Breaking News

Monthly Archives: ಜೂನ್ 2024

ಶ್ರೀದೇವಿ ಭೈರಪ್ಪ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ಸಪ್ತಮಿ ಗೌಡ

ಬೆಂಗಳೂರು: ನಟ ಯುವ ಯುವರಾಜ್‌ ಕುಮಾರ್‌ ವಿಚ್ಚೇದನ ನೋಟಿಸ್‌ ನೀಡಿದ ಬಳಿಕ ಪತ್ನಿ ಶ್ರೀದೇವಿ ಭೈರಪ್ಪ ಅವರು, ‘ನನ್ನ ಪತಿಗೆ ಸಪ್ತಮಿ ಗೌಡ ಅವರೊಂದಿಗೆ ಅನೈತಿಕ ಸಂಬಂಧ ಇದೆ’ ಎಂದು ಗಂಭೀರ ಆರೋಪ ಮಾಡಿದ್ದರು. ಈ ಕುರಿತು ನಟಿ ಸಪ್ತಮಿ ಅವರು ಕೋರ್ಟ್ ಮೆಟ್ಟಿಲೇರಿ ನಿರ್ಬಂಧಕಾಜ್ಞೆ ತರಿಸಿದ್ದಾರೆ.   ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ನಲ್ಲಿ ಸಪ್ತಮಿ ಗೌಡ ದಾವೆ ಹೂಡಿ, ‘ಅವರ ವಿಚ್ಚೇದನ ಪ್ರಕರಣದಲ್ಲಿ ನನ್ನ ಹೆಸರು ತಳುಕು …

Read More »

5 ದಿನಗಳ ಕಾಲ ನಟ ದರ್ಶನ್ ಹಾಗೂ ಗ್ಯಾಂಗ್​ ಮತ್ತೆ ಪೊಲೀಸ್​ ಕಸ್ಟಡಿಗೆ!

ಬೆಂಗಳೂರು: ರೇಣುಕಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್​ ಸೇರಿದಂತೆ 13 ಆರೋಪಿಗಳನ್ನು ಇದೀಗ ಮತ್ತೆ ಐದು ದಿನಗಳ ಕಾಲ ಪೊಲೀಸ್​ ಕಸ್ಟಡಿಗೆ ಕಳಿಸಲಾಗಿದ್ದು, ಜೂನ್ 20ರವರೆಗೂ ಕಸ್ಟಡಿಯಲು ಇರಿಸುವಂತೆ ಆದೇಶಿಸಲಾಗಿದೆ. ಕಳೆದ ಕೆಲವು ದಿನಗಳಿಂದಲೂ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನಿರಂತರ ವಿಚಾರಣೆಯಲ್ಲಿ ತೊಡಗಿರುವ ದರ್ಶನ್​ ಮತ್ತು ಗ್ಯಾಂಗ್​ ಅನ್ನು ಪೊಲೀಸರು ಇಂದು ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ಈ ವೇಳೆ ಕೋರ್ಟ್​ ಮುಂದಿನ ಐದು ದಿನಗಳವರೆಗೂ …

Read More »

ವಿಶ್ವಕಪ್‌ನಿಂದ ಹೊರಬಿದ್ದ ಪಾಕ್

ಕರಾಚಿ: ಈ ಬಾರಿಯ ಟಿ20 ವಿಶ್ವಕಪ್‌ ಟೂರ್ನಿಯಿಂದ ಪಾಕಿಸ್ತಾನ ತಂಡ ಹೊರಬಿದ್ದ ಬೆನ್ನಲ್ಲೇ, ಪಾಕ್‌ ಕ್ರಿಕೆಟ್‌ ಮಂಡಳಿಯು (ಪಿಸಿಬಿ) ನಿರಾಕ್ಷೇಪಣಾ ಪ್ರಮಾಣಪತ್ರ (ಎನ್‌ಒಸಿ) ನಿಯಮವನ್ನು ಪರಿಚಯಿಸಿದೆ. ಅಮೆರಿಕ ಹಾಗೂ ವೆಸ್ಟ್‌ ಇಂಡೀಸ್‌ ಆತಿಥ್ಯದಲ್ಲಿ ನಡೆಯುತ್ತಿರುವ ಟೂರ್ನಿಯಲ್ಲಿ ಹೀನಾಯ ಪ್ರದರ್ಶನ ತೋರಿರುವ ಪಾಕಿಸ್ತಾನ ತಂಡವು ಗುಂಪು ಹಂತದಲ್ಲೇ ಹೊರಬಿದ್ದಿದೆ. ಬದ್ಧ ಎದುರಾಳಿ ಭಾರತದ ವಿರುದ್ಧ ಮಾತ್ರವಲ್ಲದೆ, ‘ಕ್ರಿಕೆಟ್‌ ಶಿಶು’ ಅಮೆರಿಕ ಎದುರೂ ಸೋಲು ಅನುಭವಿಸಿದೆ. ಇದರಿಂದ ತೀವ್ರ ಮುಜುಗರಕ್ಕೀಡಾಗಿರುವ ಪಿಸಿಬಿ ಹೊಸ ನಿಯಮ …

Read More »

ಹಿರಿಯ ಪತ್ರಕರ್ತ ಮತ್ತಿಹಳ್ಳಿ ಮದನ ಮೋಹನ ನಿಧನ

ಹುಬ್ಬಳ್ಳಿ: ಹಿರಿಯ ಪತ್ರಕರ್ತ ಮತ್ತಿಹಳ್ಳಿ ಮದನ ಮೋಹನ (83) ಅವರು ಶನಿವಾರ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ. ಪತ್ರಕರ್ತರ ನಗರದಲ್ಲಿರುವ ಅವರ ನಿವಾಸದಲ್ಲಿ ಅಂತಿಮದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ದಿ ಹಿಂದು ಪತ್ರಿಕೆಯಲ್ಲಿ ಸುಮಾರು 47 ವರ್ಷ ಸೇವೆ ಸಲ್ಲಿಸಿದ್ದ ಅವರು, ನಿವೃತ್ತಿ ಬಳಿಕ ಪ್ರಚಲಿತ ವಿದ್ಯಮಾನಗಳ ಬಗ್ಗೆ ವಿವಿಧ ಪತ್ರಿಕೆಗಳಿಗೆ ಲೇಖನ ಬರೆಯುತ್ತಿದ್ದರು.

Read More »

ಕಾಂಗ್ರೆಸ್‌ ಗ್ಯಾರಂಟಿ ಯೋಜನೆಗಳಿಗೆ ಬೀಳುತ್ತಾ ಬ್ರೇಕ್? :‌ ಸ್ಪಷ್ಟನೆ ನೀಡಿದ ಸಿದ್ದರಾಮಯ್ಯ

ಬೆಂಗಳೂರು, ಜೂನ್‌ 15: ರಾಜ್ಯದಲ್ಲಿ ಐದು ಗ್ಯಾರಂಟಿಗಳೂ ಕೂಡ ಮುಂದುವರೆಯಲಿವೆ ಅವು ಬಡವರಿಗೆ ಶಕ್ತಿ ತುಂಬುವ ಕಾರ್ಯಕ್ರಮವಾಗಿರುವುದರಿಂದ ಈ ಕಾರ್ಯಕ್ರಮಗಳನ್ನು ನಿಲ್ಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ರಾಜ್ಯದಲ್ಲಿ ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯ ಫಲಿತಾಂಶದ ಹಿನ್ನೆಲೆಯಲ್ಲಿ ಕಾರ್ಯಕ್ರಮಗಳನ್ನು ಹಿಂದೆಗೆದುಕೊಳ್ಳಬೇಕು ಅಥವಾ ಪರಿಶೀಲಿಸಬೇಕು ಎಂದು ಕಾಂಗ್ರೆಸ್ ಮುಖಂಡರ ಒಂದು ವರ್ಗ ನೀಡಿದ ಹೇಳಿಕೆ ಕುರಿತು ಸಾಕಷ್ಟು ಚರ್ಚೆ ನಡೆಯುತ್ತಿತ್ತು. ಹೀಗಾಗಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟ …

Read More »

D ಗ್ಯಾಂಗ ಗೆ ಜೈ ಲಾ ಬೆಲಾ.. ?

ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಅನ್ನಪೂರ್ಣೇಶ್ವರಿ ಪೊಲೀಸ್ ಠಾಣೆ ಮುಂದೆ ಜಮಾಯಿಸಿದ ನಟ ದರ್ಶನ್ ಅಭಿಮಾನಿಗಳ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ. ಕಳೆದ ಆರು ದಿನಗಳಿಂದ ದರ್ಶನ್ ಮತ್ತು ಗ್ಯಾಂಗ್ ಪೊಲೀಸ್ ಕಸ್ಟಡಿಯಲ್ಲಿದ್ದರು. ಇದೀಗ ಇಂದು ಸಂಜೆ ಮತ್ತೆ ಪೊಲೀಸರು ದರ್ಶನ್ ಮತ್ತು ಅವರ ಸಹಚರರನ್ನು ಕೋರ್ಟಿಗೆ ಹಾಜರುಪಡಿಸುವ ಹಿನ್ನೆಲೆಯಲ್ಲಿ ಅದಕ್ಕೂ ಮುಂಚೆ ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ವೈದ್ಯಕೀಯ ತಪಾಸಣೆಗೆ ಎಂದು ಕರೆದುಕೊಂಡು ಹೋಗಲಿದ್ದಾರೆ. …

Read More »

ರೈತರಿಗೆ ಗುಡ್ ನ್ಯೂಸ್: ಜೂ.18ರಂದು ‘ಪಿಎಂ ಕಿಸಾನ್ ಯೋಜನೆ’ಯ 17ನೇ ಕಂತಿನ ಹಣ ಪ್ರಧಾನಿ ಮೋದಿ ಬಿಡುಗಡೆ

ನವದೆಹಲಿ: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (Pradhan Mantri Kisan Samman Nidhi – PM-KISAN Nidhi) ಯೋಜನೆಯಡಿ 20,000 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲು ಪ್ರಧಾನಿ ನರೇಂದ್ರ ಮೋದಿ ಜೂನ್ 18 ರಂದು ವಾರಣಾಸಿಗೆ ಭೇಟಿ ನೀಡಲಿದ್ದಾರೆ. ಪಿಎಂ ಕಿಸಾನ್ ಯೋಜನೆಯ 17 ನೇ ಕಂತಿನ ಬಿಡುಗಡೆಯ ನಂತರ ಪಿಎಂ ಮೋದಿ ಕೃಷಿ ಸಖಿಗಳು ಎಂದು ಗೊತ್ತುಪಡಿಸಿದ 30,000 ಕ್ಕೂ ಹೆಚ್ಚು ಸ್ವಸಹಾಯ ಗುಂಪುಗಳಿಗೆ ಪ್ರಮಾಣಪತ್ರಗಳನ್ನು ನೀಡಲಿದ್ದಾರೆ …

Read More »

‘ವಾಹನ ಸವಾರ’ರಿಗೆ ಬಿಗ್ ಶಾಕ್: ರಾಜ್ಯ ಸರ್ಕಾರದಿಂದ ಪೆಟ್ರೋಲ್, ಡೀಸೆಲ್ ಮೇಲಿನ ‘ತೆರಿಗೆ ದರ’ ಹಚ್ಚಳ

ಬೆಂಗಳೂರು: ರಾಜ್ಯ ಸರ್ಕಾರದಿಂದ ಪೆಟ್ರೋಲ್, ಡೀಸೆಲ್ ಮೇಲಿನ ದರಗಳನ್ನು ರೀಟೆಲ್ ದರಗಳನ್ನು ಹೆಚ್ಚಳ ಮಾಡಲಾಗಿದೆ. ಹೀಗಾಗಿ ವಾಹನ ಸವಾರರಿಗೆ ಶಾಕ್ ಎನ್ನುವಂತೆ ಪೆಟ್ರೋಲ್, ಡೀಸೆಲ್ ದರ ಕೂಡ ಹೆಚ್ಚಳ ಆಗುವ ಸಾಧ್ಯತೆ ಇದೆ. ಲೋಕಸಭಾ ಚುನಾವಣೆಗೆ ಮುನ್ನಾ ಕೇಂದ್ರ ಸರ್ಕಾರದಿಂದ ಪೆಟ್ರೋಲ್, ಡೀಸೆಲ್ ದರವನ್ನು ಇಳಿಕೆ ಮಾಡಲಾಗಿತ್ತು. ಈಗ ರಾಜ್ಯ ಸರ್ಕಾರವು ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಚಿಲ್ಲರೆ ಮಾರಾಟ ತೆರಿಗೆ (Retail Sales Tax) ದರವನ್ನು ಹೆಚ್ಚಳ ಮಾಡಿದೆ. …

Read More »

ಚಿತ್ರರಂಗದ ಪರವಾಗಿ ಕ್ಷಮೆ ಕೇಳ್ತೀವಿ; ರೇಣುಕಾಸ್ವಾಮಿ ಕುಟುಂಬಕ್ಕೆ ಫಿಲ್ಮ್ ಚೇಂಬರ್​ನಿಂದ ₹5 ಲಕ್ಷ ಪರಿಹಾರ

ಚಿತ್ರರಂಗದ ಪರವಾಗಿ ಕ್ಷಮೆ ಕೇಳ್ತೀವಿ; ರೇಣುಕಾಸ್ವಾಮಿ ಕುಟುಂಬಕ್ಕೆ ಫಿಲ್ಮ್ ಚೇಂಬರ್​ನಿಂದ ₹5 ಲಕ್ಷ ಪರಿಹಾರ ಚಿತ್ರದುರ್ಗ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್​ (Actor Darshan) ಭಾಗಿಯಾಗಿರುವ ಆರೋಪ ಹಿನ್ನೆಲೆಯಲ್ಲಿ ಫಿಲ್ಮ್​ ಚೇಂಬರ್​ ಮೃತನ ಮನೆಗೆ ಇಂದು ಭೇಟಿ ನೀಡಿತು. ಚಿತ್ರದುರ್ಗದಲ್ಲಿರುವ ರೇಣುಕಾಸ್ವಾಮಿ ಅವರ ಮನೆಗೆ ಭೇಟಿ ನೀಡಿ ಅವರ ತಂದೆ-ತಾಯಿ, ಗರ್ಭಿಣಿ ಪತ್ನಿಗೆ ಫಿಲ್ಮ್​ ಚೇಂಬರ್​ ಅಧ್ಯಕ್ಷರು ಸೇರಿದಂತೆ ಪ್ರಮುಖರು ಸಾಂತ್ವಾನ ಹೇಳಿದರು. ಮೊದಲಿಗೆ ಕುಟುಂಬದ ಬಳಿ ಚಿತ್ರರಂಗದ …

Read More »

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ: ರಾಜ್ಯಾದ್ಯಂತ ಪ್ರತಿಭಟನೆಗೆ ಬಿಜೆಪಿ ನಿರ್ಧಾರ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಹಗರಣದ ವಿರುದ್ಧ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಸಿದ್ಧತೆ ನಡೆಸಿದೆ. ರಾಜ್ಯ ಬಿಜೆಪಿ ಕಚೇರಿಯಲ್ಲಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ತೀರ್ಮಾನಿಸಲಾಗಿದ್ದು, ಜೂನ್ 28ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರವಾಗಿದ್ದು, ಅಕ್ರಮವಾಗಿ ಹಣ ವರ್ಗಾವಣೆ ಮಡಲಾಗಿದೆ. ಹಗರಣವನ್ನು ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆಗೆ ಬಿಜೆಪಿ ಕರೆ ನೀಡಿದೆ. ಈ ವೇಳೆ ಮಾತನಾಡಿದ ಮಾಜಿ ಸಚಿವ …

Read More »