ನವದೆಹಲಿ: ಕೇಂದ್ರದಲ್ಲಿ ಇಂಡಿಯಾ ಮೈತ್ರಿಕೂಟ ಸರ್ಕಾರ ರಚನೆ ಪ್ರಯತ್ನ ಮಾಡುವುದಿಲ್ಲ. ಪ್ರತಿಪಕ್ಷವಾಗಿ ಕಾರ್ಯನಿರ್ವಹಿಸಲಿದೆ. ಬಿಜೆಪಿಯ ದ್ವೇಷದ ರಾಜಕಾರಣ ಮತ್ತು ಪ್ರಧಾನಿ ಮೋದಿ ಸರ್ವಾಧಿಕಾರದ ವಿರುದ್ಧ ಹೋರಾಟ ಮುಂದುವರೆಸಲಾಗುವುದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ದೆಹಲಿಯಲ್ಲಿ ಇಂಡಿಯಾ ಮೈತ್ರಿಕೂಟದ ನಾಯಕರ ಸಭೆಯ ನಂತರ ಅವರು ಮಾತನಾಡಿ, ಮುಂದಿನ ರಾಜಕೀಯ ತಂತ್ರಗಳ ಕುರಿತಾಗಿ ಸಭೆಯಲ್ಲಿ ಮೈತ್ರಿ ಪಕ್ಷಗಳ ನಾಯಕರು ಚರ್ಚೆ ನಡೆಸಿದ್ದಾರೆ. ಬಿಜೆಪಿ ಸರ್ವಾಧಿಕಾರದ ವಿರುದ್ಧ ನಮ್ಮ ಮೈತ್ರಿಕೂಟ ಸಂಘಟಿತ ಹೋರಾಟ …
Read More »Monthly Archives: ಜೂನ್ 2024
ವಾಲ್ಮೀಕಿ ಅಭಿವೃದ್ದಿ ನಿಗಮ ಹಗರಣ: ಇಂದು ಬಿಜೆಪಿಯಿಂದ ‘ರಾಜಭವನ ಚಲೋ’ ಪ್ರತಿಭಟನೆ
ಬೆಂಗಳೂರು: ಸಚಿವ ಬಿ.ನಾಗೇಂದ್ರ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸುವಂತೆ ಒತ್ತಾಯಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಗುರುವಾರ ರಾಜಭವನ ಚಲೋ ನಡೆಸಲಾಗುವುದು. ಮಹರ್ಷಿ ವಾಲ್ಮೀಕಿ ಎಸ್ಟಿ ಅಭಿವೃದ್ಧಿ ನಿಗಮದಿಂದ ಹಲವಾರು ವೈಯಕ್ತಿಕ ಖಾತೆಗಳಿಗೆ ಅಕ್ರಮವಾಗಿ ಹಣವನ್ನು ವರ್ಗಾಯಿಸಿದ ಆರೋಪವನ್ನು ನಾಗೇಂದ್ರ ಎದುರಿಸುತ್ತಿದ್ದಾರೆ ನಾಗೇಂದ್ರ ಅವರನ್ನು ಸಂಪುಟದಿಂದ ವಜಾಗೊಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಜೆಪಿ ಕಳೆದ ವಾರ ಗಡುವು ನೀಡಿತ್ತು. ಬಿಜೆಪಿ ಪ್ರಧಾನ ಕಾರ್ಯದರ್ಶಿ …
Read More »ಜೂನ್ 8ರಂದು ಮೋದಿ ಪ್ರಮಾಣ ವಚನ ಸ್ವೀಕಾರ:ಆದರೆ 8 ನೇ ತಾರೀಖನ್ನೇ ಆರಿಸಿಕೊಂಡಿದ್ದೇಕೆ ?
ನವದೆಹಲಿ: ಬಿಜೆಪಿ ನಾಯಕ ನರೇಂದ್ರ ಮೋದಿ ಅವರು ಜೂನ್ 8 ರಂದು ಮೂರನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಪ್ರಧಾನಿ ಮೋದಿಯವರ ದೊಡ್ಡ ಕಾರ್ಯಕ್ರಮಗಳಲ್ಲಿ ಎಂಟು ಸಂಖ್ಯೆ ಕಾಣಿಸಿಕೊಂಡಿರುವುದು ಇದೇ ಮೊದಲಲ್ಲ. ಆದರೆ ಸಂಖ್ಯಾಶಾಸ್ತ್ರದಲ್ಲಿ ಎಂಟರ ಮಹತ್ವವೇನು? ಸಂಖ್ಯಾಶಾಸ್ತ್ರದಲ್ಲಿ 8 ಸಂಖ್ಯೆ ಶನಿ ಗ್ರಹವನ್ನು ಸೂಚಿಸುತ್ತದೆ ಮತ್ತು 8 ನ್ಯಾಯದ ಸಂಕೇತವಾಗಿದೆ ಎಂದು ನೋಯ್ಡಾ ಮೂಲದ ಸಂಖ್ಯಾಶಾಸ್ತ್ರಜ್ಞ ರಾಹುಲ್ ಸಿಂಗ್ ಹೇಳುತ್ತಾರೆ . …
Read More »ರಾಜ್ಯದ 13 ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ
ಬೆಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ 13 ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಮುನ್ಸೂಚನೆ ಸಿಕ್ಕಿದ್ದು, ಜೂ.7ರ ವರೆಗೆ ಈ ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ಹಳದಿ ಅಲರ್ಟ್ ಘೋಷಣೆ ಮಾಡಿದೆ. ದಕ್ಷಿಣ ಕನ್ನಡ, ಬೆಳಗಾವಿ, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಕಲಬುರಗಿ, ಯಾದಗಿರಿ, ರಾಯಚೂರು, ಶಿವಮೊಗ್ಗ, ಹಾಸನ, ಬಳ್ಳಾರಿ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳ ಕೆಲವು ಕಡೆ ಭಾರಿ ಮಳೆಯಾಗುವ ಸಾಧ್ಯತೆಗಳಿವೆ. ಜೂ.7ರ ವರೆಗೆ ಹಳದಿ ಅಲರ್ಟ್ ಘೋಷಿಸಲಾಗಿದೆ. ಬುಧವಾರ ಹಲವು ಜಿಲ್ಲೆಗಳಲ್ಲಿ ಮಳೆಯಾಗಿದೆ. …
Read More »ಅಭಿವೃದ್ಧಿ ಹೆಸರಲ್ಲಿ ಪರಿಸರ ನಾಶ ಸಲ್ಲ:
ಸವದತ್ತಿ: ಇಲ್ಲಿನ ನ್ಯಾಯಾಲಯದ ಆವರಣದಲ್ಲಿ ಅರಣ್ಯ ಇಲಾಖೆ, ಕಾನೂನು ಸೇವಾ ಸಮಿತಿ ಮತ್ತು ವಕೀಲರ ಸಂಘದಿಂದ ಬುಧವಾರ ನಡೆದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮಕ್ಕೆ ಪ್ರಧಾನ ಸೆಷನ್ಸ್ ನ್ಯಾಯಾಧೀಶೆ ಸುಮಲತಾ ಬೆಣ್ಣಿಕಲ್ಲ ಅವರು ಸಸಿಗೆ ನೀರುಣಿಸಿ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು, ‘ಮನುಷ್ಯನ ದುರಾಸೆಯಿಂದ ಪ್ರಾಣಿ-ಪಕ್ಷಿಗಳು ಅವಸಾನದತ್ತ ಸಾಗಿವೆ. ಪರಿಸರ ಸಮತೋಲನದಿಂದ ಉತ್ತಮ ಮಳೆ, ನಿಯಮಿತ ತಾಪಮಾನ ಸಾಧ್ಯವಿದೆ. ಅಭಿವೃದ್ಧಿ ಹೆಸರಲ್ಲಿ ಪರಿಸರ ಹಾಳು ಮಾಡಬಾರದು’ …
Read More »ಸಂಶೋಧನೆಗಳು ಸಮಾಜ ಎದುರಿಸುತ್ತಿರುವ ಸಮಸ್ಯೆಗಳ ನಿವಾರಣೆಗೆ ಪೂರಕವಾಗಿರಬೇಕು’ ಎಂದ ಕುಲಪತಿ ಪ್ರೊ.ಸಿ.ಎಂ.ತ್ಯಾಗರಾಜ
ಬೆಳಗಾವಿ: ‘ಸಂಶೋಧನೆಗಳು ಸಮಾಜ ಎದುರಿಸುತ್ತಿರುವ ಸಮಸ್ಯೆಗಳ ನಿವಾರಣೆಗೆ ಪೂರಕವಾಗಿರಬೇಕು’ ಎಂದು ಕುಲಪತಿ ಪ್ರೊ.ಸಿ.ಎಂ.ತ್ಯಾಗರಾಜ ಹೇಳಿದರು. ಇಲ್ಲಿನ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುವೆಂಪು ಸಭಾಭವನದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಸಂಶೋಧನಾ ವಿದ್ಯಾರ್ಥಿಗಳ ಜೊತೆ ಚರ್ಚೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ‘ಸರ್ಕಾರ ಮತ್ತು ವಿಶ್ವವಿದ್ಯಾಲಯದಿಂದ ಹಲವು ಸೌಕರ್ಯ, ಶಿಷ್ಯವೇತನ ನೀಡಲಾಗುತ್ತದೆ. ಜವಾಬ್ದಾರಿಯಿಂದ ಸಂಶೋಧನಾ ಅಧ್ಯಯನ ಮಾಡಬೇಕು. ವಿವಿಧ ವಿಶ್ವವಿದ್ಯಾಲಯಗಳ ಸಂಶೋಧನೆಗಳ ಕುರಿತು ಅಭ್ಯಸಿಸಬೇಕು’ ಎಂದರು. ಸಂಪನ್ಮೂಲ ವ್ಯಕ್ತಿ ಶ್ರೀನಿವಾಸ ಪೋತಪ್ರಗಾಧ, ‘ಸಂಶೋಧನಾ ವಿದ್ಯಾರ್ಥಿಗಳಲ್ಲಿ …
Read More »ಜಾಲತಾಣದಲ್ಲಿ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ರಾಜೀನಾಮೆ ಪತ್ರ!
ಚಿಕ್ಕಬಳ್ಳಾಪುರ: ‘ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಒಂದು ಮತವನ್ನು ಡಾ.ಕೆ.ಸುಧಾಕರ್ ಹೆಚ್ಚು ಪಡೆದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ’ ಎಂದು ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಮತ್ತು ಮತದಾನದ ನಂತರವೂ ಶಾಸಕ ಪ್ರದೀಪ್ ಈಶ್ವರ್ ಹೇಳಿದ್ದು, ಈ ಮಾತುಗಳು ಈಗ ತೀವ್ರ ಟ್ರೋಲ್‌ಗೆ ಗುರಿಯಾಗಿದೆ. ಬಿಜೆಪಿ ಮುಖಂಡರು, ಕಾರ್ಯಕರ್ತರು ‘ಪ್ರದೀಪ್ ರಾಜೀನಾಮೆ ಯಾವಾಗ’ ಎಂದು ಪ್ರಶ್ನಿಸುತ್ತಿದ್ದಾರೆ. ಈ ನಡುವೆ ಪ್ರದೀಪ್ ಈಶ್ವರ್ ಅಯ್ಯರ್ ಪಿ.ಇ, ಶಾಸಕರು, ಕರ್ನಾಟಕ ವಿಧಾನಸಭೆ ಎನ್ನುವ ರಾಜೀನಾಮೆ …
Read More »ಎನ್ ಡಿಎ ನಾಯಕರ ಸಭೆ ಅಂತ್ಯ, ಮೋದಿ ಸರ್ಕಾರ ರಚನೆಗೆ ಬೆಂಬಲ ಪತ್ರ ನೀಡಿದ ನಿತೀಶ್, ನಾಯ್ಡು
ನವದೆಹಲಿ: ತೀವ್ರ ಕುತೂಹಲ ಮೂಡಿಸಿದ್ದ ಎನ್ ಡಿಎ ನಾಯಕರ ಸಭೆ ಅಂತ್ಯವಾಗಿದ್ದು, ನರೇಂದ್ರ ಮೋದಿ ನೇತೃತ್ವದಲ್ಲಿ ಸರ್ಕಾರ ರಚನೆಗೆ ಟಿಡಿಪಿ ಹಾಗೂ ಜೆಡಿಯು ಸೇರಿದಂತೆ ಎಲ್ಲಾ ಮಿತ್ರ ಪಕ್ಷಗಳು ಒಪ್ಪಿಗೆ ಸೂಚಿಸಿವೆ. ಮೋದಿ ಅವರು ಜೂನ್ 7 ರಂದು ಸಂಜೆ 5ಕ್ಕೆ ರಾಷ್ಟ್ರಭವನಕ್ಕೆ ತೆರಳಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ. ಮೋದಿ ಅವರಿಗೆ ಎನ್ ಡಿಎ ನಾಯಕರು ಸಾಥ್ ನೀಡಲಿದ್ದಾರೆ. ಇಂದು ಮೋದಿ …
Read More »ಕರ್ನಾಟಕದಲ್ಲಿ 3 ಮಹಿಳೆಯರಿಗೆ ಮಾತ್ರ ಗೆಲುವು: ಯಾರು, ಯಾವ ಪಕ್ಷ?
ಬೆಂಗಳೂರು, ಜೂನ್ 05: ಕರ್ನಾಟಕ ರಾಜ್ಯದಲ್ಲಿ ನಡೆದ ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, 2024ರಲ್ಲಿ ಮೂವರು ಮಹಿಳಾ ಮಣಿಗಳು ಸಂಸತ್‌ಗೆ ಆಯ್ಕೆ ಆಗಿದ್ದಾರೆ. ಒಟ್ಟು 28 ಮಂದಿ ಪೈಕಿ ಮೂವರು ರಾಜ್ಯದ ಮಹಿಳೆಯರನ್ನು ಪ್ರತಿನಿಧಿಸಿದ್ದಾರೆ. ಬಾಕಿ 25 ಕ್ಷೇತ್ರಗಳಲ್ಲಿ ಪುರುಷ ಅಭ್ಯರ್ಥಿಗಳು ಗೆದ್ದಿದ್ದಾರೆ. ಯಾರು ಯಾವ ಕ್ಷೇತ್ರ? ಯಾವ ಪಕ್ಷಗಳು?, ರಾಜಕೀಯ ಬೆಳವಣಿಗೆ ಬಗ್ಗೆ ಇಲ್ಲಿ ತಿಳಿಯಿರಿ. ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಲೋಕಸಭೆಗೆ ಚುನಾವಣೆ ಮತದಾನ ನಡೆಯಿತು. ಪ್ರಕಟಗೊಂಡ ಫಲಿತಾಂಶದಲ್ಲಿ …
Read More »ನಾನು ಯಾವುದೇ ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ
ಹುಬ್ಬಳ್ಳಿ, ಜೂನ್ 05: ಬೆಳಗಾವಿಗೆ ನಾನು ವಲಸಿಗ, ಹೊರಗಿನವನು ಎಂದು ಟೀಕಿಸಿದವರಿಗೆ ಜನರೇ ಚುನಾವಣೆಯಲ್ಲಿ ಉತ್ತರ ಕೊಟ್ಟಿದ್ದಾರೆ. ಇದೀಗ 1ಲಕ್ಷ 80 ಸಾವಿರ ಅಂತರದಿಂದ ಜಯಗಳಿಸಿದ್ದೇವೆ. ನಾನು ಯಾವುದೇ ಮಂತ್ರಿ ಸ್ಥಾನದ ಆಕಾಂಕ್ಷಿ ಅಲ್ಲ ಎಂದು ಅವರು ತಿಳಿಸಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಗೆದ್ದ ನಂತರ ಮೊದಲ ಬಾರಿಗೆ ಹುಬ್ಬಳ್ಳಿಯ ಶ್ರೀ ಸಿದ್ದಾರೂಢ ಮಠಕ್ಕೆ ಭೇಟಿ ನೀಡಿದ ಜಗದೀಶ್ ಶೆಟ್ಟರ್ ಅವರಿಗೆ ಬಿಜೆಪಿ ಕಾರ್ಯಕರ್ತರು ಹಾಗೂ ಶೆಟ್ಟರ್ ಅಭಿಮಾನಿಗಳು ಅದ್ದೂರಿಯಾಗಿ …
Read More »