Breaking News

Daily Archives: ಜುಲೈ 9, 2024

ಹುಬ್ಬಳ್ಳಿ: ಆಗದ ವಲಯ ವರ್ಗಾವಣೆ; ಶಿಕ್ಷಕರಿಗೆ ನಿರಾಸೆ

ಹುಬ್ಬಳ್ಳಿ: ವಲಯ ವರ್ಗಾವಣೆ ನಡೆಸದಿರಲು ಶಾಲಾ ಶಿಕ್ಷಣ ಇಲಾಖೆ ನಿರ್ಧರಿಸಿರುವುದು ಬಹುತೇಕ ಶಿಕ್ಷಕರಲ್ಲಿ ನಿರಾಸೆ ಮೂಡಿಸಿದೆ. ಗ್ರಾಮೀಣ ಭಾಗದಿಂದ ನಗರ ಪ್ರದೇಶಕ್ಕೆ ವರ್ಗಾವಣೆ ಆಗುವ ಅವರ ನಿರೀಕ್ಷೆ ಹುಸಿಯಾಗಿದೆ. ಕರ್ನಾಟಕ ಶಿಕ್ಷಕರ ವರ್ಗಾವಣೆ ಮತ್ತು ನಿಯಂತ್ರಣ ಕಾಯ್ದೆ (ತಿದ್ದುಪಡಿ)-2022ರ ಪ್ರಕಾರ, ಹೆಚ್ಚುವರಿ ವರ್ಗಾವಣೆ ನಂತರದ ವರ್ಷದಲ್ಲಿ ವಲಯ (ಕಡ್ಡಾಯ) ವರ್ಗಾವಣೆ ಮಾಡಬೇಕು. ಈ ಪ್ರಕ್ರಿಯೆಯಲ್ಲಿ 10 ವರ್ಷಕ್ಕೂ ಹೆಚ್ಚು ಸಮಯದಿಂದ ನಗರ ಪ್ರದೇಶದಲ್ಲಿ (ಎ-ವಲಯ) ಕೆಲಸ ಮಾಡುತ್ತಿರುವ ಶಿಕ್ಷಕರನ್ನು ಗ್ರಾಮೀಣ (ಸಿ-ವಲಯ) …

Read More »

ಡೆಂಗಿ: ಸಮಗ್ರ ಮಾಹಿತಿಗೆ ಸಂಸದ ಜಗದೀಶ ಶೆಟ್ಟರ್ ಸೂಚನೆ

ಬೆಳಗಾವಿ: ‘ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ಡೆಂಗಿಗೆ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ಸಂಖ್ಯೆ ಕಡಿಮೆ ಇದೆ. ಹಾಗಾಗಿ ಜಿಲ್ಲೆಯ ಖಾಸಗಿ ಆಸ್ಪತ್ರೆಗಳಲ್ಲಿ ಈ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ಬಗ್ಗೆ ಮಾಹಿತಿ ಸಂಗ್ರಹಿಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ’ ಎಂದು ಸಂಸದ ಜಗದೀಶ ಶೆಟ್ಟರ್ ಹೇಳಿದರು. ಇಲ್ಲಿನ ಜಿಲ್ಲಾಸ್ಪತ್ರೆಗೆ ಮಂಗಳವಾರ ಭೇಟಿ ನೀಡಿ ಡೆಂಗಿ ಕಾಯಿಲೆಯಿಂದ ಬಳಲುತ್ತಿರುವವರ ಆರೋಗ್ಯ ವಿಚಾರಿಸಿ, ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಸುದ್ದಿಗಾರರ ಜತೆ ಅವರು ಮಾತನಾಡಿದರು. …

Read More »

ಅವ್ಯವಸ್ಥೆಯ ಆಗರವಾದ ಕೋಟೆವಾಡಾ ರುದ್ರಭೂಮಿ

ಅಂಕೋಲಾ: ಪಟ್ಟಣದ ಕೋಟೆವಾಡದಲ್ಲಿರುವ ಹಿಂದೂ ರುದ್ರ ಭೂಮಿ ನಿರ್ವಹಣೆಯ ಕೊರತೆಯಿಂದ ಅವ್ಯವಸ್ಥೆಯ ಆಗರವಾಗಿದ್ದು ಮಳೆಗಾಲದಲ್ಲಿ ಚಿತೆ ದಹಿಸುವುದೇ ದೊಡ್ಡ ಚಿಂತೆಯಾಗಿದೆ ಎಂದು ಸ್ಥಳೀಯರು ದೂರಿದ್ದಾರೆ. ಪಟ್ಟಣದ ಸುತ್ತ ಮುತ್ತಲಿನ ವ್ಯಾಪ್ತಿಯ ಬಹುತೇಕ ಸಮಾಜದ ಜನರು ಶವ ಸಂಸ್ಕಾರಕ್ಕೆ ಬಳಕೆ ಮಾಡುವ ಈ ರುದ್ರಭೂಮಿಯಲ್ಲಿ ಶವ ಸಂಸ್ಕಾರ ನಡೆಸುವ ಸ್ಥಳದಲ್ಲಿ ಶೆಡ್‍ನ ಚಾವಣಿ ಮಳೆ-ಗಾಳಿಗೆ ಹಾರಿ ಹೋಗಿದ್ದು, ಮಳೆಯ ನೀರು ಶವ ದಹಿಸುವ ತೊಟ್ಟಿಯಲ್ಲೇ ನೇರವಾಗಿ ಸುರಿಯುತ್ತಿದೆ. ಇದರಿಂದ ಅಂತಿಮ ಸಂಸ್ಕಾರ …

Read More »

ಪೂರ್ವ ರೈಲ್ವೆಗೆ ₹953 ಕೋಟಿ ವರಮಾನ

ಕೋಲ್ಕತ್ತ: 2024-25ನೇ ಆರ್ಥಿಕ ವರ್ಷದ ಮೊದಲ ತ್ರೈಮಾಸಿಕದಲ್ಲಿ (ಏಪ್ರಿಲ್‌-ಜೂನ್‌) ಪೂರ್ವ ರೈಲ್ವೆಯು ₹953 ಕೋಟಿ ವರಮಾನ ಗಳಿಸಿದೆ ಎಂದು ರೈಲ್ವೆ ವಲಯದ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ. ಹಿಂದಿನ ಹಣಕಾಸು ವರ್ಷದ ಇದೇ ಅವಧಿಯಲ್ಲಿ ಪ್ರಯಾಣಿಕರ ಸೇವಾ ವಿಭಾಗದಿಂದ ₹866 ಕೋಟಿ ಆದಾಯ ಗಳಿಸಿತ್ತು. ಇದಕ್ಕೆ ಹೋಲಿಸಿದರೆ ಶೇ 9.97ರಷ್ಟು ಹೆಚ್ಚಳವಾಗಿದೆ ಎಂದು ತಿಳಿಸಿದ್ದಾರೆ. ಈ ತ್ರೈಮಾಸಿಕದಲ್ಲಿ ಒಟ್ಟು 2.87 ಲಕ್ಷ ಪ್ರಯಾಣಿಕರು ರೈಲಿನಲ್ಲಿ ಪ್ರಯಾಣಿಸಿದ್ದು, ಶೇ 3.36ರಷ್ಟು ಏರಿಕೆಯಾಗಿದೆ ಎಂದು …

Read More »

ಬ್ಯಾಕ್‌ಲಾಗ್‌ ಹುದ್ದೆಗಳನ್ನು ಭರ್ತಿಮಾಡಲು ವಿಫಲವಾಗಿರುವ ಕೇಂದ್ರ ಸರ್ಕಾರವನ್ನು ಸುಪ್ರಿಂ ಕೋರ್ಟ್‌ ಮಂಗಳವಾರ ತರಾಟೆಗೆ ತೆಗೆದುಕೊಂಡಿದೆ.

ನವದೆಹಲಿ: ಅಂಗವಿಕಲ ವ್ಯಕ್ತಿಗಳ ಕಾಯ್ದೆಯ (ಪಿಡಬ್ಲ್ಯುಡಿ) ಪರಿಣಾಮಕಾರಿಯಾಗಿ ಜಾರಿ ಮತ್ತು ಬ್ಯಾಕ್‌ಲಾಗ್‌ ಹುದ್ದೆಗಳನ್ನು ಭರ್ತಿಮಾಡಲು ವಿಫಲವಾಗಿರುವ ಕೇಂದ್ರ ಸರ್ಕಾರವನ್ನು ಸುಪ್ರಿಂ ಕೋರ್ಟ್‌ ಮಂಗಳವಾರ ತರಾಟೆಗೆ ತೆಗೆದುಕೊಂಡಿದೆ. 2009ರಲ್ಲಿ ನಾಗರಿಕ ಸೇವಾ ಪರೀಕ್ಷೆ ತೇರ್ಗಡೆಯಾಗಿರುವ, ಶೇ 100ರಷ್ಟು ಅಂಧತ್ವ ಹೊಂದಿರುವ ಅಭ್ಯರ್ಥಿಯನ್ನು ಮೂರು ತಿಂಗಳ ಒಳಗಾಗಿ ಕೆಲಸಕ್ಕೆ ನೇಮಕ ಮಾಡಿಕೊಳ್ಳುವಂತೆಯೂ ಸರ್ಕಾರಕ್ಕೆ ಆದೇಶಿಸಿತು.   1995ರ ಪಿಡಬ್ಲ್ಯುಡಿ ಕಾಯ್ದೆಯ ನಿಬಂಧನೆಗಳನ್ನು ತ್ವರಿತವಾಗಿ ಅನುಷ್ಠಾನಗೊಳಿಸುವಲ್ಲಿ ಕೇಂದ್ರ ಸರ್ಕಾರದ ಕಡೆಯಿಂದ ‘ಎದ್ದು ಕಾಣುವಂತಹ ಕರ್ತವ್ಯಲೋಪ’ …

Read More »

50:50 ನಿವೇಶನ ಹಂಚಿಕೆ ಕಾನೂನುಬದ್ಧ: ಎಚ್‌.ವಿ.ರಾಜೀವ್

ಮೈಸೂರು: ‘ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ 50:50 ಅನುಪಾತದಡಿ ನಿವೇಶನ ಹಂಚಿಕೆಯು ಕಾನೂನುಬದ್ಧವಾಗಿದೆ’ ಎಂದು ಕಾಂಗ್ರೆಸ್‌ ಮುಖಂಡ, ಮುಡಾ ಮಾಜಿ ಅಧ್ಯಕ್ಷ ಎಚ್‌.ವಿ.ರಾಜೀವ್ ಪ್ರತಿಪಾದಿಸಿದರು. ನಗರದ ಕಾಂಗ್ರೆಸ್‌ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಮುಡಾಗೆ ಆಗುತ್ತಿದ್ದ ನಷ್ಟವನ್ನು ತಪ್ಪಿಸಲು, ಭೂ ಮಾಲೀಕರಿಗೆ ಕಚೇರಿ ಅಲೆದಾಟ ತಪ್ಪಿಸಲು ಪ್ರಾಧಿಕಾರದ ಸಭೆಯಲ್ಲಿ ಸದಸ್ಯರು ಚರ್ಚಿಸಿ ಸರ್ವಾನುಮತದಿಂದ 50:50 ಅನುಪಾತದಲ್ಲಿ ನಿವೇಶನ ಹಂಚುವ ನಿರ್ಣಯ ಕೈಗೊಳ್ಳಲಾಯಿತು’ ಎಂದರು.   ‘2013ರ ಭೂಸ್ವಾಧೀನ ತಿದ್ದುಪಡಿ ಕಾಯ್ದೆ, ಶ್ರೀರಾಂಪುರದ …

Read More »

ಕಲ್ಯಾಣ ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟವಾಗಲಿ: ಶ್ರೀಧರ ಬಳಿಗಾರ

ಕಲ್ಯಾಣ ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟವಾಗಲಿ: ಶ್ರೀಧರ ಬಳಿಗಾರ ಹಳಿಯಾಳ: ‘ಕಲ್ಯಾಣ ರಾಜ್ಯ ಎಂಬುದು ಸರ್ವ ಜನಾಂಗದ ಶಾಂತಿಯ ತೋಟವಾಗಬೇಕು. ಕಾವ್ಯ ರಚನೆಯ ಮೂಲಕ ಕಲ್ಯಾಣ ರಾಜ್ಯ ನಿರ್ಮಾಣವಾಗಬೇಕು. ರಾಜ ಮಾರ್ಗವು ಸಾಂಸ್ಕೃತಿಕ ಅಂತಃಕರಣದಿಂದ ಕೂಡಿರಬೇಕು’ ಎಂದು ಸಾಹಿತ್ಯ ಅಕಾಡೆಮಿಯ ಸಾಮಾನ್ಯ ಸಲಹಾ ಮಂಡಳಿಯ ಸದಸ್ಯರಾದ ಶ್ರೀಧರ ಬಳಿಗಾರ ಹೇಳಿದರು. ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಾಹಿತ್ಯ ಅಕಾಡೆಮಿ ಮತ್ತು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಯೋಗದಲ್ಲಿ …

Read More »

ಬೀದಿ ಬದಿ ಹೊಟೇಲ್‌, ಕಿರಾಣಿ ಅಂಗಡಿಗಳ ಮೇಲೆ ಪುರಸಭೆ ಅಧಿಕಾರಿಗಳ ದಾಳಿ

ಚಿಕ್ಕೋಡಿ: ನಗರದ ಬೀದಿ ಬದಿ ಗಾಡಾ ಅಂಗಡಿ ಮತ್ತು ಹೊಟೇಲ್‌ ನಲ್ಲಿ ಆಹಾರದಲ್ಲಿ ಟೇಸ್ಟಿಂಗ್ ಪೌಡರ್ ಕಲಬೆರಕೆ ಮಾಡಿ ಆಹಾರ ತಯಾರು ಮಾಡುತ್ತಿದ್ದ ಅಂಗಡಿಗಳ ಮೇಲೆ ಮತ್ತು ಟೇಸ್ಟಿಂಗ್ ಪೌಡರ್ ಮಾರಾಟ ಮಾಡುವ ಅಂಗಡಿಗಳ ಮೇಲೆ ಪುರಸಭೆ ಅಧಿಕಾರಿಗಳು ದಾಳಿ ನಡೆಸಿ ಸುಮಾರು 17 ಕೆಜಿ ಟೇಸ್ಟಿಂಗ್ ಪೌಡರ್ ವಶಪಡಿಸಿಕೊಂಡಿದ್ದಾರೆ. ಆಹಾರದಲ್ಲಿ ವಿಷ ಪದಾರ್ಥಗಳು ಕಲಬೆರಕೆ ಕುರಿತು ಸಾರ್ವಜನಿಕರು ನೀಡಿದ ದೂರಿನ ಹಿನ್ನಲೆ ನಗರದ ರಾಜಸ್ತಾನಿ ಕಿರಾಣಿ ಅಂಗಡಿ ಮೇಲೆ ದಾಳಿ …

Read More »

ನಿಂತಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ ಹೋಮ್ ಗಾರ್ಡ್

ಪೊಲೀಸ್ ಠಾಣೆ ಬಳಿ ಕೆಲಸ ನಿರ್ವಹಿಸುತ್ತಿದ್ದ ಹೋಮ್ ಗಾರ್ಡ್ ಏಕಾಏಕಿ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಅಜ್ಮೀರ್‌ನಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದ ಸಿಸಿಟಿವಿ ದೃಶ್ಯಾವಳಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ವಿಡಿಯೋ ಇಲ್ಲಿದೆ ನೋಡಿ. ಹೋಮ್ ಗಾರ್ಡ್ ಆಗಿ ಕೆಲಸ ನಿರ್ವಹಿಸುತ್ತಿದ್ದ ವ್ಯಕ್ತಿಯೊಬ್ಬ ನಿಂತಲ್ಲೇ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ವಿಡಿಯೋವನ್ನು ಸೋಶಿಯಲ್​​ ಮೀಡಿಯಾಗಳಲ್ಲಿ ಹಂಚಿಕೊಳ್ಳಲಾಗಿದೆ. ಸದ್ಯ ವಿಡಿಯೋ ಎಲ್ಲೆಡೆ ಭಾರೀ …

Read More »

ಬೆಳಗಾವಿ ಪಾಲಿಕೆಯ 4 ಸ್ಥಾಯಿ ಸಮಿತಿಗಳಿಗೂ ಅವಿರೋಧ ಆಯ್ಕೆ

ಬೆಳಗಾವಿ: ಇಲ್ಲಿನ ಮಹಾನಗರ ಪಾಲಿಕೆ 22ನೇ ಅವಧಿಗೆ ನಾಲ್ಕು ಸ್ಥಾಯಿ ಸಮಿತಿಗಳಿಗೆ ಮಂಗಳವಾರ ಅಧ್ಯಕ್ಷರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ತೆರಿಗೆ ನಿರ್ಧರಣೆ, ಹಣಕಾಸು ಮತ್ತು ಅಪೀಲುಗಳ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ನೇತ್ರಾವತಿ ಭಾಗವತ, ಸಾರ್ವಜನಿಕ ಆರೋಗ್ಯ, ಶಿಕ್ಷಣ ಮತ್ತು ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಶ್ರೀಶೈಲ ಕಾಂಬಳೆ, ನಗರ ಯೋಜನೆ ಮತ್ತು ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಜಯತೀರ್ಥ ಸವದತ್ತಿ ಹಾಗೂ ಲೆಕ್ಕಗಳ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ರೇಷ್ಮಾ …

Read More »