ಹಂದಿಗುಂದ: ವೇಗವಾಗಿ ಚಲಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ, ಕಬ್ಬಿನ ಗದ್ದೆಯಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ಗ್ರಾಮದ ಹೊರವಲಯದಲ್ಲಿ ಶನಿವಾರ ಸಂಜೆ ನಡೆದಿದೆ. ಸಮೀಪದ ಪಾಲಬಾವಿಯ ಮಹಾಲಿಂಗ ನಿಂಗನೂರ(47), ಈರಪ್ಪ ಉಗಾರೆ(32) ಮೃತಪಟ್ಟವರು. ಈ ಘಟನೆಯಲ್ಲಿ ಇಮಾಮ್ ಸನದಿ ಅವರಿಗೆ ಸಣ್ಣ-ಪುಟ್ಟ ಗಾಯವಾಗಿದ್ದು, ಚಿಕಿತ್ಸೆಗಾಗಿ ಹಾರೂಗೇರಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ಚಾಲಕ ಸದ್ದಾಮ್ ಪಠಾಣ ಪರಾರಿಯಾಗಿದ್ದಾರೆ. ‘ವೇಗವಾಗಿ ವಾಹನ ಚಲಾಯಿಸಿದ್ದೇ ಅಪಘಾತಕ್ಕೆ …
Read More »Monthly Archives: ಜೂನ್ 2024
ಹುಕ್ಕೇರಿ: ಬಕ್ರೀದ್ ಶಾಂತಿ ಸಭೆ
ಹುಕ್ಕೇರಿ: ಬಕ್ರೀದ್ ಹಾಗೂ ಅಕಾನಿಬಾಷಾ ಉರುಸ್ ಶಾಂತಿಪಾಲನಾ ಪೂರ್ವಭಾವಿ ಸಭೆ ಪಾಶ್ಚಾಪುರ ಗ್ರಾಮದ ಪೊಲೀಸ್ ಠಾಣೆಯಲ್ಲಿ ಶನಿವಾರ ನಡೆಯಿತು. ಯಮಕನಮರಡಿ ಪಿ.ಐ. ಮಹಾದೇವ ಶಿರಹಟ್ಟಿ, ಎ.ಎಸ್.ಐ. ಎಸ್.ಬಿ. ಮುರಗೋಡ, ಪೊಲೀಸ್ ಸಿಬ್ಬಂದಿ ಗ್ರಾಮಸ್ಥರ ಕುರಿತು ಚರ್ಚಿಸಿ, ಸಲಹೆ, ಸೂಚನೆ ನೀಡಿದರು. ಪಾಶ್ಚಾಪುರ ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷ ಅಬ್ದುಲಗಣಿ ದರ್ಗಾ, ನಜೀರ ಮೊಮೀನ, ರಫೀಕ್ ಪೀರಜಾದೆ, ಅಣ್ಣಾಸಾಹೇಬ ಮಹಾಜನಶೆಟ್ಟಿ, ಅಮರ ಮಹಾಜನಶೆಟ್ಟಿ, ಹಯಾತಚಾಂದ ಸನದಿ, ಮಹೇಶ ಹೂಗಾರ, ಮಹಾಂತೇಶ …
Read More »ಜಗದೀಶ್ ಶೆಟ್ಟರ್ ಮುಂದೆ ಸವಾಲುಗಳ ಸಾಲು…
ಬೆಳಗಾವಿ: ಸಂಸದ ಜಗದೀಶ ಶೆಟ್ಟರ್ ಅವರನ್ನು ಬೆಳಗಾವಿ ಲೋಕಸಭಾ ಕ್ಷೇತ್ರದ ಜನ ‘ಮನೆಯ ಸದಸ್ಯ’ ಎಂದು ಒಪ್ಪಿಕೊಂಡಿದ್ದಾರೆ. ಅಭಿವೃದ್ಧಿ ಕೆಲಸಗಳ ಮೂಲಕವೇ ಅವರು ಈ ಮಾತಿಗೆ ‘ಠಸ್ಸೆ’ ಹೊಡೆಯಬೇಕಿದೆ. ‘ಬೆಳಗಾವಿಯಲ್ಲಿ ಶೆಟ್ಟರ್‌ಗೆ ಅಡ್ರೆಸ್ಸೇ ಇಲ್ಲ’ ಎಂಬ ಆರೋಪಕ್ಕೆ, ‘ಬೀಗರ ಮನೆಗೆ ಬಂದಿದ್ದೀರಿ ಶೆಟ್ಟರೇ, ಉಂಡು ವಾಪಸ್ ಹೋಗಿ’ ಎಂಬ ಮೂದಲಿಕೆಗೆ, ‘ಬೆಳಗಾವಿಗೆ ಮೋಸ ಮಾಡಿದವರಿಗೆ ಮತ ಕೊಡಬೇಕೆ?’ ಎಂಬ ಪ್ರಶ್ನೆಗಳಿಗೆ ಮತದಾರ ಈಗ ಉತ್ತರ ಕೊಟ್ಟಿದ್ದಾನೆ. ಶೆಟ್ಟರ್ ರಾಜಕೀಯ ಹೆಜ್ಜೆಯೊಂದನ್ನು …
Read More »ದಾರಿ ಯಾವುದಯ್ಯ ಹೊಲಕ್ಕೆ?
ಬೈಲಹೊಂಗಲ: ಮುಂಗಾರು ಬಂತೆಂದರೆ ರೈತರಿಗೆ ಜಮೀನುಗಳಿಗೆ ಹೇಗೆ ಹೋಗಬೇಕು, ಹೇಗೆ ಬಿತ್ತನೆ ಮಾಡಬೇಕು ಎಂಬುದೇ ಚಿಂತೆಯಾಗುತ್ತದೆ. ಈ ಬಾರಿ ಕೂಡ ಬೈಲಹೊಂಗಲ ಮತಕ್ಷೇತ್ರದ ಮಾಟೊಳ್ಳಿ ಗ್ರಾಮದ ರೈತರು ಹೊಲಕ್ಕೆ ಹೋಗುವ ದಾರಿ ಇಲ್ಲದೇ ಪರದಾಡುವಂತಾಗಿದೆ. ಗ್ರಾಮದ ಅಂಗಡಿ ಅವರ ಹೊಲದಿಂದ ಗುಡಿ ಅವರ ಹೊಲದವರೆಗೆ ಈ ಭಾಗದ ರೈತರ ಹೊಲಗಳಿಗೆ ಹೋಗುವ ರಸ್ತೆ ತೀರ ಹದಗೆಟ್ಟಿದ್ದು, ರೈತರ ಗೋಳು ಕೇಳುವರು ಯಾರು ಎಂಬತಾಗಿದೆ. ಮಳೆ ಆಗಿದ್ದರಿಂದ ಗ್ರಾಮದ ರೈತರ ಜಮೀನುಗಳಿಗೆ ಹೋಗಿ …
Read More »ವರುಣನ ಅಬ್ಬರ: ಆರಂಭದಲ್ಲೇ ಅವಾಂತರ
ಬೆಳಗಾವಿ: ಮುಂಗಾರು ಚುರುಕುಗೊಂಡಿದೆ. ಕುಡಿಯುವ ನೀರಿನ ಸಮಸ್ಯೆಯಿಂದ ಕಂಗೆಟ್ಟಿದ್ದ ಜನರು ತುಸು ನಿರಾಳವಾಗಿದ್ದಾರೆ. ಆದರೆ, ಮಳೆ ಸೃಷ್ಟಿಸಿದ ಅವಾಂತರಗಳು ನಗರದಲ್ಲಿ ಜನರನ್ನು ಮತ್ತೆ ಸಂಕಷ್ಟಕ್ಕೆ ತಳ್ಳುತ್ತಿವೆ. ಒಂದು ಸಮಸ್ಯೆ ನೀಗಿತು ಎನ್ನುಷ್ಟರಲ್ಲಿ ಮತ್ತೊಂದು ಧುತ್ತೆಂದು ಎದುರಾಗಿದೆ. ಒಂದು ತಾಸು ಧಾರಾಕಾರ ಮಳೆಯಾದರೆ ಸಾಕು; ವಿವಿಧ ಬಡಾವಣೆಗಳ ಮುಖ್ಯರಸ್ತೆಗಳಲ್ಲಿ ಅಪಾರ ಪ್ರಮಾಣದಲ್ಲಿ ನೀರು ಸಂಗ್ರಹವಾಗುತ್ತಿದೆ. ಚರಂಡಿಗಳು ತುಂಬಿ ಕೊಳಚೆ ನೀರು ರಸ್ತೆ ಮೇಲೆಯೇ ಹರಿಯುತ್ತಿದೆ. ಮರಗಳು ನೆಲಕ್ಕುರುಳುವುದು, ವಿದ್ಯುತ್ ಪರಿಕರಗಳಿಗೆ ಹಾನಿಯಾಗುವುದು, ತಗ್ಗು …
Read More »ವರ್ಷದೊಳಗೆ NDA ಸರ್ಕಾರ ಪತನವಾಗಲಿದೆ. ಸಂಸದ ಸಂಜಯ್ ಸಿಂಗ್
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರಕಾರ ಅಧಿಕಾರಕ್ಕೆ ಬಂದ ಒಂದೇ ವರ್ಷದಲ್ಲಿ ಪತನಗೊಳ್ಳಲಿದೆ ಎಂದು ಆಪ್ ಸಂಸದ ಸಂಜಯ್ ಸಿಂಗ್ ಭವಿಷ್ಯ ನುಡಿದಿದ್ದಾರೆ. ಸತತ ಮೂರನೇ ಬಾರಿಗೆ ದೇಶದ ಪ್ರಧಾನಿಯಾಗಿ ಭಾನುವಾರ ಪ್ರಮಾಣವಚನ ಸ್ವೀಕರಿಸುವ ಮೂಲಕ ಸರಕಾರ ರಚಿಸಿದ ಬಗ್ಗೆ ಪ್ರಯಾಗ್‌ರಾಜ್‌ನಲ್ಲಿರುವ ಸರ್ಕ್ಯೂಟ್ ಹೌಸ್‌ನಲ್ಲಿ ಸುದ್ದಿಗೋಷ್ಠಿ ನಡೆಸಿ ಪ್ರತಿಕ್ರಿಯಿಸಿದ ಸಂಜಯ್ ಸಿಂಗ್, ನರೇಂದ್ರ ಮೋದಿ ನೇತೃತ್ವದ ಹೊಸ ಸರ್ಕಾರ ಒಂದು ವರ್ಷದಲ್ಲಿ ಪತನವಾಗಲಿದೆ ಎಂದು ಹೇಳಿದ್ದಾರೆ. ಎನ್‌ಡಿಎ ಘಟಕಗಳ …
Read More »ಬರ ಮರೆಸಿದ ಮಳೆ; ಬಿತ್ತನೆಗೆ ಸಿದ್ಧತೆ
ನರಗುಂದ: ಬರದಿಂದ ತತ್ತರಿಸಿದ್ದ ತಾಲ್ಲೂಕಿನ ರೈತರಿಗೆ ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಮಳೆ ಹೊಸ ಭರವಸೆ ಮೂಡಿಸಿದೆ. ಕೃಷಿ ಹೊಂಡಗಳು, ಕೆರೆ- ಕಟ್ಟೆಗಳು ಭರ್ತಿಯಾಗಿದ್ದು ಕೃಷಿಕರಲ್ಲಿ ಉತ್ಸಾಹ ತುಂಬಿದೆ. ಕಳೆದ ಮೂರು ವರ್ಷಗಳಿಂದ ಮುಂಗಾರು ಮಳೆ ಸಕಾಲಕ್ಕೆ ಬಾರದ ಕಾರಣ ರೈತರು ತೊಂದರೆ ಅನುಭವಿಸಿದ್ದರು. ಆದರೆ, ಈ ಬಾರಿ ರೋಹಿಣಿ ಮಳೆ ಸ್ವಲ್ಪ ತಡವಾಗಿ ಸುರಿದರೂ ಬಿತ್ತನೆಗೆ ಅನುಕೂಲ ಕಲ್ಪಿಸಿದೆ. ಮೃಗಶಿರಾ ಆರಂಭದಿಂದಲೇ ಸುರಿಯುತ್ತಿದ್ದು ರೈತರಿಗೆ ನೆಮ್ಮದಿ ಕೊಟ್ಟಿದೆ. ಮಳೆಯಿಂದಾಗಿ ತಾಲ್ಲೂಕಿನ …
Read More »ಶಿರಹಟ್ಟಿ: ಮರಳು ಅಕ್ರಮ ದಂಧೆ ಅವ್ಯಾಹತ
ಶಿರಹಟ್ಟಿ: ಕಟ್ಟಡ ನಿರ್ಮಾಣ ಹಾಗೂ ವಿವಿಧ ಬಗೆಯ ನಿರ್ಮಾಣ ಕಾಮಗಾರಿಗಳು ಹೆಚ್ಚಾದಂತೆ ಮರಳು, ಕಲ್ಲಿನ ಬೇಡಿಕೆಯೂ ಹೆಚ್ಚುತ್ತದೆ. ಮರಳು ಸಂಗ್ರಹಕ್ಕಾಗಿ ನಿರ್ದಿಷ್ಟ ಸ್ಥಳಗಳಿರುತ್ತವೆ. ಸುಮ್ಮನೆ ನದಿ, ಕೆರೆ ಭಾಗಗಳಿಂದ ಎಲ್ಲೆಂದರಲ್ಲಿ ಮರಳು ಎತ್ತುವಂತಿಲ್ಲ. ಅದರೆ, ತಾಲ್ಲೂಕಿನಲ್ಲಿ ನಿಯಮಗಳನ್ನು ಮೀರುವುದು ದುಷ್ಟರಿಗೆ ಚಿಟಿಕೆ ಹೊಡೆದಷ್ಟೇ ಸುಲಭವಾಗಿದ್ದು, ಅಕ್ರಮ ಮರಳು ದಂಧೆಯನ್ನು ಅವ್ಯಾಹತವಾಗಿ ನಡೆಸುತ್ತಿದ್ದಾರೆ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ಹಿಂದುಳಿದ ತಾಲ್ಲೂಕು ಎಂಬ ಹಣೆಪಟ್ಟಿ ಕಟ್ಟಿಕೊಂಡಿದ್ದರೂ ಪ್ರಾಕೃತಿಕ ಸಂಪತ್ತು ಹೇರಳವಾಗಿರುವ ತಾಲ್ಲೂಕಿನ ಮೇಲೆಯೇ …
Read More »ಪ್ರಜ್ವಲ್ SIT ಕಸ್ಟಡಿ ಅಂತ್ಯ, ಇಂದು ಕೋರ್ಟ್‌ಗೆ ಹಾಜರು
ಬೆಂಗಳೂರು, ಜೂನ್ 10: ಹಾಸನದ ಅಶ್ಲೀಲ ವಿಡಿಯೋಗಳಿರುವ ಪೆನ್‌ಡ್ರೈವ್ ಪ್ರಕರಣದಲ್ಲಿ ಹತ್ತು ದಿನಗಳ ಹಿಂದೆ ಬಂಧಿತನಾಗಿದ್ದ ಪ್ರಜ್ವಲ್ ರೇವಣ್ಣ ಅವರನ್ನು ವಶಕ್ಕೆ ಪಡೆದಿದ್ದ ಎಸ್‌ಐಟಿ ಕಸ್ಟಡಿ ಅವಧಿ ಇಂದು ಅತ್ಯವಾಗಿದೆ. ಇಂದು ಮಧ್ಯಾಹ್ನ ಅವರನ್ನು ಮತ್ತೆ ನ್ಯಾಯಾಲಯಕ್ಕೆ ತನಿಖಾಧಿಕಾರಿಗಳು ಹಾಜರುಪಡಿಸಲಿದ್ದಾರೆ. ವಿದೇಶದಿಂದ ಭಾರತಕ್ಕೆ ಮೇ 31ರಂದು ಆಗಮಿಸಿದ್ದ ಮಾಜಿ ಸಂಸದ ಪ್ರಜ್ವಲ್ ರೇವಣ್ಣರನ್ನು ಎಸ್‌ಐಟಿ ವಶಕ್ಕೆ ಪಡೆದಿತ್ತು. ಅದಾದ ಬಳಿಕ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ತನಿಖೆ ಪೂರ್ಣಗೊಳಿಸಿದ್ದಾರೆ. ಕೃತ್ಯ ಎಸಗಿದ್ದ ಸ್ಥಳ …
Read More »ಕುಸಿಯುವ ಅಪಾಯಕ್ಕೆ ಸಿಲುಕಿದ ಪಶ್ಚಿಮ ಘಟ್ಟ
ಕಾರವಾರ: ಪಶ್ಚಿಮ ಘಟ್ಟ ಹಾದುಹೋಗಿರುವ ಉತ್ತರ ಕನ್ನಡ ಜಿಲ್ಲೆ ಪ್ರಾಕೃತಿಕವಾಗಿ ಸಮೃದ್ಧವೋ ಮಳೆಗಾಲದಲ್ಲಿ ಅಷ್ಟೇ ಅಪಾಯಕಾರಿಯೂ ಹೌದು! ಇಲ್ಲಿನ ಹಸಿರು ಪರಿಸರ, ಧುಮ್ಮಿಕ್ಕುವ ಜಲಪಾತಗಳನ್ನು ಕಣ್ತುಂಬಿಕೊಳ್ಳಲು ನಾನಾ ಕಡೆಯಿಂದ ಜನರು ಬರುತ್ತಿದ್ದರು. ಕುಮಟಾದ ತಂಡ್ರಕುಳಿ, ಯಲ್ಲಾಪುರದ ಕಳಚೆ, ಭಟ್ಕಳದ ಮುಟ್ಟಳ್ಳಿಯಲ್ಲಿ ಸಂವಿಸಿದ ಭೂಕುಸಿತ ಜನರನ್ನು ತಲ್ಲಣಗೊಳಿಸಿತು. ಕೆಲ ವರ್ಷಗಳಿಂದೀಚೆಗೆ ಜಿಲ್ಲೆಯಲ್ಲಿ ಸಾಲು ಸಾಲು ಭೂಕುಸಿತದ ಪ್ರಕರಣಗಳು ವರದಿಯಾಗುತ್ತಲೇ ಇವೆ. ಪರಿಸರ ಸೂಕ್ಷ್ಮ ಜಿಲ್ಲೆಯಲ್ಲಿ ಭೂಕುಸಿತದ ಕುರಿತು ಪರಿಶೀಲಿಸಿದ್ದ ಭಾರತೀಯ ಭೂಗರ್ಭಶಾಸ್ತ್ರ ಮಾಹಿತಿ …
Read More »