Breaking News

Daily Archives: ಜೂನ್ 16, 2024

ವಿದ್ಯುತ್ ತಂತಿ ತಗುಲಿ ರೈತ, ಎತ್ತು ಸಾವು

ಕೊಪ್ಪಳ: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ತಂತಿ ತಗುಲಿ ರೈತ ಹಾಗೂ ಎತ್ತು ಮೃತಪಟ್ಟ ಘಟನೆ ತಾವರಗೇರಾ ಸಮೀಪದ ಚಿಕ್ಕತೆಮ್ಮಿನಾಳ ಗ್ರಾಮದಲ್ಲಿ ನಡೆದಿದೆ. ಬಸವರಾಜ(38) ಮೃತಪಟ್ಟ ರೈತ ಎಂದು ಹೇಳಲಾಗಿದೆ. ಜಮೀನಿನಲ್ಲಿ ಉಳುಮೆ ಮಾಡುವ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿದ್ದು, ವಿದ್ಯುತ್ ಪ್ರವಹಿಸಿ ಎತ್ತು ಹಾಗೂ ರೈತ ಬಸವರಾಜ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಪೊಲೀಸರು ಹಾಗೂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಾಸಕ ದೊಡ್ಡನಗೌಡ ಪಾಟೀಲ ಕೂಡ ಭೇಟಿ ನೀಡಿ …

Read More »

ST ಗೆ ಕೋಳಿ ಬೆಸ್ತ ಸಮಾಜ ಸೇರಿಸಲು ಸಂಸತ್ತಿನಲ್ಲಿ ಧ್ವನಿ ಎತ್ತುತ್ತೇನೆ: ಸಂಸದೆ ಪ್ರಿಯಂಕಾ

ಬೆಳಗಾವಿ: ಕೋಳಿ ಬೆಸ್ತ ಸಮಾಜವನ್ನು ಎಸ್ ಟಿ ವರ್ಗಕ್ಕೆ ಸೇರಿಸಲು ಸಂಸತ್ತಿನಲ್ಲಿ ಧ್ವನಿ ಎತ್ತುತ್ತೇನೆ ಎಂದು ಚಿಕ್ಕೋಡಿ ಸಂಸದೆ ಪ್ರಿಯಂಕಾ ಜಾರಕಿಹೊಳಿ ಅವರು ಹೇಳಿದ್ದಾರೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿಯಲ್ಲಿ ಕೋಳಿ ಬೆಸ್ತ ಸಮಾಜ ಜಿಲ್ಲಾ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಮಹಿಳಾ ಸಮಾವೇಶದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು. ‘ತಂದೆ ಹಾಗೂ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಕೂಡ ಕೋಳಿ- ಬೆಸ್ತ ಸಮಾಜವನ್ನು ಎಸ್ಟಿ ಸಮಾಜಕ್ಕೆ ಸೇರಿಸಬೇಕೆಂಬ ನಿಲುವು ಹೊಂದಿದ್ದಾರೆ.ಅದರಂತೆ ನಾನು ಕೂಡ ಸದಾ …

Read More »

ರೇಣುಕಾಸ್ವಾಮಿ ಕುಟುಂಬಸ್ಥರಿಗೆ ನ್ಯಾಯ ಸಿಗಲಿ; ನಟ ಕಿಚ್ಚ ಸುದೀಪ್

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್​ ಆಗಿದ್ದಾರೆ.ಈಗಾಗಲೇ ನಟ ದರ್ಶನ್ ಸೇರಿ ಒಟ್ಟು 13 ಮಂದಿಯನ್ನು ಪೊಲೀಸ್​ ಅಧಿಕಾರಿಗಳು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಕಿಚ್ಚ ಸುದೀಪ್​​ ಅವರು ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.   ಬಾಳಿ ಬದುಕಬೇಕಿದ್ದ ರೇಣುಕಾಸ್ವಾಮಿ ಕೊಲೆಯಾಗಿದ್ದಾರೆ. ಈ ಪ್ರಕರಣವನ್ನು ನಾನು ಒಬ್ಬ ಕಾಮನ್​ ಮ್ಯಾನ್​​ ರೀತಿ ನೋಡುತ್ತಿದ್ದೇನೆ. ಅವರ ಪರ ಇವರ ಪರ ಮಾತನಾಡುವುದು ತಪ್ಪಾಗುತ್ತದೆ. ರೇಣುಕಾಸ್ವಾಮಿ ಕುಟುಂಬಕ್ಕೆ ಹಾಗೂ ಹುಟ್ಟಬೇಕಾಗಿರುವ ಅವರ ಮಗುವಿಗೆ …

Read More »

ಬಕ್ರಿದ್ ಹಬ್ಬ ಹಿನ್ನಲೆ ಇಂದು ಮಧ್ಯರಾತ್ರಿಯಿಂದ ಜೂ. 18 ರ ಬೆಳಗ್ಗೆ 6 ಗಂಟೆವರೆಗೆ ಮದ್ಯ ನಿಷೇಧ

ಧಾರವಾಡ: ಧಾರವಾಡ ಜಿಲ್ಲೆಯಾದ್ಯಂತ ಬಕ್ರೀದ್ ಹಬ್ಬವನ್ನು ಶಾಂತಿ, ಸಹೋದರತ್ವದಿಂದ ಆಚರಿಸುವ ಸಂಬಂಧ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಜೂನ್ 16ರ ಮಧ್ಯರಾತ್ರಿ 11:59 ಗಂಟೆಯಿಂದ ಜೂನ್ 18, 2024 ರ ಬೆಳಗಿನ 6 ಗಂಟೆಯವರೆಗೆ ಧಾರವಾಡ ಜಿಲ್ಲೆಯಾದ್ಯಂತ(ಹುಬ್ಬಳ್ಳಿ-ಧಾರವಾಡ ಮಹಾನಗರ ವ್ಯಾಪ್ತಿ ಹೊರತು ಪಡಿಸಿ) ಮದ್ಯಪಾನ, ಮದ್ಯ ಮಾರಾಟ, ಮದ್ಯ ಸಾಗಾಣಿಕೆಯನ್ನು ನಿಷೇಧಿಸಿ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಆದೇಶಿಸಿದ್ದಾರೆ. ಭಾರತೀಯ ತಯಾರಿಕೆ ಮದ್ಯದ ಅಂಗಡಿಗಳು, ಬೀರ್ ಬಾರ್ ಗಳು, ಕ್ಲಬ್ …

Read More »

ನೀಟ್ ಪರೀಕ್ಷಾ ಅಕ್ರಮ ಎಸಗಿದವರನ್ನು ಸುಮ್ಮನೆ ಬಿಡೋದಿಲ್ಲ: ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಭರವಸೆ

ನವದೆಹಲಿ, ಜೂನ್ 16: NEET ವಿಷಯದಲ್ಲಿ ಯಾವುದೇ ರೀತಿಯ ಅಕ್ರಮ ಎಸಗುವವರನ್ನು ಬಿಡುವುದಿಲ್ಲ ಎಂದು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ (Dharmendra Pradhan) ವಾಗ್ದಾನ ನೀಡಿದ್ದಾರೆ.  ಭಾನುವಾರ ಪ್ರತಿಭಟನಾನಿರತ ವಿದ್ಯಾರ್ಥಿಗಳು ಮತ್ತು ಪೋಷಕರನ್ನು ಭೇಟಿ ಮಾಡಿದ ನಂತರ ಅವರು, ತಮ್ಮ ಸರ್ಕಾರ ಯಾವುದೇ ಅಕ್ರಮಗಳನ್ನು ಸಹಿಸುವುದಿಲ್ಲ ಎಂದು ಹೇಳಿದ್ದಾರೆ. ಸುಪ್ರೀಂ ಕೋರ್ಟ್‌ನ ಆದೇಶದಂತೆ ಅಭ್ಯರ್ಥಿಗಳ ಹಿತಾಸಕ್ತಿ ಕಾಪಾಡಲು ಕೇಂದ್ರ ಸರ್ಕಾರ ಬದ್ಧವಾಗಿದೆ. ಯಾರ ವೃತ್ತಿಯ ಜೊತೆಯೂ ಆಟವಾಡುವುದಿಲ್ಲ ಎಂದು ಅಭ್ಯರ್ಥಿಗಳಿಗೆ ಭರವಸೆ …

Read More »

ಗುಟ್ಕಾ ತಂದು ಕೊಡಲಿಲ್ಲ ಎಂದು ಏಳು ವರ್ಷದ ಬಾಲಕಿ ಕೊಲೆ

ಎರಡು ತಿಂಗಳ ನಂತರ ಏಳು ವರ್ಷದ ಬಾಲಕಿ ಕೊಲೆ (Murder) ಪ್ರಕರಣವನ್ನು ಕೊಪ್ಪಳ ಪೊಲೀಸರು (Koppal Police) ಭೇದಿಸಿದ ಘಟನೆ ನಡೆದಿದೆ. ಹೌದು, ಗುಟ್ಕಾ ತಂದು ಕೊಡಲಿಲ್ಲ ಎಂದು ಬಾಲಕಿಯನ್ನ ಹತ್ಯೆ ಮಾಡಿದ್ದ. ಇದೀಗ ಆರೋಪಿ ಸಿದ್ದಲಿಂಗಯ್ಯ (51) ಎಂಬಾತನನ್ನು ಪೊಲೀಸರು ಅರೆಸ್ಟ್​ ಮಾಡಿದ್ದಾರೆ. ಕೊಪ್ಪಳ, ಜೂ.16: ಎರಡು ತಿಂಗಳ ನಂತರ ಏಳು ವರ್ಷದ ಬಾಲಕಿ ಕೊಲೆ (Murder) ಪ್ರಕರಣವನ್ನು ಕೊಪ್ಪಳ ಪೊಲೀಸರು (Koppal Police) ಭೇದಿಸಿದ ಘಟನೆ ನಡೆದಿದೆ. ಹೌದು, ಗುಟ್ಕಾ ತಂದು …

Read More »

ಸೆಸ್ ಹಂಚಿಕೆ’ಯಲ್ಲಿ ಕೇಂದ್ರದಿಂದ ಕರ್ನಾಟಕಕ್ಕೆ ಅನ್ಯಾಯ: ಸಚಿವ ಎಂ.ಬಿ ಪಾಟೀಲ್

ಬೆಂಗಳೂರು: ಕೇಂದ್ರ ಸರಕಾರವು ವರ್ಷಕ್ಕೆ 2,50,000 ಕೋಟಿ ರೂ.ಗಳಷ್ಟು ಅಗಾಧ ಸೆಸ್ ಸಂಗ್ರಹಿಸುತ್ತಿದ್ದರೂ ಅದರ ಹಂಚಿಕೆಯಲ್ಲಿ ಕರ್ನಾಟಕದಂತಹ ಪುರೋಗಾಮಿ ರಾಜ್ಯಗಳಿಗೆ ಅನ್ಯಾಯ ಮಾಡುತ್ತಿದೆ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ ಆಕ್ಷೇಪಿಸಿದ್ದಾರೆ.   ಈ ಬಗ್ಗೆ ಅವರು ಶನಿವಾರ ‘ಎಕ್ಸ್’ ವೇದಿಕೆಯಲ್ಲಿ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸೆಸ್/ತೆರಿಗೆ ಪಾವತಿಯಲ್ಲಿ ಕರ್ನಾಟಕ, ತಮಿಳುನಾಡು, ತೆಲಂಗಾಣದಂತಹ ರಾಜ್ಯಗಳು ಮುಂಚೂಣಿಯಲ್ಲಿವೆ. ಆದರೆ, ಇದಕ್ಕೆ ಪ್ರತಿಯಾಗಿ ಕೇಂದ್ರ ಸರಕಾರದಿಂದ ಈ …

Read More »

ಸಲ್ಮಾನ್ ಖಾನ್‌ಗೆ ಮತ್ತೆ ಕೊಲೆ ಬೆದರಿಕೆ

ಮುಂಬೈ: ಏಪ್ರಿಲ್‌ನಲ್ಲಿ ನಟ ಸಲ್ಮಾನ್ ಖಾನ್ ಅವರ ನಿವಾಸದ ಹೊರಗೆ ಗುಂಡು ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಹೊಸ ಪ್ರಕರಣವನ್ನು ದಾಖಲಿಸಿದ್ದಾರೆ ಮತ್ತು ಕ್ರಿಮಿನಲ್ ಬೆದರಿಕೆ ಆರೋಪದ ಮೇಲೆ ರಾಜಸ್ಥಾನದ ವ್ಯಕ್ತಿಯನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ. ಆರೋಪಿಯನ್ನು ರಾಜಸ್ಥಾನದ ಬುಂದಿ ಮೂಲದ ಬನ್ವಾರಿಲಾಲ್ ಲಾತುರ್‌ಲಾಲ್ ಗುಜಾರ್ (25) ಎಂದು ಗುರುತಿಸಲಾಗಿದೆ ಎಂದು ಅಪರಾಧ ವಿಭಾಗದ ಅಧಿಕಾರಿ ತಿಳಿಸಿದ್ದಾರೆ. ಗುರ್ಜರ್ ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ವಿಡಿಯೋವೊಂದನ್ನು ಅಪ್‌ಲೋಡ್ ಮಾಡಿದ್ದು, ಅದರಲ್ಲಿ ‘ಲಾರೆನ್ಸ್ …

Read More »

ಚುನಾವಣೆಗೂ ತೈಲ ಬೆಲೆ ಏರಿಕೆಗೂ ಯಾವುದೇ ಸಂಬಂಧವಿಲ್ಲ; ಸಿಎಂ

ವಿಜಯಪುರ: ಎಂಪಿ ಚುನಾವಣೆ ಸೋಲಿನ ಸೇಡಿಗೆ ತೈಲ ದರ ಏರಿಕೆ ಎಂಬ ವಿಪಕ್ಷ ನಾಯಕ ಆರ್.ಅಶೋಕ್ ಆರೋಪಕ್ಕೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ಚುನಾವಣೆಗೂ ತೈಲ ಬೆಲೆ ಏರಿಕೆಗೂ ಯಾವುದೇ ಸಂಬಂಧವಿಲ್ಲ ಎಂದು ತಿಳಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕುಮಾರಸ್ವಾಮಿ ಇದ್ದಾಗ ಶೇ.35ರಷ್ಟಿತ್ತು. ಈಗ ರಾಜ್ಯದಲ್ಲಿ ತೈಲ ದರ 102.86 ಪೈಸೆ ಆಗಿದೆ. ತಮಿಳುನಾಡು ಸಮ ಆಗಿದೆ. ಆಂಧ್ರಪ್ರದೇಶದಲ್ಲಿ 109 ರೂ ಇದೆ. ಹೈದರಾಬಾದ್ ನಲ್ಲಿಯೂ ಹೆಚ್ಚಳವಾಗಿದೆ. ಮಹಾರಾಷ್ಟ್ರದಲ್ಲಿ 104 …

Read More »

₹2.30 ಲಕ್ಷಕ್ಕೆ ಎರಡು ಮೇಕೆ ಮಾರಾಟ

ರಾಯಬಾಗ(ಬೆಳಗಾವಿ ಜಿಲ್ಲೆ): ಬಕ್ರೀದ್‌ ಹಿನ್ನೆಲೆಯಲ್ಲಿ ತಾಲ್ಲೂಕಿನ ಸುಟ್ಟಟ್ಟಿ ಗ್ರಾಮದಲ್ಲಿ ರೈತ ಮಹೇಶ ಖೋತ ಅವರಿಗೆ ಸೇರಿದ ಎರಡು ಮೇಕೆಗಳು ಒಟ್ಟು ₹2.30 ಲಕ್ಷಕ್ಕೆ ಮಾರಾಟವಾಗಿವೆ. ‘ಸಾಮಾನ್ಯವಾಗಿ ಮೇಕೆ ದರ ₹10 ಸಾವಿರ ದಿಂದ ₹25 ಸಾವಿರ ಇರುತ್ತದೆ. ಆದರೆ ನನ್ನ ಎರಡೂ ಮೇಕೆಗಳು ಕ್ರಮವಾಗಿ ₹1.20 ಲಕ್ಷ ಮತ್ತು ₹1.10 ಲಕ್ಷಕ್ಕೆ ಮಾರಾಟವಾಗಿವೆ. ಮಹಾರಾಷ್ಟ್ರದ ಕೊಲ್ಹಾಪುರ ಮತ್ತು ಚಿಕ್ಕೋಡಿ ತಾಲ್ಲೂಕಿನ ಯಕ್ಸಂಬಾದ ಗ್ರಾಹಕರು ಖರೀದಿಸಿದರು’ ಎಂದು ಮಹೇಶ ಖೋತ ತಿಳಿಸಿದರು. ‘ನಮ್ಮದು …

Read More »