Breaking News

Monthly Archives: ಜೂನ್ 2024

ಬಗೆದಷ್ಟು ಬಯಲಾಗುತ್ತಿದೆ ದರ್ಶನ್ ಕರ್ಮಕಾಂಡ

ನಟ ದರ್ಶನ್ ರ ಕರ್ಮಕಾಂಡಗಳು ಬಗೆದಷ್ಟು ಬಯಲಾಗುತ್ತಿದೆ. ಹೊರಗಿನವರಿಗೆ ಮಾತ್ರವಲ್ಲ ಸ್ವತಃದವರಿಗೂ ದರ್ಶನ್ ವಿಲನ್ ಆಗಿಯೇ ಇದ್ದರು ಅನ್ನೋದು ಇದೀಗ ಬಯಲಾಗಿದೆ. ಸ್ವತಃ ತಾನು ಹುಟ್ಟಿದ ತಾಯಿಯ ತವರು ಮನೆಯಲ್ಲೇ ನೆಲಸಮಗೊಳಿಸಿ ತಮ್ಮ ಸೋದರ ಮಾವನವರನ್ನು ಬೀದಿಪಾಲು ಮಾಡಿದ ಪೈಶಾಚಿಕ ಕೃತ್ಯ ಕೊಡಗಿನಲ್ಲಿ ನಡೆದಿದ್ದು, ಈ ಬಗ್ಗೆ ಸ್ವತಃ ಅವರ ಸೋದರ ಮಾವ ಅಳಲು ತೋಡಿಕೊಂಡಿದ್ದಾರೆ. ದರ್ಶನ್ ಹುಟ್ಟೂರು ತನ್ನ ತಾಯಿಯ ತವರು ಮನೆ ಕೊಡಗು ಜಿಲ್ಲೆಯ ಪೊನ್ನಂಪೇಟೆ. ನಟ …

Read More »

ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಗುಡ್‌ ನ್ಯೂಸ್‌: ‘ತರಬೇತಿ ರಹಿತ ವೇತನ ಶ್ರೇಣಿʼ ನಿಗಧಿಪಡಿಸಿ ಸರ್ಕಾರ ಆದೇಶ

ಬೆಂಗಳೂರು : ತರಬೇತಿ ಹೊಂದದ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ತರಬೇತಿ ಹೊಂದಿದ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ವೇತನ ಶ್ರೇಣಿಯನ್ನು ನಿಗಧಿಪಡಿಸುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ವಿಷಯಕ್ಕೆ ಸಂಬಂಧಿಸಿದಂತೆ, ಸರ್ಕಾರಿ ಪ್ರಾಥಮಿಕ ಶಾಲಾ ತರಬೇತಿ ರಹಿತ ಶಿಕ್ಷಕರ ಪಿಂಚಣಿಯನ್ನು ನಿಯಮಾನುಸಾರ ನಿರ್ಧರಿಸಿರುವುದನ್ನು ಹಂತ ಹಂತವಾಗಿ ವಿವರಿಸಲಾಗಿರುತ್ತದೆ. ಪ್ರಯುಕ್ತ, ಉಲ್ಲೇಖ(2)ರ ಅನುಬಂಧ-02 ರಲ್ಲಿನ ಸೂಚನೆಗಳನ್ನಯ ಸರ್ಕಾರಿ ಪ್ರಾಥಮಿಕ ಶಾಲಾ ತರಬೇತಿ ರಹಿತ ಶಿಕ್ಷಕರ ಪಿಂಚಣಿಯನ್ನು ನಿಯಮಾನುಸಾರ …

Read More »

ರಾಜ್ಯದ ಜನತೆಗೆ ಗುಡ್ ನ್ಯೂಸ್: ‘ಜನತಾದರ್ಶನ’ಕ್ಕೆ ಮರು ಚಾಲನೆ

ಬೆಂಗಳೂರು: ಸಾರ್ವಜನಿಕರ ಅಹವಾಲು, ಸಮಸ್ಯೆಗಳನ್ನು ಜಿಲ್ಲಾ ಮಟ್ಟದಲ್ಲೇ ಆಲಿಸಿ ಪರಿಹಾರ ಸೂಚಿಸಲು ಜನತಾ ದರ್ಶನಕ್ಕೆ ಮರು ಚಾಲನೆ ನೀಡಲು ಸರ್ಕಾರ ನಿರ್ಧರಿಸಿದೆ. ಚುನಾವಣೆ ನೀತಿ ಸಂಹಿತೆ ತೆರವಾದ ಹಿನ್ನೆಲೆಯಲ್ಲಿ ಜನತಾ ದರ್ಶನ ಮರು ಆರಂಭಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ಜಿಲ್ಲಾಮಟ್ಟದಲ್ಲೇ ಜನರ ಅಹವಾಲು ಆಲಿಸಿ ಪರಿಹಾರ ಸೂಚಿಸಲು ಜನತಾದರ್ಶನಕ್ಕೆ ಮರು ಚಾಲನೆ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ ಎಂದು ಸಂಪುಟ ಸಭೆಯ …

Read More »

ನಕಲಿ ಕಾರ್ಡ್‌ ರದ್ದು? ಅರ್ಹ ಬಿಪಿಎಲ್‌ ಅರ್ಜಿದಾರರಿಗೆ ಅವಕಾಶ

ಬೆಂಗಳೂರು: ಲೋಕಸಭಾ ಚುನಾವಣೆ ಫ‌ಲಿತಾಂಶದ ಬೆನ್ನಲ್ಲೇ, ಅನರ್ಹ ಬಿಪಿಎಲ್‌ ರೇಶನ್‌ ಕಾರ್ಡ್‌ಗಳ ರದ್ದತಿ ಪ್ರಕ್ರಿಯೆಗೆ ಸರಕಾರ ಕೈಹಾಕಿದೆ. ಹೀಗೆ ರದ್ದು ಗೊಳ್ಳುವ ಕಾರ್ಡ್‌ಗಳ ಬದಲಿಗೆ ಬಿಪಿಎಲ್‌ಗಾಗಿ ವರ್ಷದಿಂದ ಕಾಯುತ್ತಿರುವ ಅರ್ಜಿದಾರರಿಗೆ ಅವಕಾಶ ಕಲ್ಪಿಸಲು ಮುಂದಾಗಿದೆ. ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ ಅಡಿ ಈಗಾಗಲೇ ಕೇಂದ್ರ ಸರಕಾರ ನಿಗದಿಪಡಿಸಿರುವ ಆದ್ಯತಾ ಪಡಿತರ ಕುಟುಂಬ (ಬಿಪಿಎಲ್‌)ಗಳು 1.03 ಕೋಟಿ ಹಾಗೂ ಅಂತ್ಯೋದಯ ಕುಟುಂಬಗಳು 10.83 ಲಕ್ಷ ಸೇರಿ 1.14 ಕೋಟಿ ಇರಬೇಕು. ಆದರೆ ರಾಜ್ಯದಲ್ಲಿ ಈಗಾಗಲೇ …

Read More »

ಅಮಾನವೀಯವಾಗಿ ವರ್ತಿಸಲು ಕಾನೂನಿನಲ್ಲಿ ಯಾರಿಗೂ ಅವಕಾಶವಿಲ್ಲ: ಬೊಮ್ಮಾಯಿ

ಹುಬ್ಬಳ್ಳಿ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸರು ಉತ್ತಮ ಕೆಲಸ ಮಾಡುತ್ತಿದ್ದಾರೆ. ಇದೇ ಚುರುಕುತನದಿಂದ ಹಾಗೂ ಪ್ರಾಮಾಣಿಕತೆಯಿಂದ ಕೆಲಸ ಮಾಡಿದರೆ ತಪ್ಪಿತಸ್ಥರಿಗೆ ಶಿಕ್ಷೆ ಆಗಲಿದೆ. ಅಮಾನವೀಯವಾಗಿ ವರ್ತಿಸಲು ಕಾನೂನಿನಲ್ಲಿ ಯಾರಿಗೂ ಅವಕಾಶವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದೊಂದು ಅಮಾನವೀಯ ವರ್ತನೆಯಾಗಿದೆ. ಸೆಲೆಬ್ರಿಟಿ, ಅಧಿಕಾರದಲ್ಲಿರುವವರು ಯಾರೇ ಆದರೂ ಈ ರೀತಿ ನಡೆದುಕೊಳ್ಳಲು ಅಧಿಕಾರವಿಲ್ಲ. ಕಾನೂನು ಕೈಗೆತ್ತಿಕೊಳ್ಳಲು ಯಾರಿಗೂ ಅವಕಾಶವಿಲ್ಲ. ಕಾನೂನಿನ ಮುಂದೆ ಎಲ್ಲರೂ ಸಮಾನರು. ಯಾವುದೇ …

Read More »

ಮನೆಯಲ್ಲಿ ಶವವಾಗಿ ಪತ್ತೆಯಾದ ಖ್ಯಾತ ನಟ; ತನಿಖೆ ಆರಂಭ

ಚೆನ್ನೈ: ಖ್ಯಾತ ನಟರೊಬ್ಬರು ಶವವಾಗಿ ಪತ್ತೆಯಾಗಿರುವ ಘಟನೆ ನಡೆದಿರುವುದು ವರದಿಯಾಗಿದೆ. ಕಾಲಿವುಡ್‌ ನಟ ಪ್ರದೀಪ್ ವಿಜಯನ್ ಬುಧವಾರ (ಜೂನ್ 12 ರಂದು) ಚೆನ್ನೈನ ಪಲವಕ್ಕಂನ ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ನಟನ ಸ್ನೇಹಿತ ಕಳೆದ ಎರಡು ದಿನಗಳಿಂದ ಪ್ರದೀಪ್ ವಿಜಯನ್ ಅವರಿಗೆ ಫೋನ್‌ ಮೂಲಕ ಸಂಪರ್ಕಿಸಲು ಯತ್ನಿಸಿದ್ದಾರೆ. ಆದರೆ ಕರೆಯನ್ನು ರಿಸೀವ್‌ ಮಾಡದ ಕಾರಣ ಒಬ್ಬ ಸ್ನೇಹಿತ ಮನೆಗೆ ಹೋಗಿ ನೋಡಿದಾಗ ಪ್ರದೀಪ್‌ ಶವವಾಗಿ ಪತ್ತೆಯಾಗಿದ್ದಾರೆ. ಆ ಬಳಿಕ …

Read More »

ಬಸವನಾಡಲ್ಲಿ ಭರ್ಜರಿ ಮುಂಗಾರು ಬಿತ್ತನೆ: ನಿರೀಕ್ಷೆ ಮೀರಿದ ಉತ್ತಮ ಮಳೆ

ವಿಜಯಪುರ: ಕಳೆದ ವರ್ಷದ ಭೀಕರ ಬರದಿಂದ ಕಂಗಾಲಾಗಿದ್ದ ವಿಜಯಪುರ ಜಿಲ್ಲೆಯ ರೈತರಿಗೆ ಈ ಬಾರಿಯ ಮುಂಗಾರು ಭಾರಿ ಆಶಾಭಾವ ಮೂಡಿಸಿದ್ದು, ಅನ್ನದಾತನ ಮೊಗದಲ್ಲಿ ಮಂದಹಾಸ ಮೂಡಿದೆ. ಸಾಮಾನ್ಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಿದ್ದು, ಕೃಷಿ ಚಟುವಟಿಕೆಗಳು ಚುರುಕುಗೊಂಡಿದ್ದು, ಅನ್ನದಾತರಿಂದ ಬಿತ್ತನೆ ಕಾರ್ಯವೂ ಭರದಿಂದ ಸಾಗಿದೆ. ಜೂನ್ 1 ರಿಂದ 11 ವರೆಗೆ 35 ಮಿ.ಮೀ. ಸಾಮಾನ್ಯ ಮಳೆ ಆಗಬೇಕಿದ್ದರೂ 180 ಮಿ.ಮೀ. ಮಳೆ ಸುರಿದಿದ್ದು, ಭೂಮಿ ಉತ್ತಮ ಹದಗೊಂಡಿದ್ದು, ಬಿತ್ತನೆ ಕಾರ್ಯ ಚುರುಕು …

Read More »

ಕಾರಿನಿಂದ ಬೈಕ್‌ಗೆ ಗುದ್ದಿ ಯುವಕನ ಕೊಲೆ: ಐವರ ಬಂಧನ

ಕುಣಿಗಲ್ : ಕಾರಿನಿಂದ ಬೈಕ್‌ಗೆ ಗುದ್ದಿ ಯುವಕನನ್ನು ಕೊಲೆ ಮಾಡಿ ಪರಾರಿಯಾಗಿದ್ದ ಐವರು ಆರೋಪಿಗಳನ್ನು ಬಂಧಿಸುವಲ್ಲಿ ಕುಣಿಗಲ್ ಪೊಲೀಸರು ಯಶಸ್ವಿಯಾಗಿದ್ದಾರೆ. ತಾಲೂಕಿನ ಕೊತ್ತಗೆರೆ ಹೋಬಳಿ ಬಾಗೇನಹಳ್ಳಿ ಗ್ರಾಮದ ರಾಮಚಂದ್ರ (27) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊತ್ತಗೆರೆ ಪಾಳ್ಯದ ಸೀನಾ ಅಲಿಯಾಸ್ ಶ್ರೀನಿವಾಸ್ (34), ಉಮೇಶ (32), ಚನ್ನಪ್ಪಗೌಡನಪಾಳ್ಯ ಗುರುರಾಜ್ (40), ಬಿದನಗೆರೆ ಗ್ರಾಮದ ಶಿವರಾಮ್ (38), ಸೊಬಗಾನಹಳ್ಳಿ ಗ್ರಾಮದ ಲಕ್ಷ್ಮಣ (36) ಅವರನ್ನು ಕುಣಿಗಲ್ ಪೊಲೀಸರು ಬಂಧಿಸಿದ್ದಾರೆ. ಜೂ 10 ಸೋಮವಾರ …

Read More »

ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

ಮುದ್ದೇಬಿಹಾಳ: ಮತಕ್ಷೇತ್ರದ ಅಭಿವೃದ್ಧಿ ಸೇರಿ ರಾಜ್ಯದ ಎಲ್ಲ ಹಿಂದುಳಿದ ಪ್ರದೇಶಗಳಿಗೆ ಸರ್ಕಾರದಿಂದ ನಿರೀಕ್ಷಿತ ಪ್ರಮಾಣದಲ್ಲಿ ಅನುದಾನ ಸಿಗುತ್ತಿಲ್ಲ. ಎಲ್ಲ ಹಿಂದುಳಿದ ಪ್ರದೇಶಗಳಿಗೆ ಸಮಾನವಾಗಿ, ಸಮತೋಲನ ಮಾಡಿ ಅಭಿವೃದ್ಧಿಗೆ ಮುಂದಾಗದಿದ್ದರೆ ನನಗೆ ರಾಜಕೀಯ ಮಾಡುವ ಇಚ್ಛೆ ಇಲ್ಲ. ರಾಜಕೀಯ ತ್ಯಾಗಕ್ಕೂ ನಾನು ಸಿದ್ದನಾಗಿದ್ದೇನೆ ಎಂದು ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ, ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಇಲ್ಲಿನ ಪ್ರವಾಸಿ ಮಂದಿರದಲ್ಲಿ ಗುರುವಾರ ಕೆಬಿಜೆಎನ್ನೆಲ್ ಅಧಿಕಾರಿಗಳ ಸಭೆಯ ನಂತರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ …

Read More »

ಕೊಲೆ ಆರೋಪಿ ದರ್ಶನ್ ಜೊತೆ ಮತ್ತೊಬ್ಬ ಸ್ಯಾಂಡಲ್‌ವುಡ್ ನಟ ಅರೆಸ್ಟ್!

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮತ್ತೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ. ಘಟನೆ ಸಂಬಂಧ ನಟ ದರ್ಶನ್‌ ಸ್ನೇಹಿತ ಹಾಗೂ ಅವರೊಂದಿಗೆ ಕೆಲ ಸಿನಿಮಾಗಳಲ್ಲಿ ಕಾಣಿಸಿಕೊಂಡಿದ್ದ, ಪ್ರದೋಶ್ ನನ್ನು ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಬಂಧಿತ ಆರೋಪಿಗಳ ಸಂಖ್ಯೆ 14ಕ್ಕೆ ಏರಿಕೆಯಾಗಿದೆ.ಕನ್ನಡದ ಕೆಲ ಚಿತ್ರಗಳಲ್ಲಿ ಅಭಿನಯ ಮಾಡಿರುವ ಈತ ರೇಣುಕಾಸ್ವಾಮಿ ಹತ್ಯೆ ಕೇಸ್‌ನಲ್ಲಿ A14 ಆರೋಪಿಯಾಗಿದ್ದಾನೆ ಎನ್ನಲಾಗಿದ್ದು, ದರ್ಶನ್ ಜೊತೆಗೆ ಸ್ನೇಹವನ್ನು ಹೊಂದಿದ್ದ ಎನ್ನಲಾಗಿದೆ

Read More »