Daily Archives: ಜುಲೈ 2, 2024

ಬೈಲಹೊಂಗಲದಲ್ಲಿ ಇದ್ದಾರೆ ‘ಹತ್ತು ರೂಪಾಯಿ’ ಡಾಕ್ಟ್ರು

ಬೈಲಹೊಂಗಲ: ಇದು ದುಬಾರಿ ಯುಗ. ಇಂದು ಬಹುತೇಕ ಖಾಸಗಿ ಆಸ್ಪತ್ರೆಗಳಲ್ಲಿ ವೈದ್ಯಕೀಯ ಶುಲ್ಕ ಜನರ ಕೈಸುಡುತ್ತಿದೆ. ಆದರೆ, ಪಟ್ಟಣದ ಇಂಚಲ ರಸ್ತೆಯಲ್ಲಿನ ಕ್ಲಿನಿಕ್‌ಗೆ ಕಾಲಿಟ್ಟರೆ ನಿಮಗೆ ಅಚ್ಚರಿಯಾಗುತ್ತದೆ. ಇಲ್ಲಿ ವೈದ್ಯ ಡಾ.ಎ.ಎನ್.ಬಾಳಿ ತಮ್ಮ ಬಳಿ ಚಿಕಿತ್ಸೆಗಾಗಿ ಬರುವ ರೋಗಿಗಳಿಂದ ಪಡೆಯುವುದು ₹10 ಮಾತ್ರ. ಬೈಲಹೊಂಗಲದ ಸರ್ಕಾರಿ ಆಸ್ಪತ್ರೆಯಲ್ಲಿ ಮುಖ್ಯ ವೈದ್ಯಾಧಿಕಾರಿ, ಬೈಲಹೊಂಗಲ, ಬೆಳಗಾವಿ, ಚಿಕ್ಕೋಡಿಯಲ್ಲಿ ಸಹಾಯಕ ಜಿಲ್ಲಾ ಆರೋಗ್ಯ ಅಧಿಕಾರಿ ಮತ್ತು ಹುಬ್ಬಳ್ಳಿಯ ಕಿಮ್ಸ್‌ನಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸೆಕರಾಗಿ ಸೇವೆ ಸಲ್ಲಿಸಿ, ಅವರು …

Read More »

ಗೋಕಾಕ | ನಕಲಿ ನೋಟು ಪತ್ತೆ: ಐವರ ಬಂಧನ

ಗೋಕಾಕ: ಗೋಕಾಕ-ಬೆಳಗಾವಿ ರಸ್ತೆಯ ಕಡಬಗಟ್ಟಿ ಗ್ರಾಮದ ಮೂಲಕ ಸಾಗುವ ರಸ್ತೆಯಲ್ಲಿ ಸಾಗುತ್ತಿದ್ದ ಕಾರೊಂದನ್ನು ತಪಾಸಣೆ ಮಾಡಿದಾಗ ₹100, ₹500 ಮುಖಬೆಲೆಯ ನಕಲಿ ನೋಟುಗಳು ಪತ್ತೆಯಾಗಿದ್ದು, ಐವರನ್ನು ಬಂಧಿಸಲಾಗಿದೆ. ಈಚೆಗೆ ಬೆಳಗಿನ ಜಾವ ಗಸ್ತು ಪೊಲೀಸರು ನಡೆಸಿದ ತಪಾಸಣೆ ವೇಳೆ ಪ್ರಕರಣ ಬೆಳಕಿಗೆ ಬಂದಿದೆ.   ಮೂಡಲಗಿ ತಾಲ್ಲೂಕಿನ ಅರಭಾವಿಯ ಅನ್ವರ ಮೊಹ್ಮದಸಲೀಂ ಯಾದವಾಡ, ಮಹಾಲಿಂಗಪೂರದ ಸದ್ದಾಮ ಮುಸಾ ಯಡಹಳ್ಳಿ, ರವಿ ಚನ್ನಪ್ಪ ಹ್ಯಾಗಡಿ, ದುಂಡಪ್ಪ ಮಹಾದೇವ ವನಶೆಣವಿ ಮತ್ತು ವಿಠ್ಠಲ …

Read More »

ಬೆಳಗಾವಿ ಮಹಾನಗರ ಪಾಲಿಕೆ: ನಾಲ್ಕು ಸ್ಥಾಯಿ ಸಮಿತಿಗಳಿಗೆ ಅವಿರೋಧ ಆಯ್ಕೆ

ಬೆಳಗಾವಿ: ಇಲ್ಲಿನ ಮಹಾನಗರ ಪಾಲಿಕೆ 22ನೇ ಅವಧಿಗೆ ನಾಲ್ಕು ಸ್ಥಾಯಿ ಸಮಿತಿಗಳ 28 ಸದಸ್ಯ ಸ್ಥಾನಗಳಿಗೆ ಮಂಗಳವಾರ ಅವಿರೋಧ ಆಯ್ಕೆ ನಡೆಯಿತು. ತೆರಿಗೆ ನಿರ್ಧರಣೆ, ಹಣಕಾಸು ಮತ್ತು ಅಪೀಲುಗಳ ಸ್ಥಾಯಿ ಸಮಿತಿ, ಸಾರ್ವಜನಿಕ ಆರೋಗ್ಯ, ಶಿಕ್ಷಣ ಮತ್ತು ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ, ನಗರ ಯೋಜನೆ ಮತ್ತು ಅಭಿವೃದ್ಧಿ ಸ್ಥಾಯಿ ಸಮಿತಿ ಹಾಗೂ ಲೆಕ್ಕಗಳ ಸ್ಥಾಯಿ ಸಮಿತಿಯ ತಲಾ ಏಳು ಸದಸ್ಯ ಸ್ಥಾನಗಳಿಗೆ ಚುನಾವಣೆ ನಿಗದಿಯಾಗಿತ್ತು. ಮೂರು ಸಮಿತಿಗಳಿಗೆ ತಲಾ …

Read More »

ಕೃಷ್ಣಾ ನದಿಯ ಹರಿವು ಹೆಚ್ಚಳ

ಚಿಕ್ಕೋಡಿ: ಮಹಾರಾಷ್ಟ್ರದ ಕೊಂಕಣ ಪ್ರದೇಶದಲ್ಲಿ ಮಳೆ ಹೆಚ್ಚು ಸುರಿಯುತ್ತಿರುವ ಹಿನ್ನೆಲೆಯಲ್ಲಿ ಚಿಕ್ಕೋಡಿ ಉಪ ವಿಭಾಗದ ಕೃಷ್ಣಾ ಅದರ ಉಪನದಿಗಳಾದ ದೂಧಗಂಗಾ, ವೇದಗಂಗಾ ನದಿಗಳಲ್ಲಿ ನೀರಿನ ಹರಿವು ಮಂಗಳವಾರ ಮತ್ತೇ 2 ಅಡಿಯಷ್ಟು ಹೆಚ್ಚಳವಾಗಿದೆ. ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಿದ ರಾಜಾಪೂರೆ ಬ್ಯಾರೇಜ್ ನಲ್ಲಿ 16,125 ಕ್ಯುಸೆಕ್ ಹೊರ ಹರಿವು ಇದ್ದು, ದೂಧಗಂಗಾ ನದಿಯಿಂದ 4,920 ಕ್ಯುಸೆಕ್ ಸೇರಿದಂತೆ ಕೃಷ್ಣಾ ಹಾಗೂ ದೂಧಗಂಗಾ ನದಿಗಳ ಸಂಗಮ ಸ್ಥಳ …

Read More »

ಪೋಷಣ್ ಅಭಿಯಾನದಡಿ ಅಂಗನವಾಡಿ ಕಾರ್ಯಕರ್ತೆಯರಿಗೆ ಮೊಬೈಲ್‌: ಹೆಬ್ಬಾಳಕರ

ಬೆಳಗಾವಿ: ‘ತಮ್ಮ ಕೆಲಸಗಳಿಗೆ ಉತ್ತಮ ಮೊಬೈಲ್ ಅಗತ್ಯ ಎಂದು ಅಂಗನವಾಡಿ ಕಾರ್ಯಕರ್ತೆಯರು ಕಳೆದ ಅನೇಕ ವರ್ಷಗಳಿಂದ ಹೋರಾಟ ಮಾಡುತ್ತಿದ್ದರು. ಇದಕ್ಕೆ ಹಿಂದಿನ ಬಿಜೆಪಿ ಸರ್ಕಾರ ಸ್ಪಂದಿಸಿರಲಿಲ್ಲ. ನಾನು ಮುಖ್ಯಮಂತ್ರಿಗೆ, ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿದ್ದರಿಂದ ಮೊಬೈಲ್‌ ಮಂಜೂರಾಗಿವೆ’ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳಕರ ಹೇಳಿದ್ದಾರೆ. ‘ಮೊಬೈಲ್ ಮಂಜೂರು ಮಾಡಿದ್ದು ಕೇಂದ್ರ ಸರ್ಕಾರ’ ಎಂಬ ಶಾಸಕ ಅಭಯ ಪಾಟೀಲ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ‘ಕೇಂದ್ರ ಸರ್ಕಾರ ಪೋಷಣ್ ಅಭಿಯಾನದ ಅಡಿಯಲ್ಲಿ …

Read More »

ಸಾಹಿತ್ಯಕ್ಕೆ ಗದುಗಿನ ಮಹಾಭಾರತ ಕೊಡುಗೆ ದೊಡ್ಡದು: ಪ್ರೊ.ಗಣೇಶ ಚಲವಾದಿ

ಗದಗ: ‘ಕನ್ನಡ ಸಾಹಿತ್ಯ ಕ್ಷೇತ್ರವನ್ನು ಉತ್ತುಂಗ ಶಿಖರದಲ್ಲಿ ಇರುವಂತೆ ಮಾಡಿದ ಕವಿಗಳ ಸಾಲಿಗೆ ಸೇರುವ ‘ರೂಪಕ ಸಾಮ್ರಾಜ್ಯ ಚಕ್ರವರ್ತಿ’ ಕುಮಾರವ್ಯಾಸ ಗದುಗಿನ ವೀರನಾರಾಯಣ ದೇವಸ್ಥಾನದಲ್ಲಿ ಕುಳಿತು ಬರೆದ ಗದುಗಿನ ಮಹಾಭಾರತ ಕನ್ನಡ ಸಾಹಿತ್ಯ ಲೋಕಕ್ಕೆ ಒಂದು ದೊಡ್ಡ ಕೊಡುಗೆ’ ಎಂದು ಪ್ರೊ.ಗಣೇಶ ಚಲವಾದಿ ಹೇಳಿದರು. ವಿಜಯ ವಾಣಿಜ್ಯ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಳು ಗದುಗಿನ ವೀರನಾರಾಯಣ ದೇವಸ್ಥಾನಕ್ಕೆ ಮಂಗಳವಾರ ಭೇಟಿ ನೀಡಿದಾಗ ಇತಿಹಾಸ ಪರಿಚಯಿಸಿ ಮಾತನಾಡಿದರು. ಗದುಗಿನ ವೀರನಾರಾಯಣ ದೇವಸ್ಥಾನವು ಕ್ರಿಶ 1,117 …

Read More »

ಪೋಕ್ಸೊ ಸಂತ್ರಸ್ತೆಗೆ ಬೆದರಿಕೆ: ಮಂಜುನಾಥ ಸ್ವಾಮೀಜಿ ವಿರುದ್ಧದ ವಿಚಾರಣೆಗೆ HC ತಡೆ

ಬೆಂಗಳೂರು: ‘ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹೊತ್ತ ಪ್ರಕರಣದಲ್ಲಿನ ಸಂತ್ರಸ್ತೆಗೆ ಬೆದರಿಕೆ ಹಾಕಿದ್ದಾರೆ’ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕುಣಿಗಲ್‌ ತಾಲ್ಲೂಕಿನ ಹುಲಿಯೂರು ದುರ್ಗ ಹೋಬಳಿ ಹಂಗರಹಳ್ಳಿಯ ಶ್ರೀವಿದ್ಯಾ ಚೌಡೇಶ್ವರಿ ದೇವಸ್ಥಾನದ (ಶ್ರೀ ಮಠ) ಬಾಲ ಮಂಜುನಾಥ ಸ್ವಾಮೀಜಿ (36) ವಿರುದ್ಧದ ವಿಚಾರಣಾ ಕೋರ್ಟ್‌ನ ನ್ಯಾಯಿಕ ಪ್ರಕ್ರಿಯೆಗೆ ಹೈಕೋರ್ಟ್‌ ತಡೆ ನೀಡಿದೆ.   ಈ ಕುರಿತಂತೆ ಬಾಲ ಮಂಜುನಾಥ ಸ್ವಾಮೀಜಿ ಸಲ್ಲಿಸಿದ್ದ ಕ್ರಿಮಿನಲ್‌ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ …

Read More »

ಕೃಷ್ಣಾ ನದಿಯಲ್ಲಿ ತೆಪ್ಪ ಮುಳುಗಿ ಹಲವರು ನಾಪತ್ತೆ, ಓರ್ವನ ಶವ ಪತ್ತೆ

ವಿಜಯಪುರ: ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರು ದಾಳಿ ಮಾಡುತ್ತಿದ್ದಾರೆ ಎಂಬ ಭೀತಿಯಿಂದ ತೆಪ್ಪದ ಮೂಲಕ ನದಿಯಲ್ಲಿ ಹೊರಟಿದ್ದಾಗ ಬಿರುಗಾಳಿಗೆ ತೆಪ್ಪ ಮುಳುಗಿದ ಘಟನೆ ಮಂಗಳವಾರ ಸಂಜೆ ಜಿಲ್ಲೆಯ ಕೃಷ್ಣಾ ನದಿಯಲ್ಲಿ ನಡೆದಿದೆ. ಘಟನೆಯಲ್ಲಿ ಹಲವರು ನಾಪತ್ತೆಯಾಗಿದ್ದು, ಓರ್ವನ ಶವ ಪತ್ತೆಯಾಗಿದೆ.   ಜಿಲ್ಲೆಯ ಕೊಲ್ಹಾರ ತಾಲೂಕಿನ ಬಳೂತಿ ಬಳಿ ಕೃಷ್ಣಾ ನದಿಗೆ ನಿರ್ಮಿಸಿರುವ ಏತ ನೀರಾವರಿ ಜಾಕವೆಲ್ ಬಳಿ ದುರಂತ ಸಂಭವಿಸಿದೆ. 35 ವರ್ಷದ ಪುಂಡಲೀಕ ಎನ್ ಕಂಚಿ ಎಂಬಾತನ …

Read More »

ಕಾವೇರಿ ನದಿಗೆ ಭಾರಿ ನೀರು, ಕೆಲವೇ ದಿನದಲ್ಲಿ ಕೆಆರ್‌ಎಸ್ ಡ್ಯಾಂ ಫುಲ್?

ಮುಂಗಾರು ಮಳೆ ಕರ್ನಾಟಕ ರಾಜ್ಯದಲ್ಲಿ ಅಲರ್ಟ್ ಆಗಿದ್ದು, ಮಲೆನಾಡು ಭಾಗ ಸೇರಿದಂತೆ ಪ್ರಮುಖ ನದಿಗಳು ಹುಟ್ಟುವ ಪ್ರದೇಶದಲ್ಲಿ ಭಾರಿ ಮಳೆ ಬೀಳುತ್ತಿದೆ. ಹೀಗಾಗಿ ಕರ್ನಾಟಕದ ನದಿಗಳ ನೀರಿನ ಪ್ರಮಾಣವೂ ಭಾರಿ ಏರಿಕೆ ಕಂಡಿದ್ದು, ತುಂಬಿ ತುಳುಕುತ್ತಿವೆ. ಈ ಮೂಲಕ ಕರ್ನಾಟಕದಲ್ಲಿ ನದಿಗಳಿಗೆ ಅಡ್ಡಲಾಗಿ ಕಟ್ಟಿರುವ ಡ್ಯಾಂ & ಚೆಕ್ ಡ್ಯಾಂಗೆ ಭರ್ಜರಿ ನೀರು ಹರಿದು ಬರುತ್ತಿದ್ದು, ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಕೆಆರ್‌ಎಸ್ ಡ್ಯಾಂ ಇನ್ನೇನು ಸಂಪೂರ್ಣ ತುಂಬುವ ಹಂತಕ್ಕೆ …

Read More »

ಉದ್ಯೋಗ ವಾರ್ತೆ : ‘KSRTC’ ಯಿಂದ 13,000 ಚಾಲಕರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ.!

ಬೆಂಗಳೂರು : KSRTC ಬಸ್ ಚಾಲಕರಾಗಬೇಕು ಎಂದು ಅಂದುಕೊಂಡವರಿಗೆ ಇಲ್ಲಿದೆ ಸುವರ್ಣಾವಕಾಶ. KSRTC 13 ಸಾವಿರ ಬಸ್ ಚಾಲಕರ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುತ್ತಿದೆ. ಆಯಾ ಬಸ್ ಡಿಪೋಗಳು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳುತ್ತಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಚಾಮರಾಜನಗರ, ರಾಮನಗರ, ಆನೇಕಲ್ ಡಿಪೋದಲ್ಲಿ ಚಾಲಕ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಚಾಮರಾಜನಗರ ಡಿಪೋದಲ್ಲಿ ಕೆಲಸ ಬೇಕಿದ್ರೆ 8050980889, 8618876846. ಹಾಗೂ ರಾಮನಗರ, ಅನೇಕಲ್ ನಲ್ಲಿ ಕೆಲಸ ಬೇಕಿದ್ರೆ 8050980889, 8618876846 ಸಂಪರ್ಕಿಸಬಹುದಾಗಿದೆ. …

Read More »