Breaking News

Monthly Archives: ಜೂನ್ 2024

ರಾಜ್ಯದಲ್ಲಿ 45,000 ಅತಿಥಿ ಶಿಕ್ಷಕರ ನೇಮಕಕ್ಕೆ ಒಪ್ಪಿಗೆ ನೀಡಿದ ಕರ್ನಾಟಕ ಸರ್ಕಾರ

ಬೆಂಗಳೂರು: ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಖಾಯಂ ಶಿಕ್ಷಕರ ನೇಮಕವಾಗುವವರೆಗೆ ಅಥವಾ ಶೈಕ್ಷಣಿಕ ವರ್ಷ ಮುಗಿಯುವವರೆಗೆ, ಯಾವುದು ಮೊದಲು ಬರುತ್ತದೋ ಆ ಕೊರತೆ ನೀಗಿಸಲು ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು. ರಾಜ್ಯಾದ್ಯಂತ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ 35,000 ಮತ್ತು ಪ್ರೌಢಶಾಲೆಗಳಿಗೆ 10,000 ಅತಿಥಿ ಶಿಕ್ಷಕರು ಸೇರಿದಂತೆ 45,000 ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲು ರಾಜ್ಯ ಸರ್ಕಾರ ತನ್ನ ಅನುಮೋದನೆ ನೀಡಿದೆ.ಈ ಕುರಿತು ಇತ್ತೀಚೆಗೆ ಆದೇಶ ಹೊರಡಿಸಿರುವ ಸಾರ್ವಜನಿಕ ಶಿಕ್ಷಣ ಇಲಾಖೆ …

Read More »

ಶಾಸಕ ತಮ್ಮಣ್ಣವರ್ ವಿರುದ್ಧ ಗುಡುಗಿದ ಸತೀಶ್ ಜಾರಕಿಹೊಳಿ

ಎಸ್ಸಿ ನಾಯಕರನ್ನು ತುಳಿದಿದ್ದಾರೆ ಎಂಬ ಕಾಂಗ್ರೆಸ್ ಶಾಸಕ ಮಹೇಂದ್ರ ತಮ್ಮಣ್ಣವರ್ ಆರೋಪಕ್ಕೆ ತಿರುಗೇಟು ನೀಡಿದ ಸತೀಶ್ ಜಾರಕಿಹೊಳಿ, ನಾನು ಯಾರನ್ನೂ ತುಳಿಯುವ ಪ್ರಶ್ನೆ ಇಲ್ಲ. ಚುನಾವಣೆಗೆ ಮೂರು ದಿನ ಇದ್ದಾಗಲೇ ಯಾರ ಕೈಗೂ ಶಾಸಕ ಸಿಕಿಲ್ಲ. ಸರಿಯಾಗಿ ಚುನಾವಣೆ ಮಾಡಲಿಲ್ಲ, ನಾನೇ ಇದ್ದು ಅವರನ್ನ ನೋಡಿದ್ದೇನೆ. ಅವರಿಗೆ ಟಿಕೇಟ್ ನಾವೇ ಕೊಡಿಸಿದ್ದೇವೆ. ಕಾಂಗ್ರೆಸ್ ಪಕ್ಷವನ್ನು ಬಿಟ್ಟು ತಮ್ಮ ಮಾವನ ಪರವಾಗಿ ಕೆಲಸವನ್ನು ಮಾಡಿದ್ದಾರೆ ಎಂದರು.   ಶಾಸಕ ಪಕ್ಷ ವಿರೋಧಿ …

Read More »

ಸವದಿ ವಿರುದ್ಧ ಸತೀಶ್ ಜಾರಕಿಹೊಳಿ‌ ಬಹಿರಂಗ ಅಸಮಾಧಾನ

ಲೋಕಸಭೆ ಚುನಾವಣೆ ಫಲಿತಾಂಶ ಬಂದ ನಂತರವೂ, ಚಿಕ್ಕೋಡಿಯಲ್ಲಿ ಗೆದ್ದ ನಂತರವೂ ಕಾಂಗ್ರೆಸ್ ಆಂತರಿಕ ಬೇಗುದಿ ತಣ್ಣಗಾಗಿಲ್ಲ. ಇದೀಗ ಬಿಜೆಪಿಯಿಂದ ಬಂದು ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಶಾಸಕರಾಗಿರುವ ಲಕ್ಷ್ಮಣ್ ಸವದಿ ವಿರುದ್ಧ ಸಚಿವ ಸತೀಶ್ ಜಾರಕಿಹೊಳಿ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ. ಬೆಳಗಾವಿ, ಜೂನ್ 7: ಲೋಕಸಭೆ ಚುನಾವಣೆಯಲ್ಲಿ (Lok Sabha Elections) ಚಿಕ್ಕೋಡಿ ಕ್ಷೇತ್ರದಲ್ಲಿ ಕಾಂಗ್ರೆಸ್ (Congress) ಅಭ್ಯರ್ಥಿಗೆ ಗೆಲುವಾದರೂ ಪಕ್ಷದ ಒಳಬೇಗುದಿ ಹೆಚ್ಚಾಗಿದೆ. ಇದೀಗ ಶಾಸಕ ಲಕ್ಷ್ಮಣ್ (Laxman Savadi) ಸವದಿ ವಿರುದ್ಧ ಸಚಿವ …

Read More »

ಬಿಜೆಪಿ ವಿರುದ್ಧ ಅಪಪ್ರಚಾರ ಪ್ರಕರಣ: ರಾಹುಲ್​ ಗಾಂಧಿಗೆ ಜಾಮೀನು

ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ವಿರುದ್ಧ ಅಪಪ್ರಚಾರ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ ಅವರಿಗೆ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಬೆಂಗಳೂರು, ಜೂನ್​ 07: ವಿಧಾನಸಭೆ ಚುನಾವಣೆ (Vidhan Sabha Election) ವೇಳೆ ಬಿಜೆಪಿ (BJP) ವಿರುದ್ಧ 40% ಸರ್ಕಾರ ಎಂದು ಅಪಪ್ರಚಾರ ಮಾಡಿದ್ದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ (Rahul Gandi) ಅವರಿಗೆ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಜಾಮೀನು …

Read More »

ಡಿ.ಕೆ. ಶಿವಕುಮಾರ್‌ ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಕೆಳಗೆ ಇಳಿಯೋದು ಫಿಕ್ಸ್?

ಡಿ.ಕೆ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ ಕಾಂಗ್ರೆಸ್ ಭರ್ಜರಿ ಮುನ್ನಡೆ ಕಾಣುತ್ತಿದೆ. ಹೀಗೆ ‘ಕನಕಪುರ ಬಂಡೆ’ ಎಂಬ ಹವಾ ಇಟ್ಟಿರುವ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ರಾಜ್ಯ ಕಾಂಗ್ರೆಸ್ ನಾಯಕರಲ್ಲೇ ಅಸಮಾಧಾನ ಮೂಡಿದೆ ಎಂಬ ಆರೋಪ ಕೇಳಿಬರುತ್ತಿದೆ. ಇದೇ ಕಾರಣಕ್ಕೆ ಇದೀಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನ ಕೆಳಗೆ ಇಳಿಸಲು ಎಲ್ಲಾ ಸಿದ್ಧತೆ ಸಾಗಿದೆ ಎಂಬ ಆರೋಪ ಕೇಳಿಬಂದಿದೆ. ಕಾಂಗ್ರೆಸ್ ಪಕ್ಷ ಲೋಕಸಭೆ ಚುನಾವಣೆ 2024ರಲ್ಲಿ ಅಂದುಕೊಂಡ ರೀತಿ ಗೆಲುವು …

Read More »

ಮಾನನಷ್ಟ ಮೊಕದ್ದಮೆ ಪ್ರಕರಣ: ಇಂದು ಬೆಂಗಳೂರು ನ್ಯಾಯಾಲಯಕ್ಕೆ ರಾಹುಲ್ ಗಾಂಧಿ

ಬೆಂಗಳೂರು: ಬಿಜೆಪಿ ಎಂಎಲ್ಸಿ ಕೇಶವ್ ಪ್ರಸಾದ್ ದಾಖಲಿಸಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ಬೆಂಗಳೂರಿನ ವಿಶೇಷ ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ. ಇಂದು ಬೆಳಗ್ಗೆ 10.30ಕ್ಕೆ ರಾಹುಲ್ ಗಾಂಧಿ ಅವರು ವಿಶೇಷ ಸಂಸದ/ಶಾಸಕರ ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ನ್ಯಾಯಾಲಯದ ಆವರಣದಲ್ಲಿ ಪಕ್ಷದ ಧ್ವಜಗಳನ್ನು ತರದಂತೆ ಅಥವಾ ಬಿಜೆಪಿ ವಿರುದ್ಧ ಘೋಷಣೆಗಳನ್ನು ಕೂಗದಂತೆ ಅವರು ಪಕ್ಷದ ಕಾರ್ಯಕರ್ತರಿಗೆ ಮನವಿ ಮಾಡಿದರು. ರಾಜ್ಯದ ಹಿಂದಿನ …

Read More »

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಶಿವರಾಜ್ ಸಿಂಗ್ ಚೌಹಾಣ್.?

ನವದೆಹಲಿ: ಮಧ್ಯ ಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನೇಮಿಸುವ ಸಾಧ್ಯತೆ ದಟ್ಟವಾಗಿದೆ. ಹಾಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿರುವ ಜೆ.ಪಿ. ನಡ್ಡಾ ಅವರ ಅಧಿಕಾರದ ಅವಧಿ ತಿಂಗಳಾಂತ್ಯಕ್ಕೆ ಮುಕ್ತಾಯವಾಗಲಿದೆ. ಮಧ್ಯಪ್ರದೇಶದ ವಿದಿಶಾ ಲೋಕಸಭಾ ಕ್ಷೇತ್ರದಿಂದ ಸುಮಾರು 8 ಲಕ್ಷ ಮತಗಳ ಅಂತರದಿಂದ ಭರ್ಜರಿ ಜಯಗಳಿಸಿ ಸಂಸತ್ತಿಗೆ ಆಯ್ಕೆಯಾಗಿರುವ ಶಿವರಾಜ್ ಸಿಂಗ್ ಚೌಹಾಣ್ ಅವರು ರಾಜ್ಯದ 29 ಕ್ಷೇತ್ರಗಳಲ್ಲಿಯೂ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬಂದಿದ್ದಾರೆ. 4 …

Read More »

ಬರ್ತ್‍ಡೇ ಪಾರ್ಟಿಗೆ ಕರೆದು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ

ಬೆಳಗಾವಿ: ಸ್ನೇಹಿತನನ್ನು ಬರ್ತ್‍ಡೇ (Birthday) ಪಾರ್ಟಿಗೆ ಕರೆದು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆಗೈದ ಘಟನೆ ಯರಗಟ್ಟಿ ತಾಲೂಕಿನ ನುಗ್ಗಾನಟ್ಟಿ ಗ್ರಾಮದಲ್ಲಿ ನಡೆದಿದೆ. ಹತ್ಯೆಗೀಡಾದ ಯುವಕನನ್ನು ಬಸವರಾಜ್ ಮುದ್ದಣ್ಣವರ (23) ಎಂದು ಗುರುತಿಸಲಾಗಿದೆ. ಬಸವರಾಜ್ ಎಂಎಸ್‍ಡಬ್ಲ್ಯೂ (MSW) ವ್ಯಾಸಂಗ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಆತನನ್ನು ಸ್ನೇಹಿತ ಮಲ್ಲಿಕಾರ್ಜುನ್ ಬರ್ತ್ ಡೇ ಪಾರ್ಟಿಗೆ ಕರೆದಿದ್ದ. ಬಳಿಕ ಆತ ಬರುತ್ತಿದ್ದಂತೆ ಗಲಾಟೆ ಆರಂಭಿಸಿ, ಐವರು ಸ್ನೇಹಿತರು ಸೇರಿ ಆತನ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾರೆ.

Read More »

ಮುಂದಿನ 4 ದಿನ ಭರ್ಜರಿ ಮಳೆಯಾಗುವ ಸಾಧ್ಯತೆಯಿದೆ ಎಂದ ಹವಾಮಾನ ಇಲಾಖೆ

ಮುಂದಿನ 4 ದಿನ ಭರ್ಜರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದ್ದು, 17 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಿಸಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಭಾರಿ ಮಳೆಯ ಮುನ್ಸೂಚನೆ ಕೊಟ್ಟಿದೆ. ಗುಡುಗು-ಮಿಂಚು, ಬಿರುಗಾಳಿ ಸಹಿತ ಮಳೆಯಾಗುವ ಸಂಭವವಿದ್ದು, 40 ಕಿ.ಮೀ ವೇಗದಲ್ಲಿ …

Read More »

ವಿಶ್ವ ಪರಿಸರ ದಿನವನ್ನು ಅಮರನಾಥ್ ಜಾರಕಿಹೊಳಿ ಅವರು ಗಿಡ ನೆಡುವುದರ ಮೂಲಕ ವಿಶ್ವ ಪರಿಸರ ದಿನ ಆಚರಣೆ ಮಾಡಲಾಯಿತು

ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಹೂಲಿಕಟ್ಟಿ ಗ್ರಾಮದಲ್ಲಿ ವಿಶ್ವ ಪರಿಸರ ದಿನವನ್ನು ಅಮರನಾಥ್ ಜಾರಕಿಹೊಳಿ ಅವರು ಗಿಡ ನೆಡುವುದರ ಮೂಲಕ ವಿಶ್ವ ಪರಿಸರ ದಿನ ಆಚರಣೆ ಮಾಡಲಾಯಿತು ಈ ಸಂದರ್ಭದಲ್ಲಿ ಚಿಕ್ಕೋಡಿ A C F S P abhayankar ಗೋಕಾಕ್ ಸಾಮಾಜಿಕ ವಲಯ ಅರಣ್ಯ ಅಧಿಕಾರಿ R F O anand hegade ಕೊಳವಿ ಗ್ರಾಂ ಪಂಚಾಯತ್ ಅಧ್ಯಕ್ಷ ಸಿದ್ದಪ್ಪ ಸಿಂಗಮ್ಮನವರ ಇನ್ನು ಮುಂತಾದವರು ಇದ್ದರು

Read More »