ಮುಂಬೈ: ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಎನ್ ಡಿಎ ನಿರೀಕ್ಷಿತ ಸ್ಥಾನಗಳಲ್ಲಿ ಗೆಲುವು ಸಾಧಿಸುವಲ್ಲಿ ವಿಫಲವಾಗಿದ್ದು, ಸರ್ಕಾರ ರಚನೆಯಲ್ಲಿ ಜೆಡಿಯು ನಾಯಕ ನಿತೀಶ್ ಕುಮಾರ್ ಹಾಗೂ ಟಿಡಿಪಿ ಮುಖಂಡ ಚಂದ್ರಬಾಬು ನಾಯ್ಡು ಅವರ ಪಾತ್ರ ಮಹತ್ವದ್ದಾಗಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಸೆಳೆಯಲು ಬಿಜೆಪಿ ಹಾಗೂ ವಿಪಕ್ಷಗಳ ಮೈತ್ರಿಕೂಟದ ನಾಯಕರು ಮುಂದಾಗಿದ್ದಾರೆ ಎನ್ನಲಾಗಿದೆ. ಈ ಮಧ್ಯೆ ಸುದ್ದಿಗಾರರೊಂದಿಗೆ ಮಾತನಾಡಿದ ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್, ಮುಂದಿನ ಕಾರ್ಯತಂತ್ರ ಕುರಿತು ಚರ್ಚಿಸಲು ನಾಳೆ …
Read More »Monthly Archives: ಜೂನ್ 2024
ಹೂಡಿಕೆದಾರರಿಗೆ ಬಿಗ್ ಶಾಕ್: 21.5 ಲಕ್ಷ ಕೋಟಿ ನಷ್ಟ: ಭಾರೀ ಕುಸಿತ ಕಂಡ ಸೆನ್ಸೆಕ್ಸ್
ಮುಂಬೈ: ಸೆನ್ಸೆಕ್ಸ್ 4000 ಅಂಕಗಳಿಗಿಂತ ಹೆಚ್ಚು ಕುಸಿತ ಕಂಡಿದೆ. ಪ್ರಸ್ತುತ 3132.12 ಪಾಯಿಂಟ್‌ಗಳ ಇಳಿಕೆಯೊಂದಿಗೆ 73,336.66 ನಲ್ಲಿ ವಹಿವಾಟು ನಡೆಸುತ್ತಿದೆ. ಲೋಕಸಭಾ ಚುನಾವಣಾ ಫಲಿತಾಂಶಗಳ ಮತ ಎಣಿಕೆ ನಡುವೆ ಸೆನ್ಸೆಕ್ಸ್ 4,000 ಅಂಕಗಳ ಕುಸಿತ, ನಿಫ್ಟಿ 22,300 ಕ್ಕಿಂತ ಕೆಳಗೆ ಕುಸಿದಿದೆ. ಷೇರು ಮಾರುಕಟ್ಟೆ ಹೂಡಿಕೆದಾರರು 21.5 ಲಕ್ಷ ಕೋಟಿ ಸಂಪತ್ತಿನ ನಷ್ಟ ಅನುಭವಿಸಿದ್ದಾರೆ. ಬಿಎಸ್‌ಇಯಲ್ಲಿ ಎಲ್ಲಾ ಲಿಸ್ಟೆಡ್ ಕಂಪನಿಗಳ ಸಂಯೋಜಿತ ಮಾರುಕಟ್ಟೆ ಬಂಡವಾಳವು 404.42 ಲಕ್ಷ ಕೋಟಿ ರೂ.ಗೆ …
Read More »ಲೋಕಸಭೆ ಚುನಾವಣೆ ಫಲಿತಾಂಶ 2024: ಸಚಿವರ ಮಕ್ಕಳಲ್ಲಿ ಯಾರ್ಯಾರು ಗೆದ್ರು? ಯಾರು ಸೋತ್ರು?
ಬಾಗಲಕೋಟೆ ಲೋಕಸಭಾ ಕ್ಷೇತ್ರದಲ್ಲಿ ಸತತ ಸೋಲಿನಿಂದ ಕಂಗೆಟ್ಟಿದ್ದ ಕಾಂಗ್ರೆಸ್ ಈ ಚುನಾವಣೆಯಲ್ಲಿ ಸಚಿವ ಶಿವಾನಂದ ಪಾಟೀಲ್ ಪುತ್ರಿ, ಯುವ ಮುಖ ಸಂಯಕ್ತಾ ಪಾಟೀಲ್ (Samyukta Shivanand Patil) ಅವರನ್ನು ಅಖಾಡಕ್ಕಿಳಿಸಿತ್ತು. ಆದರೆ ಸಂಯುಕ್ತ ಪಾಟೀಲ್ ಅವರಿಗೆ ಸೋಲಾಗಿದೆ. ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಸಚಿವ ಸತೀಶ್ ಜಾರಕಿಹೊಳಿ ಅವರ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ (Priyanka Jarakiholi) ಅವರು ಕಣದಲ್ಲಿದ್ದರು. ಪ್ರಿಯಾಂಕಾ ಸತೀಶ್ ಜಾರಕಿಹೊಳಿ ಇದೇ ಮೊದಲ ಬಾರಿಗೆ ಚುನಾವಣೆ ಎದುರಿಸಿದ್ದು, …
Read More »ಫಲಿತಾಂಶ ಬಳಿಕ ಸರ್ಕಾರ ರಚಿಸಲು ‘INDIA’ ರಣತಂತ್ರ : ನಿತೀಶ್ ಕುಮಾರ್ ಗೆ ಉಪಪ್ರಧಾನಿ ಪಟ್ಟದ ಆಫರ್!
ನವದೆಹಲಿ : ಲೋಕಸಭೆಯ ಫಲಿತಾಂಶ ಬಹುತೇಕ ಇದೀಗ ಹೊರಬಿದ್ದಿದ್ದು, ಎನ್ ಡಿ ಎ ಸುಮಾರು 300ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆದಿದ್ದು ಅಲ್ಲದೆ ಇಂಡಿಯಾ ಮೈತ್ರಿಕೂಟ ಕೂಡ 230 ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆಯುವಲ್ಲಿ ಯಶಸ್ವಿಯಾಗಿದೆ. ಇದೀಗ ಇಂಡಿಯಾ ಹೊಸ ರಣತಂತ್ರ ಒಂದು ಹೆಣೆದಿದ್ದು ಟಿಡಿಪಿ ನಾಯಕ ಚಂದ್ರಬಾಬು ನಾಯ್ಡು ಹಾಗೂ ನಿತೀಶ್ ಕುಮಾರ್ ಅವರ ಜೊತೆ ಹೇಗೆ ಮಾತುಕತೆ ನಡೆಸಿದ್ದು ಭರ್ಜರಿ ಆಫರ್ ಒಂದನ್ನು ನೀಡಿದೆ ಎಂದು ಹೇಳಲಾಗುತ್ತಿದೆ. ಹೌದು …
Read More »ಲೋಕಸಭಾ ಚುನಾವಣೆ ಫಲಿತಾಂಶ: ಬೆಂಗಳೂರಿನ 4 ಕ್ಷೇತ್ರಗಳಲ್ಲೂ ಬಿಜೆಪಿ ಭರ್ಜರಿ ಗೆಲುವು
ಬೆಂಗಳೂರು: ಇಂದು ಪ್ರಕಟವಾದಂತ ಲೋಕಸಭಾ ಚುನಾವಣೆ ಫಲಿತಾಂಶದಲ್ಲಿ ಬೆಂಗಳೂರಿನ ನಾಲ್ಕು ಕ್ಷೇತ್ರಗಳಲ್ಲೂ ಬಿಜೆಪಿ ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಭಾರಿ ಮಖಭಂಗ ಉಂಟಾಗಿದೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೆಂಗಳೂರಿನ 4 ಲೋಕಸಭಾ ಕ್ಷೇತ್ರದಲ್ಲಿ ಭಾರೀ ಮುಖಭಂಗವೇ ಉಂಟಾಗಿದೆ. ನಾಲ್ಕಕ್ಕೆ ನಾಲ್ಕು ಕ್ಷೇತ್ರಗಳನ್ನು ಬಿಜೆಪಿ ಗೆದ್ದುಕೊಂಡಿದೆ. ಬೆಂಗಳೂರು ಉತ್ತರ ಕ್ಷೇತ್ರದಿಂದ ಚಿಕ್ಕಮಗಳೂರು – ಉಡುಪಿ ಕ್ಷೇತ್ರವನ್ನು ತೊರೆದು ಶೋಭಾ ಕರಂದ್ಲಾಜೆ ಸ್ಪರ್ಧಿಸಿದ್ದರು. …
Read More »ಚಿಕ್ಕೋಡಿಯಲ್ಲಿ ಸಚಿವ ಸತೀಶ ಜಾರಕಿಹೊಳಿ ಅವರನ್ನು ಹೆಗಲ ಮೇಲೆ ಹೊತ್ತು ವಿಜಯೋತ್ಸವ ಆಚರಿಸಿದ ಕಾರ್ಯಕರ್ತರು
ಚಿಕ್ಕೋಡಿಯಲ್ಲಿ ಸಚಿವ ಸತೀಶ ಜಾರಕಿಹೊಳಿ ಅವರನ್ನು ಹೆಗಲ ಮೇಲೆ ಹೊತ್ತು ವಿಜಯೋತ್ಸವ ಆಚರಿಸಿದ ಕಾರ್ಯಕರ್ತರು
Read More »ನನಗೆ ಯಾವ ಬೆದರಿಕೆನೂ ಇಲ್ಲ, ನಾಗೇಂದ್ರ ರಾಜೀನಾಮೆ ನಾವು ಕೇಳಿಲ್ಲ: ಸಿಎಂ
ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ ಆಗಿರುವ ಹಗರಣಕ್ಕೆ ಸಂಬಂಧಿಸಿದಂತೆ ನಾಗೇಂದ್ರ (Minister Nagendra) ರಾಜೀನಾಮೆ ನಾವು ಕೇಳಿಲ್ಲ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ. ವಾಲ್ಮೀಕಿ ನಿಗಮದಲ್ಲಿ ಆಗಿರುವ ಹಗರಣಕ್ಕೆ ಸಂಬಂಧಿಸಿದಂತೆ ಹಾಲಿ ಸಚಿವ ನಾಗೇಂದ್ರ ಬೆದರಿಕೆಯೊಡ್ಡಿದ್ದಾರೆ ಎಂಬ ಆರೋಪದ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಯಾವ ಬೆದರಿಕೆನೂ ಇಲ್ಲ, ನಾಗೇಂದ್ರ ರಾಜೀನಾಮೆ ನಾವು ಕೇಳಿಲ್ಲ. ಎಸ್‌ಐಟಿ ವರದಿ ಇನ್ನೂ ಬಂದಿಲ್ಲ. ಎಸ್‌ಐಟಿ ರಚನೆ ಮೊನ್ನೆ ಆಗಿರುವುದಲ್ವೇನ್ರಿ ? ಅವರು …
Read More »ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಗೆಲ್ಲೋದು ನಾವೇ: ಡಿಸಿಎಂ ಡಿಕೆಶಿ
ರಾಮನಗರ: ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ನಾವೇ ಗೆಲ್ಲುತ್ತೇವೆ ಎಂಬುದಾಗಿ ಸಹೋದರ ಡಿ.ಕೆ ಸುರೇಶ್ ಪರವಾಗಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಗೆಲುವಿನ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ. ರಾಮನಗರ ಜಿಲ್ಲೆಯ ಕನಕಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಲೋಕಸಭಾ ಚುನಾವಣೆಯಲ್ಲಿ ನಾವೇ ಗೆಲ್ಲುತ್ತೇವೆ ಎಂಬುದಾಗಿ ಹೇಳಿದರು. ಈ ಮೂಲಕ ಸಹೋದರ ಡಿ.ಕೆ ಸುರೇಶ್ ಗೆಲ್ಲುವ ಬಗ್ಗೆ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ. “ಮೋದಿ ಅವರ ನೂರು ದಿನಗಳ …
Read More »ಚನ್ನಮ್ಮನ ಕಿತ್ತೂರು | ಶೌಚಕ್ಕೆ ವಿದ್ಯಾರ್ಥಿನಿಯರ ಪರದಾಟ
ಚನ್ನಮ್ಮನ ಕಿತ್ತೂರು: ಗ್ರಾಮಾಂತರ ಪ್ರದೇಶದ ಪ್ರಥಮ ಬಾಲಕಿಯರ ಸರ್ಕಾರಿ ಪ್ರೌಢಶಾಲೆ ಎಂಬ ಹೆಗ್ಗಳಿಕೆ ಹೊಂದಿರುವ ಇಲ್ಲಿನ ಸರೋಜಾತಾಯಿ ಮಾರಿಹಾಳ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯು ವಿದ್ಯಾರ್ಥಿನಿಯರ ಸಂಖ್ಯೆಗೆ ಅಗತ್ಯವಾಗಿರುವ ಮೂತ್ರಾಲಯ ವ್ಯವಸ್ಥೆಯನ್ನು ಹೊಂದಿಲ್ಲ. ಹೀಗಾಗಿ ಅವರು ನಿತ್ಯ ತೊಂದರೆ ಅನುಭವಿಸುವಂತಾಗಿದೆ. ‘ವರ್ಷದಿಂದ ವರ್ಷಕ್ಕೆ ಏರುತ್ತಿರುವ ವಿದ್ಯಾರ್ಥಿನಿಯರ ಸಂಖ್ಯೆಗೆ ಅನುಗುಣವಾಗಿ ಸರ್ಕಾರ ಮೂತ್ರಾಲಯ ಸೌಲಭ್ಯ ಕಲ್ಪಿಸಬೇಕಿತ್ತು. ಈ ಬಗ್ಗೆ ಜನಪ್ರತಿನಿಧಿಗಳು, ಅಧಿಕಾರಿಗಳು ಗಮನ ಹರಿಸಲು ಹೋಗಿಲ್ಲ’ ಎಂದು ದೂರುತ್ತಾರೆ ಪಾಲಕರು. ‘ಬಾಲಕಿಯರ ಪ್ರೌಢಶಾಲೆಯ ಬಳಿಯೇ …
Read More »ವಿಜಯನಗರ ಜಿಲ್ಲೆಯಲ್ಲಿ ವ್ಯಾಪಕವಾಗಿ ಸುರಿದ ವರುಣ; ಹೊಸಪೇಟೆಯಲ್ಲಿ 8.6 ಸೆಂ.ಮೀ.ಮಳೆ
ಹೊಸಪೇಟೆ (ವಿಜಯನಗರ): ಹೊಸಪೇಟೆ ನಗರ ಸೇರಿದಂತೆ ಜಿಲ್ಲೆಯ ವಿವಿಧ ಕಡೆಗಳಲ್ಲಿ ಭಾನುವಾರ ರಾತ್ರಿ ಉತ್ತಮ ಮಳೆ ಸುರಿಯಿತು. ಹೊಸಪೇಟೆ ಪ್ರವಾಸಿ ಮಂದಿರದ ಬಳಿ 8.64 ಸೆಂ.ಮೀ. ಮಳೆಯಾಗಿದೆ. ಗುಡುಗು, ಸಿಡಿಲಿನೊಂದಿಗೆ ರಾತ್ರಿ 1 ಗಂಟೆ ಸುಮಾರಿಗೆ ಮಳೆ ಆರಂಭವಾಯಿತು. ಮಳೆಯ ಬಿರುಸು ಸಾಮಾನ್ಯವಾಗಿತ್ತು. ಹೊಸಪೇಟೆ ನಗರದಲ್ಲಿ ಸುಮಾರು ಮೂರು ಗಂಟೆ ಸಾಧಾರಣ ಮಳೆ ಸುರಿಯಿತು. ನಗರದ 18ನೇ ವಾರ್ಡ್‌ನಲ್ಲಿ ಕೆಲವು ಮನೆಗಳಿಗೆ ನೀರು ನುಗ್ಗಿದೆ, ನೀಲಮ್ಮ ಚಿದಾನಂದಪ್ಪ ಎಂಬುವವರು ತಮ್ಮ ಮನೆಯೊಳಗೆ …
Read More »