Breaking News

Daily Archives: ಜುಲೈ 2, 2024

ಸಿಎಂ ಪತ್ನಿಗೆ ಮೂಡಾ ನಿವೇಶನ ಹಂಚಿಕೆ:

ಬೆಂಗಳೂರು, ಜುಲೈ 02: ಮುಖ್ಯಮಂತ್ರಿಗಳ ಧರ್ಮಪತ್ನಿಯವರಿಗೆ ಸೇರಿದ ಜಮೀನನ್ನು ಮೂಡಾ ಸ್ವಾಧೀನ ಮಾಡಿಕೊಂಡಿದ್ದು, ಅದಕ್ಕೆ ಪರ್ಯಾಯವಾಗಿ 50: 50 ಅನುಪಾತದಲ್ಲಿ ಬೇರೆಡೆ ನಿವೇಶನಗಳನ್ನು ಬಿಜೆಪಿ ಅಧಿಕಾರದಲ್ಲಿದ್ದಾಗ ಕೊಡಲಾಗಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.   ಮಾಧ್ಯಮದವರೊಂದಿಗೆ ಇಂದು ಮಾತನಾಡಿದ ಅವರು, ಮೂಡಾ ನಿವೇಶನ ಹಂಚಿಕೆ ಬಗ್ಗೆ ವಿವರವಾಗಿ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿ ಅವರು ಅಧಿಕಾರದಲ್ಲಿರುವಾಗ ನಮಗೆ ನಿವೇಶನ ಕೊಟ್ಟಿದ್ದಾರೆ. ನನ್ನ ಪತ್ನಿಗೆ ಸೇರಿದ್ದ 3 ಎಕರೆ 16 ಗಂಟೆ …

Read More »

ಚನ್ನಪಟ್ಟಣ ಉಪಚುನಾವಣೆ : ಯಾರೇ ಅಭ್ಯರ್ಥಿಯಾದರೂ ನನ್ನ ಮುಖ ನೋಡಿ ಮತ ಹಾಕಿ : ಡಿಸಿಎಂ

ಚನ್ನಪಟ್ಟಣ ಉಪಚುನಾವಣೆ : ಯಾರೇ ಅಭ್ಯರ್ಥಿಯಾದರೂ ನನ್ನ ಮುಖ ನೋಡಿ ಮತ ಹಾಕಿ : ಡಿಸಿಎಂ ರಾಮನಗರ : ಚನ್ನಪಟ್ಟಣದ ಉಪಚುನಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಇದೀಗ ಹೇಳಿಕೆ ಒಂದನ್ನು ನೀಡಿದ್ದು, ಈ ಉಪಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಯಾರೇ ಅಭ್ಯರ್ಥಿಯಾದರೂ ನನ್ನ ಮುಖ ನೋಡಿ ವೋಟ್ ಹಾಕಿ ಎಂದು ಜನರಲ್ಲಿ ಮನವಿ ಮಾಡಿದರು. ಇಂದು ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನಲ್ಲಿ ನಡೆದ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ …

Read More »

ಸರೋಜಿನಿ ಮಹಿಷಿ ಪರಿಷ್ಕೃತ ವರದಿ ಜಾರಿಗೆ ಆಗ್ರಹ: ಕರವೇಯಿಂದ ಧರಣಿ

ಬೆಳಗಾವಿ: ‘ಕರ್ನಾಟಕದ ಸರ್ಕಾರಿ, ಖಾಸಗಿ ಮತ್ತು ಸಾರ್ವಜನಿಕ ವಲಯದ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಹೆಚ್ಚಿನ ಉದ್ಯೋಗವಕಾಶ ಕಲ್ಪಿಸಲು ಸರೋಜಿನಿ ಮಹಿಷಿ ಪರಿಷ್ಕೃತ ವರದಿಯನ್ನು ರಾಜ್ಯ ಸರ್ಕಾರ ಕೂಡಲೇ ಜಾರಿಗೊಳಿಸಬೇಕು’ ಎಂದು ಆಗ್ರಹಿಸಿ ನಮ್ಮ ಕರ್ನಾಟಕ ರಕ್ಷಣಾ ವೇದಿಕೆ (ಟಿ.ಎ.ನಾರಾಯಣಗೌಡ ಬಣ) ಜಿಲ್ಲಾ ಘಟಕದ ಕಾರ್ಯಕರ್ತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಧರಣಿ ಆರಂಭಿಸಿದ್ದಾರೆ.   ರಾಣಿ ಚನ್ನಮ್ಮನ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಕಾರರು, ‘ರಾಜ್ಯದಲ್ಲಿರುವ ಸರ್ಕಾರಿ, ಖಾಸಗಿ …

Read More »

ಡಿಸಿಎಂ ಹುದ್ದೆ ರದ್ದುಪಡಿಸಿ, ಇಲ್ಲವೇ ಸುವರ್ಣ ವಿಧಾನಸೌಧಕ್ಕೆ CM ನೇಮಿಸಿ: ಭೀಮಪ್ಪ

ಡಿಸಿಎಂ ಹುದ್ದೆ ರದ್ದುಪಡಿಸಿ, ಇಲ್ಲವೇ ಸುವರ್ಣ ವಿಧಾನಸೌಧಕ್ಕೆ CM ನೇಮಿಸಿ: ಭೀಮಪ್ಪ ಬೆಳಗಾವಿ: ‘ಉಪಮುಖ್ಯಮಂತ್ರಿ (ಡಿಸಿಎಂ) ಹುದ್ದೆ ಮಾನ್ಯತೆ ಬಗ್ಗೆ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್) ಹಾಕಲು ಯೋಜಿಸಿದ್ದೇನೆ. ಇದಕ್ಕಾಗಿ ಮುಖ್ಯಮಂತ್ರಿ ಹಾಗೂ ಸಚಿವರಿಗೆ ಪತ್ರ ಬರೆದಿದ್ದೇ‌ನೆ. ಅವರ ಅಭಿಪ್ರಾಯ ಆಧರಿಸಿ ಮುಂದುವರಿಯುತ್ತೇನೆ’ ಎಂದು ಸಾಮಾಜಿಕ ಕಾರ್ಯಕರ್ತ ಭೀಮಪ್ಪ ಗಡಾದ ಹೇಳಿದರು.   ಇಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಂವಿಧಾನದಲ್ಲಿ ಡಿಸಿಎಂ ಹುದ್ದೆ ಬಗ್ಗೆ ಉಲ್ಲೇಖವೇ ಇಲ್ಲ‌. ಆದರೂ, …

Read More »

ಲೋನಾವಾಲಾ ದುರಂತ ; ಜಲಪಾತದಲ್ಲಿ ಕೊಚ್ಚಿ ಹೋಗಿದ್ದ ಐವರ ಮೃತದೇಹಗಳು ಪತ್ತೆ

ಮುಂಬೈ: ಭಾನುವಾರ ಮಹಾರಾಷ್ಟ್ರದ ಪುಣೆಯ ಲೋನಾವಾಲಾ ಪ್ರದೇಶದ ಭೂಶಿ ಅಣೆಕಟ್ಟಿನ ಹಿನ್ನೀರಿನ ಸಮೀಪವಿರುವ ಜಲಪಾತದಲ್ಲಿ ಕೊಚ್ಚಿ ಹೋಗಿದ್ದ ಐವರ ಮೃತದೇಹ ಪತ್ತೆಯಾಗಿದೆ. ಭಾನುವಾರ ಮಧ್ಯಾಹ್ನ ಕುಟುಂಬವೊಂದು ವಿಹಾರಕ್ಕೆಂದು ಹೋಗಿದ್ದ ವೇಳೆ ಜಲಪಾತದಲ್ಲಿ ಕೊಚ್ಚಿ ಹೋಗಿದ್ದರು. ಕೂಡಲೇ ಶೋಧ ಮತ್ತು ರಕ್ಷಣಾ ತಂಡಗಳು ಅಲ್ಲಿಗೆ ಧಾವಿಸಿ ನೀರಲ್ಲಿ ನಾಪತ್ತೆಯಾದವರಿಗಾಗಿ ಹುಡುಕಾಟ ಆರಂಭಿಸಿತ್ತು. ಮಹಿಳೆ ಮಗು ಸೇರಿ ಐವರ ಶವಗಳನ್ನು ರಕ್ಷಣಾ ಸಿಬ್ಬಂದಿ ಹೊರ ತೆಗೆದಿದ್ದಾರೆ. ಹಡಪ್ಸರ್ ಪ್ರದೇಶದ ಅನ್ಸಾರಿ ಕುಟುಂಬದ ಸದಸ್ಯರು …

Read More »

ರಾಜ್ಯದ ಹೆದ್ದಾರಿಗೆ 8,021 ಕೋ.ರೂ.

ಹುಬ್ಬಳ್ಳಿ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯದ 2024-25ರ ವಾರ್ಷಿಕ ಯೋಜನೆಯಲ್ಲಿ ಕರ್ನಾಟಕದ ಒಟ್ಟು 470 ಕಿ.ಮೀ. ರಸ್ತೆ ಅಭಿವೃದ್ಧಿಗಾಗಿ 8,006 ಕೋಟಿ ರೂ., ಹೊಸದಾಗಿ 459 ಕಿ.ಮೀ. ಉದ್ದದ ರಸ್ತೆ ನಿರ್ಮಾಣಕ್ಕೆ ವಿಸ್ತೃತ ಯೋಜನಾ ವರದಿ (ಡಿಪಿಆರ್‌) ಸಿದ್ಧಪಡಿಸಲು 15 ಕೋಟಿ ರೂ. ಮಂಜೂರು ಮಾಡಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. ಹೆದ್ದಾರಿ ಕಾಮಗಾರಿ ಯೋಜನೆ ಅನುಮೋದನೆಗೆ ಸಂಸದ ಮನವಿ ಸಂಸದ ಬಿ.ವೈ. ರಾಘವೇಂದ್ರ …

Read More »

CM DCM ಹೇಳಿಕೆ ನಿಲ್ಲಿಸದಿದ್ದರೆ ಶೋಕಾಸ್‌ ನೋಟಿಸ್‌: ಡಿಕೆಶಿ

ಬೆಂಗಳೂರು: ದಿಲ್ಲಿಯಲ್ಲಿ ವರಿಷ್ಠರನ್ನು ಭೇಟಿಯಾಗಿ ಬರುತ್ತಿದ್ದಂತೆ ರಾಜ್ಯ ಕಾಂಗ್ರೆಸ್‌ನಲ್ಲಿ ಭುಗಿಲೆದ್ದಿರುವ ಬಣ ಬೇಗುದಿಗೆ ತಡೆ ಹಾಕಲು ರಾಜ್ಯ ಕಾಂಗ್ರೆಸ್‌ ನಾಯಕರು ಮುಂದಾಗಿದ್ದಾರೆ. ಸಿಎಂ-ಡಿಸಿಎಂ ಕುರಿತು ಬೇಕಾಬಿಟ್ಟಿ ಹೇಳಿಕೆ ನೀಡುವವರಿಗೆ ಶೋಕಾಸ್‌ ನೋಟಿಸ್‌ ಜಾರಿಗೊ ಳಿಸಲು ನಿರ್ಧರಿಸಿದ್ದಾರೆ.   ವಿವಾದದ ಹಿನ್ನೆಲೆಯಲ್ಲಿ ಸೋಮವಾರ ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ ಪದಾಧಿಕಾರಿಗಳ ಸಭೆ ನಡೆಸಿದ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಬಾಯಿಗೆ ಬಂದಂತೆ ಹೇಳಿಕೆ ನೀಡುವವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಲೋಕಸಭಾ ಚುನಾವಣೆಯ ಅನಂತರ ಪಕ್ಷದಲ್ಲಿ ಬಣ …

Read More »

ಪಕ್ಷ ಸಂಘಟಿಸುವವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಬೇಕು: ಸತೀಶ್ ಜಾರಕಿಹೊಳಿ

ಬೆಳಗಾವಿ: ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತು ಹೈಕಮಾಂಡ್ ನಿರ್ಧಾರ ಕೈಗೊಳ್ಳಬೇಕು. ಈ ವಿಷಯ ಈಗ ಬಹಳ ಚರ್ಚೆಯಲ್ಲಿದೆ ಎಂದು ಬೆಳಗಾವಿಯಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಕೆಪಿಸಿಸಿ ಅಧ್ಯಕ್ಷರಾಗಲು ಸಾಕಷ್ಟು ಜನ ಆಕಾಂಕ್ಷಿಗಳಿದ್ದಾರೆ. ಈಗ ಯಾವುದೇ ಚುನಾವಣೆ ಇಲ್ಲ. ಆದರೆ ಮತಗಳನ್ನು ತಂದುಕೊಡುವ ಹಾಗೂ ಪಕ್ಷವನ್ನು ಸಂಘಟಿಸುವವರಿಗೆ ಈ ಹುದ್ದೆ ನೀಡಬೇಕು ಎಂದರು. ಕೆಪಿಸಿಸಿ ಅಧ್ಯಕ್ಷ ಹುದ್ದೆಗೆ ನಾನು ಕೇಳಿಲ್ಲ. ಅದೇನೇ ಇದ್ದರೂ ಹೈಕಮಾಂಡ್ ಮಟ್ಟದಲ್ಲಿ …

Read More »

ರೈತರಿಗೆ ಹಾಲಿನ ಪ್ರೋತ್ಸಾಹಧನ ಬಿಡುಗಡೆ ಮಾಡುವಂತೆ ಒತ್ತಾಯ

ಬೆಳಗಾವಿ: ರಾಜ್ಯ ಸರ್ಕಾರ ರೈತರಿಗೆ ಶೀಘ್ರವೇ ಹಾಲಿನ ಪ್ರೋತ್ಸಾಹ ಧನ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ಬಿಜೆಪಿ ಪ್ರತಿಭಟನೆ ನಡೆಸಿದೆ. ಚನ್ನಮ್ನ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು. ಹಾಲಿನ ಪ್ರೋತ್ಸಾಹ ಧನವನ್ನು ಐದರಿಂದ ಹತ್ತು ರೂಪಾಯಿಗೆ ಏರಿಕೆ ಮಾಡಬೇಕು. ಸದ್ಯ ಗ್ರಾಹಕರಿಗೆ ಏರಿಕೆ ಮಾಡಿರುವ ಹಾಲಿನ ದರ ಏರಿಕೆಯನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು. ರಾಜ್ಯ ಸರ್ಕಾರ ಹಾಲಿನ ದರವನ್ನು ಏರಿಸಿ ಜನ ವಿರೋಧಿ ನೀತಿಯನ್ನು …

Read More »

ಹಿನ್ನೀರಿನಲ್ಲಿ ಈಜಲು ತೆರಳಿದ್ದ ಯುವಕರಿಬ್ಬರು ನೀರು ಪಾಲು

ಚಿಕ್ಕೋಡಿ: ನೆರೆಯ ಮಹಾರಾಷ್ಟ್ರದ ಕಾಳಮ್ಮವಾಡಿ ಡ್ಯಾಂನಲ್ಲಿ ನಿಪ್ಪಾಣಿಯ ಯುವಕರಿಬ್ಬರು ನೀರುಪಾಲಾದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮಹಾರಾಷ್ಡ್ರದ ಕೊಲ್ಲಾಪೂರ ಜಿಲ್ಲೆಯ ರಾಧಾನಗರಿ ತಾಲೂಕಿನ ಕಾಳಮ್ಮವಾಡಿ ಜಲಾಶಯಕ್ಕೆ ನಿಪ್ಪಾಣಿ ಮೂಲದ 13 ಜನ ಯುವಕರು ಪ್ರವಾಸಕ್ಕೆ ತೆರಳಿದರು. ಜಲಾಶಯದ ಹಿನ್ನೀರಿನಲ್ಲಿ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಜೀವ ಕಳೆದುಕೊಂಡಿದ್ದಾರೆ. ನಿಪ್ಪಾಣಿಯ ಗಣೇಶ ಕದಮ್, ಪ್ರತೀಕ್ ಪಾಟೀಲ್ ನೀರುಪಾಲಾದ ಯುವಕರು. ಕಾಳಮ್ಮವಾಡಿ ಜಲಾನಯನ ಪ್ರದೇಶದಲ್ಲಿ ಸದ್ಯ ಮಳೆಯ ಅಬ್ಬರ ಮುಂದುವರಿದಿದೆ. ಆದರೂ ಶವ …

Read More »