ಡಿ.ಕೆ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ ಕಾಂಗ್ರೆಸ್ ಭರ್ಜರಿ ಮುನ್ನಡೆ ಕಾಣುತ್ತಿದೆ. ಹೀಗೆ ‘ಕನಕಪುರ ಬಂಡೆ’ ಎಂಬ ಹವಾ ಇಟ್ಟಿರುವ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ರಾಜ್ಯ ಕಾಂಗ್ರೆಸ್ ನಾಯಕರಲ್ಲೇ ಅಸಮಾಧಾನ ಮೂಡಿದೆ ಎಂಬ ಆರೋಪ ಕೇಳಿಬರುತ್ತಿದೆ. ಇದೇ ಕಾರಣಕ್ಕೆ ಇದೀಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನ ಕೆಳಗೆ ಇಳಿಸಲು ಎಲ್ಲಾ ಸಿದ್ಧತೆ ಸಾಗಿದೆ ಎಂಬ ಆರೋಪ ಕೇಳಿಬಂದಿದೆ. ಕಾಂಗ್ರೆಸ್ ಪಕ್ಷ ಲೋಕಸಭೆ ಚುನಾವಣೆ 2024ರಲ್ಲಿ ಅಂದುಕೊಂಡ ರೀತಿ ಗೆಲುವು …
Read More »Daily Archives: ಜೂನ್ 6, 2024
ಸರ್ಕಾರ ರಚನೆ ಪ್ರಯತ್ನ ಕೈಬಿಟ್ಟ ಇಂಡಿಯಾ ಮೈತ್ರಿಕೂಟ
ನವದೆಹಲಿ: ಕೇಂದ್ರದಲ್ಲಿ ಇಂಡಿಯಾ ಮೈತ್ರಿಕೂಟ ಸರ್ಕಾರ ರಚನೆ ಪ್ರಯತ್ನ ಮಾಡುವುದಿಲ್ಲ. ಪ್ರತಿಪಕ್ಷವಾಗಿ ಕಾರ್ಯನಿರ್ವಹಿಸಲಿದೆ. ಬಿಜೆಪಿಯ ದ್ವೇಷದ ರಾಜಕಾರಣ ಮತ್ತು ಪ್ರಧಾನಿ ಮೋದಿ ಸರ್ವಾಧಿಕಾರದ ವಿರುದ್ಧ ಹೋರಾಟ ಮುಂದುವರೆಸಲಾಗುವುದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ದೆಹಲಿಯಲ್ಲಿ ಇಂಡಿಯಾ ಮೈತ್ರಿಕೂಟದ ನಾಯಕರ ಸಭೆಯ ನಂತರ ಅವರು ಮಾತನಾಡಿ, ಮುಂದಿನ ರಾಜಕೀಯ ತಂತ್ರಗಳ ಕುರಿತಾಗಿ ಸಭೆಯಲ್ಲಿ ಮೈತ್ರಿ ಪಕ್ಷಗಳ ನಾಯಕರು ಚರ್ಚೆ ನಡೆಸಿದ್ದಾರೆ. ಬಿಜೆಪಿ ಸರ್ವಾಧಿಕಾರದ ವಿರುದ್ಧ ನಮ್ಮ ಮೈತ್ರಿಕೂಟ ಸಂಘಟಿತ ಹೋರಾಟ …
Read More »ವಾಲ್ಮೀಕಿ ಅಭಿವೃದ್ದಿ ನಿಗಮ ಹಗರಣ: ಇಂದು ಬಿಜೆಪಿಯಿಂದ ‘ರಾಜಭವನ ಚಲೋ’ ಪ್ರತಿಭಟನೆ
ಬೆಂಗಳೂರು: ಸಚಿವ ಬಿ.ನಾಗೇಂದ್ರ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸುವಂತೆ ಒತ್ತಾಯಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಗುರುವಾರ ರಾಜಭವನ ಚಲೋ ನಡೆಸಲಾಗುವುದು. ಮಹರ್ಷಿ ವಾಲ್ಮೀಕಿ ಎಸ್ಟಿ ಅಭಿವೃದ್ಧಿ ನಿಗಮದಿಂದ ಹಲವಾರು ವೈಯಕ್ತಿಕ ಖಾತೆಗಳಿಗೆ ಅಕ್ರಮವಾಗಿ ಹಣವನ್ನು ವರ್ಗಾಯಿಸಿದ ಆರೋಪವನ್ನು ನಾಗೇಂದ್ರ ಎದುರಿಸುತ್ತಿದ್ದಾರೆ ನಾಗೇಂದ್ರ ಅವರನ್ನು ಸಂಪುಟದಿಂದ ವಜಾಗೊಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಜೆಪಿ ಕಳೆದ ವಾರ ಗಡುವು ನೀಡಿತ್ತು. ಬಿಜೆಪಿ ಪ್ರಧಾನ ಕಾರ್ಯದರ್ಶಿ …
Read More »ಜೂನ್ 8ರಂದು ಮೋದಿ ಪ್ರಮಾಣ ವಚನ ಸ್ವೀಕಾರ:ಆದರೆ 8 ನೇ ತಾರೀಖನ್ನೇ ಆರಿಸಿಕೊಂಡಿದ್ದೇಕೆ ?
ನವದೆಹಲಿ: ಬಿಜೆಪಿ ನಾಯಕ ನರೇಂದ್ರ ಮೋದಿ ಅವರು ಜೂನ್ 8 ರಂದು ಮೂರನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಪ್ರಧಾನಿ ಮೋದಿಯವರ ದೊಡ್ಡ ಕಾರ್ಯಕ್ರಮಗಳಲ್ಲಿ ಎಂಟು ಸಂಖ್ಯೆ ಕಾಣಿಸಿಕೊಂಡಿರುವುದು ಇದೇ ಮೊದಲಲ್ಲ. ಆದರೆ ಸಂಖ್ಯಾಶಾಸ್ತ್ರದಲ್ಲಿ ಎಂಟರ ಮಹತ್ವವೇನು? ಸಂಖ್ಯಾಶಾಸ್ತ್ರದಲ್ಲಿ 8 ಸಂಖ್ಯೆ ಶನಿ ಗ್ರಹವನ್ನು ಸೂಚಿಸುತ್ತದೆ ಮತ್ತು 8 ನ್ಯಾಯದ ಸಂಕೇತವಾಗಿದೆ ಎಂದು ನೋಯ್ಡಾ ಮೂಲದ ಸಂಖ್ಯಾಶಾಸ್ತ್ರಜ್ಞ ರಾಹುಲ್ ಸಿಂಗ್ ಹೇಳುತ್ತಾರೆ . …
Read More »ರಾಜ್ಯದ 13 ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ
ಬೆಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ 13 ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಮುನ್ಸೂಚನೆ ಸಿಕ್ಕಿದ್ದು, ಜೂ.7ರ ವರೆಗೆ ಈ ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ಹಳದಿ ಅಲರ್ಟ್ ಘೋಷಣೆ ಮಾಡಿದೆ. ದಕ್ಷಿಣ ಕನ್ನಡ, ಬೆಳಗಾವಿ, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಕಲಬುರಗಿ, ಯಾದಗಿರಿ, ರಾಯಚೂರು, ಶಿವಮೊಗ್ಗ, ಹಾಸನ, ಬಳ್ಳಾರಿ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳ ಕೆಲವು ಕಡೆ ಭಾರಿ ಮಳೆಯಾಗುವ ಸಾಧ್ಯತೆಗಳಿವೆ. ಜೂ.7ರ ವರೆಗೆ ಹಳದಿ ಅಲರ್ಟ್ ಘೋಷಿಸಲಾಗಿದೆ. ಬುಧವಾರ ಹಲವು ಜಿಲ್ಲೆಗಳಲ್ಲಿ ಮಳೆಯಾಗಿದೆ. …
Read More »ಅಭಿವೃದ್ಧಿ ಹೆಸರಲ್ಲಿ ಪರಿಸರ ನಾಶ ಸಲ್ಲ:
ಸವದತ್ತಿ: ಇಲ್ಲಿನ ನ್ಯಾಯಾಲಯದ ಆವರಣದಲ್ಲಿ ಅರಣ್ಯ ಇಲಾಖೆ, ಕಾನೂನು ಸೇವಾ ಸಮಿತಿ ಮತ್ತು ವಕೀಲರ ಸಂಘದಿಂದ ಬುಧವಾರ ನಡೆದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮಕ್ಕೆ ಪ್ರಧಾನ ಸೆಷನ್ಸ್ ನ್ಯಾಯಾಧೀಶೆ ಸುಮಲತಾ ಬೆಣ್ಣಿಕಲ್ಲ ಅವರು ಸಸಿಗೆ ನೀರುಣಿಸಿ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು, ‘ಮನುಷ್ಯನ ದುರಾಸೆಯಿಂದ ಪ್ರಾಣಿ-ಪಕ್ಷಿಗಳು ಅವಸಾನದತ್ತ ಸಾಗಿವೆ. ಪರಿಸರ ಸಮತೋಲನದಿಂದ ಉತ್ತಮ ಮಳೆ, ನಿಯಮಿತ ತಾಪಮಾನ ಸಾಧ್ಯವಿದೆ. ಅಭಿವೃದ್ಧಿ ಹೆಸರಲ್ಲಿ ಪರಿಸರ ಹಾಳು ಮಾಡಬಾರದು’ …
Read More »ಸಂಶೋಧನೆಗಳು ಸಮಾಜ ಎದುರಿಸುತ್ತಿರುವ ಸಮಸ್ಯೆಗಳ ನಿವಾರಣೆಗೆ ಪೂರಕವಾಗಿರಬೇಕು’ ಎಂದ ಕುಲಪತಿ ಪ್ರೊ.ಸಿ.ಎಂ.ತ್ಯಾಗರಾಜ
ಬೆಳಗಾವಿ: ‘ಸಂಶೋಧನೆಗಳು ಸಮಾಜ ಎದುರಿಸುತ್ತಿರುವ ಸಮಸ್ಯೆಗಳ ನಿವಾರಣೆಗೆ ಪೂರಕವಾಗಿರಬೇಕು’ ಎಂದು ಕುಲಪತಿ ಪ್ರೊ.ಸಿ.ಎಂ.ತ್ಯಾಗರಾಜ ಹೇಳಿದರು. ಇಲ್ಲಿನ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುವೆಂಪು ಸಭಾಭವನದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಸಂಶೋಧನಾ ವಿದ್ಯಾರ್ಥಿಗಳ ಜೊತೆ ಚರ್ಚೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ‘ಸರ್ಕಾರ ಮತ್ತು ವಿಶ್ವವಿದ್ಯಾಲಯದಿಂದ ಹಲವು ಸೌಕರ್ಯ, ಶಿಷ್ಯವೇತನ ನೀಡಲಾಗುತ್ತದೆ. ಜವಾಬ್ದಾರಿಯಿಂದ ಸಂಶೋಧನಾ ಅಧ್ಯಯನ ಮಾಡಬೇಕು. ವಿವಿಧ ವಿಶ್ವವಿದ್ಯಾಲಯಗಳ ಸಂಶೋಧನೆಗಳ ಕುರಿತು ಅಭ್ಯಸಿಸಬೇಕು’ ಎಂದರು. ಸಂಪನ್ಮೂಲ ವ್ಯಕ್ತಿ ಶ್ರೀನಿವಾಸ ಪೋತಪ್ರಗಾಧ, ‘ಸಂಶೋಧನಾ ವಿದ್ಯಾರ್ಥಿಗಳಲ್ಲಿ …
Read More »
Laxmi News 24×7