Daily Archives: ಜುಲೈ 8, 2024

ಗಣಿ ಗುತ್ತಿಗೆ ರದ್ದತಿಗೆ ಶಿಫಾರಸು ಮಾಡಲು ನ್ಯಾಯಮೂರ್ತಿಗೆ ಪತ್ರ: SR ಹಿರೇಮಠ

ಧಾರವಾಡ: ‘ಕುದುರೆಮುಖ ಕಬ್ಬಿಣ ಅದಿರು ಕಂಪೆನಿ (ಕೆಐಒಸಿಎಲ್‌) ಹಾಗೂ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಂಪನಿಗೆ (ವಿಐಎಸ್‌ಎಲ್‌) ಬಳ್ಳಾರಿ ಜಿಲ್ಲೆಯ ಸಂಡೂರು ತಾಲ್ಲೂಕಿನ ನೈಸರ್ಗಿಕ ಅರಣ್ಯ ಪ್ರದೇಶದಲ್ಲಿ ಗಣಿ ಗುತ್ತಿಗೆ ನೀಡಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಿದ್ಧವಾಗಿದ್ದು, ಗುತ್ತಿಗೆ ಪ್ರಸ್ತಾವ ರದ್ದುಪಡಿಸುವಂತೆ ಸುಪ್ರೀಂ ಕೋರ್ಟ್‌ಗೆ ಶಿಫಾರಸು ಮಾಡಬೇಕು ಎಂದು ಮೇಲ್ವಿಚಾರಣಾ ಪ್ರಾಧಿಕಾರದ ನ್ಯಾಯಮೂರ್ತಿ ಬಿ.ಸುದರ್ಶನ ರೆಡ್ಡಿ ಅವರಿಗೆ ಪತ್ರ ಬರೆಯಲಾಗಿದೆ’ ಎಂದು ಸಮಾಜ ಪರಿವರ್ತನಾ ಸಮುದಾಯದ ಸ್ಥಾಪಕ ಅಧ್ಯಕ್ಷ …

Read More »

ಮಹಾರಾಷ್ಟ್ರದಲ್ಲಿ ಭಾರಿ ಮಳೆ; ಕೃಷ್ಣಾ, ದೂಧಗಂಗಾ, ಮಲಪ್ರಭಾ ಒಳಹರಿವು ಹೆಚ್ಚಳ

ಬೆಳಗಾವಿ: ಮಹಾರಾಷ್ಟ್ರದ ಕೊಯ್ನಾ ಹಾಗೂ ಕಾಳಮ್ಮವಾಡಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಕೃಷ್ಣಾ ಮತ್ತು ದೂಧಗಂಗಾ ನದಿಗಳ ಒಳಹರಿವಿನ ಪ್ರಮಾಣದಲ್ಲಿ ಗಣನೀಯ ಏರಿಕೆಯಾಗಿದೆ. ಈಗ ಲಭ್ಯದ ಅಗಿರುವ ಮಾಹಿತಿಯ ಪ್ರಕಾರ ಕೃಷ್ಣಾ ನದಿಯ ಒಳಹರಿವಿನ ಪ್ರಮಾಣ 62 ಸಾವಿರ ಕ್ಯೂಸೆಕ್ಸ್ ದಾಟಿದೆ. ಮಹಾರಾಷ್ಟ್ರದ ಸಾವಂತವಾಡಿ ಹಾಗೂ ಅಂಬೋಲಿ ಅರಣ್ಯ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಇದರಿಂದ ಘಟಪ್ರಭಾ ನದಿಯ ಮೂಲಕ ಹಿಡಕಲ್ ಜಲಾಶಯಕ್ಕೆ 21 ಸಾವಿರ ಕ್ಯೂಸೆಕ್ಸ್ ನೀರು ಹರಿದು ಬರುತ್ತಿದೆ. …

Read More »

ಹಿರೇನಂದಿ ಗ್ರಾಮದಲ್ಲಿ ನಡೆದ ಡೆಂಗ್ಯೂ ವಿರೋಧ ಮಾಸಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಯುವ ನಾಯಕ ಸಂತೋಷ್ ಜಾರಕಿಹೊಳಿ ಅವರು ಭಾಗಿ

ಗೋಕಾಕ : ತಾಲೂಕಿನ ಹಿರೇನಂದಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಡೆಂಗ್ಯೂ ವಿರೋಧ ಮಾಸಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಯುವ ನಾಯಕ ಸಂತೋಷ್ ಜಾರಕಿಹೊಳಿ ಅವರು ಭಾಗವಹಿಸಿದ್ದರು. ಆರೋಗ್ಯ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸಸಿಗೆ ನೀರಿನಿಸುವ ಮೂಲಕ ಚಾಲನೆ ನೀಡಿದರು. ನಂತರ ವೈದ್ಯರು ಡೆಂಗ್ಯೂ ಕುರಿತು ಮುಂಜಾಗ್ರತಾ ಕ್ರಮಗಳನ್ನು ಜನತೆಗೆ ತಿಳಿಸಿದರು. ಈ ಸಂದರ್ಭದಲ್ಲಿ ವೈದ್ಯರಾದ ಸರಸ್ವತಿ ತಂಬಾಕೆ , ಮಲ್ಲವ್ವಾ ನಾಯಕ್, ಬಿ ಬಿ ಈಶ್ವರಪ್ಪಗೋಳ,ಆರ್ ಬಿ ಬಸಾಪುರ, ಬೆಟಗೇರಿ …

Read More »

ರಾಮದುರ್ಗ ಸರ್ಕಾರಿ ಆಸ್ಪತ್ರೆ; ವೈದ್ಯರ ಕೊರತೆ

ರಾಮದುರ್ಗ: ಪಟ್ಟಣ ಸೇರಿದಂತೆ ಸುತ್ತಲಿನ ಗ್ರಾಮಗಳ ಜನರ ಆರೋಗ್ಯ ಕಾಪಾಡಬೇಕಾದ ಇಲ್ಲಿನ ಸರ್ಕಾರಿ ಆಸ್ಪತ್ರೆಯು ವೈದ್ಯರಿಲ್ಲದೆ ರೋಗಗಸ್ಥವಾಗಿದೆ. ಉಳ್ಳವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಾರೆ. ಆದರೆ, ಬಡವರಿಗೆ ಸರ್ಕಾರಿ ಆಸ್ಪತ್ರೆಯೊಂದೇ ಗತಿ ಎಂಬಂತಾಗಿದೆ. ವೈದ್ಯರಿಲ್ಲದ ಕೊರಗು ಇನ್ನಿಲ್ಲದಂತೆ ಕಾಡುತ್ತಿದೆ. ಬೆಳಗಾವಿ, ಬಾಗಲಕೋಟೆ, ಹುಬ್ಬಳ್ಳಿಗೆ ಸರಿಯಾದ ಸಂಪರ್ಕ ಇಲ್ಲದ ಕಾರಣಕ್ಕೆ ಇಲ್ಲಿಗೆ ವೈದ್ಯರು ಬರಲು ಮುಂದಾಗುತ್ತಿಲ್ಲ ಎಂಬ ಆರೋಪ ಜನರದ್ದು. ಪಕ್ಕದ ಸವದತ್ತಿ, ಬೈಲಹೊಂಗಲ, ಗೋಕಾಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಪೂರ್ಣ ಪ್ರಮಾಣದ …

Read More »

ಬೈಲಹೊಂಗಲ | ಮೊಹರಂ ಸಿದ್ಧತೆ: ಚಿನಕೋಲು, ಹುಲಿ‌ಕುಣಿತದ ಸದ್ದು

ಬೈಲಹೊಂಗಲ: ಸರ್ವಧರ್ಮ ಸಮನ್ವಯದ ಸಂದೇಶ ಸಾರುವ ಮೊಹರಂ ಹಬ್ಬದ ಸಂಭ್ರಮದ ಆಚರಣೆಗಾಗಿ ತಾಲ್ಲೂಕಿನ ವಕ್ಕುಂದ ಗ್ರಾಮದಲ್ಲಿ ಈಗಾಗಲೇ ತಯಾರಿ ಶುರುವಾಗಿದೆ. ವಾಲ್ಮೀಕಿ ಸಮಾಜದ ಯುವ ಪಡೆ ಹಾಗೂ ಎಲ್ಲ ಸಮಾಜದವರು ಸೇರಿಕೊಂಡು ಹಬ್ಬದ ಆಚರಣೆಗೆ ಭರದ ಸಿದ್ಧತೆ ನಡೆಸಿದ್ದಾರೆ. ಚಿನಕೋಲು, ಹುಲಿಕುಣಿತದ ತಯಾರಿ: ವಾಲ್ಮೀಕಿ ಸಮಾಜದ ಯುವ ಪಡೆಯ 20ಕ್ಕೂ ಹೆಚ್ಚಿನ ಜನ ಸದಸ್ಯರು ಕಾಲಿಗೆ ಗೆಜ್ಜೆ ಕಟ್ಟಿಕೊಂಡು, ಹಿರಿಯರ ಮಾರ್ಗದರ್ಶನದಂತೆ ಮೊಹರಂ ಗೀತೆಗಳಿಗೆ ಹೆಜ್ಜೆ ಹಾಕುತ್ತಿದ್ದಾರೆ. ವಕ್ಕುಂದದ ಸುತ್ತಲಿನ …

Read More »

ಬೆಳಗಾವಿ ಜಲಾಶಯಗಳಲ್ಲಿ ಜೀವಕಳೆ

ಬೆಳಗಾವಿ: ಜಿಲ್ಲೆಯಲ್ಲಿ ಈ ಬಾರಿ ಪೂರ್ವ ಮುಂಗಾರು ಉತ್ತಮವಾಗಿದೆ. ಜೂನ್‌ ಅಂತ್ಯದವರೆಗೆ ಮುಂಗಾರು 286.46 ಮಿ.ಮೀ ಮಳೆ ಬಿದ್ದಿದೆ. ಈ ಅವಧಿಯ ವಾಡಿಕೆ ಮಳೆ 236 ಮಿ.ಮೀ. ಅಂದರೆ; ವಾಡಿಕೆಗಿಂತ ಶೇ 21ರಷ್ಟು ಹೆಚ್ಚು ಮಳೆ ಸುರಿದಿದೆ. ಆದರೆ, ಈ ಮಳೆ ಇಡೀ ಜಿಲ್ಲೆಯಲ್ಲಿ ಏತಕಾನವಾಗಿಲ್ಲ. ಅರ್ಧ ಜಿಲ್ಲೆಯ ರೈತರು ಇನ್ನೂ ಮಳೆಗೆ ಕಾಯುವ ಸ್ಥಿತಿ ಇದೆ. ಸವದತ್ತಿ, ಹುಕ್ಕೇರಿ, ಬೆಳಗಾವಿ, ಖಾನಾಪುರ, ಚನ್ನಮ್ಮನ ಕಿತ್ತೂರು ತಾಲ್ಲೂಕುಗಳಲ್ಲಿ ವಾಡಿಕೆಗಿಂತ ಅತಿ …

Read More »

ಹುಬ್ಬಳ್ಳಿಯಲ್ಲಿ ಡೆಂಘೀಗೆ ನಾಲ್ವರು ಸಾವು

ಹುಬ್ಬಳ್ಳಿ,ಜು.8- ದಿನದಿಂದ ದಿನಕ್ಕೆ ಮಾರಕ ರೋಗ ಡೆಂಘೀ ಉಲ್ಬಣಗೊಳ್ಳುತ್ತಿದ್ದು, ರಾಜ್ಯಾದ್ಯಂತ ಸಾವಿರಾರು ಜನ ಡೆಂಘೀ ಲಕ್ಷಣಗಳಿಂದ ನಲುಗುತ್ತಿದ್ದಾರೆ. ಹುಬ್ಬಳ್ಳಿಯಲ್ಲಿ ಡೆಂಘೀ ಕಾಯಿಲೆಯಿಂದ ನಾಲ್ವರು ಮೃತಪಟ್ಟಿರುವುದಾಗಿ ಹುಬ್ಬಳ್ಳಿ ಕಿಮ್ಸ್‌‍ ಆಸ್ಪತ್ರೆ ನಿರ್ದೇಶಕ ಡಾ.ಎಸ್‌‍.ಎಸ್‌‍.ಕಮಾರ್‌ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಮಕ್ಕಳ ವಾರ್ಡ್‌ನಲ್ಲಿ ಡೆಂಘೀಯಿಂದ ನಾಲ್ವರು ಮೃತಪಟ್ಟಿದ್ದಾರೆ. ಕಿಮ್ಸ್‌‍ ಆಸ್ಪತ್ರೆಯ ಮೆಡಿಸನ್‌ ವಾರ್ಡ್‌ನಲ್ಲಿ ಯಾವುದೇ ಸಾವು ಆಗಿಲ್ಲ ಎಂದು ತಿಳಿಸಿದ್ದಾರೆ. ಧಾರವಾಡ ಜಿಲ್ಲೆಯಲ್ಲಿ ಡೆಂಘೀಯಿಂದ ಯಾವುದೇ ಸಾವು ಸಂಭವಿಸಿಲ್ಲ. ಬೇರೆ ಜಿಲ್ಲೆಗಳಿಂದ ಬಂದಿರುವ ನಾಲ್ವರು …

Read More »

ವಿದ್ಯಾರ್ಥಿಯ ಮೇಲೆ ಮನಬಂದಂತೆ ಥಳಿಸಿದ ಗುಂಪು: ಐವರು ಅರೆಸ್ಟ್

ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಯನ್ನು, ಯುವಕರ ಗುಂಪೊಂದು ಮನಬಂದಂತೆ ಥಳಿಸಿ, ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಐವರನ್ನು ಬಂಧಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಶಾಲಾ ವಿದ್ಯಾರ್ಥಿಯೊಬ್ಬ ಯುವತಿಯೊಂದಿಗೆ ಮಾತನಾಡಿದ್ದಾನೆ ಎಂದು ಆರೋಪಿ ಶಾಲೆಯ ಬಳಿಯೇ ವಿದ್ಯಾರ್ಥಿಯನ್ನು ಹಿಡಿದು ಯುವಕರ ಗುಂಪೊಂದು ಮನ ಬಂದಂತೆ ಥಳಿಸಿತ್ತು. ಕಾಲಿನಿಂದ ಒದ್ದು ಹಲ್ಲೆ ನಡೆಸಿದ್ದರು. ಇದನ್ನು ಕಂಡ ಇತರ ವಿದ್ಯಾರ್ಥಿಗಳು ಶಾಲೆಯ ಪ್ರಾಂಶುಪಾಲರಿಗೆ ದೂರು ನೀಡಿದ್ದರು. ಪ್ರಾಂಶುಪಾಲರು ಅಶೋಕ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣವನ್ನು ಗಂಭೀರವಾಗಿ …

Read More »

ರಾಹುಲ್‌ ದ್ರಾವಿಡ್‌ ಗೆ ʻಭಾರತ ರತ್ನʼ ನೀಡಿ : ಸುನೀಲ್‌ ಗವಾಸ್ಕರ್‌ ಒತ್ತಾಯ

ನವದೆಹಲಿ: ಭಾರತದ ಮಾಜಿ ನಾಯಕ ಮತ್ತು ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಭಾರತ ರತ್ನ ಪ್ರಶಸ್ತಿಗೆ ಅರ್ಹರು ಎಂದು ಭಾರತದ ಮಾಜಿ ನಾಯಕ ಸುನಿಲ್ ಗವಾಸ್ಕರ್ ಅಭಿಪ್ರಾಯಪಟ್ಟಿದ್ದಾರೆ. 51 ವರ್ಷದ ದ್ರಾವಿಡ್ ತಮ್ಮ 16 ವರ್ಷಗಳ ಸುದೀರ್ಘ ಅಂತರರಾಷ್ಟ್ರೀಯ ವೃತ್ತಿಜೀವನದಲ್ಲಿ ಭಾರತಕ್ಕಾಗಿ 164 ಟೆಸ್ಟ್, 344 ಏಕದಿನ ಮತ್ತು 1 ಟಿ 20 ಐ ಪಂದ್ಯಗಳನ್ನು ಆಡಿದ್ದಾರೆ, ನವೆಂಬರ್ 2021 ರಿಂದ ಜೂನ್ 2024 ರವರೆಗೆ ಭಾರತದ ಮುಖ್ಯ ಕೋಚ್ …

Read More »

ಮಹಾಮಳೆಗೆ ಮುಂಬೈ ತತ್ತರ..ಹಲವು ರೈಲುಗಳ ಸಂಚಾರ ಸ್ಥಗಿತ

ಮುಂಬೈ: ವಾಣಿಜ್ಯ ನಗರಿ ಮುಂಬೈ ಮಹಾನಗರ ಧಾರಾಕಾರ ಮಳೆಗೆ ತತ್ತರಿಸಿದೆ. ರಸ್ತೆಗಳು ನೀರಿನಿಂದ ತುಂಬಿಹೋಗಿದ್ದು ವಾಹನಗಳು ಮುಳುಗುತ್ತಿವೆ. ಹಲವು ರೈಲುಗಳ ಮಾರ್ಗ ಬದಲಿಸಲಾಗಿದೆ. ಮುಂಬೈನಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ರಸ್ತೆ, ರೈಲು ಮಾರ್ಗಗಳ ಮೇಲೆ ಭಾರೀ ಪ್ರಮಾಣದಲ್ಲಿ ನೀರು ಮತ್ತು ಕೆಸರು ಸಂಗ್ರಹವಾಗುತ್ತಿರುವುದರಿಂದ ವಾಹನ ಮತ್ತು ರೈಲುಗಳ ಸಂಚಾರಕ್ಕೆ ಅಡ್ಡಿಯಾಗುತ್ತಿದೆ. ವಿಮಾನ ನಿಲ್ದಾಣದಲ್ಲೂ ಇದೇ ಪರಿಸ್ಥಿತಿ ಇದೆ. ವಿವಿಧೆಡೆ ರೈಲು ಹಳಿಗಳ ಮೇಲೆ ಮರಗಳು ಉರುಳಿ ಬಿದ್ದಿವೆ. ಇದರಿಂದಾಗಿ …

Read More »