Breaking News

Daily Archives: ಜೂನ್ 15, 2024

ಮತ್ತೆ ಗರಿಗೆದರಿದ ಮೀನುಗಾರಿಕೆ

ಚಿಕ್ಕೋಡಿ: ಬೇಸಿಗೆಯಲ್ಲಿ ಹನಿ ನೀರಿಲ್ಲದೆ ಬರಡು ಭೂಮಿಯಂತಾಗಿದ್ದ ಕೃಷ್ಣಾ ನದಿಗೆ ಈಗ ಮತ್ತೆ ಜೀವ ಕಳೆ ಬಂದಿದೆ. ಬೇಸಿಗೆಯಲ್ಲಿ ಕೃಷ್ಣಾ ಹಾಗೂ ಅದರ ಉಪನದಿಗಳಲ್ಲಿ ನೀರು ಇಲ್ಲದ್ದರಿಂದ ಮೀನುಗಾರಿಕೆ ಸ್ಥಗಿತಗೊಂಡಿತ್ತು. ಮಹಾರಾಷ್ಟ್ರದಲ್ಲಿ ವರುಣ ಅಬ್ಬರಿಸುತ್ತಿದ್ದು, ಕಳೆದೊಂದು ವಾರದಿಂದ ಕೃಷ್ಣೆಗೆ ನೀರು ಹರಿದುಬರುತ್ತಿದೆ. ಹಾಗಾಗಿ ಯಡೂರ, ಕಲ್ಲೋಳ, ಮಾಂಜರಿ, ಅಂಕಲಿ ಸೇರಿದಂತೆ ಕೃಷ್ಣಾ ನದಿ ತಟದ ಗ್ರಾಮಗಳಲ್ಲಿ ಯುವಕರು ಗುರುವಾರ ಮೀನು ಹಿಡಿಯುವಲ್ಲಿ ನಿರತರಾಗಿರುವುದು ಕಂಡುಬಂತು. ‘ಕೃಷ್ಣಾ ನದಿಗೆ ನೀರು ಹರಿದು …

Read More »

ಮಾತು ಕಡಿಮೆ, ಕೆಲಸ ಹೆಚ್ಚು ಮಾಡುವೆ: ಜಗದೀಶ ಶೆಟ್ಟರ್‌

ಬೆಳಗಾವಿ ಸಂಸದ ಜಗದೀಶ ಶೆಟ್ಟರ್‌ ಅವರ ಪಾಲಿಗೆ ಈಗ ಹೊಸ ಶೆಕೆ ಆರಂಭವಾಗಿದೆ. ಬೆಳಗಾವಿ ಲೋಕಸಭಾ ಕ್ಷೇತ್ರದ ಜನರೂ ಹೊಸ ಹೆಜ್ಜೆ ಇಟ್ಟಿದ್ದಾರೆ. ನಾಲ್ಕು ದಶಕಗಳಿಂದ ರಾಜ್ಯ ರಾಜಕಾರಣದಲ್ಲಿದ್ದ ಅವರು, ಈಗ ರಾಷ್ಟ್ರ ರಾಜಕಾರಣಕ್ಕೆ ಧುಮುಕಿದ್ದಾರೆ. ಬೆಳಗಾವಿ ಕ್ಷೇತ್ರದ ಅಭಿವೃದ್ಧಿಗೆ ಕನಸು ಕಟ್ಟಿಕೊಂಡಿರುವ ಶೆಟ್ಟರ್‌ ‘ ನೀಡಿದ ಸಂದರ್ಶನದ ಆಯ್ದ ಭಾಗ ಇಲ್ಲಿದೆ. ಮೊದಲ ಪ‍್ರಯತ್ನದಲ್ಲೇ ಗೆದ್ದಿದ್ದೀರಿ. ಹೇಗೆನಿಸುತ್ತಿದೆ? ತುಂಬಾ ಖುಷಿಯಾಗಿದೆ. ಚುನಾವಣೆ ಪ್ರಚಾರಕ್ಕೆ ಕಡಿಮೆ ಸಮಯವಿತ್ತು. ಆದರೆ, ಪಕ್ಷದ …

Read More »

ಭುವಿಯಲ್ಲಿ ಮಳೆ ಎಳೆದ ಹಸಿರು ತೇರು…

ಕಿತ್ತೂರು: ಮೇ ಕೊನೆಯ ಮತ್ತು ಜೂನ್ ಮೊದಲ ವಾರದಲ್ಲಿ ಸುರಿದ ಉತ್ತಮ ಮಳೆಯಿಂದಾಗಿ ತಾಲ್ಲೂಕಿನಲ್ಲಿ ಶೇ 90ರಷ್ಟು ಜಮೀನಿನಲ್ಲಿ ರೈತರು ವಿವಿಧ ಬೆಳೆಗಳನ್ನು ನಾಟಿ ಮಾಡಿದ್ದಾರೆ. ಬಿತ್ತನೆ ಮಾಡಿದ ಬೀಜಗಳು ಮೊಳಕೆಯೊಡೆದಿವೆ. ಕಣ್ಣು ಹಾಯಿಸಿದಷ್ಟು ಹಚ್ಚ ಹಸಿರು ಪೈರು ಮನಸ್ಸಿಗೆ ಮುದ ನೀಡುವಂತಿದೆ. ‘ಪೈರಿನ ಗದ್ದೆಯಲ್ಲಿ ಬೆಳೆದಿರುವ ಕಸ ಕೀಳುವುದು, ನಾಟಿ ಮಾಡಿದ ಮತ್ತು ಕುಳೆ ಕಬ್ಬಿಗೆ ರಸಗೊಬ್ಬರ ಕಟ್ಟುವುದು, ಉಳಿದ ಭೂಮಿ ಬಿತ್ತನೆಗೆ ಸಿದ್ಧಪಡಿಸುವ ಕೃಷಿ ಚಟುವಟಿಕೆಗಳು ಬಿರುಸಿನಿಂದ ಸಾಗಿವೆ’ …

Read More »

ಉತ್ತಮ ಮಳೆಯಿಂದಾಗಿ ಹಚ್ಚ ಹಸಿರು ಪೈರು ಮನಸ್ಸಿಗೆ ಮುದ ನೀಡುವಂತಿದೆ.

ಕಿತ್ತೂರು: ಮೇ ಕೊನೆಯ ಮತ್ತು ಜೂನ್ ಮೊದಲ ವಾರದಲ್ಲಿ ಸುರಿದ ಉತ್ತಮ ಮಳೆಯಿಂದಾಗಿ ತಾಲ್ಲೂಕಿನಲ್ಲಿ ಶೇ 90ರಷ್ಟು ಜಮೀನಿನಲ್ಲಿ ರೈತರು ವಿವಿಧ ಬೆಳೆಗಳನ್ನು ನಾಟಿ ಮಾಡಿದ್ದಾರೆ. ಬಿತ್ತನೆ ಮಾಡಿದ ಬೀಜಗಳು ಮೊಳಕೆಯೊಡೆದಿವೆ. ಕಣ್ಣು ಹಾಯಿಸಿದಷ್ಟು ಹಚ್ಚ ಹಸಿರು ಪೈರು ಮನಸ್ಸಿಗೆ ಮುದ ನೀಡುವಂತಿದೆ. ‘ಪೈರಿನ ಗದ್ದೆಯಲ್ಲಿ ಬೆಳೆದಿರುವ ಕಸ ಕೀಳುವುದು, ನಾಟಿ ಮಾಡಿದ ಮತ್ತು ಕುಳೆ ಕಬ್ಬಿಗೆ ರಸಗೊಬ್ಬರ ಕಟ್ಟುವುದು, ಉಳಿದ ಭೂಮಿ ಬಿತ್ತನೆಗೆ ಸಿದ್ಧಪಡಿಸುವ ಕೃಷಿ ಚಟುವಟಿಕೆಗಳು ಬಿರುಸಿನಿಂದ ಸಾಗಿವೆ’ …

Read More »

ಬಿಹಾರ ಮುಖ್ಯಮಂತ್ರಿ ‘ನಿತೀಶ್ ಕುಮಾರ್’ ಆಸ್ಪತ್ರೆಗೆ ದಾಖಲು

ಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಶನಿವಾರ ಬೆಳಿಗ್ಗೆ ಪಾಟ್ನಾದ ಮೇದಾಂತ ಆಸ್ಪತ್ರೆಗೆ ಭೇಟಿ ನೀಡಿದರು. ಆದಾಗ್ಯೂ, ಅವರು ಆಸ್ಪತ್ರೆಯಲ್ಲಿ ತಪಾಸಣೆಯ ನಂತರ ಮರಳಿದರು. ಸುದ್ದಿ ಸಂಸ್ಥೆಯ ಪ್ರಕಾರ, ಅವರು ಮೂಳೆ ವಿಭಾಗದಲ್ಲಿ ಚಿಕಿತ್ಸೆಗೆ ಒಳಗಾಗಿದ್ದರು. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಶನಿವಾರ ಬೆಳಿಗ್ಗೆ 8: 33 ಕ್ಕೆ ಪಾಟ್ನಾದ ಮೇದಾಂತ ಆಸ್ಪತ್ರೆಗೆ ತಲುಪಿದರು. ಮಾಹಿತಿಯ ಪ್ರಕಾರ, ಅವರ ಕೈಯಲ್ಲಿ ನೋವು ಇತ್ತು, ಇದನ್ನು ಆಸ್ಪತ್ರೆಯ ಮೂಳೆ ವಿಭಾಗದಲ್ಲಿ …

Read More »

ನಟ ದರ್ಶನ್ & ಗ್ಯಾಂಗ್ ನಿಂದ 10 ಮೊಬೈಲ್ , 30 ಲಕ್ಷ ಹಣ ಜಪ್ತಿ..!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಂದ 10 ಮೊಬೈಲ್ , 30 ಲಕ್ಷ ಹಣ ಜಪ್ತಿ ಮಾಡಲಾಗಿದೆ ಎಂದು ಸರ್ಕಾರದ ಎಸ್ ಪಿಪಿ ಪ್ರಸನ್ನಕುಮಾರ್ ಕೋರ್ಟ್ ಗೆ ಮಾಹಿತಿ ನೀಡಿದರು. ದರ್ಶನ್ ಹಾಗೂ ಸಹಚರರನ್ನು ಇಂದು ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್ ಗೆ ಹಾಜರುಪಡಿಸಲಾಗಿದ್ದು, ಈ ವೇಳೆ ಸರ್ಕಾರದ ಎಸ್ ಪಿಪಿ ಪ್ರಸನ್ನಕುಮಾರ್ ಕೋರ್ಟ್ ಗೆ ಮಾಹಿತಿ ನೀಡಿದರು. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಂದ 10 …

Read More »

ದರ್ಶನ್ ಅವರನ್ನು ರಾಯಭಾರಿಯಾಗಿ ನೇಮಿಸಿದ್ದು ಸರ್ಕಾರದ ತಪ್ಪು: ಪ್ರಹ್ಲಾದ ಜೋಶಿ

ಹುಬ್ಬಳ್ಳಿ: ಸರ್ಕಾರ ರಾಯಭಾರಿಗಳನ್ನಾಗಿ ನೇಮಿಸುವ ಮೊದಲು ಅವರ ಪೂರ್ವಾಪರಗಳನ್ನು ಸರಿಯಾಗಿ ವಿಚಾರ ಮಾಡಬೇಕು. ಹಿಂದಿನ ಸರ್ಕಾರ ದರ್ಶನ ಅವರನ್ನು ರಾಯಭಾರಿ ಮಾಡಿದ್ದು ತಪ್ಪು. ದರ್ಶನ್ ಈ ಹಿಂದೆಯೂ ಹಲ್ಲೆ ಮತ್ತಿತರ ಪ್ರಕರಣಗಳನ್ನು ಎದುರಿಸಿದವರು. ಇಷ್ಟೆಲ್ಲಾ ಆದಮೇಲೂ ಅವರನ್ನು ರಾಯಭಾರಿ ಮಾಡಿದ್ದು ತಪ್ಪು ಎಂದು ಕೇಂದ್ರ ಆಹಾರ ಮತ್ತು ನಾಗರಿಕ ವ್ಯಾಜ್ಯಗಳ ಸಚಿವ ಪ್ರಹ್ಲಾದ ಜೋಶಿ ತಿಳಿಸಿದರು. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಭಿಮಾನಿಗಳು ಅತಿರೇಕದಿಂದ ವರ್ತಿಸುವುದನ್ನು ಚಿತ್ರರಂಗದ ನಾಯಕರು ನಿಯಂತ್ರಿಸಬೇಕು. …

Read More »

ಮೋದಿ ಸರ್ಕಾರ ಯಾವಾಗ ಬೇಕಾದರೂ ಪತನವಾಗಬಹುದು!: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ, ಜೂನ್. 15: ಇತ್ತೀಚೆಗಷ್ಟೆ ರಚನೆಯಾಗಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಸರ್ಕಾರ ಯಾವಾಗ ಬೇಕಾದರೂ ಪತನವಾಗಬಹುದು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶನಿವಾರ ಸ್ಫೋಟಕ ಭವಿಷ್ಯ ನುಡಿದಿದ್ದಾರೆ. “ಜನರು ಪ್ರಧಾನಿ ನರೇಂದ್ರ ಮೋದಿಯವರ ಅಲ್ಪಸಂಖ್ಯಾತ ಸರ್ಕಾರವನ್ನು ಆಯ್ಕೆ ಮಾಡಿದ್ದಾರೆ. ಅದು ಯಾವಾಗ ಬೇಕಾದರೂ ಬಹುಮತವಿಲ್ಲದೆ ಬೀಳಬಹುದು. ತಪ್ಪಾಗಿ ಎನ್‌ಡಿಎ ಸರ್ಕಾರ ರಚನೆಯಾಗಿದೆ” ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ ಎಂದು ಪಿಟಿಐ ವರದಿ …

Read More »

ರೇಣುಕಾಸ್ವಾಮಿ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರದ ಚೆಕ್ ವಿತರಿಸಿದ ‘ಫಿಲ್ಮ್ ಚೇಂಬರ್

ಬೆಂಗಳೂರು : ಹತ್ಯೆಯಾದ ರೇಣುಕಾಸ್ವಾಮಿ ಮನೆಗೆ ಇಂದು ಚಲನಚಿತ್ರ ವಾಣಿಜ್ಯ ಮಂಡಳಿ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದೆ ಹಾಗೂ 5 ಲಕ್ಷ ಪರಿಹಾರದ ಚೆಕ್ ನೀಡಿದೆ. ರೇಣುಕಾಸ್ವಾಮಿ ಮನೆಗೆ ಭೇಟಿ ನೀಡಿದ ಫಿಲ್ಮ್ ಚೇಂಬರ್ ಅಧ್ಯಕ್ಷ, ಸದಸ್ಯರು ಕುಟುಂಬದವರಿಗೆ ಧೈರ್ಯ ಹೇಳಿ ಶಾಶ್ವತ ಪರಿಹಾರ ಕೊಡಿಸುವ ಭರವಸೆಯನ್ನೂ ನೀಡಿದರು. ಈ ಬಗ್ಗೆ ಮಾತನಾಡಿದ ಫಿಲಂ ಚೇಂಬರ್ ಅಧ್ಯಕ್ಷ ಎನ್.ಎಂ. ಸುರೇಶ್ ಯಾರೇ ಮಾಡಿದರೂ ತಪ್ಪು ತಪ್ಪೇ. ಇಂತಹ ತಪ್ಪನ್ನು …

Read More »

ರೇಣುಕಾಸ್ವಾಮಿಗೆ ಎ5, ಎ13 ಆರೋಪಿಗಳಿಂದ ಎಲೆಕ್ಟ್ರಿಕ್ ಶಾಕ್: ನಟ ದರ್ಶನ್ ಪರ ವಕೀಲರ ಶಾಕಿಂಗ್ ಮಾಹಿತಿ

ಬೆಂಗಳೂರು: ರೇಣುಕಾಸ್ವಾಮಿಗೆ ಆರೋಪಿ ಎ.5, ಎ.13ಗೆ ಎಲೆಕ್ಟ್ರಿಕ್ ಶಾಕ್ ನೀಡಿದ್ದಾರೆ. ಅದನ್ನು ನ್ಯಾಯಾಲಯದ ಗಮನಕ್ಕೆ ತರಲಾಗಿದೆ ಎಂಬುದಾಗಿ ನಟ ದರ್ಶನ್ ಪರ ವಕೀಲರು ಶಾಕಿಂಗ್ ಮಾಹಿತಿಯನ್ನು ಕೋರ್ಟ್ ನಲ್ಲಿ ಬಿಚ್ಚಿಟ್ಟಿದ್ದಾರೆ. ಇಂದು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ಸಹಚರರ ಪೊಲೀಸ್ ಕಸ್ಟಡಿ ಅಂತ್ಯಗೊಂಡ ಹಿನ್ನಲೆಯಲ್ಲಿ ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯಕ್ಕೆ ಅನ್ನಪೂರ್ಣೇಶ್ವರಿ ನಗರ ಠಾಣೆಯ ಪೊಲೀಸರು ಹಾಜರುಪಡಿಸಿದ್ದರು. ಈ ಪ್ರಕರಣದ ವಿಚಾರಣೆ ಆರಂಭಗೊಂಡ ನಂತ್ರ, ನಟ …

Read More »