Breaking News

Daily Archives: ಜೂನ್ 15, 2024

LIC ಆರೋಗ್ಯ ವಿಮೆಗೆ : ಖಾಸಗಿ ಕಂಪೆನಿ ಖರೀದಿ?

ಹೊಸದಿಲ್ಲಿ: ಸರಕಾರಿ ಸ್ವಾಮ್ಯದ ಎಲ್‌ಐಸಿ ಆರೋಗ್ಯ ವಿಮಾ ಕ್ಷೇತ್ರ ಪ್ರವೇಶಿ ಸುವ ಅಂಶ ಬಹುತೇಕ ಖಚಿತವಾಗಿದೆ. ಅದಕ್ಕಾಗಿ ದೇಶದಲ್ಲಿ ಕಾರ್ಯ ನಿರ್ವ ಹಿಸುತ್ತಿರುವ ಆರೋಗ್ಯ ವಿಮಾ ಕ್ಷೇತ್ರದ ಲ್ಲಿನ 5 ಅಗ್ರ ಕಂಪೆನಿಗಳ ಪೈಕಿ ಒಂದನ್ನು ಖರೀದಿಸಿ ಹೊಸ ಕ್ಷೇತ್ರಕ್ಕೆ ಕಾಲಿಡುವ ಸಾಧ್ಯತೆ ಇದೆ ಎಂದು ಆಂಗ್ಲ ವಾಣಿಜ್ಯ ಪತ್ರಿಕೆಯೊಂದು ವರದಿ ಮಾಡಿದೆ. ಈ ಉದ್ದೇಶಕ್ಕಾಗಿ ಭಾರತೀಯ ವಿಮಾ ನಿಯಂತ್ರಣ ಅಭಿವೃದ್ಧಿ ಪ್ರಾಧಿಕಾರ (ಐಆರ್‌ಡಿಎಐ)ಕ್ಕೆ ತಾನು ಜಾರಿಗೊಳಿಸ ಲಿರುವ ಉದ್ದೇಶಿತ ಆರೋಗ್ಯ …

Read More »

ಇಂಜಿನಿಯರಿಂಗ್ ಶುಲ್ಕ ಶೇ. 10ರಷ್ಟು ಹೆಚ್ಚಳ

ಬೆಂಗಳೂರು: ರಾಜ್ಯದ ಎಲ್ಲಾ ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಸರ್ಕಾರಿ ಕೋಟಾ ಸೀಟುಗಳು ಸೇರಿದಂತೆ ಈ ವರ್ಷದ ಇಂಜಿನಿಯರಿಂಗ್ ಕೋರ್ಸ್ ಗಳ ಶುಲ್ಕವನ್ನು ಶೇ. 10ರಷ್ಟು ಏರಿಕೆ ಮಾಡಲಾಗಿದೆ. ರಾಜ್ಯದ ಅನುದಾನ ರಹಿತ ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿನ ಸರ್ಕಾರಿ ಕೋಟಾ, ಕಾಮೆಡ್ -ಕೆ ಕೋಟಾ ಇಂಜಿನಿಯರಿಂಗ್, ಆರ್ಕಿಟೆಕ್ಚರ್ ಸೀಟುಗಳ ಶುಲ್ಕವನ್ನು 2024- 25 ನೇ ಸಾಲಿನಲ್ಲಿ ಶೇಕಡ 10ರಷ್ಟು ಹೆಚ್ಚಳ ಮಾಡಲು ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿದೆ. ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಸರ್ಕಾರಿ ಕೋಟಾದ …

Read More »

ಯಡಿಯೂರಪ್ಪ ವಿರುದ್ಧದ ಬಂಧನ ವಾರಂಟ್ ನಲ್ಲಿ ರಾಜ್ಯ ಸರ್ಕಾರದ ಪಾತ್ರವಿಲ್ಲ: ಎಂ.ಬಿ.ಪಾಟೀಲ್

ಬೆಂಗಳೂರು: ಪೋಕ್ಸೊ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಹೊರಡಿಸಲಾದ ಬಂಧನ ವಾರಂಟ್ನಲ್ಲಿ ಕಾಂಗ್ರೆಸ್ ಸರ್ಕಾರದ ಪಾತ್ರವಿಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಶುಕ್ರವಾರ ಹೇಳಿದ್ದಾರೆ. ಪೋಕ್ಸೊ ಕಾಯ್ದೆ ತುಂಬಾ ಗಂಭೀರವಾಗಿದೆ, ಮತ್ತು ಚಿತ್ರದುರ್ಗ ಶ್ರೀಗಳ ವಿರುದ್ಧದ ಪ್ರಕರಣವನ್ನು ನೀವು ನೋಡಿದ್ದೀರಿ. ಬಂಧನ ವಾರಂಟ್ ಹೊರಡಿಸಿದ್ದು ನ್ಯಾಯಾಲಯವೇ ಹೊರತು ನಾವಲ್ಲ. ಕಾನೂನು ತನ್ನದೇ ಆದ ಕ್ರಮವನ್ನು ತೆಗೆದುಕೊಳ್ಳುತ್ತದೆ” ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು. ಪ್ರಶ್ನೆಯೊಂದಕ್ಕೆ ಉತ್ತರಿಸಿದ …

Read More »

ಜು.22ರಂದು ಬಜೆಟ್‌ ಮಂಡನೆ

ಹೊಸದಿಲ್ಲಿ: ಪ್ರಧಾನಿ ಮೋದಿ ನೇತೃತ್ವದ 3ನೇ ಅವ ಧಿಯ ಸರಕಾರ‌ದ ಪೂರ್ಣ ಪ್ರಮಾಣದ ಬಜೆಟ್‌ ಜು.22ರಂದು ಮಂಡನೆಯಾಗುವ ಸಾಧ್ಯ ತೆಗಳು ಇವೆ. ಕೃಷಿ, ಉದ್ಯೋಗ ಸೃಷ್ಟಿ, ಕೇಂದ್ರ ಸರಕಾರ‌ಕ್ಕೆ ಹೆಚ್ಚುವರಿ ಆದಾಯ ಸೇರಿದಂತೆ ಪ್ರಮುಖ ಅಂಶಗಳು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಮುಂದೆ ಇದೆ. ಈ ಹಿನ್ನೆಲೆಯಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಜೂ.17ರಿಂದ ಕೇಂದ್ರ ಸರಕಾರ‌ದ ವಿವಿಧ ಸಚಿವಾಲಯಗಳ ಜತೆಗೆ ಸಮಾಲೋಚನೆ ಆರಂಭಿಸುವ ಸಾಧ್ಯತೆ ಇದೆ. ಇದಲ್ಲದೆ ವಿತ್ತ …

Read More »

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 5 ಸಾವಿರ ಕೋಟಿ ರೂ; C.M.

ಬೆಂಗಳೂರು: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 5 ಸಾವಿರ ಕೋಟಿ ರೂ.ಗಳ ಕ್ರಿಯಾ ಯೋಜನೆ ರೂಪಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜುಲೈ 15ರೊಳಗೆ ಕ್ರಿಯಾ ಯೋಜನೆ ರೂಪಿಸಿದ್ದಾರೆ. ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್ಡಿಬಿ) ಸಭೆಯಲ್ಲಿ ಈ ನಿರ್ದೇಶನ ನೀಡಲಾಗಿದೆ.   ಕಲ್ಯಾಣ ಕರ್ನಾಟಕ ಪ್ರದೇಶಗಳಾದ ಬೀದರ್, ಬಳ್ಳಾರಿ, ವಿಜಯನಗರ, ಕಲಬುರಗಿ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಿಗೆ ಸಂವಿಧಾನದ 371 (ಜೆ) ವಿಧಿಯಡಿ ವಿಶೇಷ …

Read More »

ಕೋಳಿಯಂತೆ ರೇಣುಕಾಸ್ವಾಮಿಯನ್ನು ಎಸೆದ ದರ್ಶನ್‌

ಬೆಂಗಳೂರು: ಕೋಳಿಯನ್ನು ಎತ್ತಿ ಎಸೆಯುವಂತೆ ದರ್ಶನ್‌ ರೇಣುಕಾ ಸ್ವಾಮಿಯನ್ನು ಎಸೆದಿದ್ದಾನೆಂದು ಪೊಲೀಸ್‌ ಅಧಿಕಾರಿ ಹಾಗೂ ವ್ಯಕ್ತಿಯೊಬ್ಬರು ನಡೆಸಿದ್ದಾರೆ ಎನ್ನಲಾದ ಮೊಬೈಲ್‌ ಸಂಭಾಷಣೆ ಭಾರೀ ವೈರಲ್‌ ಆಗಿದೆ. ರೇಣುಕಾ ಸ್ವಾಮಿಯನ್ನು ಸಿಕ್ಕಾಪಟ್ಟೆ ಚಿತ್ರಹಿಂಸೆ ಕೊಟ್ಟು ಭೀಕರವಾಗಿ ಕೊಲೆ ಮಾಡಲಾಗಿದೆ ಎಂಬ ಕೃತ್ಯದ ಬಗೆಗಿನ ಆಘಾತಕಾರಿ ಅಂಶಗಳನ್ನು ಪೊಲೀಸ್‌ ಅಧಿಕಾರಿ ಎನ್ನಲಾದ ವ್ಯಕ್ತಿ ತನ್ನ ಸ್ನೇಹಿತನಿಗೆ ವಿವರಿಸಿದ್ದಾನೆ. ಜತೆಗೆ ದರ್ಶನ್‌ ಮತ್ತವರ ತಂಡ ರೇಣುಕಾ ಸ್ವಾಮಿಯನ್ನು ಅದೆಷ್ಟು ಕ್ರೂರವಾಗಿ ಕೊಂದಿದ್ದಾರೆ ಎಂಬುದನ್ನೂ ಬಿಚ್ಚಿಟ್ಟಿದ್ದಾರೆ. ಮೊಬೈಲ್‌ …

Read More »

ವಿವಿಧ ಯೋಜನೆಯಡಿ ಶೂನ್ಯ ಬಡ್ಡಿ ದರ ಸಾಲ ಸೌಲಭ್ಯ

ಬೆಂಗಳೂರು: ರೈತರು, ಸದಸ್ಯ ನೇಕಾರರಿಗೆ ವಿವಿಧ ಯೋಜನೆಗಳಡಿ ಶೂನ್ಯ ಬಡ್ಡಿ ದರದಲ್ಲಿ ಆನೇಕಲ್ ತಾಲೂಕಿನ ಬಿಡಿಸಿಸಿ ಬ್ಯಾಂಕಿನಲ್ಲಿ ಸಾಲ ಸೌಲಭ್ಯ ನೀಡಲಾಗುವುದು. ಗೃಹ ನಿರ್ಮಾಣ, ವಾಹನ ಖರೀದಿಗೂ ಸಾಲ ನೀಡಲಿದ್ದು, ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ನಿರ್ದೇಶಕ ವಿ.ಹೆಚ್. ಸೋಮಶೇಖರ ರೆಡ್ಡಿ ತಿಳಿಸಿದ್ದಾರೆ. ಮಾಸಿಕ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೂನ್ಯ ಬಡ್ಡಿ ದರದಲ್ಲಿ ವಾರ್ಷಿಕ ಬೆಳೆಗಳಿಗೆ 5 ಲಕ್ಷ ರೂ., ಹೈನುಗಾರಿಕೆ ನಿರ್ವಹಣೆಗೆ 2 ಲಕ್ಷ ರೂ., ಮೀನುಗಾರಿಕೆಗೆ 3 …

Read More »

ಈ ವರ್ಷ 2 ಲಕ್ಷ ಸಸಿಗಳನ್ನು ನೆಡುವ ‘ಬಿಬಿಎಂಪಿ’ ಗುರಿ

ಬೆಂಗಳೂರು: ಈ ವರ್ಷ ನಗರದಲ್ಲಿ 2 ಲಕ್ಷ ಸಸಿಗಳನ್ನು ನೆಡಲು ಬಿಬಿಎಂಪಿ ಬಜೆಟ್ ನಲ್ಲಿ ಅವಕಾಶ ಕಲ್ಪಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ಕಬ್ಬನ್ ಪಾರ್ಕ್ ನಲ್ಲಿ ಬಿಬಿಎಂಪಿ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗುರಿ ಸಾಧನೆಗೆ ಶಾಲಾ ವಿದ್ಯಾರ್ಥಿಗಳ ಸಹಕಾರ ಪಡೆಯಲಾಗುವುದು ಎಂದರು. ಬೆಂಗಳೂರು ಅಭಿವೃದ್ಧಿ ಸಚಿವರೂ ಆಗಿರುವ ಶಿವಕುಮಾರ್, ಬಿಬಿಎಂಪಿ ಹಲವಾರು ಪರಿಸರ ಸ್ನೇಹಿ ಯೋಜನೆಗಳಿಗಾಗಿ 410 ಕೋಟಿ ರೂ.ಗಳನ್ನು ಖರ್ಚು ಮಾಡುತ್ತಿದೆ. …

Read More »

ಎಚ್ಚರಿಕೆ ಕೊಟ್ಟಿದ್ದೆ ಅಷ್ಟೇ, ಕೊಲೆ ಮಾಡಿಲ್ಲ: ದರ್ಶನ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಖಾಕಿ ಖೆಡ್ಡಕ್ಕೆ ಬಿದ್ದಿರುವ ನಟ ದರ್ಶನ್‌ ಮತ್ತು ತಂಡವು ಕೃತ್ಯ ನಡೆದ ಘಟನೆಯನ್ನು ಎಳೆಎಳೆಯಾಗಿ ಪೊಲೀಸರ ಮುಂದೆ ಬಿಡಿಸಿಟ್ಟಿದೆ. ಕೊಲೆಯಾಗುತ್ತಾರೆ ಎಂಬ ಕಲ್ಪನೆ ಇರಲಿಲ್ಲ ಎಂದು ಪವಿತ್ರಾ ಹೇಳಿದರೆ, ರೇಣುಕಾ ಸ್ವಾಮಿ ಕೊಲೆಗೂ ನನಗೂ ಸಂಬಂಧವಿಲ್ಲ ಎಂದು ದರ್ಶನ್‌ ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ. ಆದರೆ ತನಿಖಾಧಿಕಾರಿಗಳು ಹೇಳಿಕೆ ಬಗ್ಗೆ ಅಧಿಕೃತವಾಗಿ ಮಾಹಿತಿ ನೀಡಲು ನಿರಾಕರಿಸಿದ್ದಾರೆ. ಅನ್ನಪೂರ್ಣೇಶ್ವರಿ ನಗರ ಪೊಲೀಸ್‌ ಠಾಣೆಯಲ್ಲಿ ರೇಣುಕಾ ಸ್ವಾಮಿ …

Read More »

ದೇವೇಗೌಡರ ಬಳಿಕ, ಈಗ ಬಿಎಸ್‌ವೈ ಕುಟುಂಬ ನಾಶಕ್ಕೆ ಕೈ ಯತ್ನ: ಎಚ್‌ಡಿಕೆ

ಬೆಂಗಳೂರು: ದೇವೇಗೌಡರ ಕುಟುಂಬವನ್ನು ಮುಗಿಸಿ ಆಯಿತು. ಇನ್ನು 82ರ ಹರೆಯದ, ನಾಲ್ಕು ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪ ಅವರ ಕುಟುಂಬವನ್ನು ಮುಗಿಸಲು ಕುತಂತ್ರ ಮಾಡಲಾಗುತ್ತಿದೆ. ಆದರೆ ಈ ಯತ್ನ ಫ‌ಲಿಸದೆ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ವನಾಶವಾಗಲಿದೆ ಎಂದು ಕೇಂದ್ರದ ಬೃಹತ್‌ ಉದ್ದಿಮೆ ಮತ್ತು ಉಕ್ಕು ಖಾತೆಯ ಸಚಿವ ಎಚ್‌.ಡಿ. ಕುಮಾರಸ್ವಾಮಿ ಕಟುವಾಗಿ ಟೀಕಿಸಿದ್ದಾರೆ. ಕೇಂದ್ರ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಬೆಂಗಳೂರಿಗೆ ಆಗಮಿಸಿದ ಅವರು ಜೆಡಿಎಸ್‌ ಕಚೇರಿಯಲ್ಲಿ ಆಯೋಜಿಸಿದ್ದ ಅಭಿನಂದನ …

Read More »