ ಹಾಕಬಹುದು

ಶಿವಮೊಗ್ಗ: ಕುಟುಂಬ ಕದನಕ್ಕೆ ಸಾಕ್ಷಿಯಾಗಿದ್ದ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಗೆದ್ದು ಬೀಗಿದ್ದು, ಎದುರಾಳಿ ಕಾಂಗ್ರೆಸ್​ನ ಗೀತಾ ಶಿವರಾಜ್​ಕುಮಾರ್​ ಹಾಗೂ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪಗೆ ಸೋಲುಣಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ, ಮಾಜಿ ಸಿಎಂ ದಿ. ಬಂಗಾರಪ್ಪ ಅವರ ಕುಟುಂಬದ ಕಲಹ ಚುನಾವಣೆ ಮುಗಿದರೂ ನಿಲ್ಲುವಂತೆ ಕಾಣುತ್ತಿಲ್ಲ. ಇದಕ್ಕೆ ಸಾಕ್ಷಿ ಎಂಬಂತೆ ಮಾಜಿ ಶಾಸಕ ಕುಮಾರ್​ ಬಂಗಾರಪ್ಪ ಅವರು ಬರೆದಿರುವ ಸುದೀರ್ಘ ಪೋಸ್ಟ್​ ಸಾಮಾಜಿಕ ಜಾಲತಾಣಗಳಲ್ಲಿ ಸಖತ್​ ವೈರಲ್​ ಆಗಿದೆ. …

Read More »

ಗ್ಯಾರಂಟಿ’ ಕೈ ಹಿಡಿಯುವ ನಿರೀಕ್ಷೆ ಹುಸಿಯಾಗಿದೆ, ಸೋಲಿನ ಕುರಿತು ವರಿಷ್ಠರಿಗೆ ವರದಿ: ಆಲಗೂರ

ವಿಜಯಪುರ : ವಿಜಯಪುರ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಸೋಲಿನ ಕುರಿತು ಕಾರಣಗಳ ವರದಿ ನೀಡುವಂತೆ ಕಾಂಗ್ರೆಸ್ ಪಕ್ಷದ ಕರ್ನಾಟಕ ರಾಜ್ಯದ ಉಸ್ತುವಾರಿ ರಂದೀಪ ಸುರ್ಜೇವಾಲಾ ಸೂಚಿಸಿದ್ದಾರೆ ಎಂದು ಲೋಕಸಭೆ ಚುನಾವಣೆಯಲ್ಲಿನ ಪರಾಜಿತ ಅಭ್ಯರ್ಥಿ ರಾಜು ಆಲಗೂರ ಹೇಳಿದರು. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸುರ್ಜೇವಾಲ ಅವರು ಇಂದು ಬೆಳಿಗ್ಗೆ ಕರೆ ಮಾಡಿ ಮಾತನಾಡಿದರು. ಸೋಲಿನ ಕುರಿತು ಮಾಹಿತಿ ಪಡೆದ ಅವರು, ಈ ಕುರಿತು ವರದಿ ನೀಡುವಂತೆ ಸೂಚಿಸಿದ್ದಾರೆ. ಶೀಘ್ರವೇ ವಿಜಯಪುರ …

Read More »

Gold Rate: ₹2200 ಕುಸಿದ ಚಿನ್ನದ ಬೆಲೆ, ಬೆಳ್ಳಿ ಬೆಲೆ ಕೂಡ ಕುಸಿತ

ಜೂನ್ 4 ರಂದು ಷೇರು ಮಾರುಕಟ್ಟೆ ಅಲ್ಲೋಲ ಕಲ್ಲೋಲವಾದ ಕಾರಣ, ಚಿನ್ನ ಬೆಳ್ಳಿ ಮಾರುಕಟ್ಟೆ ಮೇಲೆ ಪರಿಣಾಮ ಬೀರಿತ್ತು. ಚಿನ್ನ ಮತ್ತು ಬೆಳ್ಳಿ ಬೆಲೆ ಹೆಚ್ಚಳಕ್ಕೆ ಕಾರಣವಾಗಿತ್ತು. ಇಂದು (ಬುಧವಾರ) ಷೇರು ಮಾರುಕಟ್ಟೆಯಲ್ಲಿ ಸುಧಾರಣೆ ಕಂಡಿದ್ದು ಪರಿಣಾಮ ಚಿನ್ನ ಮತ್ತು ಬೆಳ್ಳಿ ಬೆಲೆ ಇಳಿಮುಖವಾಗಿದೆ. ಜೂನ್ 4 ₹6,68,000 ಇದ್ದ100 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 2000 ರೂಪಾಯಿ ಕುಸಿತ ಕಂಡಿದ್ದು ₹ 6,66,000 ಆಗಿದೆ. ಮಂಗಳವಾರ ₹ …

Read More »

ರಾಜ್ಯದಲ್ಲಿ ಮುಂದಿನ 24 ಗಂಟೆ ಭಾರೀ ಮಳೆ : 17 ಜಿಲ್ಲೆಗಳಿಗೆ ʻಯೆಲ್ಲೋ ಅಲರ್ಟ್‌ʼ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆಯ ಆರ್ಭಟ ಶುರುವಾಗಿದ್ದು, ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ವಿವಿಧೆಡೆ ಇಂದು ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು 17 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್‌ ಘೋಷಿಸಿದೆ. ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ಹಾವೇರಿ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ಹಾಸನ, …

Read More »

ಡೈರೆಕ್ಟರ್, ಪ್ರೊಡ್ಯೂಸರ್ ಫೇಲ್, ಬಿಜೆಪಿಯಿಂದ ಬಂದವರಿಂದ ಉಪಯೋಗ ಆಗ್ಲಿಲ್ಲ

ಬೆಳಗಾವಿ: ಬೆಳಗಾವಿ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೋಲಿಗೆ ನಾನು ಕಾರಣವಲ್ಲ ಎಂದು ಗೋಕಾಕ‌ ನಗರದಲ್ಲಿ ಉಸ್ತುವಾರಿ ‌ಸಚಿವ ಸತೀಶ್ ‌ಜಾರಕಿಹೊಳಿ (Satish Jarkiholi) ಖಡಕ್ ಪ್ರತಿಕ್ರಿಯೆ ನೀಡಿದ್ದಾರೆ. “ಐದು ಲಕ್ಷ ಲಿಂಗಾಯತ ಮತದಾರರು ಬೆಳಗಾವಿಯಲ್ಲಿದ್ದಾರೆ, ಅವರೇನು ನನ್ನ ಮಾತು ಕೇಳ್ತಾರಾ? ಬೆಳಗಾವಿ ಕ್ಷೇತ್ರದ (Belagavi Election Results) ಮತದಾರರನ್ನು ಅಸೆಸ್ ಮಾಡುವಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿಫಲರಾದರು. ಇದೇ ಬೆಳಗಾವಿ ಕ್ಷೇತ್ರದ ಕಾಂಗ್ರೆಸ್ ‌ಸೋಲಿಗೆ ಕಾರಣವಾಯಿತು. ಈ‌ ಸಲ …

Read More »

ಒಂದೇ ವಿಮಾಣದಲ್ಲಿ ಒಟ್ಟಿಗೆ ಪ್ರಯಾಣಿಸಿದ ನಿತೀಶ್‌ ಕುಮಾರ್-ತೇಜಸ್ವಿ ಯಾದವ್‌! ವಿಡಿಯೋ ವೈರಲ್

ನವದೆಹಲಿ : ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟವಾದ ಒಂದು ದಿನದ ನಂತರ ಬಿಹಾರ ಮುಖ್ಯಮಂತ್ರಿ ಮತ್ತು ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಮತ್ತು ರಾಷ್ಟ್ರೀಯ ಜನತಾ ದಳ (ಆರ್ಜೆಡಿ) ಮುಖಂಡ ತೇಜಸ್ವಿ ಯಾದವ್ ಪಾಟ್ನಾದಿಂದ ದೆಹಲಿಗೆ ಒಂದೇ ವಿಮಾನದಲ್ಲಿ ಪ್ರಯಾಣಿಸಿದರು. ಇಬ್ಬರೂ ಪ್ರಮುಖ ನಾಯಕರು ಎನ್ಡಿಎ ಮತ್ತು ಇಂಡಿಯಾ ಬ್ಲಾಕ್ನ ಪ್ರಮುಖ ಸಭೆಯಲ್ಲಿ ಭಾಗವಹಿಸಲಿದ್ದು, ಅಲ್ಲಿ ಹೊಸ ಸರ್ಕಾರದಲ್ಲಿ ಪ್ರತಿಯೊಬ್ಬರ ಪಾತ್ರಕ್ಕಾಗಿ ಚರ್ಚೆಗಳು ಮತ್ತು ಮಾತುಕತೆಗಳನ್ನು ಮಾಡುವ ಸಾಧ್ಯತೆಯಿದೆ. ನಿತೀಶ್ …

Read More »