Breaking News

Monthly Archives: ಜೂನ್ 2024

ರಾಜ್ಯದಲ್ಲಿ ಆತಂಕ ಮೂಡಿಸಿದ ‘ಡೇಂಘಿ’ ಜ್ವರ : ಹಾವೇರಿಯಲ್ಲಿ ಮಹಾಮಾರಿಗೆ ಮೊದಲ ಬಲಿ!

ಹಾವೇರಿ : ರಾಜ್ಯದಲ್ಲಿ ಡೇಂಘಿ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು ಇದೀಗ ಹಾವೇರಿ ಜಿಲ್ಲೆಯಲ್ಲಿ ಡೇಂಘಿ ಮಹಾಮಾರಿಗೆ ಮೊದಲ ಬಲಿಯಾಗಿದ್ದು, ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ನರೇಗಲ್ ಗ್ರಾಮದ 30 ವರ್ಷದ ಮಹಿಳೆ ಡೇಂಘಿಗೆ ಸಾವನ್ನಪ್ಪಿದ್ದಾರೆ. ಹೌದು ಮಹಾಮಾರಿ ಡೇಂಘಿಗೆ 30 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ.ಹಾನಗಲ್ ತಾಲೂಕಿನ ನರೇಗಲ್ಲ ಗ್ರಾಮದ ಗೌಸಿಯ (30) ಎಂಬ ಮಹಿಳೆ ಇದೀಗ ಸಾವನ್ನಪ್ಪಿದ್ದಾರೆ.ಹಾವೇರಿ ನಗರದ ಮಲ್ಲಾಡದ ಆಸ್ಪತ್ರೆಯಲ್ಲಿ ನಿನ್ನೆ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ತೀವ್ರ ಜ್ವರದಿಂದ …

Read More »

ಭಾರೀ ಮಳೆಗೆ ಧರೆ ಕುಸಿದು ಮನೆಗೆ ಹಾನಿ, ಮಣ್ಣಿನಡಿಯಲ್ಲಿ ಸಿಲುಕಿದ ಮಕ್ಕಳ ರಕ್ಷಣೆ

ಪುತ್ತೂರು: ತಾಲೂಕಿನೆಲ್ಲೆಡೆ ಭಾರಿ ಮಳೆಗೆ ಅನೇಕ ಕಡೆ ಧರೆ ಕುಸಿದ ಘಟನೆ ನಡೆಯುತ್ತಿದ್ದು, ಪುತ್ತೂರು ಬನ್ನೂರಿನ ಜೈನರಗುರಿ ಸಮೀಪ ಮಜೀದ್ ಎಂಬರ ಮನೆ ಮೇಲೆ ಧರೆ ಕುಸಿದ ಪರಿಣಾಮ ಮನೆ ಹಾನಿಗೊಂಡ ಮತ್ತು ನಿದ್ದೆಯಲ್ಲಿದ್ದ ಮಕ್ಕಳು ಮಣ್ಣಿನಡಿಯಲ್ಲಿ ಸಿಲುಕಿದ ಘಟನೆ ಜೂ.27 ರ ನಸುಕಿನ ಜಾವ ನಡೆದಿದೆ. ಬನ್ನೂರು ಜೈನರಗುರಿ ಮಜೀದ್ ಎಂಬವರ ಮನೆಯ ಪಕ್ಕದ ಧರೆಯೊಂದರ ಮಣ್ಣು ಮಳೆಗೆ ಸಡಿಲಗೊಂಡು ಮನೆ ಮೇಲೆ ಕುಸಿದು ಬಿದ್ದಿದೆ. ಮಜೀದ್ ಮತ್ತು …

Read More »

3 ದಿನ ಸಿಎಂ ಸಿದ್ದರಾಮಯ್ಯ ದೆಹಲಿ ಪ್ರವಾಸ

ಬೆಂಗಳೂರು : ರಾಜ್ಯಕ್ಕೆ ಬರುವ ಅನುದಾನಗಳ ಕುರಿತು ಕೇಂದ್ರಕ್ಕೆ ಮನವಿ ಸಲ್ಲಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿನಿಂದ ಮೂರು ದಿನಗಳ ಕಾಲ ದೆಹಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಅಲ್ಲದೆ ನಾಳೆ ಮೂರನೇ ಬಾರಿಗೆ ಪ್ರಧಾನಿಯಾದ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಅಭಿನಂದನೆ ತಿಳಿಸಲಿದ್ದಾರೆ. ಹೌದು ಇಂದಿನಿಂದ ಮೂರು ದಿನಗಳ ಕಾಲ ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿ ಪ್ರವಾಸ ಕೈಗೊಳ್ಳಲಿದ್ದಾರೆ. ರಾಜ್ಯಕ್ಕೆ ಬರಬೇಕಿರುವ ಅನುದಾನಗಳ ಬಗ್ಗೆ ಕೇಂದ್ರಕ್ಕೆ ಮನವಿ ಸಲ್ಲಿಸಲಿದ್ದಾರೆ. ಕೇಂದ್ರ ಸಚಿವರನ್ನು ಭೇಟಿಯಾಗಿ ಮುಖ್ಯಮಂತ್ರಿ …

Read More »

ಏಳು ತಿಂಗಳ ಬಾಕಿ ಸಂಬಳ ಕೊಡಿ’

ರಾಯಚೂರು: ‘ಜಿಲ್ಲೆಯಲ್ಲಿ ವಿವಿಧ ವೃಂದ ಹೊರ ಗುತ್ತಿಗೆ ನೌಕರರಿಗೆ ಬಾಕಿ ಉಳಿದಿರುವ ಏಳು ತಿಂಗಳ ವೇತನವನ್ನು ತಕ್ಷಣ ವೇತನ ಪಾವತಿ ಮಾಡಬೇಕು’ ಎಂದು ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆ ವಿವಿಧ ವೃಂದದ ಹೊರ ಗುತ್ತಿಗೆ ನೌಕರರ ಸಂಘ ಒತ್ತಾಯಿಸಿದೆ. ಮಾದ್ಯಮಗೋಷ್ಠಿಯಲ್ಲಿ ಮಾತನಾಡಿದ ಸಂಘದ ರಾಜ್ಯ ಘಟಕದ ಅಧ್ಯಕ್ಷ ಅಕ್ಷಯಗೌಡ, ‘ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಕೇಳಿದರೆ ಸರ್ಕಾರದಿಂದ ಹಣ ಬಿಡುಗಡೆಯಾಗಿಲ್ಲ ಎಂದು ಹೇಳುತ್ತಿದ್ದಾರೆ. ಗುತ್ತಿಗೆ ಏಜೆನ್ಸಿಗಳು ತಮ್ಮ ಹೊಣೆಯನ್ನು ಸರಿಯಾಗಿ ನಿರ್ವಹಿಸುತ್ತಿಲ್ಲ. …

Read More »

ರೇಣುಕಸ್ವಾಮಿ ಪತ್ನಿಗೆ ಸರ್ಕಾರಿ ನೌಕರಿ ನೀಡಲು ಒತ್ತಾಯ

ಇಳಕಲ್: ಕೊಲೆಯಾಗಿರುವ ಚಿತ್ರದುರ್ಗದ ರೇಣುಕಸ್ವಾಮಿ ಅವರ ಪತ್ನಿಗೆ ಸರ್ಕಾರಿ ನೌಕರಿ ಕೊಡಬೇಕು. ಕೊಲೆ ಪ್ರಕರಣದ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿ, ಇಲ್ಲಿಯ ಕಂಠಿ ವೃತ್ತದಲ್ಲಿ ಮಂಗಳವಾರ ವೀರಮಾಹೇಶ್ವರ ಜಂಗಮ ಸಮಾಜದವರು ತಹಶೀಲ್ದಾರ್‌ ಸತೀಶ ಕೂಡಲಗಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ನಗರದ ಪ್ರವಾಸಿ ಮಂದಿರ ಹತ್ತಿರದ ರೇಣುಕಾಚಾರ್ಯ ವೃತ್ತದಲ್ಲಿ ರೇಣುಕಾಚಾರ್ಯರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ, ಬಸ್ ನಿಲ್ದಾಣ ಮಾರ್ಗವಾಗಿ ಕಂಠಿ ವೃತ್ತ ತಲುಪಿದರು. ಸಂದೇಶಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸ್‌ …

Read More »

ರಾಜ್ಯದಲ್ಲಿ 7 ಹೊಸ ಕೃಷಿ ತರಬೇತಿ ಕೇಂದ್ರ;ಚಲುವರಾಯಸ್ವಾಮಿ

ಬೆಳಗಾವಿ: ‘ರಾಜ್ಯದಲ್ಲಿ ಈ ವರ್ಷ ಏಳು ಜಿಲ್ಲೆಗಳಲ್ಲಿ ಹೊಸದಾಗಿ ಕೃಷಿ ತರಬೇತಿ ಕೇಂದ್ರಗಳನ್ನು ಆರಂಭಿಸಲಾಗುವುದು’ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು. ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ಬುಧವಾರ ನಡೆದ ಕೃಷಿ ಮತ್ತು ಜಲಾನಯನ ಇಲಾಖೆಗಳ ವಿಭಾಗಮಟ್ಟದ ಸಭೆಯಲ್ಲಿ ಅವರು ಮಾತನಾಡಿದರು. ‘ಕೃಷಿಕರಿಗೆ ಹೊಸ ತಾಂತ್ರಿಕತೆ ಕುರಿತು ತರಬೇತಿ ನೀಡಿ‌, ಅವರ ಸಾಮರ್ಥ್ಯ ವೃದ್ಧಿಸಲು ಕ್ರಮ ವಹಿಸಲಾಗುತ್ತಿದೆ. ಹಾಗಾಗಿ ವಿಜಯನಗರ, ಯಾದಗಿರಿ, ಗದಗ, ಕೋಲಾರ, ಚಾಮರಾಜನಗರ, ರಾಮನಗರ, ಉಡುಪಿ ಜಿಲ್ಲೆಗಳಲ್ಲಿ ಕೃಷಿ …

Read More »

ವೀರಶೈವ ಲಿಂಗಾಯತ ವಧು-ವರರ ಮುಖಾಮುಖಿ ಸಮಾವೇಶ

ಬೆಂಗಳೂರು: ಡಾಕ್ಟರ್ಸ್‌, ಇಂಜಿನಿಯರ್ಸ್‌, ವಿವಿಧ ಪದವೀಧರರು, ಎನ್‌ಆರ್‌ಐಗಳು ಹಾಗೂ ಇನ್ನಿತರೆ ಎಲ್ಲ ವೀರಶೈವ ಲಿಂಗಾಯತ ವಧು-ವರರ ಮಾಸಿಕ ಮುಖಾ-ಮುಖಿ ಸಮಾವೇಶವು ಜೂ.30 ಭಾನುವಾರ ಮಧ್ಯಾಹ್ನ 2ಕ್ಕೆ ಹಮ್ಮಿಕೊಂಡಿರುವುದಾಗಿ ಲಿಂಗಾಯತ ಕಲ್ಯಾಣ ಟ್ರಸ್ಟ್ ತಿಳಿಸಿದೆ. ಗಾಂಧಿನಗರದ 5ನೇ ಮುಖ್ಯರಸ್ತೆ, 6ನೇ ಅಡ್ಡರಸ್ತೆಯಲ್ಲಿರುವ ಸಂಸ್ಥೆಯ ಕಚೇರಿಯಲ್ಲಿ ಸಮಾವೇಶ ನಡೆಯಲಿದ್ದು, ಆಸಕ್ತ ವಧು-ವರರು ಮತ್ತು ಪೋಷಕರು ಪಾಲ್ಗೊಂಡು ಸದುಪಯೋಗ ಪಡೆದುಕೊಳ್ಳಬಹುದು. ಆನ್‌ಲೈನ್ ಮುಖಾಂತರ ಹೆಸರು ನೋಂದಾಯಿಸಲು www.lingayathkalyanatrust.org ಲಾಗ್‌ಇನ್ ಆಗಿ. ಹೆಚ್ಚಿನ ಮಾಹಿತಿಗೆ ದೂ: 080 …

Read More »

ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸದಿದ್ದರೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ ಬಾಲಚಂದ್ರ ಜಾರಕಿಹೊಳಿ

ಗೋಕಾಕ- ಮೂಡಲಗಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸದಿದ್ದರೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ ಬಾಲಚಂದ್ರ ಜಾರಕಿಹೊಳಿ ಗೋಕಾಕ: ಸಾರ್ವಜನಿಕರ ಯಾವುದೇ ಸಣ್ಣ-ಪುಟ್ಟ ಸಮಸ್ಯೆಗಳಿದ್ದರೂ ಸ್ಥಳದಲ್ಲಿಯೇ ಅಧಿಕಾರಿಗಳು ಪರಿಹರಿಸಬೇಕು. ವಿನಾಕಾರಣ ಅವರಿಗೆ ಅನಗತ್ಯ ತೊಂದರೆಗಳನ್ನು ನೀಡಿದರೇ ಸಹಿಸುವದಿಲ್ಲ. ಅಧಿಕಾರಿಗಳು ತಮಗೆ ನಿಯೋಜಿಸಿರುವ ಸ್ಥಳಗಳಲ್ಲಿ ಕಡ್ಡಾಯವಾಗಿ ಕಾರ್ಯನಿರ್ವಹಿಸಬೇಕು. ಸಾರ್ವಜನಿಕರಿಂದ ಅಧಿಕಾರಿಗಳ ಬಗ್ಗೆ ವ್ಯಾಪಕ ದೂರುಗಳು ಬಂದಿದ್ದು. ಯಾವುದೇ ಮುಲಾಜಿಲ್ಲದೇ ಕಠಿಣ ಕ್ರಮ …

Read More »

ಬುಧವಾರ ಮತ್ತೆ ಎರಡು ಅನಧಿಕೃತ ಆಸ್ಪತ್ರೆ ಸೀಜ್

ಚನ್ನಮ್ಮನ ಕಿತ್ತೂರು : ಮಕ್ಕಳ ಮಾರಾಟ ಹಾಗೂ ಭ್ರೂಣ ಹತ್ಯೆ ಪ್ರಕರಣದ ಬೆನ್ನಲೇ ಕಿತ್ತೂರಿನಲ್ಲಿ ಬುಧವಾರ ಮತ್ತೆ ಎರಡು ಆಸ್ಪತ್ರೆಗಳಿಗೆ ತಾಲೂಕು ವೈದ್ಯಧಿಕಾರಿಗಳು ಭೇಟಿ ನೀಡಿ ಆಸ್ಪತ್ರೆಗಳನ್ನು ಬಂದ್ ಮಾಡಿದ್ದಾರೆ. ಇಲ್ಲಿಯ ಪೊಲೀಸ್ ಠಾಣೆ ಎದುರು ಕಾಲೇಜು ರಸ್ತೆಯಲ್ಲಿರುವ ಮಹೇಶ ಹಟ್ಟಿಹೊಳಿಗೆ ಸೇರಿದ ‘ಧನ್ವಂತರಿ ಕ್ಲಿನಿಕ್’ ಹಾಗೂ ರೈತರ ಓಣಿ ಕ್ರಾಸ್ ಹತ್ತಿರ ಇರುವ ಇಬ್ರಾಹಿಂ ಜಮಾದಾರ್ ಗೆ ಸೇರಿದ ‘ಜಮಾದಾರ ಕ್ಲಿನಿಕ್’ ಅನ್ನು ಪರವಾನಿಗೆ ಇಲ್ಲದೆ ನಡೆಸುತ್ತಿದ್ದರು ಎಂದು …

Read More »

ಭಾರತಕ್ಕೆ ಇಂಗ್ಲೆಂಡ್‌ ಎದುರಾಳಿ; ಅಫ್ಘಾನಿಸ್ಥಾನಕ್ಕೆ ದಕ್ಷಿಣ ಆಫ್ರಿಕಾ

ಟರೂಬ/ಪ್ರೊವಿಡೆನ್ಸ್‌: ಟಿ20 ವಿಶ್ವಕಪ್‌ ಪಂದ್ಯಾವಳಿ ಸೆಮಿಫೈನಲ್‌ನತ್ತ ಮುಖ ಮಾಡಿದೆ. ದಾಖಲೆ ಸಂಖ್ಯೆಯ 20 ತಂಡಗಳಲ್ಲಿ 4 ಮಾತ್ರ ರೇಸ್‌ನಲ್ಲಿ ಉಳಿದುಕೊಂಡಿವೆ. ಸೂಪರ್‌-8 ಮೊದಲ ವಿಭಾಗದಿಂದ ಭಾರತ (6 ಅಂಕ) ಮತ್ತು ಅಫ್ಘಾನಿಸ್ಥಾನ (4 ಅಂಕ); ಎರಡನೇ ವಿಭಾಗದಿಂದ ದಕ್ಷಿಣ ಆಫ್ರಿಕಾ (6 ಅಂಕ) ಮತ್ತು ಇಂಗ್ಲೆಂಡ್‌ (4 ಅಂಕ) ಸೆಮಿಫೈನಲ್‌ ಪ್ರವೇಶಿಸಿವೆ. ಟರೂಬದಲ್ಲಿ ನಡೆಯುವ ಮೊದಲ ಸೆಮಿಫೈನಲ್‌ನಲ್ಲಿ ದ. ಆಫ್ರಿಕಾ- ಅಫ್ಘಾನಿ ಸ್ಥಾನ ಮುಖಾಮುಖೀ ಆಗಲಿವೆ. ಗಯಾನಾದ ಪ್ರೊವಿಡೆನ್ಸ್‌ನಲ್ಲಿ ಭಾರತ ತಂಡ …

Read More »