ಬೆಂಗಳೂರು : ಕೋವಿಡ್ ವೇಳೆ ರಾಜ್ಯಾದ್ಯಂತ 3,800 ಸರ್ಕಾರಿ ಬಸ್ ರೂಟ್ಗಳನ್ನು ಸ್ಥಗಿತಗೊಳಿಸಲಾಗಿತ್ತು. ಈ ಪೈಕಿ ಬಹುತೇಕ ಕಡೆಗೆ ರೂಟ್ ಬಸ್ಗಳ ಓಡಾಟ ಆರಂಭವಾಗದೆ ಜನರು ಪರದಾಡುವಂತಾಗಿತ್ತು. ಈಗ ಸಾರಿಗೆ ಇಲಾಖೆ ಸ್ಥಗಿತಗೊಳಿಸಿದ್ದ ಬಸ್ ರೂಟ್ಗಳ ಪುನರಾರಂಭಕ್ಕೆ ಚಿಂತನೆ ನಡೆಸಿದೆ. “ಕೋವಿಡ್ ವೇಳೆ ಸ್ಥಗಿತಗೊಳಿಸಲಾಗಿದ್ದ ಬಸ್ ಸೇವೆ ಪುನರಾರಂಭಿಸಲು ಕ್ರಮ ವಹಿಸಲಾಗುತ್ತಿದೆ. ಹಿಂದಿನ ಸರ್ಕಾರದ ಅವಧಿಯಲ್ಲಿ ನೂತನ ಬಸ್ಗಳನ್ನು ಖರೀದಿಸಿಲ್ಲ. ಇದರಿಂದ ಬಸ್ ಕೊರತೆ ಇದ್ದು, ಈಗ ಖರೀದಿಗೆ ಕ್ರಮವಹಿಸಲಾಗುತ್ತಿದೆ. …
Read More »Monthly Archives: ಜೂನ್ 2024
ಸಿದ್ದರಾಮಯ್ಯ ರಾಜೀನಾಮೆ ನೀಡಿ ಚುನಾವಣೆ ಎದುರಿಸಲಿ: ಯತ್ನಾಳ್
ವಿಜಯಪುರ: ರಾಜ್ಯದಲ್ಲಿ ಸಿದ್ಧರಾಮಯ್ಯ ಸರ್ಕಾರ ಬ್ರಿಟೀಷ್ ಮಾದರಿಯಲ್ಲಿ ತೆರಿಗೆ ಹೇರುತ್ತಿದೆ. ಬ್ರಿಟೀಷರು ಉಪ್ಪಿನ ಮೇಲೆ ತರಿಗೆ ಹೇರಿದಂತೆ ರಾಜ್ಯದ ಕಾಂಗ್ರೆಸ್ ಸರ್ಕಾರದಲ್ಲಿ ತೆರಿಗೆ ವಿಧಿಸುತ್ತಿದೆ. ಆಡಳಿತ ವೈಪಲ್ಯದ ಕಾರಣ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಸಿದ್ಧರಾಮಯ್ಯ ಚುನಾವಣೆ ಎದುರಿಸಬೇಕು ಎಂದು ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ ಯತ್ನಾಳ ವಾಗ್ದಾಳಿ ನಡೆಸಿದರು. ಶನಿವಾರ ರಾಜ್ಯ ಸರ್ಕಾರದ ಇಂಧನ ದರ ಏರಿಕೆ ವಿರೋಧಿಸಿ ಬಿಜೆಪಿ ನಗರದ ಹೊರ ವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ-50 …
Read More »ಜೂ. 27 ನೂತನ ಸಂಸದರಿಗೆ ಸಿಎಂ ಔತಣಕೂಟ: ರಾಜ್ಯದ ಪರ ಧ್ವನಿ ಎತ್ತಲು ಮನವಿ
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಜೂನ್ 27 ರಂದು ರಾಜ್ಯದ ಸಂಸದರ ಸಭೆ ಕರೆದಿದ್ದಾರೆ. ಜೂನ್ 27ರಂದು ದೆಹಲಿಗೆ ತೆರಳಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹೊಸದಾಗಿ ಆಯ್ಕೆಯಾದ ರಾಜ್ಯದ ಸಂಸದರಿಗೆ ಔತಣಕೂಟ ಆಯೋಜಿಸಿದ್ದಾರೆ. ಜೂನ್ 27ರಂದು ಸಂಜೆ ಔತಣಕೂಟ ಆಯೋಜಿಸಿದ್ದು, ರಾಜ್ಯದ ಪರ ಧ್ವನಿ ಎತ್ತುವಂತೆ ಸಂಸದರಿಗೆ ಮುಖ್ಯಮಂತ್ರಿಗಳು ಮನವಿ ಮಾಡಲಿದ್ದಾರೆ. ಕೇಂದ್ರದಿಂದ ರಾಜ್ಯಕ್ಕೆ ಆಗಬೇಕಾದ ಕೆಲಸಗಳ ಅಹವಾಲು ಪಟ್ಟಿಯನ್ನು ಸಲ್ಲಿಸಲಿದ್ದಾರೆ. ರಾಜ್ಯದ ಸಂಸದರು ಮತ್ತು ಕೇಂದ್ರ ಸಚಿವರಿಗೆ ರಾಜ್ಯ ಸರ್ಕಾರದ ವತಿಯಿಂದ ಪಟ್ಟಿ …
Read More »ಶಾಸಕ ದಿನಕರ ಶೆಟ್ಟಿ ಸಹೋದರನ ಮನೆಯಲ್ಲಿ ಸಿಲಿಂಡರ್ ಸ್ಪೋಟ
ಕುಮಟಾ: ಶಾಸಕ ದಿನಕರ ಶೆಟ್ಟಿ, ಸಹೋದರನ ಮನೆಯಲ್ಲಿ ಸಿಲಿಂಡರ್ ಸ್ಪೋಟಗೊಂಡು ಸಹೋದರ ಹಾಗೂ ಅವರ ಪತ್ನಿಗೆ ಗಾಯವಾಗಿದ್ದು ಲಕ್ಷಾಂತರ ರೂಪಾಯಿ ಮೌಲ್ಯದ ಮನೆಯ ವಸ್ತುಗಳು ಬೆಂಕಿಗಾಹುತಿಯಾಗಿದೆ. ಪಟ್ಟಣದ ಕೊಪ್ಪಳಕರವಾಡಿ ವಾರ್ಡ್ ನಲ್ಲಿದ್ದ ಶಾಸಕ ದಿನಕರ ಶೆಟ್ಟಿ ಸಹೋದರ ಮಧುಕರ ಶೆಟ್ಟಿ ಅವರ ಮನೆ ಇದಾಗಿದ್ದು ಶನಿವಾರ ಕುಟುಂಬ ಸಮೇತರಾಗಿ ಹೊರಹೋಗಿದ್ದರು ಎನ್ನಲಾಗಿದೆ. ಅವರು ಮನೆಗೆ ಬಂದು ಬಾಗಿಲು ತೆರೆದಾಗ ಸಿಲಿಂಡರ್ ಸ್ಫೋಟಗೊಂಡಿದೆ. ಈ ವೇಳೆ ಮಧುಕರ ಶೆಟ್ಟಿ ಅವರ ಪತ್ನಿಗೂ ಗಾಯಗಳಾಗಿದ್ದು, …
Read More »ತಾಯಿ-ಮಗಳ ಡಬಲ್ ಮರ್ಡರ್ ಆಗಿದೆ ಎಂದು 112ಕ್ಕೆ ಕರೆ!
ಅಂಕೋಲಾ : ತನ್ನ ಪತ್ನಿ ಹಾಗೂ ಮಗಳನ್ನು ಯಾರೋ ಕೊಲೆ ಮಾಡಿದ್ದಾರೆ ಎಂದು 112ಕ್ಕೆ ಕರೆ ಮಾಡಿ ಗೋಗೆರೆದಿದ್ದ ವ್ಯಕ್ತಿಯೊಬ್ಬನ ಕರೆ ಆಧರಿಸಿ ಸ್ಥಳಕ್ಕೆ ಹೋದ ಪೊಲೀಸರೇ ಶಾಕ್ ಆದ ಘಟನೆ ಹಿಲ್ಲೂರಿನ ಬಿಲ್ಲನಬೈಲನಲ್ಲಿ ನಡೆದಿದೆ. ಹಿಲ್ಲೂರಿನ ಬಿಲ್ಲನಬೈಲನ ಮಂಜುನಾಥ ಬೊಮ್ಮಯ್ಯ ನಾಯಕ ಎಂಬಾತ 112ಕ್ಕೆ ಕರೆ ಮಾಡಿ, ನನ್ನ ಪತ್ನಿ ಹಾಗೂ ಮಗಳನ್ನು ಯಾರೋ ಭೀಕರವಾಗಿ ಕೊಲೆ ಮಾಡಿ ತೆರಳಿದ್ದಾರೆ. ನನಗೇಕೋ ಹೆದರಿಕೆ ಆಗುತ್ತಿದೆ. ಕೂಡಲೆ ಸ್ಥಳಕ್ಕೆ ಬರುವಂತೆ ವಿನಂತಿಸಿದ್ದ. …
Read More »ಕುಡಿದ ಮತ್ತಿನಲ್ಲಿ ಅರಣ್ಯಾಧಿಕಾರಿಯ ಬರ್ಬರ ಹತ್ಯೆ: ಐವರು ಆರೋಪಿಗಳು ಅರೆಸ್ಟ್
ಯಾದಗಿರಿ: ಕ್ಷುಲ್ಲಕ ಕಾರಣಕ್ಕೆ ಅರಣ್ಯಾಧಿಕಾರಿಯನ್ನೇ ಹತ್ಯೆಗೈದಿರುವ ಪ್ರಕರಣ ಯಾದಗಿರಿ ಜಿಲ್ಲೆಯ ಶಹಾಪುರ ಪಟ್ಟಣದಲ್ಲಿ ನಡೆದಿದೆ. ಮಹೇಶ್ ಕನಕಟ್ಟಿ ಕೊಲೆಯಾದ ಅರಣ್ಯಾಧಿಕಾರಿ. ಶಹಾಪುರ ಅರಣ್ಯಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಮೊಟಗಿ ಬಾರ್ ಆಂದ್ ರೆಸ್ಟೋರೆಂಟ್ ನಲ್ಲಿ ನಡೆದಿದ್ದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕುಡಿದ ಮತ್ತಿನಲ್ಲಿ ಆರೋಪಿಗಳು ಕ್ಷುಲ್ಲಕ ಕಾರಣಕ್ಕೆ ಮಹೇಶ್ ಕನಕಟ್ಟಿ ಅವರನ್ನು ಕೊಲೆಗೈದಿದ್ದಾರೆ ಎನ್ನಲಾಗಿದೆ. ಪ್ರಕರಣ ಸಂಬಂಧ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ರಾಜು, ರೇಖು ನಾಯ್ಕ್, ತಾರಾ ಸಿಂಗ್, ನರಸಿಂಗ್ …
Read More »ದರ್ಶನ್ ಮುಂದಿನ ಸಿನಿಮಾ ಹೆಸರು ‘ಪರಪ್ಪನ ಅಗ್ರಹಾರ’?
ದರ್ಶನ್ ಕೊಲೆ ಆರೋಪದಲ್ಲಿ ಪೊಲೀಸರ ಕೈಯಲ್ಲಿ ಲಾಕ್ ಆಗಿದ್ದು, ಈಗಾಗಲೇ ಕಳೆದ 12 ದಿನಗಳಿಂದ ಪೊಲೀಸರು ತೀವ್ರ ವಿಚಾರಣೆ ನಡೆಸಿದ್ದಾರೆ. ಹೀಗಿದ್ದಾಗ ಇಂದು ಪೊಲೀಸರ ಕಸ್ಟಡಿ ಅಂತ್ಯ ಆಗಿದ್ದು, ದರ್ಶನ್ & ಗ್ಯಾಂಗ್‌ನ ಕೋರ್ಟ್ ಎದುರು ಪೊಲೀಸರು ಹಾಜರುಪಡಿಸಿದ್ದಾರೆ. ಇದೇ ಸಮಯದಲ್ಲಿ ದರ್ಶನ್ ಅವರ ಮುಂದಿನ ಸಿನಿಮಾ ಯಾವುದು? ಅನ್ನೋ ಚರ್ಚೆಯು ಶುರುವಾಗಿದೆ. ಕಲಾಸಿಪಾಳ್ಯ, ಮೆಜೆಸ್ಟಿಕ್ ಅಂತಾ ಬೆಂಗಳೂರಿನ ಏರಿಯಾಗಳ ಹೆಸರು ಇಟ್ಟುಕೊಂಡೇ ಭಾರಿ ಭರ್ಜರಿ ಸಿನಿಮಾ ನೀಡಿದ್ದ ದರ್ಶನ್ …
Read More »ವಾಲ್ಮೀಕಿ ನಿಗಮ ಹಗರಣಕ್ಕೆ ಸಿಎಂ ನೇರ ಕಾರಣ : ಪ್ರಹ್ಲಾದ್ ಜೋಶಿ
ಬೆಂಗಳೂರು,ಜೂ.22- ವಾಲೀಕಿ ಅಭಿವೃದ್ಧಿ ನಿಗಮ ಮಂಡಳಿಯಲ್ಲಿ ನಡೆದಿರುವ ನೂರಾರು ಕೋಟಿ ಭ್ರಷ್ಟಾಚಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇರ ಕಾರಣ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಗಂಭೀರ ಆರೋಪ ಮಾಡಿದ್ದಾರೆ. ನಗರದ ಅರಮನೆ ಮೈದಾನದಲ್ಲಿ ಪಕ್ಷದ ವತಿಯಿಂದ ಹಮಿಕೊಂಡಿದ್ದ ನೂತನ ಸಂಸದರ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ನಾನು ಒಬ್ಬನೇ ಜಗತ್ತಿನಲ್ಲಿ ಮಹಾ ಸಾಚಾ ಎಂದು ಸಿದ್ದರಾಮಯ್ಯನವರು ಮಾತನಾಡುತ್ತಾರೆ ಎಂದು ವಾಗ್ದಾಳಿ ನಡೆಸಿದರು. ಹಣಕಾಸು ಇಲಾಖೆ ಯಾರ ಕೈಯಲ್ಲಿದೆ. ನಿಮ ಅನುಮತಿ ಇಲ್ಲದೆ …
Read More »ಕಮಲಾ ಹಂಪನಾ ಅವರ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ
ಬೆಂಗಳೂರು, ಜೂನ್ 21: ಹಿರಿಯ ಲೇಖಕಿ ಕಮಲಾ ಹಂಪನಾ (89) ಅವರು ಇಂದು ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕನ್ನಡದ ಉತ್ತಮ ಸಾಹಿತಿಯನ್ನು ನಾವು ಕಳೆದುಕೊಂಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಶನಿವಾರ ರವೀಂದ್ರಕಲಾ ಕ್ಷೇತ್ರದಲ್ಲಿ ಹಿರಿಯ ಸಾಹಿತಿ ಡಾII ಕಮಲ ಹಂಪನಾ ಅವರ ಪ್ರಾರ್ಥಿವ ಶರೀರ ದರ್ಶನ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು, ಕಮಲಾ ಹಂಪನಾ ಅವರನ್ನು ನಾಲ್ಕೈದು ತಿಂಗಳ ಹಿಂದೆ ಭೇಟಿಯಾಗಿದ್ದೆ. ಮಹಿಳಾ ಸಾಹಿತಿಗಳ …
Read More »ಟಿಕೆಟ್ ಹಂಚಿಕೆ ವ್ಯತ್ಯಾಸದಿಂದ ಮೂರ್ನಾಲ್ಕು ಕ್ಷೇತ್ರಗಳನ್ನು ಕಳೆದುಕೊಳ್ಳಬೇಕಾಯಿತು;B.S.Y.
ಬೆಂಗಳೂರು,ಜೂ.22- ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ಹಂಚಿಕೆಯಲ್ಲಿ ಸ್ವಲ್ಪ ವ್ಯತ್ಯಾಸವಾಗಿದ್ದರಿಂದ ನಾವು ಮೂರ್ನಾಲ್ಕು ಕ್ಷೇತ್ರಗಳನ್ನು ಕಳೆದುಕೊಳ್ಳುವಂತಾಯಿತು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಷ್ಟ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಹೇಳಿದರು. ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಬಿಜೆಪಿ-ಜೆಡಿಎಸ್ ಸಂಸದರ ಸನಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮೂರಂಕಿ ಸಾಧನೆ ಮಾಡಲಾಗಿಲ್ಲ.ಸುಳ್ಳು ಆಶ್ವಾಸನೆ ಕೊಟ್ಟರೂ ಕಾಂಗ್ರೆಸ್ ದಯನೀಯ ಸೋಲು ಅನುಭವಿಸಿದೆ ಎಂದರು. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 130-140 ಸೀಟು ಗೆಲ್ಲಲು …
Read More »